ಮೊದಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. https://play.google.com/store/apps/details?id=com.crop.offcskharif_2021
Bele Darshak 2023-2024 ಈ ಆಪನ್ನು ನೀವು ಇನ್ಸ್ಟಾಲ್ ಮಾಡಬೇಕಾಗುತ್ತದೆ. ಆಮೇಲೆ ಕೆಳಗಿನ ಚಿತ್ರದಲ್ಲಿ ಕಾಣುವ ಹಾಗೆ ರೈತ ಎಂಬ ಆಯ್ಕೆಯನ್ನು ಆಯ್ದುಕೊಳ್ಳಿ.
2023-24 ಸಾಲನ್ನು ಕಾಯ್ದುಕೊಳ್ಳಿ ವರ್ಷದಲ್ಲಿ. ಮುಂಗಾರು,ಹಿಂಗಾರು ಎಂಬ ಆಯ್ಕೆಯಲ್ಲಿ ನಿಮಗೆ ಬೇಕಾದ ಆಯ್ಕೆಯನ್ನು ಆಯ್ದುಕೊಳ್ಳಿ.
ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಮತ್ತು ನಿಮ್ಮ ಹೊಲದ ಸರ್ವೆ ನಂಬರನ್ನು ಹಾಕಿ ವಿವರ ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ. ಆಮೇಲೆ ನೀವು ನಿಮ್ಮ ಸರ್ವೆ ನಂಬರ್ ನಲ್ಲಿ ಹೊಡೆದ ನಿಮ್ಮ ಸರಿಯಾದ ಸರ್ವೇ ನಂಬರ್ ಅನ್ನು ಹುಡುಕಿ ಮತ್ತು ಅದರಲ್ಲಿ ನಿಮ್ಮ ಹೆಸರು ಇದೆ ಎಂದು ನೋಡಿರಿ.
ಬೆಳೆ ವಿವರ ವೀಕ್ಷಿಸಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡುವ ಮುನ್ನ ಮೇಲೆ ಸಮೀಕ್ಷೆ ಯಾರು ಮಾಡಿದ್ದಾರೆ ಎಂದು ಇರುತ್ತದೆ ಅದರ ಮೇಲೆ ಒಮ್ಮೆ ಕ್ಲಿಕ್ ಮಾಡಿ ಅದು ಹಸಿರು ಕಲರ್ ಆದಮೇಲೆ ನೀವು ವಿವರ ವೀಕ್ಷಿಸಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಇಷ್ಟಾದ ಮೇಲೆ ನಿಮಗೆ ನಿಮ್ಮ ಬೆಳೆಯ ಸಮೀಕ್ಷೆ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ದೊರೆಯುತ್ತದೆ ಅಲ್ಲಿ ಚೆಕ್ ಮಾಡಿಕೊಳ್ಳಿ.
ರೈತರು ಉದ್ಯಮಿಗಳಾಗಿ ಬೆಳೆಯಬೇಕು
ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಬೆಳೆ ಒದಗಿಸಬೇಕಾದರೆ ಅದರ ಮಾನದಂಡದಡಿ ರೈತರು ಗುಣಮಟ್ಟದ ಬೆಳೆಗಳನ್ನು ಬೆಳೆಯಬೇಕು. ಜತೆಗೆ ದೇಶ ಇಂದು ಬೀಜೋತ್ಪಾದನೆಯಲ್ಲಿ ಸ್ವಾವಲಂಬಿಯಾಗಿ, ಉತ್ತಮ ಬೆಳೆಗಳನ್ನು ಬೆಳೆಯುವ ಮೂಲಕ ಉತ್ತಮ ಆದಾಯವನ್ನು ಗಳಿಸುವಂತಾಗಬೇಕು ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪದಲ್ಲಿರುವ ಕೆಎಇ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತ ಭವನ, ಸಿಬ್ಬಂದಿ ವಸತಿ ಗೃಹಗಳು ಮತ್ತು ಸ್ವಯಂ ಚಾಲಿತ ಹನಿ ನೀರಾವರಿ ಘಟಕವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಸಾಂಪ್ರದಾಯಿಕ ಆಹಾರ ಸಿರಿಧಾನ್ಯ ಅದನ್ನು ಉಳಿಸುವುದು ಇಂದಿನ ಅಗತ್ಯತೆ ಇದೆ ಎಂದರು.
ಕೃಷಿ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಬೇಕಿದ್ದು, ಕೇಂದ್ರ ಸರ್ಕಾರ ಸಾಕಷ್ಟು ಹಣವನ್ನು ಅದಕ್ಕಾಗಿಯೇ ಮೀಸಟ್ಟಿದೆ. ಅದನ್ನು ಸದುಪಯೋಗ ಪಡಿಸಿಕೊಂಡು ರೈತರು ಉದ್ಯಮಿಗಳಾಗಿ ಬೆಳೆಯಬೇಕಾಗಿದೆ. ಆದರೆ ಜಿಲ್ಲಾವಾರು ಅವಶ್ಯವಿರುವ ಯೋಜನೆಗಳ ಕುರಿತ ಮಾಹಿತಿಯನ್ನು ಕೇಂದ್ರಕ್ಕೆ ಕಳಿಸುತ್ತಿಲ್ಲ. ಇದರಿಂದ ರೈತರಿಗೆ ನಷ್ಟವಾಗುತ್ತಿದೆ ಎಂದ ಅವರು, ಪ್ರಸ್ತುತ ಸಾಲಿನಲ್ಲಿ 2005 ಹೊಸ ತಳಿಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಬೇರೆ ದೇಶಗಳು ಆಹಾರವನ್ನು ಭಾರತವು ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ ಎಂದ ಅವರು, ರಾಸಾಯಿಕಗಳನ್ನು ಬಳಸದೆ ಸಾವಯವ ಕೃಷಿಯೆಡೆಗೆ ಗಮನಹರಿಸಬೇಕಾಗಿದೆ ಎಂದರು. ಉತ್ಪಾದನೆಯಲ್ಲಿ ಸ್ವಾವಲಂಬನೆಯಾಗಿತ್ತು. ಇದು ದೇಶದ ರೈತರ ಶ್ರಮದಿಂದ ಸಾಧ್ಯವಾಗಿದೆ. ಇಂದು ದೇಶದಲ್ಲಿ 140 ಕೋಟಿ ಜನಸಂಖ್ಯೆ ಇದ್ದು, ಪ್ರತಿವರ್ಷ 130 ಮಿಲಿಯನ್ ಟನ್ ಆಹಾರ ಧಾನ್ಯ ಹಾಗೂ 265 ಮಿಲಿಯನ್ ಟನ್ ತರಕಾರಿ ಹಾಗೂ ಹಣ್ಣು ಬೆಳೆಗಳ ಉತ್ಪಾದನೆಯಾಗುತ್ತಿದೆ. ಇದು 140 ಕೋಟಿ ಜನಸಂಖ್ಯೆಗೆ ಬೇಕಾದ ಆಹಾರ ಬೇಡಿಕೆಗಿಂತ ಅಧಿಕವಾಗಿದೆ ಎಂದರು.
ಕೇಂದ್ರ ಸರ್ಕಾರ ದೇಶದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದೆ : ಪ್ರಧಾನಮಂತ್ರಿ ನರೇಂದ್ರ ಮೋದಿ
ಕೇಂದ್ರ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಲ್ಲ; ನಿರಂತರ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ ಬಂದಿದೆ. ದೇಶದಲ್ಲಿನ ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವುದರ ಜೊತೆಗೆ ರೈಲ್ವೆ ನಿಲ್ದಾಣ, ರೈಲು ಮಾರ್ಗ ನಿರ್ಮಾಣ, ಹೊಸ ಶಿಕ್ಷಣ ನೀತಿ ಜಾರಿ, ಕಿಸಾನ್ ಸಮ್ಮಾನ ಯೋಜನೆ ಸೇರಿದಂತೆ ಸರ್ಕಾರ ದೇಶದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದೆ” ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದರು. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಬೆಳಗಾವಿ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಭಾನುವಾರ (ಮಾ.10) ನಡೆದ ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣಕ್ಕೆ ವರ್ಚುವಲ್ (ಆನ್ ಲೈನ್) ಮೂಲಕ ಶಂಕುಸ್ಥಾಪನಾ ನೆರವೇರಿಸಿ ಅವರು ಮಾತನಾಡಿದರು. ದೇಶದ ಸಮಗ್ರ ಅಭಿವೃದ್ಧಿಗೆ ಸರ್ಕಾರವು ಅನುಕೂಲಕರ ವಾತಾವರಣವನ್ನು ಒದಗಿಸುತ್ತಿದೆ.
ಸಣ್ಣ ಸಣ್ಣ ನಗರಗಳನ್ನು ಗುರುತಿಸಿ ಮೆಟ್ರೋ ಹಾಗೂ ವಿಮಾನ ನಿಲ್ದಾಣ ನಿರ್ಮಾಣ ಮಾಡುತ್ತಿದೆ. ದೇಶಾದ್ಯಂತ ರೈಲ್ವೆ ನಿಲ್ದಾಣ ದುರಸ್ತಿ, ಹೊಸ ರೈಲು ಮಾರ್ಗ ನಿರ್ಮಾಣ ಕಾಮಗಾರಿಗಳನ್ನು ಸಹ ಕೈಗೆತ್ತಿಕೊಳ್ಳಲಾಗಿದೆ. ಅದೇ ರೀತಿಯಲ್ಲಿ ದೇಶದ ಯುವ ಜನರಿಗೆ ಉದ್ಯೋಗಾವಕಾಶಗಳನ್ನು ಸಹ ಸೃಷ್ಟಿಸಿದೆ ಎಂದು ಹೇಳಿದರು. ಕಬ್ಬು ಬೆಳೆಗಾರರಿಗೆ ಅನುಕೂಲಕ್ಕಾಗಿ ಬೆಳೆಗಳಿಗೆ ಬೇಡಿಕೆ ಹೆಚ್ಚಿಸಲಾಗಿದೆ. ತಂತ್ರಜ್ಞಾನ ಬೆಳವಣಿಗೆಯಿಂದ ಮುಂದಿನ ದಿನಗಳಲ್ಲಿ ಕಬ್ಬು ಬೆಳೆಯಿಂದ ಎಥನಾಲ್, ಬಯೋಗ್ಯಾಸ್ ತಯಾರಿಸಲಾಗುವುದು ಇದರಿಂದ ಕಬ್ಬು ಬೆಳೆಗೆ ಇನ್ನಷ್ಟು ಬೇಡಿಕೆ ಬರಲಿದೆ ಹಾಗೂ ದೇಶದ ಆರ್ಥಿಕತೆಯ ಪ್ರಗತಿಗೂ ಸಹಾಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುಲ್ ಮೂಲಕ ತಿಳಿಸಿದರು.
ಇದಕ್ಕೂ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಆಜಂಘಡದಲ್ಲಿ ಬೆಳಗಾವಿ ವಿಮಾನ ನಿಲ್ದಾಣ ಸೇರಿದಂತೆ ದೇಶದಲ್ಲಿನ 15 ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್ ನಿರ್ಮಾಣಕ್ಕೆ ಏಕಕಾಲದಲ್ಲಿ ವರ್ಚುವಲ್ (ಆನ್ ಲೈನ್) ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಇದಕ್ಕೂ ಮುಂಚೆ ಸ್ಥಳೀಯವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ‘ಬೆಳಗಾವಿ ಒಂದು ಐತಿಹಾಸಿಕ ನೆಲ. ವಿಮಾನ ನಿಲ್ದಾಣ. ಭಾರತೀಯ ಸೇನಾ ಪಡೆ, ಸೇರಿದಂತೆ ದೇಶದ ಭದ್ರತೆಗೆ ಸಂಬಂಧಿಸಿದಂತೆ ಎಲ್ಲವೂ ಬೆಳಗಾವಿಯಲ್ಲಿದೆ. ಮೂರು ರಾಜ್ಯಗಳ ಗಡಿ ಹಂಚಿಕೊಂಡ ಬಹುದೊಡ್ಡ ಜಿಲ್ಲೆಯಾಗಿದೆ. ಇಸ್ರೋ ಚಂದ್ರಯಾನಕ್ಕೆ ಮೆಟೀರಿಯಲ್ ಕಳುಹಿಸಿದ ಬಳಷ್ಟು ಉದ್ಯಮಗಳು ಇಲ್ಲಿದ್ದು, ಇದು ನಮಗೆ ಹೆಮ್ಮೆಯ ವಿಷಯವಾಗಿದೆ’ ಎಂದು ಹೇಳಿದರು. ಬೆಂಗಳೂರು ಮತ್ತು ಮಂಗಳೂರು ನಂತರ ರಾಜ್ಯದಲ್ಲಿ ಬೆಳಗಾವಿ ಮೂರನೇ ಸ್ಥಾನದಲ್ಲಿದೆ. ಮುಂಬರುವ ದಿನಗಳಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ ಬಿಲ್ಡಿಂಗ್ ಪ್ರಾರಂಭಿಸಲಾಗಿದೆ.
ವಿಮಾನ ನಿಲ್ದಾಣದಲ್ಲಿ, ಲಿಫ್ಟ್, ಕಾರ್ ಪಾಕಿರ್ಂಗ್, ವಿಮಾನ ಲ್ಯಾಂಡಿಂಗ್ ರಸ್ತೆ ಅಗಲೀಕರಣ, ವಿಮಾನಗಳಿಗೆ ಪಾಕಿರ್ಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸಲಾಗುವುದು. ಅಂದಾಜು 350 ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಿಸಲು ಈಗಾಗಲೇ ಟೆಂಡರ್ ನೀಡಲಾಗಿದೆ. ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಾದರಿಯಲ್ಲಿ ಬೆಳಗಾವಿಯಲ್ಲಿ ಕೂಡ ವಿಶೇಷ ವಿನ್ಯಾಸ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.