Breaking
Thu. Dec 19th, 2024

28 ರಂದು ತೋಟಗಾರಿಕೆ ಉತ್ಪನ್ನಗಳ ಖರೀದಿದಾರರ ಮತ್ತು ಮಾರಾಟಗಾರರ ಸಮ್ಮೇಳನ

Spread the love

ಬಾಗಲಕೋಟೆ ತೋಟಗಾರಿಕೆ ಇಲಾಖೆ ಹಾಗೂ ಕೆಎಪಿಪಿಎಸಿ ಪ್ರಾಯೋಜಕತ್ವದಲ್ಲಿ ಫೆಬ್ರವರಿ 28 ರಂದು ಬೆಳಿಗ್ಗೆ 10 ಗಂಟೆಗೆ ತೋವಿವಿಯ ಸಭಾಂಗಣದಲ್ಲಿ ತೋಟಗಾರಿಕೆ ಉತ್ಪನ್ನಗಳ ಖರೀದಿದಾರರ ಮತ್ತು ಮಾರಾಟಗಾರರ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕಾರ್ಯಕ್ರಮ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಶಾಸಕ ಎಚ್.ವಾಯ್.ಮೇಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ಹುನಗುಂದ ಶಾಸಕರು ಹಾಗೂ ವೀರಶೈವ ಲಿಂಗಾಯದ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ.

ಮೆರಿಟ್ ಕಂ ಮೀನ್ಸ ವಿದ್ಯಾರ್ಥಿ ವೇತನಕ್ಕೆ ಅರ್ಜಿ

ಬಾಗಲಕೋಟೆ : ರಾಜ್ಯದ ಅರ್ಹ ಅಲ್ಪಸಂಖ್ಯಾತರ muslim, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಮೆಟ್ರಿಕ್ ನಂತರ ಹಾಗೂ ಮೆರಿಟ್ ಕಂ ಮೀನ್ಸ್‌ಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 29 ಆಗಿದೆ.

ಹೆಚ್ಚಿನ http://dom.karnataka.gov.in/kodagu/public 8277799990 ಅಥವಾ ತಾಲೂಕಾ ಮಾಹಿತಿ ಕೇಂದ್ರ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕಾರಣಕ್ಕಾಗಿ ಬಿಜೆಪಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ

ಬಿಜೆಪಿಯವರು ಕೇಂದ್ರ ಸರ್ಕಾರದ ಅನ್ಯಾಯವನ್ನು ಸಮರ್ಥನೆ ಮಾಡಿಕೊಂಡು ಪಕ್ಷ ರಾಜಕಾರಣಕ್ಕಾಗಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆಯಲ್ಲಿ ಆಂಧ್ರ ಪ್ರದೇಶ, ತಮಿಳುನಾಡಿಗೆ ತೊಂದರೆ ಇಲ್ಲ. ನಮ್ಮ ಸರ್ಕಾರಕ್ಕೆ ಮಾತ್ರ ಯಾಕೆ ತೊಂದರೆ, ಅಪಪ್ರಚಾರ ಮಾಡುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಉತ್ತರಿಸಿ ಕೇರಳದವರು ಯಾಕೆ ದೆಹಲಿಗೆ ಬಂದು ಪ್ರತಿಭಟಿಸಿದರು ಅದಕ್ಕೆ ತಮಿಳುನಾಡಿನವರು ಏಕೆ

ಬೆಂಬಲ ನೀಡಿದರು ಎಂದು ಪ್ರಶ್ನಿಸಿ ಎಲ್ಲಾ ರಾಜ್ಯಗಳಿಗೂ ಅನ್ಯಾಯವಾಗಿದೆ. ದಕ್ಷಿಣ ರಾಜ್ಯಗಳಿಗೆ ಜಾಸ್ತಿ ಅನ್ಯಾಯವಾಗಿದೆ. ಉತ್ತರದ ರಾಜ್ಯಗಳಿಗೆ ಕೊಡಬೇಡಿ ಎನ್ನುವುದಿಲ್ಲ. ಆದರೆ ನಮಗೆ ಅನ್ಯಾಯ ಮಾಡಬೇಡಿ. ಕೇಂದ್ರದ ಪಾಲಿನಲ್ಲಿಯೇ ಕೊಡಲಿ. ನಮ್ಮ ಪಾಲಿನಿಂದ ಯಾಕೆ ಕಿತ್ತುಕೊಡುತ್ತಾರೆ ಎಂದರು. 100 ರೂ ತೆರಿಗೆ ಸಂಗ್ರಹ ಮಾಡಿ ಕೊಟ್ಟರೆ 13 ರೂ. ಮಾತ್ರ ಕೊಡುತ್ತಾರೆ ಇದು ನ್ಯಾಯವೇ?

ಎಂದರು. ಉದ್ದೇಶಪೂರ್ವಕವಾಗಿ ಅಪಪ್ರಚಾರ ವಿಧಾನ ಪರಿಷತ್ ನಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆಗೆ ಸೋಲುಂಟಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಆದಾಯ ಹೆಚ್ಚಿರುವ ದೇವಸ್ಥಾನಗಳಿಂದ ಕಡಿಮೆ ಆದಾಯವಿರುವ ಹಿಂದೂ ದೇವಾಲಯಗಳಿಗೆ ಬಳಸುವುದನ್ನು ವಿರೋಧಿಸುತ್ತಾರೆ. ಬೇರೆ ಯಾವ ಧರ್ಮದ ದೇವಾಲಯಗಳಿಗೂ ಇದನ್ನು ಬಳಸುವುದಿಲ್ಲ. ಅವರಿಗೆ ಪರಿಷತ್ತಿನಲ್ಲಿ ಬಹುಮತ ಇದೆ ಎಂದು ಹೀಗೆ ಮಾಡಿದ್ದಾರೆ ಎಂದರು. ಹಿಂದೂಗಳ ಹಣವನ್ನು ಲೂಟಿ ಮಾಡಲು ಸರ್ಕಾರ ಹೊರಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

ಅಂಚೆ ಇಲಾಖೆ ಮುಖಾಂತರ ದೇಶಾದ್ಯಂತ ರೈತರ ಅಹಾರ ಉತ್ಪನ್ನ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

ರೈತರು ಬೆಳೆದ ಆಹಾರ ಉತ್ಪನ್ನಗಳನ್ನು ದೇಶ ವಿದೇಶಕ್ಕೆ ಸುಲಭ ರಿತಿಯಲ್ಲಿ ಅಂಚೆ ಇಲಾಖೆ ಮೂಲಕ ವಿತರಿಸಬಹುದಾಗಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು ಅವರು ಬಿ.ವಿ.ವಿ.ಸಂಘದ ಮಿನಿ ಸಭಾಂಗಣದಲ್ಲಿ ಶುಕ್ರವಾರ ನೇಟರ್ ಜಾಗರಿ ಮತ್ತು ಎಮ್ 81 ಫುಡ್ ಪ್ರೊಡಕ್ಷ,ಸಂಗಾನಟ್ಟಿ ಹಾಗೂ ಚೇಂಬರ್ ಆಪ್ ಕಾಮರ್ಸ್ ಬಾಗಲಕೊಟೆ ಇವರ ಸಹಯೋಗದಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮ ಬದ್ಧಗೊಳಿಸುವುಕೆ ಯೋಜನೆಯಡಿಯಲ್ಲಿ ರೈತ ತಯಾರಿಸಿದ ಉತ್ಕೃಷ್ಟ ಉತ್ಪನ್ನವನ್ನು ಅಂಚೆ ಇಲಾಖೆ ಮುಖಾಂತರ ದೇಶಾದ್ಯಂತ ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಂಪ್ರದಾಯಕ ಕೃಷಿ ಪದ್ಧತಿ ಅನೂಸರಣೆ ಅಗತ್ಯ ಅಂಚೆ ಇಲಾಖೆಯಿಂದ ಪತ್ರ ವ್ಯವಹಾವಲ್ಲದೆ ರೈತ ಬೆಳೆದಂತಹ ಅಹಾರ ಉತ್ಪನ್ನಗಳನ್ನು ದೇಶ ವಿದೇಶಗಳಿಗೆ ಸುರಕ್ಷಿತವಾಗಿ ಸುಲಭ ರೀತಿಯಲ್ಲಿ ಸಾಗಾಣಿಕೆ ಮಾಡಬಹುದಾಗಿದೆ. ಇದು ನಮ್ಮ ಹೆಮ್ಮೆಯ ಕೇಂದ್ರ ಇಲಾಖೆಗಳಲ್ಲಿ ಒಂದು ರೈತರ ಆರ್ಥಿಕ ಅಭಿವೃದ್ಧಿ ಶೈಕ್ಷಣಿಕ ಸಾಮಾಜಿಕ ಅಭಿವೃದ್ಧಿಯೆ ನಮ್ಮ ಮೂಲ ಮಂತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಮುಂದಾಲೋಚನೆಯಿಂದ ಜಗತ್ತಿನ ಅರ್ಥ ವ್ಯವಸ್ಥೆಯಲ್ಲಿ 5 ಸ್ಥಾನದಲ್ಲಿರುವ ಭಾರತ 3 ಸ್ಥಾನಕ್ಕೆ ಆಗಮಿಸುವಲ್ಲಿ ಯಾವುದೆ ಸಂದೆಹವಿಲ್ಲಾ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿ.ವಿ.ವಿ.ಸಂಘ ಕಾರ್ಯಾಧ್ಯಕ್ಷರು ಹಾಗೂ ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷರಾದ ಡಾ.ವೀರಣ್ಣ ಚರಂತಿಮಠ ಮಾತನಾಡಿ ಗ್ರಾಮದ ಉದ್ದಾರವೇ ದೇಶದ ಪ್ರಗತಿಯಾಗಿದ್ದು, ಪ್ರಧಾನಿ ಮೋದಿಯವರ ಕನಸಿನ ಯೋಜನೆಯಾದ ಒಂದು ಜಿಲ್ಲೆ ಒಂದು ಉತ್ಪನ್ನದ ಯೋಜನೆಯಡಿಯಲ್ಲಿ ದೇಶದ ಎಲ್ಲಾ 765 ಜಿಲ್ಲೆಗಳಲ್ಲಿ ರೈತರ ಉತ್ಪನ್ನಗಳ ರಫ್ತು ಸಾಮರ್ಥ್ಯವನ್ನು ಹೆಚ್ಚಿಸಲು ಅಂಚೆ ಇಲಾಖೆ ಮೂಲಕ ರಫ್ತು.

Related Post

Leave a Reply

Your email address will not be published. Required fields are marked *