ಪ್ರತಿಯೊಂದು ಜಿಲ್ಲೆಯ ಮಳೆ ಮುನ್ಸೂಚನೆ ಮತ್ತು ಹವಾಮಾನ
ಭಾರತ ಹವಾಮಾನ ವಿಭಾಗವು ವಿಜಯಪುರ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಮುಂದಿನ ಐದು ದಿನಗಳಿಗೆ ನೀಡಿದ ಮೋಡ ಹಾಗೂ ಮಳೆಯ ಮುನ್ಸೂಚನೆ ಮುನ್ಸೂಚನೆ ನೀಡಿದ ದಿನಾಂಕ : 19-03-2024.
ವಿಜಯಪುರ ಜಿಲ್ಲೆಯ ತಾಲೂಕುಗಳು
• ಬ. ಬಾಗೇವಾಡಿ
• ಮುದ್ದೆಬಿಹಾಳ
• ಸಿಂದಗಿ
• ವಿಜಯಪುರ
• ಇಂಡಿ
ಸಾರಾಂಶ
ಭಾರತ ಹವಾಮಾನ ವಿಭಾಗವು ನೀಡಿದ ಮೂನ್ಸೂಚನೆಯಂತೆ ಮುಂದಿನ 5 ದಿನಗಳು ಭಾಗಶಃ ಮೋಡದಿಂದ ಶುಬ್ರ ಆಕಾಶದ ವಾತಾವರಣ ಇರಲಿದ್ದು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಒಣ ಹವೆ ಮುಂದುವರಿಯುವುದು. ಕೃಷಿ ಹವಾಮಾನಶಾಸ್ತ್ರ ವಿಭಾಗ ಹಾಗೂ ಗ್ರಾಮೀಣ ಕೃಷಿ ಹವಾಮಾನ ಸಲಹಾ ಯೋಜನೆ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ, ವಿಜಯಪುರ.
ಯಾಕೆ ಬರಗಾಲದ ಹಣ ಬರುತ್ತಿಲ್ಲ? ಸಿಎಂ ಹೇಳಿಕೆ
ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿ ಐದು ತಿಂಗಳಾಯಿತು. ಆದರೆ, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಒಂದೇ ಒಂದು ಪೈಸೆಯೂ ಹಣ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿ, 18,171 ಕೋಟಿ ರು. ಬರ ಪರಿಹಾರ ಕೇಳಿದ್ದೇವೆ. ಆದರೆ, ಒಂದು ರು.ಗಳನ್ನೂ ನೀಡಿಲ್ಲ. ಬರ ಪರಿಹಾರ ಕೊಡಿ ಅಂದರೆ ಕೊಡಲಿಲ್ಲ.
ಈಗ ಮೋದಿ ಅವರು ನಮ್ಮ ಬಳಿ ಹಣ ಇಲ್ಲ ಎಂದು ಆರೋಪಿಸುತ್ತಿದ್ದಾರೆ. ಹೀಗೆ ಆರೋಪ ಮಾಡಲು ಅವರಿಗೆ ಯಾವುದೇ ನೈತಿಕತೆಯಿಲ್ಲ ಎಂದರು. ಕೇಂದ್ರ ಸರ್ಕಾರ ನಯಾ ಪೈಸೆ ಬರ ಪರಿಹಾರ ಕೊಡದಿದ್ದರೂ, ರಾಜ್ಯದ ಬೊಕ್ಕಸದಿಂದಲೇ ರೈತರಿಗೆ ಬರ ಪರಿಹಾರ ನೀಡಿದ್ದೇವೆ. ಬರಗಾಲದಲ್ಲಿ ನರೇಗಾ ದಿನಗಳನ್ನು ಹೆಚ್ಚಿಸಿ ಎಂದು ಕೇಳಿದೆವು. ಈವರೆಗೆ ಅದನ್ನೂ ಮಾಡಲಿಲ್ಲ. ಕೇಂದ್ರ ಸರ್ಕಾರ ಕೇವಲ ಜಿಎಸ್‌ಟಿ ಸಂಗ್ರಹಿಸುವುದು, ಅದನ್ನು ರಾಜ್ಯಗಳಿಗೆ ಕೊಡದೆ ತಮ್ಮಲ್ಲೇ ಇಟ್ಟುಕೊಂಡು ಅನ್ಯಾಯ ಮಾಡೋಕೆ ಮಾತ್ರ ಇರುವುದೇ ಎಂದು ಪ್ರಶ್ನಿಸಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಮಾಡಿದ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯ ಗಳಿಸಿದೆ. ಲೋಕಸಭಾ ಚುನಾವಣೆಯಲ್ಲೂ ಅದು ಮರುಕಳಿಸಲಿದ್ದು, ನರೇಂದ್ರ ಮೋದಿ ಪ್ರಚಾರದಿಂದ ಬಿಜೆಪಿಗೆ ಯಾವುದೇ ಲಾಭವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಮ ಮತ್ತು ಮೋದಿ ಹೆಸರಿನಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಅದಕ್ಕಾಗಿಯೇ ಮೋದಿ ಅವರನ್ನು ಪ್ರಚಾರಕ್ಕೆ ಹೆಚ್ಚಾಗಿ ರಾಜ್ಯಕ್ಕೆ ಕರೆತರುತ್ತಿದ್ದಾರೆ. ಆದರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೋದಿ ಅವರು ಪ್ರಚಾರ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್ ಜಯ ಗಳಿಸಿದೆ.
