16.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಪಶ್ಚಿಮದ ಗಾಳಿ ಹಾಗೂ ಪೂರ್ವದ ಗಾಳಿಯು ಸಂಧಿಸಲಿರುವ ಪ್ರದೇಶವು ಕರಾವಳಿ ಕಡೆಗೆ ಚಲಿಸಿದ್ದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
15.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇವತ್ತು ಹಾಗೂ ನಾಳೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಪ್ರಿಲ್ 16ರಿಂದ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಆಮೇಲಿನ ದಿನಗಳಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಜಾಸ್ತಿಯಾಗುವ ಲಕ್ಷಣಗಳಿವೆ. ಒಳನಾಡು ಭಾಗಗಳಲ್ಲಿ ಎಪ್ರಿಲ್ 20ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
14.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ, ಧರ್ಮಸ್ಥಳ, ಚಾರ್ಮಾಡಿ, ಕಾರ್ಕಳ ಸುತ್ತಮುತ್ತ ಸ್ವಲ್ಪ ಜಾಸ್ತಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ, ಸಕಲೇಶಪುರ ಸುತ್ತಮುತ್ತ ಸಾಮಾನ್ಯ, ಚಿಕ್ಕಮಗಳೂರು, ಶಿವಮೊಗ್ಗ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಅಲ್ಲಲ್ಲಿ ಉತ್ತಮ, ಬಾಗಲಕೋಟೆ, ವಿಜಾಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ,, ದಾವಣಗೆರೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಕೆಲವು ಭಾಗಗಳಲ್ಲಿ ಗಾಳಿಯ ಒತ್ತಡದಿಂದ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಎಪ್ರಿಲ್ 14 ರಿಂದ ರಾಜ್ಯದಲ್ಲಿ ಮಳೆ ಕಡಿಯಾಗಲಿದ್ದು ಎಪ್ರಿಲ್ 18ರಿಂದ ಮಲೆನಾಡು ಭಾಗಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿ (ದಕ್ಷಿಣ ಕನ್ನಡ ಹಾಗೂ ಉಡುಪಿ) ಎಪ್ರಿಲ್ 20ರಿಂದ ಹೆಚ್ಚು ವ್ಯಾಪ್ತಿಯಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
13.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಅಲ್ಲಲ್ಲಿ (ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಜಾಸ್ತಿ ಇರಬಹುದು) ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನದ ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. (ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ, ಕೆಲವು ಭಾಗಗಳಲ್ಲಿ ತುಂತುರು ಮಳೆ ಇರಬಹುದು)
ಈಗಿನಂತೆ ಕರಾವಳಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹಾಗೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ. ಆಮೇಲೆ ಕಡಿಮೆಯಾದರೂ ಎಪ್ರಿಲ್ 18ರಿಂದ ಮತ್ತೆ ಉತ್ತಮ ಮಳೆಯ ಮುನ್ಸೂಚನೆ ಇದೆ.
12.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ವಾತಾವರಣದ ತೇವಾಂಶ ಕಡಿಮೆಯಾಗಿರುವುದರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಕೊಡಗು, ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಅಲ್ಲಲ್ಲಿ ಮೋಡ ಅಥವಾ ತುಂತುರು ತುಂತುರು ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮೇಲಿನ ನಕ್ಷೆಯಲ್ಲಿ ಗುರುತಿಸಿದ ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ. ಸಂಜೆಯ ವೇಳೆಗೆ ಪೂರ್ವ ಹಾಗೂ ಪಶ್ಚಿಮದ ಗಾಳಿಯೂ ಸಂಧಿಸುವ ಕಾರಣದಿಂದ ಒತ್ತಡ ಹೆಚ್ಚಾಗಿ ಮಳೆಯ ವಾತಾವರಣ ಸೃಷ್ಟಿಯಾಗಿದೆ. ಈ ಪ್ರಕ್ರಿಯೆಯೂ ಎಪ್ರಿಲ್ 14ರ ನಂತರ ಕಡಿಮೆಯಾಗಲಿದ್ದು, ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಮೊದಲು ಎ. 12 ಹಾಗೂ 13ರಂದು ಕೊಡಗು, ಹಾಸನ, ಚಿಕ್ಕಮಗಳೂರಿನ ಅಲ್ಲಲ್ಲಿ, ದಕ್ಷಿಣ ಕನ್ನಡ, ಕಾಸರಗೋಡು ಭಾಗಗಳಲ್ಲಿ ಒಂದೆರಡು ಕಡೆ ಹಾಗೂ ದಕ್ಷಿಣ ಮತ್ತು ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
11.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ವಾತಾವರಣದೊಂದಿಗೆ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಮೇಲೆ ನಕ್ಷೆಯಲ್ಲಿ ಗುರುತಿಸಿದ ಭಾಗಗಳ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ. (ಸಂಜೆಯ ವೇಳೆಗೆ ಈ ಪ್ರದೇಶಗಳಲ್ಲಿ ಪೂರ್ವದ ಹಾಗೂ ಪಶ್ಚಿಮದ ಗಾಳಿ ಸಂಧಿಸುವ ಪ್ರದೇಶಗಳು). ದಾವಣಗೆರೆ ಒಂದೆರಡು ಕಡೆ ಚಿಕ್ಕ ವ್ಯಾಪ್ತಿಯಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮೋಡ ಸ್ವಲ್ಪ ಜಾಸ್ತಿಯೇ ಇರಬಹುದು. ಈಗಿನಂತೆ ಎಪ್ರಿಲ್ 11ರಿಂದ ಮುಂದಿನ 2 ಅಥವಾ 3 ದಿನಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಎಪ್ರಿಲ್ 12ರಿಂದ ಕೊಡಗು ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.