ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಯಾವ ತಿಂಗಳಿನಲ್ಲಿ ಯಾವ ತಾರೀಕಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳೋಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. https://bhoomisuddi.com/grilahakshmi-4th-installment-deposited-how-to-check-status-check/
ಗ್ಯಾರಂಟಿ ಯೋಜನೆಗಳ ಫಲಾನುಭವಿ ಸಮಾವೇಶ ಕಾರ್ಯಕ್ರಮ
ರೋಣ ಮತ್ತು ಗಜೇಂದ್ರಗಡ ತಾಲೂಕು ಗ್ಯಾರಂಟಿ ಯೋಜನೆಗಳ ಫಲಾನುಭವಿ ಸಮಾವೇಶ ಕಾರ್ಯಕ್ರಮವನ್ನು ಮಾರ್ಚ 2 ರಂದು ಬೆಳಿಗ್ಗೆ 11 ಗಂಟೆಗೆ ರೋಣದ ದ್ರೋಣಾಚಾರ್ಯ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ ವಹಿಸುವರು.
35,700 ಕೋಟಿ ರೂ. ವೆಚ್ಚದ ಹಲವು ಅಭಿವೃದ್ಧಿ ಯೋಜನೆಗೆ ಚಾಲನೆ
ಪ್ರಧಾನಿ ಮೋದಿಯವರ ಜಾಖರ್ಂಡ್ ಭೇಟಿ ವೇಳೆ, ಧನ್‌ಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 35,700 ಕೋಟಿ ರೂ. ವೆಚ್ಚದ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಸಿಂದ್ರಿ ರಸಗೊಬ್ಬರ ಕಾರ್ಖಾನೆಯನ್ನ ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ. ಜಾಖರ್ಂಡ್‌ನಲ್ಲಿ ರಸಗೊಬ್ಬರ, ರೈಲು, ವಿದ್ಯುತ್ ಮತ್ತು ಕಲ್ಲಿದ್ದಲು ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ 35,700 ಕೋಟಿ ರೂ.
ಅಭಿವೃದ್ಧಿ ಯೋಜನೆ ಗಳನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅನಾವರಣಗೊಳಿಸಿದರು. ಹಿಂದೂಸ್ತಾನ್ ಉರ್ವರಕ್ ಮತ್ತು ರಸಾಯನ ಲಿಮಿಟೆಡ್ ಸಿಂದ್ರಿ ರಸಗೊಬ್ಬರ ಘಟಕವನ್ನ ಪ್ರಧಾನ ಮಂತ್ರಿಗಳ ರಾಷ್ಟ್ರಕ್ಕೆ ಸಮರ್ಪಿಸಿದರು. 8,900 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ರಸಗೊಬ್ಬರ ಘಟಕವು ಯೂರಿಯಾ ವಲಯದಲ್ಲಿ ಸ್ವಾವಲಂಬನೆಯತ್ತ ಹೆಜ್ಜೆ ಹಾಕುತ್ತಿದೆ. ಇದು ದೇಶದ ದೇಶೀಯ ಯೂರಿಯಾ ಉತ್ಪಾದನೆಗೆ ವಾರ್ಷಿಕ 12.7 LMT ಅನ್ನು ಸೇರಿಸುತ್ತದೆ. ಇದು ದೇಶದ ರೈತರಿಗೆ ಪ್ರಯೋಜನವನ್ನ ನೀಡುತ್ತದೆ.
ಬಡ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ಉಳಿತಾಯ : ಡಿಸಿಎಂ
ಗ್ಯಾರಂಟಿ ಯೋಜನೆಗಳಿಂದ ಒಂದು ಬಡ ಕುಟುಂಬಕ್ಕೆ ವಾರ್ಷಿಕ 50-60 ಸಾವಿರ ಉಳಿತಾಯವಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಹಾಸನದಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, “1.56 ಕೋಟಿ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್ ನೀಡುವುದರ ಜೊತೆಗೆ 1.50 ರೂ. ವಿದ್ಯುತ್ ದರ ಇಳಿಸಿದ್ದೇವೆ. ಇದಕ್ಕೆ ವಿರೋಧ ಪಕ್ಷಗಳು ಏನು ಹೇಳುತ್ತವೆ. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಕುಮಾರಸ್ವಾಮಿ, ಆರ್. ಅಶೋಕ್ ಅವರು ಇದಕ್ಕೆ ಉತ್ತರಿಸಲಿ” ಎಂದರು.
