ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಮೇ 8 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ- ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, 9740982585, 9380162042, 9113880324 ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತದಾರರು ತಮ್ಮ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಎಪ್ರಿಲ್ 9 ರವರಗೆ ಅವಕಾಶ
ಲೋಕಸಭಾ ಸಾರ್ವತ್ರಿಕ ಚುನಾವಣೆಗಳು 2024 ನೇದ್ದಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿರುತ್ತದೆ. ಜಿಲ್ಲೆಯಲ್ಲಿ ಈಗಾಗಲೇ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ 65- ಶಿರಹಟ್ಟಿ, 66-ಗದಗ 67- ರೋಣ ಹಾಗೂ 68 – ನರಗುಂದ ನೇದ್ದವುಗಳ ಅಂತಿಮ ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಪ್ರತಿಯೊಬ್ಬ ಮತದಾರರು ಸದರಿ ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೊಂದಣಿಯಾಗಿರುವ ಬಗ್ಗೆ ಬಿ.ಎಲ್.ಓ. ಗಳ ಮುಖಾಂತರ, ಸಹಾಯಕ ಮತದಾರ ನೋಂದಣಾಧಿಕಾರಿ/ ಮತದಾರ ನೊಂದಣಾಧಿಕಾರಿ ಮುಖಾಂತರ, ವೋಟರ್ ಹೆಲ್ಪಲೈನ್ ಮೊಬೈಲ್ ಆಪ್ ಮುಖಾಂತರ, ಜಿಲ್ಲಾಧಿಕಾರಿಗಳು, ಗದಗ https://ceo.karnataka.gov.in ಖಚಿಪತಪಡಿಸಿಕೊಳ್ಳಬಹುದಾಗಿದೆ.
ಒಂದು ವೇಳೆ ಸದರಿ ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಯಾಗದೇ ಇದ್ದಲ್ಲಿ ಅಂತಿಮ ಮತದಾರರ ಪಟ್ಟಿಗೆ ಅರ್ಹ ಮತದಾರರು ತಮ್ಮ ಹೆಸರುಗಳನ್ನು ನೊಂದಾಯಿಸಲು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ 19-4-2024 ಕ್ಕೆ ಮುಂಚಿನ 10 ದಿನಗಳ ಪೂರ್ವದಲ್ಲಿ ಅಂದರೆ ಎಪ್ರಿಲ್ 9 ರೊಳಗೆ ನಿಗದಿತ ದಾಖಲೆಗಳೊಂದಿಗೆ ಹೆಸರು ಸೇರ್ಪಡೆಗೆ ಅರ್ಜಿಗಳನ್ನು ಸಲ್ಲಿಸಲು ಕಾಲಾವಕಾಶವಿರುತ್ತದೆ. ಸದರಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ತಲುಪಿಸಿ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ’ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ತಿಳಿಸಿದರು. ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿಯ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.
‘ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ. ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ಯೋಜನೆ ತಲುಪಿದ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ತಾಂತ್ರಿಕ ಸಮಸ್ಯೆಯಿಂದ ಯೋಜನೆಯ ಸದುಪಯೋಗ ಪಡೆಯದ ಜನರ ಅಗತ್ಯ ದಾಖಲೆಗಳನ್ನು ಪಡೆದು ಕೊಂಡು ಯೋಜನೆ ಮುಟ್ಟುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾಧರಸ್ವಾಮಿ ಕಲ್ಲಬಾಗಿಲಮಠ ಮಾತನಾಡಿ,’ಗ್ಯಾರಂಟಿ ಯೋಜನೆಗಳು ಬಡವರು, ದುರ್ಬಲ ವರ್ಗದ ಜನರಿಗೆ ಆಸರೆಯಾಗಿವೆ’ ಎಂದರು. ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ನಾಗರಾಜ ಅರಳಿ, ಸದಸ್ಯರಾದ ಸೋಮನಾಥ ದೊಡ್ಡಮನಿ, ಹಜರತ್, ಗ್ರಾಮ ಪಂಚಾಯಿತಿ ಸದಸ್ಯ ಸಾಂಬಮೂರ್ತಿ, ಜಗದೀಶ ಅಂಗಡಿ, ರವಿ ಪಾಟೀಲ ಸೇರಿದಂತೆ ಇತರರು ಇದ್ದರು.