Breaking
Wed. Dec 18th, 2024

ಒಣಮೆಣಸಿನಕಾಯಿ ದರ ಕುಸಿತ ಆಗಿದೆ ಯಾವ ಜಿಲ್ಲೆಯಲ್ಲಿ ಏಷ್ಟು ಮಾರಾಟ ಆಗಿದೆ

Spread the love

ಮೆಣಸಿನಕಾಯಿ ಬೆಳೆ ಎಂಬುದು ಅತಿ ಲಾಭದಾಯಕ ಬೆಳೆ ಎಂದು ರೈತರು ಹಲವಾರು ರೀತಿಯಲ್ಲಿ ಕಷ್ಟಪಟ್ಟು ಹಣವನ್ನು ಬಳಕೆ ಮಾಡಿ ಈ ಬೆಳೆಯನ್ನು ಬೆಳೆದಿರುತ್ತಾರೆ. ಆದರೆ ಈ ವರ್ಷದಲ್ಲಿ ಈ ಮೆಣಸಿನಕಾಯಿ ದರವು 10,000 ರೂ ಕಡಿಮೆಯಾಗಿದೆ.

ಕಳೆದ ವಾರ 45 ಸಾವಿರ ರೂ.ಗಳಿಂದ 55 ಸಾವಿರ ರೂ. ವರೆಗೆ ಮಾರಾಟವಾಗಿದೆ. ಈ ವಾರ 35 ಸಾವಿರ ರೂ. ಗಳಿಂದ 45 ಸಾವಿರ ರೂ.ಗಳ ವರೆಗೆ ಮಾರಾಟವಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಏಷ್ಟು ಮಾರಾಟ ಆಗಿದೆ?

ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ ನೋಂದಣಿ ಅವಧಿ ವಿಸ್ತರಣೆ

ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಣಿಗೆ 2023ರ ಡಿ.31 ರ ವರೆಗೆ ಕಾಲವಕಾಶ ನಿಗಧಿಪಡಿಸಲಾಗಿತ್ತು. ರಾಜ್ಯದಲ್ಲಿ 2.5 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಸಬೇಕಾಗಿರುವುದರಿಂದ ಪ್ರಸ್ತುತ ಸರ್ಕಾರವು ಭತ್ತ ನೋಂದಣಿ ಅವಧಿಯನ್ನು ಮಾ.31 ರ ವರೆಗೆ ವಿಸ್ತರಿಸಿ ಆದೇಶಿಸಿದೆ.

ಸರ್ಕಾರವು ರಾಜ್ಯದಲ್ಲಿ 2.5 ಲಕ್ಷ ಮೆ. ಟನ್ ಗುರಿ ತಲುಪುವವರೆಗೆ ನೋಂದಣಿ ಕೈಗೊಳ್ಳಲು ಸೂಚಿಸಿದ್ದರಿಂದ, ರೈತರು ತಕ್ಷಣವೇ ನೋಂದಣಿ ಮತ್ತು ಖರೀದಿಯ ಉಪಯೋಗವನ್ನು ಸದುಪಯೋಗಪಡಿಸಿಕೊಳ್ಳಬೇಕು. ನೋಂದಣಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಖರೀದಿ ಏಜೆನ್ಸಿಯಾದ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಮೊ.9686935278 ಹಾಗೂ ಆಯಾ ತಾಲ್ಲೂಕಿನ ಖರೀದಿ ಕೇಂದ್ರಗಳ ಖರೀದಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಸಕೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೂಕ್ಷ್ಮ ನೀರಾವರಿ ಘಟಕಗಳ ಉಪಯೋಗ-ನಿರ್ವಹಣೆ ಜ.16ರಿಂದ ತರಬೇತಿ

ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮುದ್ದೇಬಿಹಾಳ, ತಾಳಿಕೋಟೆ, ಢವಳಗಿ ಮತ್ತು ನಾಲತ್ವಾಡ ಹೋಬಳಿಯ ರೈತರಿಗೆ ಜ.16 ರಿಂದ 19ರವರೆಗೆ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸೂಕ್ಷ್ಮ ನೀರಾವರಿ ಘಟಕಗಳ ಉಪಯೋಗಗಳು ಮತ್ತು ನಿರ್ವಹಣೆ ಕುರಿತು ತರಬೇತಿ ಆಯೋಜಿಸಲಾಗಿದೆ. ಜನವರಿ 16, 17,18 ಹಾಗೂ 19 ರಂದು ಕ್ರಮವಾಗಿ ನಾಲ್ಕು ದಿನಗಳ ಕಾಲ ತರಬೇತಿ ಆಯೋಜಿಸಲಾಗಿದ್ದು, ಆಸಕ್ತ ರೈತರು ಭಾಗವಹಿಸಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಶ್ರೀಮತಿ ಫಾತಿಮಾ ಬಾನು ಸುತಾರ ಮೊ: 9886134310 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಚಿತ ಕೌಶಲ್ಯ ತರಬೇತಿಗೆ ಅರ್ಜಿ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಲದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿಂದ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕರಿಗಾಗಿ ಜನವರಿ ಮತ್ತು ಫೆಬ್ರವರಿ ತಿಂಗಳನಲ್ಲಿ ಟಿವಿ ಟೆಕ್ನಿಷಿಯನ್, ಸೋಲಾರ್ ಟೆಕ್ನಿಷಿಯನ್, ಜಸಿಬಿ ಅಪರೇಟರ್ ಉಚಿತ ತರಬೇತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 17 ಆಗಿದೆ. ಹೆಚ್ಚಿನ ಮಾಹಿತಿಗಾಗಿ 8217236973, 9483485489, 9482188780 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ

ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ, ಪ್ರವರ್ಗ-1 ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಅಧಿಯನ್ನು ಜನವರಿ 15 ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ,” “ಶುಲ್ಕ ಮರುಪಾವತಿ” ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜ.15 ರ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಕೆ.ಜಲಾಲಪ್ಪ ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೊಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಅದರ ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ 8050770005 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬ್ಯಾಟರಿಚಾಲಿತ ವೀಲ್ ಚೇರ್ ಯೋಜನೆಯಡಿ ವಿಕಲಚೇತನರಿಗೆ ಅರ್ಜಿ ಆಹ್ವಾನ

2023-24ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗ ರವರ ವತಿಯಿಂದ ದೈಹಿಕ ವಿಕಲಚೇತನರಿಗಾಗಿ ಅನುಷ್ಠಾನಗೊಳ್ಳುತ್ತಿರುವ ಬ್ಯಾಟರಿಚಾಲಿತ ವೀಲ್ ಚೇರ್ ಯೋಜನೆಯಡಿ ವಿಕಲಚೇತನ ಫಲಾನುಭವಿಗಳು ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ವಿ.ಆರ್.ಡಬ್ಲ್ಯೂ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಯು.ಆರ್. ಡಬ್ಲ್ಯೂ ಹಾಗೂ ತಾಲ್ಲೂಕ ಪಂಚಾಯತಿಯಲ್ಲಿರುವ ಎಮ್. ಆರ್.ಡಬ್ಲ್ಯೂಗಳಲ್ಲಿ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಜನೆವರಿ 30 ರೊಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಗದಗ ಜಿಲ್ಲೆಯ ತಾಲ್ಲೂಕ ಪಂಚಾಯತಿ ವ್ಯಾಪ್ತಿಯಲ್ಲಿರುವ ಕಾರ್ಯನಿರ್ವಹಿಸುತ್ತಿರುವ ಎಮ್.ಆರ್. ಡಬ್ಲ್ಯೂ, ತಾಲ್ಲೂಕ್ ಪಂಚಾಯತ, ಗದಗ 8867556465, ಎಮ್.ಆರ್.ಡಬ್ಲ್ಯೂ, ತಾಲ್ಲೂಕ್ ಪಂಚಾಯತ, ರೋಣ 9741615926, ಎಮ್.ಆರ್.ಡಬ್ಲ್ಯೂ, ತಾಲ್ಲೂಕ್ ಪಂಚಾಯತ, ಮುಂಡರಗಿ 9611922445, ಎಮ್.ಆರ್.ಡಬ್ಲ್ಯೂ, ತಾಲ್ಲೂಕ್ ಪಂಚಾಯತ, ಶಿರಹಟ್ಟಿ 8951128679, ಎಮ್.ಆರ್.ಡಬ್ಲ್ಯೂ, ತಾಲ್ಲೂಕ್ ಪಂಚಾಯತ, ನರಗುಂದ 9591679022 ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 08372-220419 ಸಂಪರ್ಕಿಸಬಹುದು.

Related Post

Leave a Reply

Your email address will not be published. Required fields are marked *