ಆತ್ಮೀಯ ರೈತ ಭಾಂದವರೇ,
ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಕಟಗೊಳಿಸುವ ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಅರಿವು – ಶೈಕ್ಷಣಿಕ ಸಾಲ ಯೋಜನೆ, ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಬಹಿಸುವರಿಗೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಸೌಲಭ್ಯ ಮತ್ತು ಇನ್ನಿತರ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹರು ಅರ್ಜಿಯನ್ನು ಪ್ರಕಟಿಸಿದ ದಿನಾಂಕದ ಒಳಗೆ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ ?
ಈ ಕೆಳಗೆ ನೀಡಿರುವ ಪೋರ್ಟಲ್ ಮೇಲೆ ಕ್ಲಿಕ್ ಮಾಡಿ ಮುಂದಿನ ಪ್ರಕ್ರಿಯೆಯನ್ನು ಮುಂದುವರಿಸಿರಿ
https://www.sevasindhu.karnataka.gov.in ಹಾಗೂ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ .
ಅಥವಾ :- ಈ ಸಂಖ್ಯೆಗೆ ಕರೆ ಮಾಡಿ 080-22374832 ಸಂಪರ್ಕಿಸಬಹುದಾಗಿದ್ದು, ಇನ್ನೂ ಹೆಚ್ಚಿನ ಮಾಹಿತಿಯನ್ನು ನಿಮ್ಮ ಮೊಬೈಲ್ ನಲ್ಲಿಯೇ ಪಡೆಯಬಹುದು.
ಆನ್‌ಲೈನ್ ಮೂಲಕ ಈ ಕೆಳಗೆ ಪ್ರಕಟಿಸಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಮಾಹಿತಿಯನ್ನು ಪಡೆಯಿರಿ :- https://www.dbcdc.karnataka.gov.in
ಅರ್ಜಿ ಸಲ್ಲಿಸಲು ಎಷ್ಟು ಹಣ ಪಾವತಿಸಬೇಕು?
ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಉಚಿತವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕ ಕೆ.ಎಂ.ಭಾವಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ಸ್ಪಷಟಪಡಿಸಿದ್ದಾರೆ. ಹಾಗಾದರೆ ತಡ ಮಾಡಬೇಡಿ ಅರ್ಹ ರೈತರು ಹಾಗೂ ನಾಗರಿಕರು ಈ ಕೂಡಲೇ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/10/2023.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿ ಪತ್ರಗಳು :-
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ಬುಕ್
- ಫೋಟೋ
- ಆದಾಯ ಮತ್ತು ಜಾತಿ ಪ್ರಮಾಣ ಪತ್ರ
- ವ್ಯಾಸಂಗ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ವೋಟರ್ ಐಡಿ
ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ – ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೊದಲು ಅರ್ಜಿ ಸಲ್ಲಿಸಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು, ಈ ಸುವರ್ಣ ಅವಕಾಶವನ್ನು ಪ್ರತಿಯೊಬ್ಬರು ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇವೆ.
ಈ ಯೋಜನೆಯ ಸೌಲಭ್ಯವನ್ನ ಪಡೆಯಲು ಅರ್ಜಿದಾರರು ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕು?
- ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿ/ಸಮುದಾಯಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದು ಹಾಲಿ ಜಮೀನುಗಳು ಖುಷ್ಠಿಯಾಗಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಇದು ಗಂಗಾ ಕಲ್ಯಾಣ ಯೋಜನೆ ಗೆ ಅರ್ಹ ಇರುವ ಅಭ್ಯರ್ಥಿ ಗೆ ಮಾತ್ರ
- ಭಾರತದ ಮತ್ತು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಳಾಗಿರಬೇಕು.
- ಅರ್ಜಿದಾರರ ವಯಸ್ಸು 18 ರಿಂದ 60 ವರ್ಷದ ಒಳಗಿರಬೇಕು.
- ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1,20,000/-ಗಳ ಒಳಗಿರಬೇಕು.
ಇದನ್ನೂ ಓದಿ :- ಬೀದಿ ಬದಿ ವ್ಯಾಪಾರಿಗಳಿಗೆ 50 ಸಾವಿರ ರೂಪಾಯಿ ಅನುದಾನ. ಅರ್ಜಿ ಸಲ್ಲಿಸಿರಿ
ಇದನ್ನೂ ಓದಿ :- ನಿಮ್ಮ ಮನೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://bhoomisuddi.com/scholarship-for-class-1st-to-10th-students-apply-immediately/
ಇದನ್ನೂ ಓದಿ :- ಬೆಳೆವಿಮೆ ಹಣ ಪರಿಹಾರ
ಈ ಜಿಲ್ಲೆಯ ರೈತರಿಗೆ ಬರೋಬ್ಬರಿ 34.99 ಕೋಟಿ ರೂಪಾಯಿ ಬಿಡುಗಡೆಯಾಗಿದೆ
ಇದನ್ನೂ ಓದಿ :- ಅನ್ನಭಾಗ್ಯ ಅಕ್ಕಿ ಬದಲು ಹಣ ಪಡೆಯಲು 2 ನಿಮಿಷದಲ್ಲಿಯೇ ಮನೆಯಿಂದಲೇ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿ https://bhoomisuddi.com/linking-aadhaar-card-to-your-ration-card-is-mandatory-how-to-link/