ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ.
ಸ್ಟೇಟಸ್ ಚೆಕ್ ಮಾಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://bhoomisuddi.com/gruhalaxmi-big-update-check-your-status-gruhalaxmi-payment/
ಒಕ್ಕಲಿಗರ ಸಭೆಯಲ್ಲಿ ಮುಖ್ಯಮಂತ್ರಿ ಆಗುವ ಬಗ್ಗೆ ಪರೋಕ್ಷ ಸುಳಿವು ನೀಡಿದ ಡಿಕೆ ಶಿವಕುಮಾರ
ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಮೈಸೂರು- ಕೊಡಗು ಜಿಲ್ಲಾ ಒಕ್ಕಲಿಗ ಜನಾಂಗದ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿರುವ ಡಿಕೆ ಶಿವಕುಮಾರ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನ ಸಿಗುವ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ‘ದೆಹಲಿಯಲ್ಲಿ ಏನು ತೀರ್ಮಾನ ಆಗಬೇಕೋ ಅದು ಆಗಿದೆ’ ಎಂದು ಹೇಳಿರುವುದು ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ. ಮುಂದಿನ ಅವಧಿಗೆ ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್‌ಗೆ ಅಧಿಕಾರ ವಹಿಸುತ್ತದಾ ಹೈಕಮಾಂಡ್? ದೆಹಲಿಯಲ್ಲಿ ತೀರ್ಮಾನ ಆಗಿರುವುದೇನು? ಡಿಕೆ ಶಿವಕುಮಾರ ಅವರ ಹೇಳಿಕೆ ಬಳಿಕ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. ಒಕ್ಕಲಿಗರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ.
ಮೈಸೂರಿನಲ್ಲಿ ಕೆಲವು ತೊಂದರೆಗಳಿವೆ. ಇಲ್ಲ ಅಂಥ ನಾನು ಹೇಳಲ್ಲ. ನಮ್ಮ ಸಮಾಜದವರಿಗೆ ಸ್ವಲ್ಪ ಸಮಸ್ಯೆ ಇದೆ. ಅವರಿಗೆ ಇಲ್ಲಿ ರಕ್ಷಣೆ ಇಲ್ಲ, ನಾಯಕತ್ವದ ಸಮಸ್ಯೆ ಇದೆ. ಈಗ ಸಚಿವ ವೆಂಕಟೇಶ್ ಹಾಗೂ ಹರೀಶ್ ಗೌಡ ಮುಂದಾಳತ್ವ ವಹಿಸಿಕೊಂಡಿದ್ದಾರೆ. ನಾನು ನಿಮ್ಮೂರಿನ ಅಳಿಯ. ನನಗೂ ದೊಡ್ಡ ಜವಾಬ್ದಾರಿ ಇದೆ. ನೀವು ತಲೆ ಕಡೆಸಿಕೊಳ್ಳಲು ಹೋಗಬೇಡಿ. ಸ್ವಲ್ಪ ದಿನ ಅಷ್ಟೇ. ಚಲುವರಾಯಸ್ವಾಮಿ, ಕೃಷ್ಣಗೌಡ ಬಂದು ನನ್ನ ಹತ್ರ ನ್ಯಾಯ ಆಡ್ತಿದ್ರು. ಭಾಗದ ನ್ಯಾಯ ಆಡ್ತಿದ್ರು. ನೀವು ಆಡೋದು ಬೇಡ. ನಿಮ್ಮ ನ್ಯಾಯ ನಡೆಯುವುದಿಲ್ಲ. ಇದೆಲ್ಲ ದೆಹಲಿಯಲ್ಲಿ ನಡೆಯಬೇಕು ಅಂಥ ಹೇಳಿದ್ದೇನೆ. ದೆಹಲಿಯಲ್ಲಿ ಏನು ಆಗಬೇಕು ಅದು ತೀರ್ಮಾನ ಆಗಿದೆ. ಅದರ ಬಗ್ಗೆ ಚರ್ಚೆ ಬೇಡ. ಈಗ ಚರ್ಚೆ ಆಗೋದು. ಇದು 5 ವರ್ಷದ ಸರ್ಕಾರ ಅಲ್ಲ, 10 ವರ್ಷದ ಸರ್ಕಾರ. ನೀವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಮೂಲಕ ಮುಂದಿನ ಅವಧಿಗೆ ಸಿಎಂ ಸ್ಥಾನ ಸಿಗುವ ಬಗ್ಗೆ ಪರೋಕ್ಷವಾಗಿ ತಿಳಿಸಿದ್ದಾರೆ.