ನರೇಂದ್ರ ಮೋದಿ ಅವರ ಪ್ರಚಾರದಿಂದ ಬಿಜೆಪಿಗೆ ಸಿಗುವ ಫಲ ಇಷ್ಟೇ ಎಂದು ಲೇವಡಿ ಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್‌ನ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಅದೇ ಬಿಜೆಪಿಯಲ್ಲಿ ಅಭ್ಯರ್ಥಿಗಳ ಕೊರತೆಯಿದೆ. ಆದರೂ, ನಮ್ಮ ಮೇಲೆ ಆರೋಪಿಸುತ್ತಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಜನರ ಕೆಲಸ ಮಾಡಿದ್ದೇವೆ. ಜನರ ಭಾವನೆ ಕೆರಳಿಸಿ ಅವರಿಗೆ ದ್ರೋಹ ಮಾಡಿಲ್ಲ. ಹೀಗಾಗಿ ನಾವು ರಾಜ್ಯದಲ್ಲಿ ಕನಿಷ್ಠ 20 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣಾ ಕರಪತ್ರ, ಪೋಸ್ಟರ್ ಮುದ್ರಣ ಮೇಲೆ ನಿಬರ್ಂಧ
ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಚುನಾವಣಾ ಕರಪತ್ರಗಳು ಮತ್ತು ಮುದ್ರಣ ಮತ್ತು ಪ್ರಕಟಣೆಯ ಮೇಲೆ ಅಪಪ್ರಚಾರ ಕುರಿತಂತೆ ಸುಳ್ಳು ಮಾಹಿತಿಯನ್ನು ಮುದ್ರಿಸದಂತೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ನಿಬರ್ಂಧಿಸಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ರೀತಿಯ ರಾಜಕೀಯ ಮತಪ್ರಚಾರ ಮತ್ತು ಕೋಮುಗಲಭೆ ಸೃಷ್ಟಿಸುವಂತಹ, ದ್ವೇಷ ಭಾವನೆಗಳನ್ನು ಕೆರಳಿಸುವಂತಹ ಬ್ಯಾನಗಳಾಗಲೀ, ಹೋಡಿರ್ಂಗಳಾಗಲೀ ಮತ್ತು ಕರಪತ್ರಗಳನ್ನಾಗಲೀ ಮುದ್ರಿಸುವಂತಿಲ್ಲ. ಮುದ್ರಿಸಲಾದ ಅಥವಾ ಬಹು-ಗ್ರಾಫ್ ಮಾಡಲಾದ ಪ್ರತಿಯೊಂದು ಚುನಾವಣಾ ಕರಪತ್ರ, ಫಲಕ, ಭಿತ್ತಿಪತ್ರ ಅಥವಾ ಮುಂಭಾಗದಲ್ಲಿ ಮುದ್ರಕನ ಹೆಸರು ಮತ್ತು ವಿಳಾಸ ಮತ್ತು ಪ್ರಕಾಶಕರ ಹೆಸರು, ವಿಳಾಸವನ್ನು ಕಡ್ಡಾಯವಾಗಿ ಹೊಂದಿರಬೇಕು. ಅಂತಹ ಯಾವುದೇ ಡಾಕ್ಯುಮೆಂನ ಮುದ್ರಣವು ಉದ್ದೇಶಿತ ಪ್ರಕಾಶಕರಿಂದ ಸಹಿ ಮಾಡಲ್ಪಟ್ಟ ಮತ್ತು ಅವನು ವೈಯಕ್ತಿಕವಾಗಿ ತಿಳಿದಿರುವ ಇಬ್ಬರು ವ್ಯಕ್ತಿಗಳಿಂದ ದೃಢೀಕರಿಸಲ್ಪಟ್ಟ ಅವನ ಗುರುತಿನ ಘೋಷಣೆಯನ್ನು ದ್ವಿ ಪ್ರತಿಯಲ್ಲಿ (ನಕಲಿನಲ್ಲಿ) ಪಡೆಯಬೇಕು.
ಮುದ್ರಣ ಘೋಷಣೆಯ ಒಂದು ಪ್ರತಿಯನ್ನು ಮತ್ತು ದಾಖಲೆಯ ಒಂದು ಪ್ರತಿಯನ್ನು ಮುದ್ರಿಸಿರುವ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ. ಯಾವುದೇ ನಿಬಂಧನೆಗಳನ್ನು ಉಲ್ಲಂಘಿಸಿದರೆ ಐಪಿಸಿ ಸೆಕ್ಷನ್ 188 ಅಡಿ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದು ಡಿಸಿ ಪ್ರಶಾಂತ್ ಕುಮಾರ್ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.