Breaking
Wed. Dec 18th, 2024

ಹಿಂಗಾರು ಹಂಗಾಮಿನ ಕೃಷಿ ಪ್ರಶಸ್ತಿ ಆಯ್ಕೆಗೆ ಅರ್ಜಿಗಳ ಆಹ್ವಾನ

Spread the love

ಧಾರವಾಡ ಜಿಲ್ಲೆಯ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆಯಿಂದ 2023-24 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಆಸಕ್ತಿಯುಳ್ಳ ರೈತರು ನಿಗದಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿಗಳೊಂದಿಗೆ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯಕ್ಕೆ ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ, ಪ್ರವೇಶ ಶುಲ್ಕ ಭರಣಾ ಮಾಡುವುದು. ಬೆಳೆ ಕಟಾವು ಮಾಡುವ ವಿಧಾನ, ಸ್ಪರ್ಧಾತ್ಮಕ ಇಳುವರಿಯ ಮಾಹಿತಿ ಇತ್ಯಾದಿಗಳ ಬಗ್ಗೆ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.

ಅರ್ಜಿ ಸಲ್ಲಿಕೆ ಮತ್ತು ಯಾವ ಯಾವ ಜಾತಿ ಅವರಿಗೆ ಏಷ್ಟು ಶುಲ್ಕ ಇದೆ?

ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸಲು ಸಾಮಾನ್ಯ ಮ ವರ್ಗದ ರೈತರಿಗೆ ರೂ.100/-ಶುಲ್ಕ ಇದ್ದು, * ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ರೂ.25/- ಶುಲ್ಕವಿದೆ. ಇ. ರಾಜ್ಯ ಮಟ್ಟದ ಬೆಳೆ ಸ್ಪರ್ಧೆಗೆ ಹಿಂಗಾರು ಹಂಗಾಮಿಗೆ ಜೋಳ (ಮಳೆ ಆಶ್ರಿತ) ಮತ್ತು ಕಡಲೆ (ಮಳೆ ಆಶ್ರಿತ) ಬೆಳೆಗಳನ್ನು ನಿಗದಿಪಡಿಸಲಾಗಿದೆ. ಜಿಲ್ಲಾ ಮಟ್ಟದ ಬೆಳೆ ಸ್ಪರ್ಧೆಗೆ ಹಿಂಗಾರು ಹಂಗಾಮಿಗೆ ಕಡಲೆ (ಮಳೆ ಆಶ್ರಿತ) ನಿಗದಿ ಪಡಿಸಲಾಗಿದೆ. ತಾಲ್ಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಸಂಬಂದಿಸಿದಂತೆ ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿನಗರ, ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ತಾಲ್ಲೂಕುಗಳಿಗೆ ಕಡಲೆ (ಮಳೆ ಆಶ್ರಿತ) ಬೆಳೆ ನಿಗದಿಪಡಿಸಲಾಗಿದೆ.

ಮಹಿಳೆಯರಿಗೆ ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆ

ಈ ಸ್ಪರ್ಧೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. 2023- 24ನೇ ಸಾಲಿನಲ್ಲಿಯೂ ಸಹ ಕೃಷಿಯಲ್ಲಿ ರೈತ ಮಹಿಳೆಯರನ್ನು ಪೊತ್ಸಾಹಿಸುವ ಹಾಗೂ ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಕೃಷಿ ಪ್ರಶಸ್ತಿಯನ್ನು ನೀಡಲು ಸರ್ಕಾರವು ಅನುಮೋದನೆ ನೀಡಿದೆ. ಆದ್ದರಿಂದ ಮಹಿಳೆಯರು ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಪ್ರತ್ಯೇಕವಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತ ರೈತರು ಹಾಗೂ ರೈತ ಮಹಿಳೆಯರು ನವೆಂಬರ್ 30 ರೊಳಗಾಗಿ ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಿಗೆ ಅರ್ಜಿ ಸಲ್ಲಿಸಬೇಕೆಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕಿರಣಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *