ಮೊದಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://mahitikanaja.karnataka.gov.in/Revenue/RevenueVillageMap?ServiceId=1023&Type=TABLE%20&DepartmentId=2066&TemplateType=DROPDOWN
ಆಮೇಲೆ ಅಲ್ಲಿ ನಿಮ್ಮ ಜಿಲ್ಲೆ , ತಾಲೂಕು, ಹೋಬಳಿ, ಗ್ರಾಮ select ಮಾಡಿ ಸಲ್ಲಿಸಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಆಮೇಲೆ ನೀವು ಬಾಣದ ಗುರುತಿನ ಹಾಗೆ ನಕ್ಷೆ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಆಗ ನಿಮ್ಮ ಮುಂದೆ ಒಂದು pdf download ಆಗುತ್ತದೆ.
ಅದರಲ್ಲಿ ನಿಮ್ಮ ಗ್ರಾಮದ ಗಡಿ ರೇಖೆ, ಸರ್ವೆ ನಂಬರು ಗಡಿ, ಬಂಡಿ ದಾರಿ, ಹಳ್ಳ, ಸರ್ವೆ ನಂಬರುಗಳು, ಬಾಂದುಗಳು, ಕಲ್ಲುಗಳು, ಬೇಲಿ, ನೀರು ಹರಿಯುವ ದಿಕ್ಕು, ಒಂದು ಕಪಿಲೆ ಬಾವಿ, ದೇವಸ್ಥಾನ, ದೊಡ್ಡ ಮರಗಳು, ಇತರ ಗಿಡಗಳು ಸಂಪೂರ್ಣ ಮಾಹಿತಿ ಇರುತ್ತದೆ.
ಗ್ಯಾರಂಟಿ ಯೋಜನೆ ವೈಯಕ್ತಿಕ ಘೋಷಣೆಯಲ್ಲ, ಪಕ್ಷಕ್ಕೆ ಸೇರಿದ್ದು : ಹೈಕೋರ್ಟ್’ಗೆ ಸಿಎಂ ಉತ್ತರ
ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಲಾದ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ವೈಯಕ್ತಿಕವಾಗಿ ಘೋಷಿಸಿ ಚುನಾವಣೆಯಲ್ಲಿ ಅಕ್ರಮ ಎಸಗಿ ಜಯಗಳಿಸಿದ್ದಾರೆ ಎಂಬ ಆರೋಪ ಸಮರ್ಥನೀಯವಲ್ಲ ಎಂದು ಹೈಕೋರ್ಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ನಿವಾಸಿ ಕೆ ಎಂ ಶಂಕರ್ ಸಲ್ಲಿಸಿರುವ ಚುನಾವಣಾ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ನೇತೃತ್ತದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸಿದ್ದರಾಮಯ್ಯ ಪರ ಹಿರಿಯ ವಕೀಲ ಪ್ರೊ. ಕೆ ರವಿವರ್ಮ ಕುಮಾರ್ ವಾದ ಮಂಡಿಸಿದರು. ಅರ್ಜಿದಾರರ ಆರೋಪವನ್ನು ಗಮನಿಸಿದರೆ ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕುವ ರೀತಿಯಂತಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡಲಾಗಿದೆ. ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರದ ಹಣವನ್ನು ಬಳಸಲಾಗುತ್ತಿದೆಯೇ ಹೊರತು ಸಿದ್ದರಾಮಯ್ಯವರ ವೈಯಕ್ತಿಕ ಆದಾಯವನ್ನಲ್ಲ ಎಂದು ಪೀಠಕ್ಕೆ ಸ್ಪಷ್ಟಪಡಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ಪರ ವಕೀಲರು ಕೆಲವು ದಾಖಲೆಗಳನ್ನು ಸಲ್ಲಿಸಿದ್ದು, ಇದಕ್ಕೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಲ್ಲಿಸಿ” ಎಂದು ಪ್ರತಿವಾದಿಗಳ ಪರ ವಕೀಲರಿಗೆ 15 ದಿನಗಳ ಕಾಲಾವಕಾಶ ನೀಡಿದ ಪೀಠ ವಿಚಾರಣೆ ಮುಂದೂಡಿದೆ.
