ಆತ್ಮೀಯ ರೈತ ಬಾಂಧವರೇ,
ಬೆಳೆವಿಮೆ ಹಾಗು ಬೆಳೆ ಪಾರಿಹಾರ ಹಣವು ಜಮಾ ಆಗಿದೆ ಅಥವಾ ಇಲ್ಲ ಎಂದು ತಿಳಿಯಲು ಹಲವಾರು ದಾರಿಗಳಿವೆ. ಆಧಾರ್ ಕಾರ್ಡ್ ಅಥವಾ ಮೊಬೈಲ್ ನಂಬರ್ ಅಥವಾ ಸರ್ವೆ ನಂಬರ್. ಹಾಗೆಯೇ FID ನಂಬರ್ ಹಾಕಿ ಚೆಕ್ ಮಾಡುವುದು ಹೇಗೆ? ಎಂದು ತಿಳಿಯೋಣ
ಹಂತ -1) ಮೊದಲಿಗೆ ನೀವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.
https://parihara.karnataka.gov.in/service92
ಹಂತ -2) ನಂತರ ನೀವು ಕೆಳಗೆ ತೋರಿಸಿದಂತೆ ಅದರಲ್ಲಿ ವರ್ಷ, ಋತು ಮತ್ತು ವಿಪತ್ತು ವಿಧ ಆಯ್ಕೆ ಮಾಡಿ Get Details ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ಅದರಲ್ಲಿ ನೀವು ರೈತರ ಗುರುತಿನ ಸಂಖ್ಯೆ (Farmer ID) ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ FID ನಂಬರ್ ಹಾಕಿ Fetch ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಮೇಲೆ ತೋರಿಸಿದಂತೆ ನಿಮ್ಮ ಖಾತೆಗೆ ಜಮಾ ಆಗಿರುವ ಬೆಳೆ ಪರಿಹಾರ ಹಣದ ವಿವರಗಳು ದೊರೆಯುತ್ತವೆ
ಏನಿದು ಫೂಟ್ಸ್ ನಂಬರ್ ?
ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ.ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ.
ಫೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ನಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.
ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.in/OnlineUserLogin.aspx
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.“Citizen Registration” ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ, I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ :- ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಕಟ್ಟಬೇಕು? ಬೆಳೆ ವಿಮೆ ಕಟ್ಟುವ ದಿನಾಂಕ ಬಿಡುಗಡೆ ಆಗಿದೆ