03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ರಾಜ್ಯದ ಈಗಿನ ಅಧಿಕ ಉಷ್ಣತೆ ಇನ್ನೂ 2 ರಿಂದ 3 ದಿವಸಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ. ಹೆಚ್ಚಿನ ಭಾಗಗಳಲ್ಲಿ 40° C ಗಿಂತಲೂ ಅಧಿಕ ತಾಪಮಾನ ದಾಖಲಾಗಿದೆ. ಈಗಿನಂತೆ ರಾಜ್ಯದಲ್ಲಿ ಮೇ 6 ರಿಂದ ಆರಂಭವಾಗುವ ಪೂರ್ವ ಮುಂಗಾರು ಮಳೆಯು ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಅಧಿಕವಾಗಿದೆ.
02.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಆಗುಂಬೆ, ಶಿೃಂಗೇರಿ, ಚಾರ್ಮಾಡಿ, ಕುದುರೆಮುಖ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
01.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕೊಡಗು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮೈಸೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮೇ 6ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
30.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತದ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕೊಡಗು ಹೆಚ್ಚಿನ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಧಿಕ ಉಷ್ಣತೆಯೊಂದಿಗೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಮೇ 6ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.
29.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ರಾಜ್ಯದ ಮುಂದಿನ 3 ದಿವಸಗಳ ಕಾಲ ಉಷ್ಣ ಗಾಳಿ ಹೆಚ್ಚಿರುವ ಲಕ್ಷಣಗಳಿದ್ದು, ಅದರಲ್ಲೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು.
ಮೇ 6ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.
28.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು ಸಂಜೆ, ರಾತ್ರಿ ಮೋಡ ಸ್ವಲ್ಪ ಜಾಸ್ತಿ ಇದ್ಧರೂ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ. ರಾಜ್ಯದ ಉಳಿದ ಭಾಗಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ ಕೊಡಗು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಸಮುದ್ರದ ಭಾಗದಿಂದ ( ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ) ಭೂಮಿಯ ಕಡೆಗೆ ಬೀಸುವ ಗಾಳಿಯ ಒತ್ತಡ ತುಂಬಾ ಕಡಿಮೆ ಇರುವುದರಿಂದ ವಾತಾವರಣದಲ್ಲಿ ಬಿಸಿ ಗಾಳಿಯ ಪ್ರಭಾವ ಮುಂದಿನ 4 ದಿನಗಳ ಕಾಲ ಹೆಚ್ಚಿರುವ ಸಾಧ್ಯತೆ ಇದೆ.
27.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಎಪ್ರಿಲ್ 28 ರಿಂದ ಮೂರು ದಿನಗಳ ಕಾಲ ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.