Breaking
Tue. Dec 17th, 2024
Spread the love

ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಉತ್ತಮ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ಅಲ್ಪ ವಿರಾಮ ನೀಡಿದಂತಾಗಿದೆ.

ಹವಾಮಾನ ಇಲಾಖೆ ಮೂಲಗಳ ಪ್ರಕಾರ, ಈ ಜಿಲ್ಲೆಗಳಲ್ಲಿ 5.5 ಮಿಮೀ ಮಳೆ ಸುರಿದಿದ್ದು, ಈ ಅವಧಿಯಲ್ಲಿ ಸಾಮಾನ್ಯ ಸರಾಸರಿ ಮಳೆ 0.11 ಮಿಮೀ ಆಗಿದೆ. ಸಮುದ್ರ ಮಟ್ಟದಲ್ಲಿ ಕಡಿಮೆ ಒತ್ತಡದಿಂದಾಗಿ ಸಮುದ್ರ ಮಟ್ಟದಿಂದ ಸುಮಾರು 5.8 ಕಿಮೀ ಎತ್ತರದಲ್ಲಿ ಸುಂಟರಗಾಳಿ ಉಂಟಾಯಿತು.

ಇದರಿಂದಾಗಿ ಈ ಎರಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ ಎಂದು ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡದ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು, ಜಿಲ್ಲೆಯ ಇತರೆಡೆ ತುಂತುರು ಮಳೆಯಾಗಿ- ದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿರುವುದರಿಂದ ಗುರುವಾರ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರೈತರು, ವರ್ತಕರ, ಹಮಾಲರ ಸಲಹೆ ಸೂಚನೆಯಂತೆ ಮುಂದಿನ ದಿನಗಳಲ್ಲಿ ಕಾನೂನು : ಸಚಿವ ಶಿವಾನಂದ ಪಾಟೀಲ

ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ, 2023 ಅನ್ನು ಸಮಗ್ರವಾಗಿ ಪರಿಶೀಲಿಸಲು ರಚಿಸಲಾಗಿರುವ ಪರಿಶೀಲನಾ ಸಮಿತಿಯ ಅಧ್ಯಕ್ಷ ಹಾಗೂ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ್ ಅವರು ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ ವರ್ತಕರ, ಅಧಿಕಾರಿಗಳ ಹಾಗೂ ವಿಧಾನ ಪರಿಷತ್ ಸದಸ್ಯರೊಂದಿಗೆ ಸಂವಾದ ಸಭೆಯನ್ನು ನಡೆಸಿದರು.

ಇದೇ ವೇಳೆ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಸಮಸ್ಯೆಗಳ ಕುರಿತು ಹಾಗೂ ಮಾರುಕಟ್ಟೆ ತಿದ್ದುಪಡಿ ಖಾಯ್ದೆಯ ಕುರಿತು ಸಲಹೆ ಸೂಚನೆಗಳನ್ನು ಪಡೆದುಕೊಂಡು ಪರಿಶೀಲನೆ ನಡೆಸಿದರು. ಎಪಿಎಂಸಿಗಳಲ್ಲಿ ರೈತರಿಗೆ, ವರ್ತಕರಿಗೆ ಹಾಗೂ ಹಮಾಲರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಜೊತೆಗೆ ರೈತರಿಗೆ ಯಾವುದೇ ಸಮಸ್ಯೆಗಳು ಉಂಟಾದಲ್ಲಿ ಅವುಗಳನ್ನು ಪರಿಹರಿಸಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಪರಿಹರಿಸುವಲ್ಲಿ ಎಲ್ಲಾ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಎಪಿಎಂಸಿ ಮತ್ತು ತೂಕ ಮತ್ತು ಅಳತೆ ಇಲಾಖೆ ಅಧಿಕಾರಿಗಳು ತಪ್ಪು ಮಾಡಿದ್ದರಿಂದ ಈ ಸಮಸ್ಯೆ ಉದ್ಭವವಾಗಿದೆ. ಎಪಿಎಂಸಿಗಳಲ್ಲಿ ವಾಣಿಜ್ಯ ಮಳಿಗೆಗಳು ತಲೆ ಎತ್ತಿವೆ. ಲೈಸನ್ಸ್ ದಾರರು ಅಂಗಡಿ ಪಡೆದು ಬಾಡಿಗೆ ಕೊಟ್ಟಿದ್ದಾರೆ. ಅಂಥವರ ಲೈಸನ್ಸ್ ರದ್ದು ಮಾಡುವುದಾಗಿ ತಿಳಿಸಿದರು. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕೃಷಿ ಚಟುವಟಿಕೆಗಳು ನಡೆಯಬೇಕು. ಎಂಬುದು ಸರಕಾರದ ಉದ್ದೇಶವಾಗಿದ್ದು, ಎಪಿಎಂಸಿ ಕಾಯ್ದೆ ಜಾರಿಗೆ ಬಗ್ಗೆ ವಿಧಾನಪರಿಷತ್ ಸದಸ್ಯರ ಅಧ್ಯಯನ ತಂಡ ಕೋಲಾರ ಶಿವಮೊಗ್ಗ, ಕಲಬುರಗಿ ಮತ್ತು ರಾಯಚೂರು ಎಪಿಎಂಸಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಶುಲ್ಕ ಹೆಚ್ಚಳ

ಕಾಂಗ್ರೆಸ್ ಸರ್ಕಾರ ರಾಜ್ಯದ ಜನ- ತೆಗೆ ಶಾಕ್ ಮೇಲೆ ಶಾಕ್ ನೀಡುತ್ತಿದ್ದು, ಇದೀಗ ವಿದ್ಯುತ್ ಬಿಲ್ ಹಾಗೂ ನೀರಿನ ಬಿಲ್ ಹೆಚ್ಚಳದ ಬಳಿಕ ಪದವಿ ಶಿಕ್ಷಣ ಶುಲ್ಕವನ್ನು 10% ಹೆಚ್ಚು ಮಾಡಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಶಾಕ್ ನೀಡಿದೆ. ವಿಶ್ವವಿದ್ಯಾಲಯಗಳು ಸಲ್ಲಿಸಿದ್ದ ಶುಲ್ಕ ಹೆಚ್ಚಳ ಪ್ರಸ್ತಾವನೆಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ಕೊಟ್ಟಿದೆ. ಇದರಿಂದ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಲ್‌ಗಳ ಶಿಕ್ಷಣ ಶುಲ್ಕವನ್ನು 10% ಹೆಚ್ಚಿಸಲು ಸರ್ಕಾರದಿಂದ ಅನುಮತಿ ಸಿಕ್ಕಂತಾಗಿದೆ. ಈ ವರ್ಷದಿಂದಲೇ ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಏಕರೂಪ ಶುಲ್ಕ ತಜ್ಞರ ಸಮಿತಿ ನೀಡಿದ್ದ ವರದಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಒಟ್ಟಿನಲ್ಲಿ ಸರ್ಕಾರದ ಈ ನಿರ್ಧಾರದಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಯುವನಿಧಿ ರೂಪದಲ್ಲಿ ಸರ್ಕಾರ ನೀಡುವ ಹಣ ಶುಲ್ಕ ಹೆಚ್ಚಳದ ರೀತಿಯಲ್ಲಿ ಸರ್ಕಾರ ವಾಪಸ್ ಪಡೆಯಲು ತೀರ್ಮಾನಿಸಿದಂತಿದೆ. ಇನ್ನು ಮುಂದೆ ರಾಜ್ಯದಲ್ಲಿ ಪದವಿ ಶಿಕ್ಷಣವೂ ದುಬಾರಿಯಾಗಲಿದೆ.

ಮದರಸಾಗಳಿಗೆ ಮದರಸಾಗಳ ಆಧುನೀಕರಣ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡುವ ಯೋಜನೆಯ ಅರ್ಜಿ ಆಹ್ವಾನ

ಗದಗ ಜಿಲ್ಲಾ ವ್ಯಾಪ್ತಿಯಲ್ಲಿರುವ ಮದರಸಾಗಳಿಗೆ ಮದರಸಾಗಳ ಆಧುನೀಕರಣ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡುವ ಯೋಜನೆಯಡಿ ಒಂದು ಸಂಸ್ಥೆಗೆ ಒಂದು ಬಾರಿಗೆ ಗರಿಷ್ಠ 5.00 ಲಕ್ಷಗಳ ಅನುದಾನವನ್ನು ನೀಡುವ ಸಲುವಾಗಿ ಜಿಲ್ಲೆಯಲ್ಲಿರುವ ಮದರಸಾಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮದರಸಾಗಳಲ್ಲಿ ವಿದ್ಯಾರ್ಥಿಗಳ ಔಪಚಾರಿಕ ಶಿಕ್ಷಣ, ಗಣಕಯಂತ್ರ ಶಿಕ್ಷಣ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಹಾಗೂ ಕುಡಿಯುವ ನೀರು, ಶೌಚಾಲಯ ಮತ್ತು ಪೀಠೋಪಕರಣಗಳ ಖರೀದಿಗೆ ಅನುದಾನವನ್ನು ಬಳಸಿಕೊಳ್ಳಬಹುದಾಗಿದೆ.

ಅರ್ಜಿಗಳನ್ನು https://dom.karnataka.gov.in ಮೂಲಕ ಭರ್ತಿ ಮಾಡಿ ದಿನಾಂಕ:20- 01-2024 ಒಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ಇವರಿಗೆ ಸಲ್ಲಿಸಬೇಕು. ಅರ್ಹತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಝಾದ ಭವನ, ಜಿಲ್ಲಾ ನ್ಯಾಯಾಲಯದ ಎದುರುಗಡೆ, ಹುಬ್ಬಳ್ಳಿ ರಸ್ತೆ. ಗದಗ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Related Post

Leave a Reply

Your email address will not be published. Required fields are marked *