Breaking
Wed. Dec 18th, 2024

ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆ, labour insurance

Spread the love

ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ ಅರ್ಹ ಕಾರ್ಮಿಕರು ನೋಂದಾಯಿಸಿ ಕೊಳ್ಳುವಂತೆಜಿಲ್ಲಾ ಕಾರ್ಮಿಕ ಅಧಿಕಾರಿಸೂರಪ್ಪ ಡಂಬಾಳ್ ತಿಳಿಸಿದ್ದಾರೆ. ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತಗೊಂಡ ಕಾರ್ಮಿಕರಿಗೆ ಅಪಘಾತ ಪರಿಹಾರ ಒದಗಿಸುವ ಸಂಬಂಧ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು’ಕರ್ನಾಟಕ ಕಾರ್ಮಿಕರ ರಾಜ್ಯ ವಿಮಾ ಯೋಜನೆ’ಯನ್ನು ಜಾರಿಗೆ ತಂದಿದ್ದು.

ಎಲ್ಲಾ ಅರ್ಹ ಗಿಗ್ ಕಾರ್ಮಿಕರಾದ ಜೊಮಾಟೋಗಳಂತಹ ಫುಡ್‌ಡೆಲಿವರಿ ಸಂಸ್ಥೆಗಳಲ್ಲಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಪ್ಲಿಫ್‌ಕಾರ್ಟ್, ಅಮೆಜಾನ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಷ್ಟೋ, ಬಿಗ್ ಬಾಸ್ಕೆಟ್, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರುಸೇವಾಸಿಂಧುಪೋ https://sevasindhuservices.karnataka.gov.ind ನೋಂದಾಯಿಸಿಕೊಳ್ಳಬೇಕು.

ಯೋಜನೆಯಸೌಲಭ್ಯಗಳು:

ಗಿಗ್ ಕಾರ್ಮಿಕರು ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ.2 ಲಕ್ಷ ಹಾಗೂ ಜೀವ ವಿಮೆ ರೂ.2 ಲಕ್ಷ ಸೇರಿ ಒಟ್ಟು ರೂ.4 ಲಕ್ಷಗಳು. ಅಪಘಾದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2 ಲಕ್ಷಗಳವರೆಗೆ. ಆಸ್ಪತ್ರೆ ವೆಚ್ಚ ಮರುಪಾವತಿ 2.1 ಲಕ್ಷಗಳವರೆಗೆ (ಅಪಘಾತ ಪ್ರಕರಣಗಳಿಗೆ ಮಾತ್ರ)ಜೀವ ವಿಮಾ ರೂ.2 ಲಕ್ಷಗಳ ಸೌಲಭ್ಯ ಸಿಗಲಿದೆ. ಈ ಸೌಲಭ್ಯವು ಕರ್ನಾಟಕದಲ್ಲಿ ಗಿಗ್ ವೃತ್ತಿ (ಡೆಲಿವರಿ ಕಾರ್ಯ) ನಿರ್ವಹಿಸುತ್ತಿರುವವರಿಗೆ ಮಾತ್ರ ಆಗಿದ್ದು, ಅರ್ಹ ಗಿಗ್ ಕಾರ್ಮಿಕರು18 ರಿಂದ 60 ವರ್ಷದೊಳಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರ ಬಾರದು. ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿ ಯಾಗಿರಬಾರದು.

ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಯು ఆధారా ಆಗಿರಬೇಕು. ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ. ಉದ್ಯೋಗ ಪ್ರಮಾಣ ಪತ್ರ, ಇ-ಶ್ರಮ್ ನೋಂದಣಿ ಖ್ಯೆ (ಇಲ್ಲವಾದಲ್ಲಿ gov.in ಪಡೆದುಕೊಳ್ಳುವುದು). eshram. ನೋಂದಾಯಿಸಿ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿ, ಕಚೇರಿ/ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರುಗಳಕಚೇರಿ, ಕಾರ್ಮಿಕ ಸಹಾಯವಾಣಿ 155214 ಸಂಪರ್ಕಿಸಬಹುದು.

ಯುವನಿಧಿ ಯೋಜನೆಗೆ ನೋಂದಣಿ

ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯ ಫಲಾನುಭವಿಗಳ ನೋಂದಣಿಗೆ ಸನ್ಮಾನ್ಯ ಮುಖ್ಯಮಂತ್ರಿಗಳು 2023 ನೇ ಡಿಸೆಂಬರ್ 26 ರಂದು ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯ ಅಡಿಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವ್ಯತಿಪರ ಕೋರ್ಸ್‌ಗಳು ಸೇರಿದಂತೆ) ಪ್ರತಿ ತಿಂಗಳು ರೂ. 3,000/- ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 1,500/- ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೀಡಲಾಗುತ್ತದೆ.

ಅನ್ವಯವಾಗುವ ನಿರುದ್ಯೋಗ ಭತ್ಯೆಯನ್ನು ಫಲಾನುಭಾವಿಗಳ ಬ್ಯಾಂಕ್ ಖಾತೆಗಳಿಗೆ ಡಿ.ಬಿ.ಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ. ನಿರುದ್ಯೋಗ ಸ್ಥಿತಿಯ ಬಗ್ಗೆ ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಪದವಿ/ಡಿಪ್ಲೋಮಾ ನಂತರ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳಿಗಿಂತ ಕಡಿಮೆ ವಾಸವಿಲ್ಲದಿರುವ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಾಗುವುದಿಲ್ಲ.

ಪದವಿ/ಡಿಪ್ಲೋಮಾ ತೇರ್ಗಡೆ ಹೊಂದಿ 180 ದಿನಗಳೊಳಗೆ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆದರೆ ಈ ಅಭ್ಯರ್ಥಿಗಳು 180 ದಿನಗಳ ನಂತರ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗುತ್ತಾರೆ. ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳ 1 ರಿಂದ 25ನೇ ತಾರೀಖಿನೊಳಗೆ ಘೋಷಣೆಯನ್ನು ಆನ್‌ಲೈನ್‌ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ.

ಯೋಜನೆಯ ಕುರಿತಾದ ಹೆಚ್ಚಿನ ಮಾಹಿತಿಯನ್ನು www.sevasindhugs.karnataka.gov.in ತಾಣದಿಂದ ಅಥವಾ ಸಹಾಯವಾಣಿ ಸಂಖ್ಯೆ: 1800-599- 9918 ಇಂದ ಪಡೆಯಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Related Post

Leave a Reply

Your email address will not be published. Required fields are marked *