Breaking
Tue. Dec 17th, 2024

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ harvesting machine available

Spread the love

ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ರೈತರಿಗೆ ವಿತರಿಸುವ ಉದ್ದೇಶದಿಂದ ಗದಗ ಜಿಲ್ಲೆ ಸಾಮಾನ್ಯ ವರ್ಗ ಘಟಕದ ವೈಯಕ್ತಿಕ ಫಲಾನುಭವಿಗೆ 1 ಕಂಬೈನಡ್ ಹಾರ್ವೆಸ್ಟರ್ ಹಬ್ ಕ್ರಿಯಾ ಯೋಜನೆ ಅನುಮೋದನೆಗೊಂಡಿರುತ್ತದೆ. ಸದರಿ ಹಬ್‌ನಲ್ಲಿ ಕಡ್ಡಾಯವಾಗಿ ಕಂಬೈನ್ಸರ್ ಹಾರ್ವೆಸ್ಟರ್ ಮತ್ತು ಟ್ರಾಕ್ಟರ್ ಆಪರೇಟೆಡ್ ಬೇಲರ್ಸ ಇರತಕ್ಕದ್ದು. ಸದರಿ ಯೋಜನೆಯಡಿ ಸಾಮಾನ್ಯ ವರ್ಗ ಘಟಕದಡಿ ವೈಯಕ್ತಿಕ ಫಲಾನುಭವಿಗೆ ಗರಿಷ್ಠ 40 ಲಕ್ಷ (ಶೇ. 50% ಸಹಾಯಧನ) ಇರುತ್ತದೆ. ಆಸಕ್ತ ರೈತರು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಫೆಬ್ರುವರಿ 20 ರೊಳಗಾಗಿ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸುವುದು.

ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಅರ್ಜಿಗಳನ್ನು ಪರಿಶೀಲಿಸಿ, ಜಿಲ್ಲಾಮಟ್ಟದ ಉಪಕರಣ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಉಪ ಕೃಷಿ ನಿರ್ದೇಶಕರಿಗೆ ಸಲ್ಲಿಸುವುದು. ನಂತರ ಉಪ ಕೃಷಿ ನಿರ್ದೇಶಕರ ‘ಕಛೇರಿಯಿಂದ ಸ್ವೀಕೃತಗೊಂಡ ಅರ್ಜಿಗಳನ್ನು ಪರಿಶೀಲಿಸಿ ಜಿಲ್ಲಾಮಟ್ಟದ ಉಪಕರಣ ಸಮಿತಿಯಲ್ಲಿ ಮಂಡಿಸಲಾಗುವುದು. ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಒಂದೇ ಹಬ್‌ಗೆ ಒಂದಕ್ಕಿಂತ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿ ಅರ್ಹಗೊಂಡಲ್ಲಿ ಲಾಟರಿ ಮುಖಾಂತರ ಫಲಾನುಭವಿಯನ್ನು ಆಯ್ಕೆ ಮಾಡಲಾಗುವುದು.

ನಂತರ ಜಂಟಿ ಕೃಷಿ ನಿರ್ದೇಶಕರ ಕಛೇರಿಯಿಂದ ಅಯ್ಕೆಯಾದ ಫಲಾನುಭವಿಗೆ ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಲು ಕಾರ್ಯಾದೇಶ ನೀಡಲಾಗುವುದು. ಹಬ್ಬವಾರು ಸ್ವೀಕೃತವಾದ ಯಂತ್ರೋಪಕರಣಗಳನ್ನು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಮತ್ತು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಪರಿಶೀಲಿಸಿ, ಸಹಾಯಧನವನ್ನು ನಿಯಮಾನುಸಾರ ಸಂಬಂಧಿಸಿದ ಸಾಲದ ಬ್ಯಾಂಕ್ ಖಾತೆಗೆ ಕ್ರೆಡಿಟ್ ಲಿಂಕಡ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮೂಲಕ ಜಮಾ ಮಾಡಲಾಗುವುದು.

ಫಲಾನುಭವಿಗಳು ಅರ್ಜಿಯೊಂದಿಗೆ ಪಹಣಿ ಪ್ರತಿ, ಆಧಾರ ಕಾರ್ಡ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಎಫ್.ಐ.ಡಿ. ಸಂಖ್ಯೆ, ರೂ.20 ಚಾಪಾ ಕಾಗದದ ಮೇಲೆ ಹಬ್ ನ್ನು ಪರಭಾರೆ ಮಾಡುವುದಿಲ್ಲವೆಂದು ಮುಚ್ಚಳಿಕೆ ಪತ್ರ ( ನೋಟರಿಯೊಂದಿಗೆ), ಸಹಾಯಧನವು ಕ್ರೆಡಿಟ್ ಲಿಂಕ್‌ಡ ಬ್ಯಾಕ್ ಎಂಡೆಡ್ ಸಬ್ಸಿಡಿ ಆಗಿರುವುದರಿಂದ ಸಂಬಂಧಿಸಿರುವ ಬ್ಯಾಂಕ್ ನಿಂದ ತಾತ್ವಿಕ ಸಾಲ ಮಂಜೂರಾತಿ ಪತ್ರ ( ಇನ್ ಪ್ರಿನ್ಸಿಪಲ್ ಲೋನ್ ಸ್ಯಾಂಕ್ಷನ್ ಲೆಟರ್ ) ಇವುಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ.

10 ದಿನಗಳ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮ

ಕರ್ನಾಟಕ ಉದ್ಯಮಶೀಲತಾಭಿ ವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಕೌಶಲ್ಯಾಭಿವೃದ್ಧಿಉದ್ಯಮಶೀಲತೆಮತ್ತು ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ ಇವರ ಪ್ರಾಯೋಜಕತ್ವದಲ್ಲಿ 10ದಿನಗಳ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮವನ್ನು ವಿಜಯಪುರದಲ್ಲಿ ಏರ್ಪಡಿಸಲಾಗಿದೆ ಆಸಕ್ತರು ಫೆ.7ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬಹುದು.

ಉದ್ಯಮದ ಆಯ್ಕೆ ವಿಧಾನ, ಬ್ಯಾಂಕ್ ಮತ್ತು ಕೈಗಾರಿಕಾ ಇಲಾಖೆಯಿಂದ ದೊರೆಯುವ ಸಹಾಯ ಸೌಲಭ್ಯ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಸುವ ವಿಧಾನ, ಜಿಎಸ್ ಟಿ ಇನ್ನಿತರ ಮಾಹಿತಿಯನ್ನು ತರಬೇತಿ ಅವಧಿಯಲ್ಲಿ ನೀಡಲಾಗುವುದು. ಆಸಕ್ತರು ಮೊಬೈಲ್;8884184439 ಹಾಗೂ ವಿಜಯಪುರ ಜಂಟಿ ನಿರ್ದೇಶಕರು ಸಿಡಾಕ್ ಇವರ ಕಚೇರಿಯನ್ನು ಸಂಪರ್ಕಿಸುವಂತೆ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ನೀರು ನವೆಂಬರ್ ತಿಂಗಳಿನಿಂದ ಪೂರೈಕೆ

ಸರಕಾರಿ ಶಾಲೆಗಳಿಗೆ ಸುವರ್ಣಯುಗ. ಉಚಿತವಾಗಿ ವಿದ್ಯುತ್ ಹಾಗೂ ನೀರನ್ನು ಪೂರೈಲು ನಿರ್ಧರಿಸಲಾಗಿದ್ದು, ಮುಂಬರುವ ನವೆಂಬರ್ 1 ರಿಂದ ಇದು ಜಾರಿಗೆ ಬರಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಗರದ ಸರ್ಕಾರಿ ಅತಿಥಿಗೃಹದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು.” ಉಚಿತ ವಿದ್ಯುತ್‌ ನೀಡಿದರೆ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂಬುದು ನಮ್ಮ ಉದ್ದೇಶ.

ಹಾಗಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌, ನೀರು ಕೊಡಲು ನಿರ್ಧರಿಸಿದ್ದಾರೆ. ಬಹಳಷ್ಟು ಶಾಲೆಗಳು ವಿದ್ಯುತ್ ಬಿಲ್ ಕಟ್ಟಲು ಆಗದೆ ಕಂಪ್ಯೂಟ‌ರ್ ಶಿಕ್ಷಣ ಕೊಡಲು ಹಿಂಜರಿಯುತ್ತಿದ್ದರು. ಉಚಿತ ವಿದ್ಯುತ್‌ ನೀಡುವುದರಿಂದ ಮಕ್ಕಳಿಗೆ ಕಂಪ್ಯೂಟರ್ ತರಬೇತಿಯೂ ದೊರೆಯಲಿದೆ. ಇದರ ಜೊತೆಗೆ ಶಿಕ್ಷಣದಲ್ಲಿ ಹಿಂದುಳಿದ ಮಕ್ಕಳಿಗೆ ಶಿಕ್ಷರು ಸಂಜೆ ಸಮಯದಲ್ಲಿ ವಿದ್ಯುತ್ ಬಳಸಿಕೊಂಡು ಪಾಠ ಹೇಳಿಕೊಡಬಹುದು ಎಂದು ಹೇಳಿದರು. ರಾಜ್ಯದಲ್ಲಿ ಈಗಾಗಲೇ 300 ಕರ್ನಾಟಕ ಪಬ್ಲಿಕ್ ಶಾಲೆಗಳಿವೆ.

ಶಿಕ್ಷಣಕ್ಕೆ ಅನುದಾನ ನೀಡದ ಕೇಂದ್ರ ಸರಕಾರ :

ನಿಯಮದ ಪ್ರಕಾರ ಸರ್ವ ಶಿಕ್ಷಣ ಅಭಿಯಾನದ ಮೂಲಕ ರಾಜ್ಯಕ್ಕೆ ಕೇಂದ್ರ ಸರಕಾರದಿಂದ ಅನುದಾನ ಬರಬೇಕಿತ್ತು. ಆದರೆ ಕರ್ನಾಟಕ ಪಬ್ಲಿಕ್ ಶಾಲೆಗಳು ಹೆಚ್ಚು ಅನುದಾನವನ್ನೇ ನೀಡದೆ ಕೇಂದ್ರ ಸರಕಾರ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು. ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾ‌ರ್, ಕಾಂಗ್ರೆಸ್ ಮುಖಂಡ ಶಿವಣ್ಣ, ಮಾಧ್ಯಮ ವಕ್ತಾರ ಮಹೇಶ್ ಉಪಸ್ಥಿತರಿದ್ದರು..

Related Post

Leave a Reply

Your email address will not be published. Required fields are marked *