ದೇವೇಗೌಡರ ಕುಟುಂಬದ ಬಳಿ ಒಂದು ಸಾವಿರ ಎಕರೆ ಆಸ್ತಿ ಇದೆ. ನಾನು ಜೈಲಿಗೆ ಹೋದಾಗ ಕುಮಾರಸ್ವಾಮಿ, ‘ಎಷ್ಟೋ ದುಡ್ಡು ಹೊಡೆದಿದ್ದಾರೆ ತಿಂದವರು ಅನುಭವಿಸುತ್ತಾರೆ’ ಅಂದ್ರು. ನಾನು ಎಲ್ಲವನ್ನು ತಡೆದುಕೊಂಡು ಸುಮ್ಮನಿದ್ದೇನೆ. ಅವರೆಲ್ಲಾ ಕಳೆಕಾಯಿ, ಆಲೂಗೆಡ್ಡೆ ಬೆಳದು ಬಿಟ್ಟಿದ್ರಾ, ಅವರ ಕುಟುಂಬದ ಆಸ್ತಿ ಎಷ್ಟಿದೆ ಅಂಥ ಲೆಕ್ಕಾ ಕೊಡ್ತಾ? ಬೆಂಗಳೂರು ಸುತ್ತ ಮುತ್ತನೇ ಒಂದು ಸಾವಿರ ಎಕರೆ ಇದೆ. ನಾನು ಅದರ ಬಗ್ಗೆ ಚರ್ಚೆ ಮಾಡಲ್ಲ. ಅದರ ಅವಶ್ಯಕತೆಯೂ ಇಲ್ಲ.ಈ ವೇದಿಕೆಗೆ ಬರಬೇಕಾದರೆ, ಅಧ್ಯಕ್ಷನಾಗಬೇಕಾದರೆ ಎಷ್ಟು ಕಿರುಕುಳ ಕೊಟ್ರು, ಐಟಿ, ಇಡಿ ಎಷ್ಟು ಕೇಸ್ ಗಳು ಹಾಕಿದ್ರು. ನಾನು ಏನ್ ಮಾಡಬಾರದನ್ನ ಮಾಡಿದ್ದೀನಿ. ತಾವು ಗಾಜಿನ ಮನೆಯಲ್ಲಿದ್ದು ಬೇರೆಯವರ ಬಗ್ಗೆ ಮಾತನಾಡಬಾರದು. ತಮ್ಮನ್ನು ಬಿಟ್ಟು ಬೇರೆ ಯಾರೂ ಬೆಳೆಯಬಾರದು. ಬೆಳೆಯೋರನ್ನ ಸಹಿಸೊಲ್ಲ ಅಂದ್ರೆ ಕಷ್ಟ ಎಂದು ದೇವೇಗೌಡ, ಕುಮಾರಸ್ವಾಮಿಗೆ ತಿರುಗೇಟು ನೀಡಿದರು.
