Breaking
Tue. Dec 17th, 2024

ಫೆ.10 ರಿಂದ ಮೂರು ದಿನಗಳ ಕಾಲ ತೋಟಗಾರಿಕೆ ಮೇಳ, horticulture

Spread the love

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಪ್ರಸಕ್ತ ಸಾಲಿಗೆ ಬರ ಸಂಹಿಷ್ಣುತೆಗಾಗಿ ತೋಟಗಾರಿಕೆ ಎಂಬ ದ್ವೇಯ ವಾಕ್ಯದೊಂದಿಗೆ ಫೆಬ್ರವರಿ 10, 11 ಹಾಗೂ 12 ರಂದು ಮೂರು ದಿನಗಳ ಕಾಲ ತೋಟಗಾರಿಕೆ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ತೋವಿವಿಯ ಕುಲಪತಿ ಡಾ.ಎನ್.ಕೆ.ಹೆಗಡೆ ತಿಳಿಸಿದರು. ತೋವಿವಿಯ ವಿಸ್ತರಣಾ ನಿರ್ದೇಶನಾಲಯದಲ್ಲಿ ಶುಕ್ರವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರತಿ ತೋಟಗಾರಿಕೆ ಮೇಳವು ರೈತರಲ್ಲಿ ಅಪೇಕ್ಷಿತ ಧನಾತ್ಮಕ ಬದಲಾವಣೆ ತರುವ ಅವಕಾಶವನ್ನು ಒದಗಿಸುತ್ತಿದ್ದು, ಪ್ರತಿ ವರ್ಷ ಒಂದೊಂದು ಧೈಯ ವಾಕ್ಯಗಳೊಂದಿಗೆ ತೋಟಗಾರಿಕೆ ಮೇಳ ಆಚರಿಸುತ್ತಾ ಬರಲಾಗಿದೆ.

ಈ ವರ್ಷ ಬರ ಸಂಹಿಷ್ಣುತೆಗಾಗಿ ತೋಟಗಾರಿಕೆ ಎಂಬ ಧೈಯ ವಾಕ್ಯದೊಂದಿಗೆ ಜರುಗಿಸುತ್ತಿರುವುದು ವಿಶೇಷವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೋಟಗಾರಿಕೆ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಈ ಮೇಳದಲ್ಲಿ ವಿಶ್ವ ವಿದ್ಯಾಲಯದ ವ್ಯಾಪ್ತಿಯ 24 ಜಿಲ್ಲೆಗಳಿಂದ ಗುರುತಿಸಲ್ಪಟ್ಟ ಫಲಶ್ರೇಷ್ಟರನ್ನು ಸನ್ಮಾನಿಸಲಾಗುತ್ತಿದೆ. ಮೇಳದಲ್ಲಿ ಪರಸ್ಪರ, ಗುಂಪು ಮತ್ತು ಸಮೂಹ ಎಂಬ ಸಂವಹನದ ಮೂರು ಪ್ರಕಾರಗಳನ್ನು ಉಪಯೋಗಿಸಲಾಗುತ್ತಿದೆ. ಇದರಿಂದ ತಂತ್ರಜ್ಞಾನ ಅಳವಡಿಕೆಗೆ ಪ್ರೋತ್ಸಾಹಿಸಿದಂತಾಗುತ್ತದೆ.

