Breaking
Tue. Dec 17th, 2024

ರೇಶನ್ ಕಾರ್ಡ್ ರದ್ದಾಗಿರುವ ಪಟ್ಟಿಯಲ್ಲಿ ನಿಮ್ಮ ಹೆಸರು ಕೂಡ ಇದೆಯಾ. ನಿಮ್ಮ ರೇಶನ್ ಕಾರ್ಡ್ ಸ್ಟೇಟಸ್ ಅನ್ನು ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ

Spread the love

ಆತ್ಮೀಯ ರೈತ ಬಾಂಧವರೇ,

ಕೇವಲ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಮತ್ತು ಸರಕಾರಿ ನೌಕರಿ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನೂ ಮಾತ್ರ ರದ್ದು ಮಾಡಲು ಆದೇಶ ಮಾಡಲಾಗಿದೆ. ಉಳಿದಂತೆ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು. ನಿಮ್ಮ ರೇಶನ್ ಕಾರ್ಡ್ ಕೂಡ ಚಾಲ್ತಿಯಲ್ಲಿ ಇಡಿಯೋ ಇಲ್ಲವೋ ಎಂದು ಈ ಕೂಡಲೇ ತಿಳಿದುಕೊಳ್ಳಿ.

ಇನ್ನು ತಾಂತ್ರಿಕ ಕಾರಣದಿಂದ ಯಾರದ್ದಾದರೂ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅಂತಹ ಕುಟುಂಬದ ಸದಸ್ಯರು ತಮ್ಮ ತಹಶೀಲ್ದಾರರಿಗೆ ಭೇಟಿಯಾದರೆ ಕೇವಲ ಒಂದು ವಾರದ ಒಳಗೆ ಅವರ ಬಿಪಿಎಲ್ ಕಾರ್ಡ್ ವಾಪಸ್ ಮಾಡಿ ಕೊಡಲಾಗುವುದು ಎಂದು ಆಹಾರ ಸಚಿವರು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಬಡ ಕುಟುಂಬಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜನ ಕಲ್ಯಾಣ ಯೋಜನೆಗಳಾದ ಗರಿಬ್ ಕಲ್ಯಾಣ್ ಅನ್ನ ಯೋಜನಾ ಮತ್ತು ಅನ್ನಭಾಗ್ಯ ಯೋಜನೆಗಳಿಂದ ವಂಚಿತರಾಗಬಾರದು ಎಂದು ಅವರು ತಿಳಿಸಿದರು.

ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಹೀಗೆ ಚೆಕ್ ಮಾಡಿ:-

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ ಮತ್ತು ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ಸಲ್ಲಿಸಿ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ನಿಮ್ಮ ರೇಷನ್ ಕಾರ್ಡ್ ಸಂಪೂರ್ಣ ಮಾಹಿತಿ ಸಿಗುತ್ತದೆ. ಅಲ್ಲಿ ನಿಮ್ಮ ರೇಷನ್ ಕಾರ್ಡಿನಲ್ಲಿ ಎಷ್ಟು ಜನರ ಹೆಸರಿದೆ, ನಿಮ್ಮ ರೇಷನ್ ಕಾರ್ಡ್ ಆ್ಯಕ್ಟಿವ್ ಇದೆಯೋ ಇಲ್ಲವೋ ಮತ್ತು ಈ ತಿಂಗಳು ನಿಮಗೆ ಎಷ್ಟು ರೇಷನ್ ಸಿಕ್ಕಿದೆ ಎಂಬ ಮಾಹಿತಿ ಸಿಗುತ್ತದೆ.

ಇದನ್ನೂ ಓದಿ:- ಬೆಳೆ ಪರಿಹಾರ ಲಿಸ್ಟ್ ನಲ್ಲಿರುವ ಅನರ್ಹ ಪಟ್ಟಿಯನ್ನು ಪ್ರಕಟಣೆ ಮಾಡಲಾಗಿದೆ.
ಹೀಗೆ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ

ಮುಂಚೆ ಈ ಯೋಜನೆ ಅಡಿಯಲ್ಲಿ ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ 5 ಕೆಜಿ ಅಕ್ಕಿಯನ್ನು ನೀಡಲಾಗುತ್ತಿತ್ತು. ಇದೀಗ ರಾಜ್ಯ ಸರ್ಕಾರ ಇದನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೂ ತಲಾ 10 ಕೆಜಿ ಮಾಡಿದ್ದು, 5 ಕೆಜಿ ಅಕ್ಕಿ ಮತ್ತು ಇನ್ನುಳಿದ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿ ಹಣವನ್ನು ನೀಡುತ್ತಿದೆ.

ಇದೀಗ ನೀವು ನಿಮ್ಮ ಅನ್ನ ಭಾಗ್ಯ ಯೋಜನೆಯ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದಾಗಿದೆ. ಅದು ಹೇಗೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಅನ್ನಭಾಗ್ಯ ಹಣ ಚೆಕ್ ಮಾಡುವ ವಿಧಾನ:

ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಆ್ಯಪ್ ಆದ DBT KARNATAKA ಲಿಂಕ್ ಮೇಲೆ ಕ್ಲಿಕ್ ಮಾಡಿ ಗೂಗಲ್ ಪ್ಲೇಸ್ಟೋರಿಂದ ಇನ್ಸ್ಟಾಲ್ ಮಾಡಿಕೊಳ್ಳಿ.

ಹಂತ -2) ನಂತರ ನಿಮ್ಮ ಹೆಸರು, ಆಧಾರ್ ನಂಬರ್ ಹಾಕಿ ನಿಮ್ಮ ಮೊಬೈಲ್ ಗೆ OTP ಬರುತ್ತದೆ. ಅದನ್ನು ಹಾಕಿ ಲಾಗಿನ್ ಆಗಿ. ನಂತರ ನಿಮಗೆ ಕೆಳಗೆ ತೋರಿಸಿದಂತೆ ಹೋಮ್ ಪೇಜ್ ಕಾಣುತ್ತದೆ. ಅಲ್ಲಿ ನೀವು ಪಾವತಿ ಸ್ಥಿತಿ (Payment Status) ಮೇಲೆ ಕ್ಲಿಕ್ ಮಾಡಿ.

ಹಂತ -3) ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಎಂಬ ಕಾಲಂ ಮೇಲೆ ಕ್ಲಿಕ್ ಮಾಡಿ. ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ಇಲ್ಲಿಯವರೆಗೆ ಎಷ್ಟು ಹಣ ಜಮಾ ಆಗಿದೆ ಮತ್ತು ಯಾವ ಯಾವ ತಿಂಗಳ ಹಣ ಜಮಾ ಆಗಿದೆ ಎಂಬುದರ ಸಂಪೂರ್ಣ ಮಾಹಿತಿ ಸಿಗುತ್ತದೆ.

https://chat.whatsapp.com/Gm6a0DqjrOGLAWzSIe62LU

Related Post

Leave a Reply

Your email address will not be published. Required fields are marked *