ಸಂಯುಕ್ತ ಪಾಟೀಲರಿಂದ ನಾಮಪತ್ರ ಸಲ್ಲಿಕೆ ಬಾದಾಮಿಯ ಬನಶಂಕರಿ ದೇವಾಲಯದಲ್ಲಿ ವಿಶೇಷ ಪೂಜೆ
ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರು ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸಿದ್ದು, ಮತ್ತೊಮ್ಮೆ ಬೃಹತ್ ನಡೆಸಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗ್ಗೆ ಬಾದಾಮಿಯ ಬನಶಂಕರಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹೆಬ್ಬಳ್ಳಿ ಗ್ರಾಮದ ದೊಡ್ಡ ಲಾಲಸಾಬ್ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಅವರಿಗೆ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಶಾಸಕರಾದ ಭೀಮಸೇನ ಚಿಮ್ಮನಕಟ್ಟಿ, ಕೆಪಿಸಿಸಿ ಉಪಾಧ್ಯಕ್ಷ ಅಜಯಕುಮಾರ ಸರನಾಯಕ ಮತ್ತು ಎಂ.ಬಿ. ಸೌದಾಗಾರ್ ಇದ್ದರು.
ನಾಮಪತ್ರ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಹಲವಾರು ಮುಖಂಡರು ಹಾಜರಿದ್ದು ಸಂಯುಕ್ತ ಪಾಟೀಲ ಅವರಿಗೆ ಶುಭ ಕೋರಿ, ಚುನಾವಣೆಯಲ್ಲಿ ಭಾರಿ ಅಂತರದ ಜಯ ಲಭಿಸಲಿ ಎಂದು ಹಾರೈಸಿದರು. ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ತೆರಳುವ ಸಂದರ್ಭದಲ್ಲಿ ಸಂಯುಕ್ತ ಪಾಟೀಲ ಅವರಿಗೆ ಕಂಬಳಿ ಹೊದಿಸಿ ಶುಭ ಕೋರಲಾಯಿತು. ಸಂಯುಕ್ತ ಪಾಟೀಲ ಅವರೊಂದಿಗೆ ಇದ್ದ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಜಯ ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಅಜಯಕುಮಾರ ಸರನಾಯಕ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಗಮನಿಸಿರುವ ಮತದಾರರು ನಿಶ್ಚಿತವಾಗಿ ಸಂಯುಕ್ತ ಪಾಟೀಲ ಅವರನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು. ಸತತವಾಗಿ 20 ವರ್ಷ ಸಂಸತ್ ಸದಸ್ಯರಾಗಿರುವ ಪಿ.ಸಿ. ಗದ್ದಿಗೌಡರ್ ಬಾಗಲಕೋಟೆ ಅಭಿವೃದ್ಧಿಗೆ ಪ್ರಯತ್ನ ಮಾಡಲಿಲ್ಲ.
ಕುಡಚಿ ಬಾಗಲಕೋಟೆ ರೈಲ್ವೆ ಮಾರ್ಗ ಇನ್ನೂ ಪೂರ್ಣಗೊಂಡಿಲ್ಲ. ಸಂತ್ರಸ್ತರು ಬದುಕು ಕಟ್ಟಿಕೊಳ್ಳಲು ಅನುಕೂಲವಾಗುವಂತೆ ಯಾವುದೆ ಉದ್ಯಮವನ್ನು ಜಿಲ್ಲೆಗೆ ತರಲು ಪ್ರಯತ್ನ ಮಾಡಲಿಲ್ಲ ಎಂದು ಟೀಕೆ ಮಾಡಿದರು. ಜಿಲ್ಲೆಯಲ್ಲಿ ಐತಿಹಾಸಿಕ ಪ್ರವಾಸಿ ತಾಣಗಳಿವೆ. ಕೇಂದ್ರದ ಅನುದಾನ ತಂದು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಸಾಕಷ್ಟು ಅವಕಾಶಗಳಿದ್ದವು. ಆದರೆ ಗದ್ದಿಗೌಡರು ಈ ನಿಟ್ಟಿನಲ್ಲಿ ಪ್ರಯತ್ನ ಮಾಡಲಿಲ್ಲ ಎಂದರು.