Breaking
Thu. Dec 19th, 2024

ಕೃಷಿ ಮೇಳ-2024 ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು

Spread the love

ಪ್ರಮುಖ ಆಕರ್ಷಣೆಗಳು :

ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಕೈಗೊಳ್ಳಬೇಕಾದ ಬೆಳೆ ಪದ್ಧತಿಗಳು ಸಮಗ್ರ ಬೆಳೆ ನಿರ್ವಹಣೆ, ಜೈವಿಕ ಗೊಬ್ಬರ ಹಾಗೂ ಪೀಡೆನಾಶಕಗಳು ಎಣ್ಣೆಕಾಳು, ದ್ವಿದಳ ಧಾನ್ಯಗಳು ಮತ್ತು ಹಿಂಗಾರು ಬೆಳೆಗಳ ತಾಂತ್ರಿಕತೆಗಳು.

ಮಳೆ ನೀರು ಕೊಯ್ದು ಮತ್ತು ಅಂತರ್ಜಲ ಮರುಪೂರಣ ನೈಸರ್ಗಿಕ ಕೃಷಿ, ಸಾವಯವ ಕೃಷಿ ಮತ್ತು ಮಣ್ಣಿನ ಫಲವತ್ತತೆ ಸಂರಕ್ಷಣೆ ಹೈಟೆಕ್ ತೋಟಗಾರಿಕೆ, ಫಲ-ಪುಷ್ಪ ಪ್ರದರ್ಶನ ಹಾಗೂ ಕೀಟ ಪ್ರಪಂಚ.

ಸುಧಾರಿತ ಕೃಷಿ ಯಂತ್ರೋಪಕರಣ ಹಾಗೂ ಕಿಸಾನ್ ಡೋನ್ ಬಳಕೆ ಕೃಷಿ ತಜ್ಞರೊಂದಿಗೆ ಸಮಾಲೋಚನೆ ರೈತರ ಆವಿಷ್ಕಾರಗಳು, ವಿಶೇಷ ಸಾಧನೆಗೈದ ರೈತರೊಂದಿಗೆ ಸಂವಾದ.

ಕೃಷಿ ಅರಣ್ಯ, ಮೇವಿನ ಬೆಳೆಗಳ ತಾಂತ್ರಿಕತೆ ಪಶು ಸಂಗೋಪನೆ ಹಾಗೂ ಜಾನುವಾರುಗಳ ಪ್ರದರ್ಶನ ಮೌಲ್ಯವರ್ಧನೆ, ದ್ವಿತೀಯ ಕೃಷಿ ಮತ್ತು ಸಮುದಾಯ ವಿಜ್ಞಾನ ತಾಂತ್ರಿಕತೆಗಳು.

11.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದ್ದು, ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನ ಸೆಪ್ಟೆಂಬರ್ 13ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಕಡಿಮೆಯಾಗಲಿದೆ.

ಮಲೆನಾಡು : ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಸೆಪ್ಟೆಂಬರ್ 14ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು.

ಒಳನಾಡು : ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 14ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಮಧ್ಯಪ್ರದೇಶ ತಲುಪಿದ್ದು, ಸೆಪ್ಟೆಂಬರ್ 15ರ ಸುಮಾರಿಗೆ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ಕಡೆ ಸಾಗಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ರಾಜ್ಯದಲ್ಲಿ ಮಳೆ ಕ್ಷೀಣಿಸಲಿದ್ದು, ಬಿಸಿಲಿನ ವಾತಾವರಣದ ಹೆಚ್ಚಾಗುವ ನಿರೀಕ್ಷೆ ಇದೆ.

10.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

*ಕರಾವಳಿ* : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಸೆಪ್ಟೆಂಬರ್ 10 ಹಾಗೂ 11ರಂದು ಸ್ವಲ್ಪ ಜಾಸ್ತಿ ಇರಲಿದ್ದು. ಆನಂತರ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 14ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

*ಮಲೆನಾಡು* : ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಸೋಮವಾರಪೇಟೆ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಹಾಸನ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದೊಂದಿಗೆ, ಸಕಲೇಶಪುರ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಉಳಿದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಸೆಪ್ಟೆಂಬರ್ 14ರಿಂದ ಬಿಸಿಲಿನ ಅವಧಿ ಹೆಚ್ಚಾಗುವ ನಿರೀಕ್ಷೆ ಇದೆ.

*ಒಳನಾಡು* : ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಸೆಪ್ಟೆಂಬರ್ 10ರಿಂದ ಮಳೆಯ ಕಡಿಮೆಯಾಗಿ, ಸೆಪ್ಟೆಂಬರ್ 14ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಶಾ ಮೂಲಕ ಭೂ ಪ್ರವೇಶಿಸಿದ್ದು, ಮುಂದೆ ಮಧ್ಯಪ್ರದೇಶಕ್ಕೆ ಸಾಗಿ, ಅಲ್ಲಿಂದ ಸೆಪ್ಟೆಂಬರ್ 14ರ ಸುಮಾರಿಗೆ ಉತ್ತರ ಪ್ರದೇಶ, ಉತ್ತರಾಖಂಡ ಚಲಿಸಿ ಶಿಥಿಲಗೊಳ್ಳುವ ಲಕ್ಷಣಗಳಿವೆ.

Related Post

Leave a Reply

Your email address will not be published. Required fields are marked *