Breaking
Tue. Dec 17th, 2024

ರೈತರೇ ಈ ತಪ್ಪನ್ನು ಮಾಡಿದರೆ ನಿಮಗೆ ಬೆಳೆ ಪರಿಹಾರ ಬರಲ್ಲ, ಈಗ ತಿದ್ದುಪಡಿಸಿ.

Spread the love

ಆತ್ಮೀಯ ರೈತ ಬಾಂಧವರೇ

ಬೆಳೆ ಹಾನಿ ಪರಿಹಾರದ ಮೂರು ಕಂತಿನ ಹಣಗಳನ್ನು ಈಗಾಗಲೇ ಕೇಂದ್ರ ಸರ್ಕಾರವು ಮತ್ತು ರಾಜ್ಯ ಸರ್ಕಾರವು ಸೇರಿ ನಿಮ್ಮ ಖಾತೆಗೆ ಜಮಾ ಮಾಡಿದ್ದು, ಇನ್ನು ಕೆಲವು ರೈತರಿಗೆ ಈ ಹಣ ಜಮಾ ಆಗಿಲ್ಲ. ತಹಶೀಲ್ದಾರ್ ಕಡೆಯಿಂದ ವೆರಿಫೈಡ್ ಮಾಡಿಸಿಕೊಂಡು ಹಣ ಜಮಾ ಮಾಡಿಸಿಕೊಂಡೆ ರೈತರು ಸಾವಿರಾರು ಸಂಖ್ಯೆಯಲ್ಲಿದ್ದು, ಇನ್ನು ಲಕ್ಷಾಂತರ ರೈತರಿಗೆ ವೆರಿಫಿಕೇಶನ್ ಮಾಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು ಕೆಲವು ರೈತರಿಗೆ ವೆರಿಫಿಕೇಶನ್ ಮಾಡಿಸಿಕೊಂಡು ಬರಲು ಹೋದಾಗ ರಿಜೆಕ್ಟ್ ಮಾಡಿರುವ ಉದಾಹರಣೆಗಳನ್ನು ಕೂಡ ನಾವು ನೋಡಬಹುದು. ಯಾಕೆ ಈ ಸಮಸ್ಯೆ ರೈತರಿಗೆ ಉಂಟಾಗುತ್ತಿದೆ ಎಂದು ಈ ಕೆಳಗೆ ತಿಳಿಯೋಣ.

ಇದನ್ನೂ ಓದಿ :-
ಬೆಳೆಹಾನಿ ಪರಿಹಾರ ಜಮಾ ಆದವರ  ಪಟ್ಟಿ ಬಿಡುಗಡೆ, ನಿಮ್ಮ ಊರಿನಲ್ಲಿ ಯಾರು ಯಾರಿಗೆ ಬೆಳೆ ಪರಿಹಾರ ಜಮಾ ಆಗಿದೆ!! ನಿಮ್ಮ ಹೆಸರನ್ನು ಚೆಕ್ ಮಾಡಿ

ಪಹಣಿಗಳಿಗೆ ಆಧಾ‌ರ್ ಸೀಡಿಂಗ್ ಕಡ್ಡಾಯ

ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾ‌ರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್(ಜಾಲತಾಣ) https://landrecords.karnataka.gov.in/service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಛೇರಿ ಪ್ರಕಟಣೆ ತಿಳಿಸಿದೆ.

ACCOUNT CLOSED:

ಖಾತೆದಾರರಿಂದ ಅಥವಾ ಕೌಂಟ್ ರ್ವಾರ್ಟಿಯಿಂದ ಡಿ-ಅಕ್ಟಿವೇಟ್ ಅಥವಾ ಮುಕ್ತಾಯಗೊಳಿಸಲಾದ ಯಾವುದೇ ಖಾತೆಯನ್ನು ಮುಚ್ಚಿದ ಖಾತೆ ಎಂದು ಕರೆಯಲಾಗುತ್ತದೆ. ಒಮ್ಮೆ ಖಾತೆಯನ್ನು ಮುಚ್ಚಿದರೆ, ಖಾತೆಯ ಮೂಲಕ ಯಾವುದೇ ಡೆಬಿಟ್ ಅಥವಾ ಕ್ರೆಡಿಟ್ ವಹಿವಾಟುಗಳನ್ನು ಮಾಡಲಾಗುವುದಿಲ್ಲ.

