ಹಾಲು ಉತ್ಪಾದಕರಿಗೆ ಪ್ರೋತ್ಸಾಹ ನೀಡಲು ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5 ರಂತೆ 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ. ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ ಮತ್ತು ಕುರಿಗಾರರಿಗೆ ಅನುಗ್ರಹ ಕೊಡುಗೆ
ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ. ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಲಸಿಕಾ ಕಾರ್ಯಕ್ರಮ ಮತ್ತು ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು. ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ ಮತ್ತು ನಾಟಿ ಕೋಳಿ ಮರಿಗಳ ವಿತರಣೆ
6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ. ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು.
ಸಂಚಾರಿ ಪಶು ಚಿಕಿತ್ಸಾ ಘಟಕ ಮತ್ತು ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು “1962 ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ. ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು.
ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿ ದರದಲ್ಲಿ 200ರೂ ನಿಂದ 300ರೂ ಹೆಚ್ಚಳ ಮಹತ್ವದ ಕ್ರಮ
ಅಂತರರಾಷ್ಟ್ರೀಯ ಮಹಿಳಾvದಿನಾಚರಣೆಯ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲಾ ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ್ದು, ಉಜ್ವಲ ಯೋಜನೆಯಡಿ ಎಲ್ ಪಿಜಿ ಸಿಲಿಂಡರ್‌ನ ದರದ ಮೇಲಿನ ರೂ. 100 ಕಡಿಮೆ ಮಾಡಿದ್ದಾರೆ. ಇದನ್ನು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಸ್ವಪ್ನಾ ಕಣಮುಚನಾಳ ಅವರು ಸ್ವಾಗತಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ಮೋದಿಜಿ ಅವರ ನೇತೃತ್ವದ ಬಿಜೆಪಿ ಸರ್ಕಾರವು ಉಜ್ವಲ ಯೋಜನೆಯಡಿಯ ಎಲ್‌ಪಿಜಿ ಸಿಲಿಂಡರ್‌ನ ಸಬ್ಸಿಡಿ ದರವನ್ನು 200ರೂ ರಿಂದ 300ರೂ ಹೆಚ್ಚಿಸಿದೆ.
ಇದು ದೇಶದಾದ್ಯಂತ 10 ಕೋಟಿಗೂ ಹೆಚ್ಚು ಕುಟುಂಬಗಳ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ವಿಟ್ ಮಾಡಿದ್ದಾರೆ ಹಾಗೂ ಮೋದಿಜಿ ಕ್ರಮಕ್ಕಾಗಿ ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ. ಅಡುಗೆ ಅನಿಲ ಸಿಲಿಂಡರ್ ಹೆಚ್ಚು ಕೈಗೆಟಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮವನ್ನು ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದ್ದೇವೆ. ಇದು ಮಹಿಳೆಯರ ಸಬಲೀಕರಣ ಮತ್ತು ಅವರಿಗೆ ಸುಲಭವಾಗಿ ಬದುಕುವ ಅವಕಾಶವನ್ನು ಖಾತ್ರಿಪಡಿಸುತ್ತದೆ. ಇದು ಬಿಜೆಪಿಯ ಬದ್ಧತೆಯನ್ನು ಪ್ರತಿಫಲಿಸುವಂತಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.
Agri jobs
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಮಾರ್ಚ್ 9 ಹಾಗೂ 10 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮಾ.9ರಂದು ಬೆಳಿಗ್ಗೆ 11 ಗಂಟೆಗೆ ಸೋಲಾಪುರ ರಸ್ತೆಯಲ್ಲಿ ಒಣದ್ರಾಕ್ಷಿ ಸಂಸ್ಕರಣಾ ಘಟಕದ ಉದ್ಘಾಟನೆ ನೆರವೇರಿಸಿ ಮಧ್ಯಾಹ್ನ 12 ಗಂಟೆಗೆ ಬಬಲೇಶ್ವರದಲ್ಲಿ ಬಬಲೇಶ್ವರ ತಾಲೂಕು ಮಿನಿ ವಿಧಾನಸೌಧ ಉದ್ಘಾಟನೆ ಹಾಗೂ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3ಗಂಟೆಗೆ ಬಬಲೇಶ್ವರದಿಂದ ವಿಜಯಪುರಕ್ಕೆ ಆಗಮಿಸಲಿದ್ದಾರೆ.
ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಮಾ.10 ರಂದು ಬೆಳಿಗ್ಗೆ 9-30ಕ್ಕೆ ಬಿ.ಎಲ್.ಡಿ.ಇ. ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಆಯೋಜಿಸಿರುವ ವೈದ್ಯಕೀಯ ವಿಷಯಗಳ ರಂಗೋಲಿ ವೀಕ್ಷಣೆ ಮಾಡಿ, ಬೆಳಿಗ್ಗೆ 10-30ಕ್ಕೆ 770 ಲಿಂಗ ದೇವಾಲಯ ಆವರಣದಲ್ಲಿರುವ 770 ಅಮರ ಗಣಾಧೀಶ್ವರ ಸ್ಮಾರಕ ಲಿಂಗ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬೆಳಿಗ್ಗೆ 11- 30ಕ್ಕೆ ಜಿಲ್ಲಾ ಕೇಂದ್ರ ಕಾರಾಗೃಹದ ಹತ್ತಿರ, ನೂತನ ಎನ್.ಸಿ.ಸಿ. ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಜೆ 4-15ಕ್ಕೆ ವಿಜಯಪುರದಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.