04.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ತುಮಕೂರು (ಪಾವಗಢ ಸಹಿತ), ರಾಯಚೂರು – ಆಂದ್ರಾ ಗಡಿಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಜೂನ್ 6ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಮುನ್ಸೂಚೆನೆ ಇದೆ. ಜೂನ್ 10ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಸಾಮಾನ್ಯ ಮಳೆಯ ಮುನ್ಸೂಚೆನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ವಿಜಾಪುರ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಜೂನ್ 5 ರಿಂದ ರಾಜ್ಯದ ಕರಾವಳಿ ಭಾಗಗಳಿಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ದಕ್ಷಿಣ ಭಾಗದ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳಲಿದೆ.
ಮೂರನೇ ಕಂತಿನ ಬೆಳೆ ಪರಿಹಾರ ಬಿಡುಗಡೆ ನಿಮಗೆಷ್ಟು ಹಣ ಜಮಾ?? ಚೆಕ್ ಮಾಡುವ ಹೊಸ ಡೈರೆಕ್ಟ್ ಲಿಂಕ್ ಬಿಡುಗಡೆ*
03.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ದಾವಣಗೆರೆ, ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆಯ ಕಾರಣದಿಂದ ಮುಂಗಾರು ದುರ್ಬಲಗೊಂಡಿದ್ದು, ಜೂನ್ 5ರಂದು ಈ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಜೂನ್ 6ರಿಂದ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚೆನೆ ಇದೆ.
ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ, ವಿವಿಧ ಅಧಿಸೂಚಿತ ಬೆಳೆಗಳಿಗೆ ನೋಂದಣಿ*
01.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚೆನೆ ಇದೆ.
ಮೈಸೂರು ಹಾಗೂ ಚಾಮರಾಜನಗರ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 1 ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ. ಜೊತೆಗೆ ತಮಿಳುನಾಡು ಕಡೆಯಿಂದ ಬೀಸುವ ಗಾಳಿಯ ಪ್ರಭಾವದಿಂದ ಜೂನ್ 1 ಹಾಗೂ 2ನೇ ತಾರೀಕಿನಂದು ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಜೂನ್ 2ರಂದು ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗು ಲಕ್ಷಣಗಳಿವೆ. ಇದರ ಪರಿಣಾಮದಿಂದ ದುರ್ಬಲವಾಗಿ ಆರಂಭವಾಗುವ ಮುಂಗಾರು ಮತ್ತಷ್ಟು ದುರ್ಬಲಗೊಳ್ಳಲಿದೆ. ಜೂನ್ 15 ಅಥವಾ 20ರ ನಂತರ ಮುಂಗಾರು ಚುರುಕಾಗುವ ಲಕ್ಷಣಗಳಿವೆ.