ವಸ್ತುಗಳ ಬೆಲೆ ಏರಿಕೆಯಾಗಿತ್ತು. ಬಿಜೆಪಿಯವರು ವಿದ್ಯುತ್ ಬೆಲೆ ಏರಿಕೆ ಮಾಡಿದ್ದರು. ನಾವು ಉಚಿತವಾಗಿ ವಿದ್ಯುತ್ ನೀಡುವುದರ ಜೊತೆಗೆ ಬೆಲೆ ಇಳಿಕೆ ಮಾಡಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಅತ್ತೆ-ಸೊಸೆ ಜಗಳವಾಡುತ್ತಾರೆ ಎಂದು ಗುಲ್ಲೆಬ್ಬಿಸಿದರು. ಯಾವುದಾದರೂ ಮನೆಯಲ್ಲಿ ಜಗಳ ಉಂಟಾಗಿದೆಯೇ? ಎಂದು ಪ್ರಶ್ನಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು, “ಶಕ್ತಿ ಯೋಜನೆಯಿಂದ ದೇವಸ್ಥಾನಕ್ಕೆ ಜನ ಹೆಚ್ಚು ಬರುತ್ತಿದ್ದಾರೆ. ಹುಂಡಿ ತುಂಬಿ ತುಳುಕುತ್ತಿದೆ. ಸಿದ್ದರಾಮಯ್ಯ ಅವರ ಮತ್ತು ಡಿ.ಕೆ.ಶಿವಕುಮಾರ್ ಅವರ ಹೆಸರಿನಲ್ಲಿ ಮಹಿಳೆಯರು ಅರ್ಚನೆ ಮಾಡಿಸುತ್ತಿದ್ದಾರೆ” ಎಂದು ಪತ್ರ ಬರೆದಿದ್ದರು. ಜನರ ಪ್ರಾರ್ಥನೆ ಎಂದಿಗೂ ಮೋಸ ಮಾಡುವುದಿಲ್ಲ.
ಮಹಿಳೆಯರು ರಾಜ್ಯದ ನಾನಾ ದೇವಸ್ಥಾನಗಳನ್ನು ನೋಡುತ್ತಿದ್ದಾರೆ. ಮಕ್ಕಳನ್ನು ಕರೆದುಕೊಂಡು ಹೋಗಿ ದರ್ಶನ ಮಾಡಿಸುತ್ತಿದ್ದಾರೆ. ತವರು ಮನೆಗೆ ಹೋಗಿ ಬರುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ನಾವು ಧರ್ಮವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದಿಲ್ಲ ದೇವರು ಬೇರೆ, ರಾಜಕಾರಣ ಬೇರೆ. ನಾವು ಧರ್ಮವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದಿಲ್ಲ. ಈ ಬಾರಿಯ ಸದನದಲ್ಲಿ ನಮ್ಮ ಸರಕಾರ ಸಣ್ಣ ದೇವಸ್ಥಾನಗಳ ಅಭಿವೃದ್ಧಿಗೆ ಮತ್ತು ಅರ್ಚಕರಿಗೆ ಸಹಾಯ ಮಾಡುವ ಕಾನೂನು ತರಲು ಹೊರಟೆವು. ಆದರೆ ಬಿಜೆಪಿಯವರು ಅದಕ್ಕೆ ವಿರೋಧಿಸಿದರು. ಪ್ರತಿ ಗ್ರಾಮದಲ್ಲಿ ಇರುವ ಹನುಮಂತ, ಮಾರಮ್ಮ ಸೇರಿದಂತೆ ಸಣ್ಣ ದೇವಾಲಯಗಳನ್ನು ಅಭಿವೃದ್ಧಿ ಮಾಡಲು ಕಾನೂನು ತಂದರೆ ವಿರೋಧಿಸಿದರು. ನಮಗೆ ಜಾತಿ ಮುಖ್ಯವಲ್ಲ ನೀತಿ ಮುಖ್ಯ. ನಾವು ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ.