Breaking
Thu. Dec 19th, 2024

ಅನ್ನಭಾಗ್ಯ ಹಣ ಪಡೆಯಲು EKYC ಮತ್ತು NPCI ಮಾಡಿಸುವುದು ಅಗತ್ಯ, ration

Spread the love

ಪಡಿತರ ಚೀಟಿದಾರರ ಗಮನಕ್ಕೆ

ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಜನೇವರಿ 2024ರ ಮಾಹೆಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ಜಿಲ್ಲೆಯಲ್ಲಿ ಅಂತ್ಯೋದಯ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ. ಹಾಗೂ ಪಿಹೆಚ್ ಹೆಚ್ (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 5 ಕೆ.ಜಿ. ಯಂತೆ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿಯ ಬದಲಾಗಿ ಡಿ.ಬಿ.ಟಿ. ಮೂಲಕ ಪ್ರತಿ ಫಲಾನುಭವಿಗೆ 170 ರೂ.ಗಳಂತೆ ಜಮೆ ಮಾಡಲಾಗುತ್ತಿದೆ.

ಆದರೆ ಪಡಿತರ ಚೀಟಿ ಹಾಗೂ ಆಧಾರ ಕಾರ್ಡ್‌ನಲ್ಲಿ ಹೆಸರು ವ್ಯತ್ಯಾಸ ಹಾಗೂ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಯು ನಿಷ್ಕ್ರಿಯಗೊಂಡ, ಆಧಾರ ಕಾರ್ಡ್ ಮ್ಯಾಪ್ ಆಗದೇ ಇರುವ ಹಾಗೂ ಎನ್‌ಪಿಸಿಐ ಮ್ಯಾಪ್ ಆಗದೇ ಇರುವುದರಿಂದ ನವೆಂಬರ್-2023ರ ಮಾಹೆಯಲ್ಲಿ ಕೆಲವು ಪಡಿತರ ಚೀಟಿದಾರರಿಗೆ ಡಿ.ಬಿ.ಟಿ. ಮೂಲಕ ಹಣ ಜಮೆಯಾಗಿರುವುದಿಲ್ಲ. ಅಂತವರ ಯಾದಿಯನ್ನು ನ್ಯಾಯಬೆಲೆ ಅಂಗಡಿಯ ಮುಂದೆ ಈಗಾಗಲೇ ಪ್ರಚೂರ ಪಡಿಸಲಾಗಿದೆ.

ಜಿಲ್ಲೆಯಲ್ಲಿ ಪೋರ್ಟೆಬಿಲಿಟಿ ಯೋಜನೆ ಜಾರಿಯಲ್ಲಿರುವುದರಿಂದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಪಡಿತರ ಆಹಾರಧಾನ್ಯವನ್ನು ಪಡೆಯಬಹುದಾಗಿದೆ. ಆದರೆ ಪಡಿತರ ಚೀಟಿದಾರರು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದಲ್ಲಿ, ವಿಫಲವಾಗಲು ಕಾರಣವನ್ನು ತಿಳಿಯಬಹುದಾಗಿದೆ. ಹಾಗೂ ಅದನ್ನು ಸರಿಪಡಿಸಬಹುದಾಗಿದೆ.

ಪಡಿತರ ಚೀಟಿದಾರರ ಹಿತದೃಷ್ಟಿಯಿಂದ ಹಾಗೂ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡುವಲ್ಲಿ ಪ್ರಗತಿ ಸಾಧಿಸಬೇಕಾಗಿರುವುದರಿಂದ ಜನೇವರಿ- 2024ರ ಮಾಹೆಯಲ್ಲಿ ಪಡಿತರ ಚೀಟಿದಾರರು ತಮಗೆ ಸಂಬಂಧಿಸಿದ ಮೂಲ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಆಹಾರಧಾನ್ಯವನ್ನು ಪಡೆಯುವುದು ಹಾಗೂ ನ್ಯಾಯಬೆಲೆ ಅಂಗಡಿಯ ಮುಂದೆ ವಿಫಲವಾದವರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿ, ಹೆಸರಲ್ಲಿ ವ್ಯತ್ಯಾಸವಿದ್ದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಹಾಗೂ ಬ್ಯಾಂಕ್ ಖಾತೆಯಲ್ಲಿ ತೊಂದರೆಯಿದ್ದಲ್ಲಿ ಎನ್‌ಪಿಸಿಐ ಮ್ಯಾಪ್ ಮಾಡಿಸುವುದು ಅಥವಾ ಪೋಸ್ಟಲ್ ಇಲಾಖೆಯ ಐಪಿಪಿಬಿ ಖಾತೆಯನ್ನು ತೆರೆಯುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಆಹಾರ ಶಿರಸ್ತೇದಾರ, ಆಹಾರ ನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ.

ಗ್ರಾಮ್ ಒನ್ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನ

ಇ.ಡಿ.ಸಿ.ಎಸ್. ನಿರ್ದೆಶನಾಲಯ ಮತ್ತು ಇ-ಆಡಳಿತ ಇಲಾಖೆಯಿಂದ ಜಿಲ್ಲೆಯ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದಲ್ಲಿ ಒಂದು ಗ್ರಾಮ್ ಒನ್ ಕೇಂದ್ರಕ್ಕಾಗಿ ಫ್ರಾಂಚೈಸಿಯನ್ನು ಆಯ್ಕೆ ಮಾಡಲು ಆನ್ ಲೈನ್ (https://www.karnatakaone.gov.in/Public/GramOneFranchiseeTerms)

ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿ.ಯು.ಸಿ., ಐ.ಟಿ.ಐ, ಡಿಪ್ಲೊಮಾ, ಪದವಿ ಮತ್ತು ಸ್ನಾತ್ತಕೋತ್ತರ ಪದವಿ ಯೊಂದಿಗೆ ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು. ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಕನಿಷ್ಟ 100 ಚದರ ಅಡಿ ವಿಸ್ತೀರ್ಣವುಳ್ಳ ಸುಸಜ್ಜಿತ ಕಟ್ಟಡದೊಂದಿಗೆ ಕಂಪ್ಯೂಟರ್, ಪ್ರಿಂಟರ್, ಸ್ಕ್ಯಾನರ್, ಬಯೋಮೆಟ್ರಿಕ್ ಡಿವೈಸ್ ಮತ್ತು 8 ಗಂಟೆಗಳ ವಿದ್ಯುತ್ ಪರ್ಯಾಯ ವ್ಯವಸ್ಥೆಯೊಂದಿಗೆ ಇಲಾಖೆ ಕಾಲಕಾಲಕ್ಕೆ ಸೂಚಿಸುವ ಮಾನದಂಡಗಳಿಗೆ ಬದ್ಧರಾಗಿರುವವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹೆಲ್ಪಡೆಸ್ಕ್ ಮೊಬೈಲ್ ಸಂಖ್ಯೆ 9019026687, 9019026697, 9019026690, 9019027696 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

23 ರಂದು ಉದ್ಯೋಗ ಮೇಳ

ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜನವರಿ 23 ರಂದು ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆವರೆಗೆ ನವನಗರದ ಕಲಾಭವನದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ 30ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್.ಎಸ್.ಎಲ್.ಸಿ ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿಧರರು, ಸ್ನಾತಕೋತ್ತರ ಹಾಗೂ ವೃತ್ತಿಪರ ಪದವೀಧರರಿಗೆ ಅವಕಾಶವಿರುತ್ತದೆ. ಮೇಳದಲ್ಲಿ ನೊಂದಣಿ ಮಾಡಿಕೊಳ್ಳಬಹುದಾಗಿದೆ.

ಉದ್ಯೋಗ ಮೇಳಕ್ಕೆ ಬರುವಾಗ ಅಂಕಪಟ್ಟಿ, ಆಧಾರ ಕಾರ್ಡ & ಬಯೋಡಾಟಾಗಳನ್ನು ಕನಿಷ್ಟ 5 ಝರಾಕ್ಸ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ನೇರವಾಗಿ ಭಾಗವಹಿಸಬಹುದಾಗಿದೆ. 08354-295210, 7676634184, 8147111236, 8340360426 ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಸ್ವಯಂ ಸೇವಾ ಸಂಸ್ಥೆ ಹಾಗೂ ಪೊಲೀಸ್ ಇಲಾಖೆ ಸಹಯೋಗ ದೊಂದಿಗೆ ರಾಜ್ಯ ವಲಯದಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಟೋಲ್ ಫ್ರೀ ದೂರವಾಣಿ ಸಂಖ್ಯೆ 1090 ಅನುಷ್ಠಾನಗೊಳಿಸಲು ಹಾವೇರಿ ಜಿಲ್ಲೆಗೆ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಮಂಜೂರು ಮಾಡಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜ.20ರೊಳಗಾಗಿ ಅಗತ್ಯ ದಾಖಲಾತಿಗಳನ್ನೊಳಗೊಂಡ ಪ್ರಸ್ತಾವ ವನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಶು ನದಾಫ್‌, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಆಡಳಿತ ಭವನ, ಕೊಠಡಿ ಸಂಖ್ಯೆ 4, ನೆಲಮಹಡಿ, ದೇವಗಿರಿ-ಹಾವೇರಿ ಈ ವಿಳಾಸದಲ್ಲಿ ಸಂಪರ್ಕಿಸಲು ಕೋರಲಾಗಿದೆ.

ಮಧುಮೇಹ : ಐಪಾಮ್‌ಪ್ಲಸ್ ಶಸ್ತ್ರಚಿಕಿತ್ಸೆ ಯಶಸ್ವಿ

ಜಿಲ್ಲಾ ಆಸ್ಪತ್ರೆ ವಿಜಯಪುರದಲ್ಲಿ 40 ವರ್ಷದ ಮದುಮೇಹ ರೋಗದಿಂದ ಬಲಳುತ್ತಿರುವ ರೋಗಿಗೆ ಇನಸಿಜನಲ್ ಹರ್ನಿಯಾ ಹೊಟ್ಟೆಯ ದೊಡ್ಡ ಪ್ರಮಾಣದ ಹರಣಿಯಾ ಅನ್ನು ಉದರ ದರ್ಶಕ ವಿಧಾನದಿಂದ ಅತ್ಯಂತ ಚಿಕ್ಕ ರಂದ್ರಗಳ ಮೂಲಕ ಐಪಾಮ್‌ಪ್ಲಸ್ ಶಸ್ತ್ರಚಿಕಿತ್ಸೆಯನ್ನು ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ॥ ಆನಂದ ಝಳಕಿ, ಡಾ॥ ರಿಹಾನ. ಬಾಂಗಿ ಹಾಗೂ ಅವರ ತಂಡ ಮತ್ತು ಅರವಳಿಕೆಯನ್ನು ಡಾ॥ ಗುರುಲಿಂಗಪ್ಪ, ಉಪಾಸೆ ಅವರು ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ರೋಗಿಗೆ ಮದುಮೇಹ ಇರುವುದರಿಂದ ಶಸ್ತ್ರಚಿಕಿತ್ಸೆ ಮಾಡುವುದು ಅನಿವಾರ್ಯವಾದ ಹಿನ್ನಲೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿರುವುದರಿಂದ ಪ್ರಯೋಜನಕಾರಿಯಾಗಿದೆ.

ಈ ಶಸ್ತ್ರಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ಮಾಡಿದರೆ ಅಂದಾಜು ರೂ.3,00,000/- ಲಕ್ಷ ಖರ್ಚು ವೆಚ್ಚವಾಗುತ್ತಿತ್ತು. ಜಿಲ್ಲಾ ಆಸ್ಪತ್ರೆಯಲ್ಲಿ ಈ ಸೇವೆ ಉಚಿತವಾಗಿ ದೊರೆಯುವುದರೊಂದಿಗೆ ರೋಗಿಯು ಆರೋಗ್ಯವಾಗಿ ಚೆತರಿಸಿಕೊಳ್ಳುತ್ತಿದ್ದಾರೆ. ಈ ಯಶಸ್ವಿ ಕಾರ್ಯ ಕೈಗೊಂಡಿರುವ ತಂಡಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ॥ ಶಿವಾನಂದ ಮಾಸ್ತಿಹೋಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *