ಗೃಹಲಕ್ಷ್ಮಿ, ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಬಿಪಿಎಲ್/ಎಪಿಎಲ್/ಅಂತ್ಯೋದಯ ಕಾರ್ಡ್ ನಲ್ಲಿ ನಮೂದಿಸಿರುವಂತ ಕುಟುಂಬದ ಯಜಮಾನಿ ಮಹಿಳಗೆ ಪ್ರತಿ ತಿಂಗಳು ರೂ.2000/- ಗಳನ್ನು DBT ಮೂಲಕ ನೀಡುವ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಯನ್ನು ಖಚಿತ ಪಡಿಸಬಹುದಾಗಿರುತ್ತದೆ ಹಾಗೂ ಕುಟುಂಬದ ಅಭಿವೃದ್ಧಿ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿರುತ್ತದೆ.
ಆದ್ದರಿಂದ ಸದರಿ ಯೋಜನೆಯು ಮಹಿಳಾ ಸಬಲೀಕರಣ ಹಾಗೂ ಯೋಜನೆಯಾಗಿರುತ್ತದೆ. ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸ್ವಾಭಿಮಾನದ ಹೆಗ್ಗುರುತಾಗಲಿದೆ. ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ 2023-24ನೇ ಸಾಲಿನಲ್ಲಿ ಅನುಷ್ಟಾನಗೊಳಿಸಲು ಸರ್ಕಾರವು ಹರ್ಷಿಸುತ್ತದೆ.
ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಮುಖ ಅಂಶಗಳು:
ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ.
(https://sevasindhugs.karnataka.gov.in/gruhalakshmi)
ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto – generated ಸ್ನೇಕೃತಿಗಳನ್ನು ಪಡೆಯಬಹುದಾಗಿದೆ * ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್
ಸಂಖ್ಯೆ, ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯವಾಗಿರುತ್ತದೆ. ಮಂಜೂರಾತಿಯ ನಂತರ DBT ಮೂಲಕ ನೇರ ನಗದು ವರ್ಗಾವಣೆ ಮಾಡಲಾಗುವುದು. ಅರ್ಜಿ ಸಲ್ಲಿಕೆಗೆ ಯಾವುದೇ ಉಚಿತವಾಗಿರುತ್ತದೆ. ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತಃ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ.
ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ.
ಮೊಬೈಲ್ ಸಂಖ್ಯೆ ಇದ್ದರೆ ಸಾಕು ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇದೆ ಎಂದು ತಿಳಿಯಬಹುದು
ಬೆಳೆ ವಿಮೆ ನಿಮಗೆ ಬಂದಿಲ್ಲ ಎಂದರೆ ಕಾರಣ ಏನು ಎಂದು ತಿಳಿಯಿರಿ, ಈ ತಪ್ಪನ್ನೂ ನೀವು ಮಾಡಿರುತ್ತಿರಾ ನೋಡಿ