ಆತ್ಮೀಯ ರೈತರೇ, ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಗದಗ, ಧಾರವಾಡ, ಬಾಗಲಕೋಟೆ, ಕಲಬುರಗಿ, ವಿಜಯಪುರದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲನ ಶಾಖಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಜನರು ಒಂದು ಮಳೆನಾದ್ರೂ ಬಂದಿದ್ದರೆ ಎಂದು ಆಕಾಶದತ್ತ ಮುಖ ಮಾಡುತ್ತಿದ್ದಾರೆ. ಬಿಸಿಲಿನ ಬೇಗೆ ಬೆಂದಿದ್ದ ಜನರಿಗೆ ಇಂದು ಮಳೆರಾಯ ತಂಪೆರಲಿದ್ದಾನೆ.
ಮುಂಬರುವ ಮಾನ್ಸೂನ್ ದೀರ್ಘಾವಧಿಯ ಸರಾಸರಿಯ 94 ಪ್ರತಿಶತದಷ್ಟು ಸಾಮಾನ್ಯಕ್ಕಿಂತ ಕಡಿಮೆ ಇರುತ್ತದೆ ಈ ಮೂಲಕ ದೇಶದಲ್ಲಿ ಶೇಕಡಾ 20ರಷ್ಟು ಬರಗಾಲ ಉಂಟಾಗುವ ಸಾಧ್ಯತೆ
ಹೇಳಲಾಗಿದೆ. ಪ್ರತಿ ವರ್ಷಕ್ಕಿಂತ ಹೆಚ್ಚು ಮಳೆಯಾಗಲು ಶೇಕಡಾ 110ರಷ್ಟು ಮಳೆ ಆಗಲೇಬೇಕು. ವಾಡಿಕೆಯಷ್ಟು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ
ಇದನ್ನೂ ಓದಿ;- ರಾಜೀವ್ ಗಾಂಧಿ ವಸತಿ ಯೋಜನೆಯಿಂದ ಬಡವರಿಗೆ ಉಚಿತ ಮನೆ ನಿರ್ಮಾಣ ಕಟ್ಟಿಸಿಕೊಡುತ್ತಾರೆ