ಮೇಕೆದಾಟು ಯೋಜನೆ: ಮಾಜಿ ಪ್ರಧಾನಿ ದೇವೇಗೌಡ ನಡೆ ಸ್ವಾಗತಿಸಿದ ಡಿಕೆ.ಶಿವಕುಮಾರ್
ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂಬ ಮಾಜಿ ಪ್ರಧಾನಿ ಹೆಚ್, ಡಿ. ದೇವೇಗೌಡ ಅವರ ಹೇಳಿಕೆಯನ್ನು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸ್ವಾಗತಿಸಿದ್ದಾರೆ. ದೇವೇಗೌಡ ಅವರ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನಾವು ಮಾಡಿದ ನಮ್ಮ ನೀರು. ನಮ್ಮ ಹಕ್ಕು ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರು ಧ್ವನಿಗೂಡಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಬೇಕೆಂಬ ಸಂಕಲ್ಪದಿಂದಲೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಮೇಕೆದಾಟು ಯೋಜನೆಗಾಗಿ ಕಾನೂನು ಹೋರಾಟ ಮುಂದುವರೆದಿದೆ. ನಮಗೆ ಗೆಲುವು ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಈ ಸಂದರ್ಭದಲ್ಲಿ ದೇವೇಗೌಡರು ನಮ್ಮ ಹೋರಾಟಕ್ಕೆ ಧ್ವನಿಗೂಡಿಸಿರುವುದನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ. ಮೇಕೆದಾಟು ಯೋಜನೆ ಕುರಿತು ಈ ಹಿಂದೆ ಹೇಳಿಕೆ ನೀಡಿದ್ದ ದೇವೇಗೌಡ ಅವರು, ಮೇಕೆದಾಟು ಯೋಜನೆ ರಾಜ್ಯಕ್ಕೆ ಅತ್ಯಗತ್ಯ. ಈ ಬಗ್ಗೆ ರಾಜ್ಯದ ಎಲ್ಲ ಪಕ್ಷಗಳೂ ಅಚಲ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ಕಾಂಗ್ರೆಸ್, ಬಿಜೆಪಿ ಸೇರಿ ಎಲ್ಲ ಪಕ್ಷಗಳೂ ಈ ವಿಚಾರದಲ್ಲಿ ಒಟ್ಟಿಗೆ ಹೆಜ್ಜೆಯಿಡಬೇಕು ಎಂದು ಸಲಹೆ ನೀಡಿದ್ದರು.
ಮೇಕೆದಾಟು ಯೋಜನೆ ವಿರೋಧಿಸಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ನಿಲುವು ಖಂಡನೀಯ. ಈ ಯೋಜನೆ ಅನುಷ್ಠಾನ ಸಂಬಂಧ ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಸೇರಿಸಲಿದೆ. ಕಾಂಗ್ರೆಸ್, ಬಿಜೆಪಿ ಕೂಡ ಬದ್ದತೆ ಪ್ರದರ್ಶಿಸಲಿ. ಪ್ರಧಾನಿಯವರೂ ಮಧ್ಯಸ್ಥಿಕೆ ವಹಿಸಲಿ ಎಂದಿದ್ದರು.
ನರೇಗಾ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ
ಕನಕಗಿರಿ ತಾಲ್ಲೂಕಿನ ಗೌರಿಪುರ ಗ್ರಾ.ಪಂ ವ್ಯಾಪ್ತಿಯ ಅಡವಿಬಾವಿ ತಾಂಡಾದಲ್ಲಿ ಗ್ರಾ.ಪಂ ವತಿಯಿಂದ ಕೂಲಿಕಾರರಿಗೆ ನಾಲಾ ಹೂಳೆತ್ತುವ ಕೆಲಸ ನೀಡಲಾಗಿದ್ದು, ಕಾಮಗಾರಿ ಸ್ಥಳದಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಶುಕ್ರವಾರ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಈ ವೇಳೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಕಂದಕೂರ ಅವರು ಮಾತನಾಡಿ, ಕಡ್ಡಾಯವಾಗಿ ಪ್ರತಿಯೊಬ್ಬರೂ ಮತದಾನ ಮಾಡಬೇಕು. ಮತದಾನ ಪವಿತ್ರವಾದದ್ದು, ಯಾರೂ ಮತದಾನದಿಂದ ಹೊರಗುಳಿಯದೇ, ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು.
ತಾ.ಪಂ ಸಹಾಯಕ ನಿರ್ದೇಶಕರರು ಕೂಲಿಕಾರರಿಗೆ ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಬಳಿಕ ತಾ.ಪಂ ಇಓ ಅವರು ಕಾಮಗಾರಿ ಸ್ಥಳವನ್ನು ವೀಕ್ಷಣೆ ಮಾಡಿದರು. ಇದೇ ವೇಳೆ ಅಡವಿಬಾವಿ ತಾಂಡಾ ಹಾಗೂ ಸೋಮಸಾಗರ ಶಾಲೆಯಲ್ಲಿರುವ ಮತದಾನ ಕೇಂದ್ರಕ್ಕೆ ಭೇಟಿ ನೀಡಿ ಬೂತ್ ಗಳನ್ನು ಪರಿಶೀಲನೆ ನಡೆಸಿ ಶಾಲಾ ಶಿಕ್ಷಕರಿಂದ ಮಾಹಿತಿಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಗ್ರಾ.ಪಂ ಪಿಡಿಓ, ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರು, ಡಿಇಓ, ಬಿಎಫ್.ಟಿ, ಗ್ರಾಮ ಕಾಯಕ ಮಿತ್ರರು ಸೇರಿದಂತೆ ಕೂಲಿಕಾರರು ಹಾಜರಿದ್ದರು.