ಆದ್ದರಿಂದ ತೋಟಗಾರಿಕೆ ಮೇಳವು ತಂತ್ರಜ್ಞಾನ ಪ್ರಸಾರದ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ ಎಂದರು. ಪ್ರತಿ ವರ್ಷ ಒಂದೇ ಸೂರಿನಡಿ ರೈತ ಸಮುದಾಯಕ್ಕೆ ನವೀನ, ಸಮಯೋಜಿಕ ತಂತ್ರಜ್ಞಾನಗಳನ್ನು ವರ್ಗಾವಣೆ ಮಾಡಲು ತೋಟಗಾರಿಕೆ ಮೇಳವನ್ನು ಆಯೋಜಿಸುತ್ತಿದ್ದು, ಮೇಳದ ಯೋಜನೆ ಮುಖಾಂತರ ವಿಶ್ವವಿದ್ಯಾಲಯದ ಮುಖ್ಯ ಉದ್ದೇಶಗಳಲ್ಲೊಂದಾದ ತಂತ್ರಜ್ಞಾನದ ವರ್ಗಾವಣೆಯು ಯಶಸ್ವಿಯಾಗುತ್ತಿದೆ. ತೋಟಗಾರಿಕೆಯ ತರಕಾರಿ ಬೆಳೆಗಳ, ಹೂವಿನ, ಹಣ್ಣಿನ ವಿವಿಧ ತಳಿಗಳ, ಕೊಲ್ಲೋತ್ತರ ತೋಟಗಾರಿಕಾ ಉತ್ಪನ್ನಗಳ ಪ್ರದರ್ಶನ, ಕ್ಷೇತ್ರ ಭೇಟಿ, ಪ್ರಾತ್ಯಕ್ಷಿಕೆ, ವಿಡಿಯೋ ಮುಂತಾದವುಗಳ ಮೂಲಕ ತಂತ್ರಜ್ಞಾನದ ಮಾಹಿತಿ ನೀಡಲಾಗುತ್ತಿದೆ.

ಮೇಳದಲ್ಲಿ 200 ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಲಾಗುತ್ತಿದೆ ಎಂದರು. ಸಮಗ್ರ ಕೃಷಿ ಪದ್ಧತಿಯಲ್ಲಿ ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳ ಸಮಗ್ರ ಮಾಹಿತಿಯು ದೊರೆಯುತ್ತದೆ. ವಿಜ್ಞಾನಿಗಳು, ಪ್ರಗತಿಪರ ರೈತ, ಉದ್ಯಮಿಗಳು ಮುಂತಾದವರನ್ನು ನೇರವಾಗಿ ಭೇಟಿಯಾಗಿ ಅವರ ಯಶೋಗಾಥೆಗಳಿಂದ ಪ್ರೇರಣೆ ಪಡೆಯುವದಲ್ಲದೇ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಪ್ರತಿ ದಿನವೂ ಸಾಧಕ ರೈತರು ತಮ್ಮ ಅನುಭವವನ್ನು ಇತರೆ ರೈತರಿಗೆ ಹಂಚಿಕೊಳ್ಳಲಿದ್ದಾರೆ.

ಜೊತೆಗೆ ವಿಜ್ಞಾನಿಗಳು, ಪ್ರಗತಿಪರ ರೈತರು ಮತ್ತು ಇತರೆ ರೈತರೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದರು. ತೋಟಗಾರಿಕೆ ವಿವಿಯ ವಿಸ್ತರಣಾ ನಿರ್ದೇಶ ಹಾಗೂ ತೋಟಗಾರಿಕೆ ಮೇಳದ ಅಧ್ಯಕ್ಷ ಡಾ.ಲಕ್ಷ್ಮೀನಾರಾಯಣ ಹೆಗಡೆ ಮಾತನಾಡಿ ಈ ಬಾರಿ ಮೇಳದಲ್ಲಿ ನೀರು ಸಂರಕ್ಷಣೆ, ಹನಿ ನೀರಾವರಿ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಅಲ್ಲದೇ 26 ತಳಿಯ ದ್ರಾಕ್ಷಿ ಬೆಳೆಯ ಪ್ರದರ್ಶನ ಮತ್ತು ಮಾರಾಟ ಸಹ ಏರ್ಪಡಿಸಲಾಗುತ್ತಿದೆ.

ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ

ವಿಜಯಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮುದ್ದೇಬಿಹಾಳದ ವಿ.ಬಿ.ಸಿ. ಪ್ರೌಢಶಾಲಾ ಆವರಣದಲ್ಲಿ ಫೆ.2 ರಂದು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಬೆಳಿಗ್ಗೆ 11-45ಕ್ಕೆ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ಕರ್ನಾಟಕ ಸೋಪ್ಸ್ ಮತ್ತು ಡಿಟಿರ್ಜೆಂಟ್ ನಿಯಮಿತ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಸೇರಿದಂತೆ ವಿವಿಧ ಸಚಿವರು, ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಫೆ. 2ರಿಂದ 4ರವರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಹೊಸಪೇಟೆ : ವಸತಿ, ವಕ್ಸ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಫೆಬ್ರವರಿ 2 ರಿಂದ ಫೆ.4ರವರೆಗೆ ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಫೆ.2ರಂದು ಬೆಳಿಗ್ಗೆ ಬಳ್ಳಾರಿಯಿಂದ ನಿರ್ಗಮಿಸಿ, 11.30ಕ್ಕೆ ಹೊಸಪೇಟೆಗೆ ಆಗಮಿಸಿ, ದಿವಂಗತ ಜೆ.ಕಾರ್ತಿಕ್ ಅವರ ನಿವಾಸಕ್ಕೆ ಭೇಟಿ ನೀಡುವರು. ಹಂಪಿ ಗ್ರಾ.ಪಂ ಮುಂಭಾಗದ ಮಾತಂಗ ಪರ್ವತ ಮೈದಾನದಲ್ಲಿ 11.45ಕ್ಕೆ ನಡೆಯುವ ಎತ್ತುಗಳ ಪ್ರದರ್ಶನದ ಉದ್ಘಾಟನೆ. ಮಧ್ಯಾಹ್ನ 12 ಗಂಟೆಗೆ ಫಲಪುಷ್ಪ ಪ್ರದರ್ಶನದ ಉದ್ಘಾಟನೆ, 12.15ಕ್ಕೆ ಸಾವಯವ ಮತ್ತು ಸಿರಿಧಾನ್ಯಗಳ ವಸ್ತು ಪ್ರದರ್ಶನ, ಸಿರಿಧಾನ್ಯಗಳ ಪಾಕ ಸ್ಪರ್ಧೆ, ವಿಜ್ಞಾನಿಗಳಿಂದ ಉಪನ್ಯಾಸ ಹಾಗೂ ಸಂವಾದ ಪುಸ್ತಕ ಪ್ರದರ್ಶನ ಉದ್ಘಾಟಿಸುವರು. ಮಧ್ಯಾಹ್ನ 2ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬೈಕ್ ರ್ಯಾಲಿಯಲ್ಲಿ ಬರುವವರನ್ನು ಸ್ವಾಗತಿಸುವರು.

ಸಂಜೆ 4.30ಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್‌ದಲ್ಲಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳುವರು. 6 ಗಂಟೆಗೆ ಆನೆ ಲಾಯ ಮತ್ತು ಕುದುರೆ ಲಾಯ ಆವರಣದಲ್ಲಿ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಉದ್ಘಾಟಿಸುವರು. 7 ಗಂಟೆಗೆ ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕ ಕಚೇರಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಳ್ಳುವರು. ರಾತ್ರಿ 8ಗಂಟೆಗೆ ಹಂಪಿಯ ಗಾಯಿತ್ರಿ ಪೀಠ ವೇದಿಕೆಯಲ್ಲಿ ನಡೆಯುವ ಹಂಪಿ ಉತ್ಸವ-2024ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸುವರು. ಅಂದು ಟಿ.ಬಿ.ಡ್ಯಾಂ ವೈಕುಂಠ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡುವರು. ಫೆ.3ರಂದು ಕಮಲಾಪುರದ ಹವಾಮಾ ಕಚೇರಿಯ ಹಿಂಭಾಗದ ಆವರಣದಲ್ಲಿ ಬೆಳಿಗ್ಗೆ 10ಗಂಟೆಗೆ ನಡೆಯುವ ಕುರಿಗಳ ಪ್ರದರ್ಶನಕ್ಕೆ ಚಾಲನೆ.

Related Post

Leave a Reply

Your email address will not be published. Required fields are marked *