19.09.2024ರ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಈಗಿನಂತೆ ಸೆಪ್ಟೆಂಬರ್ 22ರ ವರೆಗೂ ಬಿಸಿಲು ಹಾಗೂ ಮೋಡದ ವಾತಾವರಣ ಇರುವ ಲಕ್ಷಣಗಳಿದ್ದು, ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಸ್ವಲ್ಪ ಮೋಡ ಹಾಗೂ ಶಿವಮೊಗ್ಗದ ಒಂದೆರಡು ಕಡೆ ತುಂತುರು ಮಳೆ ಇರಬಹುದು. ಈಗಿನಂತೆ ಸೆಪ್ಟೆಂಬರ್ 23ರ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 21ರಿಂದ ಉತ್ತರ ಒಳನಾಡು ಹಾಗೂ ಸೆಪ್ಟೆಂಬರ್ 23ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.
18.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಈಗ ಉತ್ತರಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಮೋಡಗಳು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸುತ್ತಿವೆ. ಇನ್ನೂ 2 ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮತ್ತು ಒಂದೆರಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 20ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಈ ವಾತಾವರಣವು ಸೆಪ್ಟೆಂಬರ್ 20ರ ತನಕವೂ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಮೋಡ ಹಾಗೂ ಉತ್ತರ ಒಳನಾಡಿನ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಸೆಪ್ಟೆಂಬರ್ 21ರಿಂದ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ.
ಈಗಿನ ಪರಿಸ್ಥಿಯಲ್ಲಿ ರಾಜ್ಯದಲ್ಲಿ ನಿರ್ದಿಷ್ಟ ಪರಿಸರದಲ್ಲೇ ಮಳೆಯ ಮುನ್ಸೂಚನೆ ನೀಡಿಲು ಸಾಧ್ಯವಾಗುತ್ತಿಲ್ಲ. ಹವಾಮಾನ ಇಲಾಖೆಯ ನಕ್ಷೆಯಲ್ಲೂ ವ್ಯತ್ಯಾಸಗಳಾಗುತ್ತಿವೆ.
ಸೆ.21, 22ರಂದು ತಾಲೂಕುಮಟ್ಟದ
ದಸರಾ ಕ್ರೀಡಾಕೂಟ
ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ವಿವಿಧೆಡೆ ಸೆ.21 ಮತ್ತು ಸೆ.22ರಂದು ತಾಲೂಕುಮಟ್ಟದ ದಸರಾ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ.
ಸೆ.21ರಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ, ಗಂಗಾವತಿ ತಾಲೂಕು ಕ್ರೀಡಾಂಗಣದಲ್ಲಿ, ಯಲಬುರ್ಗಾ ತಾಲೂಕಿನ ಬೇವೂರ ಗ್ರಾಮದ ಕೂಡಲಸಂಗಮೇಶ್ವರ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ, ಕುಷ್ಟಗಿ ತಾಲೂಕು ಕ್ರೀಡಾಂಗಣದಲ್ಲಿ, ಕಾರಟಗಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ, ಕನಕಗಿರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮತ್ತು ಸೆ.22ರಂದು ಕುಕನೂರ ತಾಲೂಕಿನ ಕುದರಿಮೋತಿಯ ಎಮ್.ಎಮ್.ಡಿ.ಆರ್. ಎಸ್.ನಲ್ಲಿ ತಾಲೂಕುಮಟ್ಟದ ದಸರಾ ಕ್ರೀಡಾಕೂಟಗಳು ನಡೆಯಲಿವೆ.
ನಿಯಮಗಳು: ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಅರ್ಹರಿರುತ್ತಾರೆ. ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೆ ರಕ್ಷಣಾ ಪಡೆ ಸೇರಿದ ಕ್ರೀಡಾಪಟುಗಳಿಗೆ ಭಾಗವಹಿಸಲು ಕ್ರೀಡಾಪಟುಗಳಿಗೆ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ, ಕುಕನೂರ ಮತ್ತು ಯಲ್ಬುರ್ಗಾ -9741742731, ) -9945501033, 7406484462 : ໙໖-9964279957, 3 -9535831941 10 -9008867656 ಕೊಪ್ಪಳ ತಾಲೂಕು-9591292420 ಗೆ ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಸೆಂಬರ್‌ನಲ್ಲಿ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ
ರಾಯಚೂರು : ಡಿಸೆಂಬರ್ ಕೊನೆಯ ವಾರದಲ್ಲಿ ರಾಯಚೂರಿನಲ್ಲಿ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಅರ್ಜುನ ಗೊಳಸಂಗಿ ಹೇಳಿದರು. ಎರಡು ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ರಾಜ್ಯದ 31 ಜಿಲ್ಲೆಗಳಿಂದ ಸಾಹಿತಿಗಳು, ಪ್ರಗತಿಪರ ಚಿಂತಕರು, ದಲಿತಪರ ಹೋರಾಟಗಾರರು, ಬುದ್ಧ, ಬಸವ, ಅಂಬೇಡ್ಕರ್ ಅನುಯಾಯಿಗಳು ಭಾಗವಹಿಸಲಿದ್ದಾರೆ ಎಂದು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಎರಡು ದಿನಗಳ ಸಮ್ಮೇಳನದಲ್ಲಿ 4 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ. ಎಲ್ಲರಿಗೂ ವಸತಿ ಮತ್ತು ಊಟದ ವ್ಯವಸ್ಥೆಯನ್ನು ದಲಿತ ಸಾಹಿತ್ಯ ಪರಿಷತ್ತು ಸ್ಥಳೀಯರ ಸಹಕಾರದಿಂದ ಏರ್ಪಾಟು ಮಾಡಲಿದೆ ಎಂದು ಹೇಳಿದರು. ಸಮ್ಮೇಳನದಲ್ಲಿ ವಿಶೇಷ ಉಪನ್ಯಾಸ, ಸಾಹಿತ್ಯ ವಿಚಾರ ಸಂಕಿರಣ, ಕವಿಗೋಷ್ಠಿ, ಸಂವಾದ ಗೋಷ್ಠಿಗಳು ನಡೆಯಲಿದೆ. ಪ್ರಶಸ್ತಿ ಪ್ರದಾನ ಹಾಗೂ ವಿವಿಧ ಸಾಧಕರನ್ನು ಸನ್ಮಾನಿಸಲಾಗುವುದು. ಸಮ್ಮೇಳನದಲ್ಲಿ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆ ಹಾಗೂ ಕಲೆ, ಪುಸ್ತಕ ಪ್ರದರ್ಶನ, ಮಾರಾಟ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು. ವಿಶೇಷವಾಗಿ ಸಮ್ಮೇಳನದಲ್ಲಿ ಭಾಗವಹಿಸುವವರಿಗೆ ಉಚಿತ ಪ್ರವೇಶವಿದೆ. ನೋಂದಣಿ ಮಾಡಿಕೊಳ್ಳಲು ಅಕ್ಟೋಬರ್ 31 ಕೊನೆಯ ದಿನ. ಸಮ್ಮೇಳನದಲ್ಲಿ ನೋಂದಣಿ ದೂರವಾಣಿ ಮೂಲಕ ಇಲ್ಲವೆ 0 94487 89322 5 97429 26390 ಸಂದೇಶ ಕಳಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು. ಪದಾಧಿಕಾರಿಗಳಾದ ಎಚ್.ಬಿ. ಕೊಲ್ಕಾರ್, ಭೀಮಣ್ಣ, ತಾಯರಾಜ್ ಮರ್ಚೆಟ್ಟಾಳ ಉಪಸ್ಥಿತರಿದ್ದರು.
ವಿಕಲಚೇತನರ ರಾಜ್ಯ ಪ್ರಶಸ್ತಿಗೆ ಪ್ರಸ್ತಾವನೆ ಆಹ್ವಾನ
ಕೊಪ್ಪಳ : 2024-25ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಡಿಸೆಂಬರ್ 03ರಂದು ವಿಶ್ವ ವಿಕಲಚೇತನರ ದಿನಾಚರಣೆಯ ನಡೆಯಲಿದೆ. ಈ ನಿಮಿತ್ತ ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ, ಸಲ್ಲಿಸಿರುವ ವೈಯಕ್ತಿಕ ವಿಭಾಗ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ, ಸಲ್ಲಿಸಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಗಳನ್ನು ಇಲಾಖೆಯಿಂದ ಪಡೆದು ಈ ಹಿಂದೆ ವಿಕಲಚೇತನರ ಕ್ಷೇತ್ರದಲ್ಲಿ ರಾಜ್ಯ ಪ್ರಶಸ್ತಿ ಪಡೆಯದಿರುವ ಬಗ್ಗೆ ಸ್ವಯಂ ದೃಢೀಕರಣ ಪ್ರಮಾಣ ಪತ್ರ ಹಾಗೂ ಯಾವುದೇ ಪೊಲೀಸ್ ಪ್ರಕರಣಗಳು ಇಲ್ಲದಿರುವ ಬಗ್ಗೆ ದೃಢೀಕರಣದೊಂದಿಗೆ ದ್ವಿ-ಪ್ರತಿಗಳಲ್ಲಿ ಅಕ್ಟೋಬರ್ 15ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ 31.32 ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟ್ ರಸ್ತೆ ಕೊಪ್ಪಳ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08539-295496 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕಾಯುಕ್ತರಿಂದ ಅಹವಾಲು ಅರ್ಜಿ ಸ್ವೀಕಾರ
ಯಾದಗಿರಿ ಕರ್ನಾಟಕ ಲೋಕಾಯುಕ್ತ ವತಿಯಿಂದ ಶಹಾಪುರ, ಸುರಪುರ, ಮತ್ತು ಗುರುಮಠಕಲ್ ತಾಲೂಕುಗಳಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯಾದಗಿರಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಬಿ.ಕೆ.ಉಮೇಶ ಅವರು ತಿಳಿಸಿದ್ದಾರೆ.
ಯಾರಿಗಾದರೂ ಸರ್ಕಾರಿ ಅಧಿಕಾ- ರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಭವಾಗಿದ್ದರೆ ಅಥವಾ ಅಧಿಕಾರಿಗಳ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ, ಸದರಿ ಸಭೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು. ಶಹಾಪೂರ ತಾಲೂಕಿನಲ್ಲಿ 2024ರ ಸೆಪ್ಟೆಂಬರ್ 19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯ ವರೆಗೆ ಶಹಾಪೂರ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಸುರಪುರ ತಾಲೂಕಿನಲ್ಲಿ 2024ರ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯ ವರೆಗೆ ಸುರಪುರ ತಹಸೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಗುರುಮಠಕಲ್ ತಾಲೂಕಿನಲ್ಲಿ 2024ರ ಸೆಪ್ಟೆಂಬರ್ 21 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯ ವರೆಗೆ ಗುರುಮಠಕಲ್ ತಹಸೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಸಭೆ ನಡೆಯಲಿದೆ.
ಎಲ್ಲಾ ಇಲಾಖೆಯ ಆಯಾ ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇ- ರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ.1, 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಎಸ್‌ಪಿ ಕಛೇರಿ ಸ್ಥಿರ ದೂ.ಸಂ.08473253802.