ಮುಂಗಾರು ಬಿತ್ತನೆ ಬೀಜದ ವಿತರಣೆಯಲ್ಲಿ ಮತ್ತೆ ದರ ಹೆಚ್ಚಳ

ಹಿರೇಕೆರೂರು : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರೈತರ ಬಿತ್ತನೆ ಬೀಜದ ದರ ಶೇ. 60ರಷ್ಟು ಹೆಚ್ಚಳ ಮಾಡಿರುವುದೇ ಅವರ ಸಾಧನೆಯಾಗಿದೆ. ಒಂದು ಕೈಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯಲ್ಲಿ ಸುಲಿಗೆ ಮಾಡುತ್ತಿರುವುದೇ ಇವರ ಘನಕಾರ್ಯವಾಗಿದೆ ಎಂದು ಸರ್ಕಾರದ ವಿರುದ್ಧ ಮಾಜಿ ಸಚಿವ ಬಿ.ಸಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಗೃಹ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಹಂಗಾಮಿನಲ್ಲಿ ಭೀಕರ ಬರದಿಂದ ರೈತರು ತತ್ತರಿಸಿದ್ದು, ಸಾಲ ಸೋಲ ಮಾಡಿ ಬೆಳೆದ ಬೆಳೆಗಳು ಬಿರು ಬಿಸಿಲಿನ ಝಳಕ್ಕೆ ಒಣಗಿ ನಾಶವಾಗಿವೆ. ಕೊಳವೆ ಬಾವಿಗಳು ನೀರಿಲ್ಲದೆ ಬತ್ತಿ ಹೋಗಿವೆ. ಇಂತಹ ಶೋಚನೀಯ ಸ್ಥಿತಿಯಲ್ಲಿದ್ದ ರೈತ ಮುಂಗಾರು ಹಂಗಾಮಿನಲ್ಲಿ ಬಂದ ಮಳೆಯಿಂದಾಗಿ ಹರ್ಷಿತನಾಗಿ ಜಮೀನು ಉಳುಮೆ ಮಾಡಿ, ಹಸನು ಮಾಡಿಕೊಂಡಿದ್ದಾರೆ. ಈ ಹೊತ್ತಿನಲ್ಲೇ ಬಿತ್ತನೆ ಬೀಜಗಳ ದರವನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿರುವುದು ಖಂಡನೀಯ. ಕಳೆದ ವರ್ಷ ರೈತರು ಸಾಲ ಮಾಡಿ.


ಇದನ್ನೂ ಓದಿ :- *ಒಂದನೇ ಹಾಗು ಎರಡನೇ ಕಂತಿನ ಬೆಳೆ ಪರಿಹಾರದ ಹಣ ಜಮಾ ಆಗಿಲ್ಲವೇ?? 🌱 ಮೂರನೇ ಕಂತಿನ ಹಣ ನಿಮಗೆ ಜಮಾ ಆಗುತ್ತೆ ನೋಡಿ*

ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ ಬೆಳೆ ಮಳೆ ಆಗದೇ
ಸಂಕಷ್ಟದಲ್ಲಿದ್ದಾರೆ. ಈಗ ಹೊಸದಾಗಿ ಬೀಜ ಮತ್ತು ಗೊಬ್ಬರಕ್ಕೆ
ಮತ್ತೆ ಸಾಲ ಮಾಡಬೇಕು. ಬೆಲೆ ಹೆಚ್ಚಳ ಮಾಡಿರುವುದು ಮತ್ತೆ
ರೈತರನ್ನು ಸಂಕಷ್ಟಕ್ಕೆ ನೂಕಿದಂತಾಗಿದೆ.
ಕಳೆದ ವರ್ಷ ಬರಗಾಲದಿಂದಾಗಿ ಗುಣಾತ್ಮಕ ಬೀಜಗಳ ಉತ್ಪಾದನೆ ಆಗಿಲ್ಲ ಎಂಬ ನೆಪ ಒಡ್ಡಿ ಪ್ರಸಕ್ತ ಮುಂಗಾರು ಹಂಗಾಮಿಗೆ ಸರಕಾರ ರೈತ ಸಂಪರ್ಕ ಕೇಂದ್ರಗಳ ಮೂಲಕ ನೀಡುವ ರಿಯಾಯಿತಿ ದರದ ಬಿತ್ತನೆ ಬೀಜಗಳ ದರ ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿರುವುದು ಕಳೆದ ವರ್ಷ ಬರದಿಂದ ಕಂಗೆಟ್ಟಿರುವ ರೈತರಿಗೆ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರಕಾರ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತವಾಗಿ ಬೀಜ ನೀಡಬೇಕಿತ್ತು. ಅದು ಬಿಟ್ಟು ಬೆಲೆ ಹೆಚ್ಚಿಸಿರುವುದು ರೈತರಿಗೆ ಬಲವಾದ ಹೊಡೆತ ಬಿದ್ದಿದೆ. ಸರಕಾರ ಗ್ಯಾರಂಟಿಗಳಿಗೆ 57 ಸಾವಿರ ಕೋಟಿ ರು.ಗಳನ್ನು ವ್ಯಯ ಮಾಡುತ್ತಿದೆ.

02.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಮೊಡ ವಾತಾವರಣದೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.* ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಚಿತ್ರದುರ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಈಗಿನಂತೆ ಜೂನ್ 1ರಂದು ಅಂದರೆ ಇವತ್ತು ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ. ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು ಮುಂಗಾರು ಆರಂಭ ದುರ್ಬಲಗೊಂಡಿದೆ. ಇನ್ನು ಎರಡು ದಿನಗಳ ಕಾಲ ಪೂರ್ವದ ಮೋಡಗಳಿಂದ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

01.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚೆನೆ ಇದೆ. ಮೈಸೂರು ಹಾಗೂ ಚಾಮರಾಜನಗರ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಜೂನ್ 1 ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ. ಜೊತೆಗೆ ತಮಿಳುನಾಡು ಕಡೆಯಿಂದ ಬೀಸುವ ಗಾಳಿಯ ಪ್ರಭಾವದಿಂದ ಜೂನ್ 1 ಹಾಗೂ 2ನೇ ತಾರೀಕಿನಂದು ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಜೂನ್ 2ರಂದು ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗು ಲಕ್ಷಣಗಳಿವೆ. ಇದರ ಪರಿಣಾಮದಿಂದ ದುರ್ಬಲವಾಗಿ ಆರಂಭವಾಗುವ ಮುಂಗಾರು ಮತ್ತಷ್ಟು ದುರ್ಬಲಗೊಳ್ಳಲಿದೆ. ಜೂನ್ 15 ಅಥವಾ 20ರ ನಂತರ ಮುಂಗಾರು ಚುರುಕಾಗುವ ಲಕ್ಷಣಗಳಿವೆ.

Related Post

Leave a Reply

Your email address will not be published. Required fields are marked *