ರಾಜ್ಯ ಸರ್ಕಾರವು ಈಗಾಗಲೇ ಎರಡು ಕಂತುಗಳ ಬೆಳೆ ಪರಿಹಾರದ ಹಣವನ್ನು ಜಮಾ ಮಾಡಲಾಗಿತ್ತು, ಇಂದು (ಜುಲೈ 11) ಮೂರೆನೇ ಕಂತಿನ ಹಣವನ್ನು ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ರಾಜ್ಯದಲ್ಲಿ 17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತರ ಜೀವನೋಪಾಯ ನಷ್ಟ ಪರಿಹಾರಾಜ್ಯದಲ್ಲಿ 17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತರ ಜೀವನೋಪಾಯ ನಷ್ಟ ಪರಿಹಾರವಾಗಿ ತಲಾ 2800 ರೂ. ರಿಂದ 3000 ರೂ. ಹಣವನ್ನು ರೈತರ ಖಾತೆಗಳಿಗೆ ರಾಜ್ಯ ಸರಕಾರವು ವರ್ಗಾವಣೆ ಮಾಡಿದೆ.
ಮಳೆ ಆಶ್ರಿತ ಮತ್ತು ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೂ ಸಹ ಬೆಳೆ ನಷ್ಟ ಪರಿಹಾರ ಸರ್ಕಾರ ನೀಡುತ್ತಿದೆ. ನಮ್ಮ ರಾಜ್ಯದಲ್ಲಿ ಬರಗಾಲ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಪತ್ತುಗಳಿಂದ ಉಂಟಾಗುವ ನಷ್ಟದ ಜೀವನೋಪಾಯ ಪರಿಹಾರ ಬಿಡುಗಡೆ ಮಾಡಲಾಗಿದೆ. ಜಿಲ್ಲಾವಾರು ಅರ್ಹ ರೈತರ ಖಾತೆಗಳಿಗೆ ಬೆಳೆ ಪರಿಹಾರ ಹಣ ಜಮಾ ಮಾಡಲಾಗಿದೆ. ನಿಮ್ಮ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಿದೆಯಾ ಎಂದು ಚೆಕ್ ಮಾಡಿಕೊಳ್ಳಬಹುದು. ಈ ಕೆಳಗೆ ನೀಡಿರುವ DBT Status ಚೆಕ್ ಮೂಲಕ ನಿಮಗೆ ಬೆಳೆ ಪರಿಹಾರದ ಹಣ ಬಂದಿದೆಯಾ ಎಂಬುದನ್ನು ನೋಡಬಹುದು.
Dbt app ಅನ್ನು ನೀವು ಡೌನ್ಲೋಡ್ ಮಾಡುವುದು ಹೇಗೆ?
https://play.google.com/store/apps/details?id=com.dbtkarnataka
ಮೊದಲಿಗೆ DBT ಆಪ್ ಅನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬೇಕು. ಮಾಡಿಕೊಂಡ ನಂತರ ಈ ಕೆಳಗೆ ನಿಮಗೆ ಕಾಣಿಸುತ್ತಿರುವ ಚಿತ್ರವು ದೊರೆಯುತ್ತದೆ. ದೊರೆತನಂತರ ಸೆಲೆಕ್ಟ್ ಬೆನಿಫಿಶಿಯರಿ ಎನ್ನುವಲ್ಲಿ ನೀವು ಆಯ್ಕೆ ಮಾಡಿಕೊಂಡು ನಂತರ MPIN ಹಾಕಿರಿ.
ಹಾಕಿದ ನಂತರ ಪೇಮೆಂಟ್ ಸ್ಟೇಟಸ್ ಎಂದು ಮೊಬೈಲ್ ನ ಎಡಭಾಗದಲ್ಲಿ ಕಾಣುತ್ತಿರುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಕ್ಲಿಕ್ ಮಾಡಿದ ನಂತರ ನಿಮಗೆ ಈ ಕೆಳಗೆ ಕಾಣಿಸುತ್ತಿರುವ ಚಿತ್ರದ ಹಾಗೆ ಯಾವ ಯಾವ ಯೋಜನೆ ಹಣವು ಎಷ್ಟು ಕಂತಿನಲ್ಲಿ ನಿಮಗೆ ಜಮಾ ಆಗಿದೆ ಎಂದು ಸಂಪೂರ್ಣ ಮಾಹಿತಿಯ ಕೊಡುತ್ತಾರೆ. ಯಾವ ಬ್ಯಾಂಕ್ ಅಕೌಂಟ್ ಗೆ ಹೋಗಿದೆ ಮತ್ತು ಎಷ್ಟು ಕಂತಿನ ಹಣವು ಜಮಾ ಆಗಿದೆ ಈ ಎಲ್ಲಾ ದಾಖಲಾತಿಗಳನ್ನು ನೀವು ಈ ಆಪ್ ಮೂಲಕ ತಿಳಿದುಕೊಳ್ಳಬಹುದು.
16.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬೆಳಗಾವಿ (ಚಿಕ್ಕೋಡಿ ಸಹಿತ) ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಪಾವಗಢ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 16ರಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆ ಆಗುವ ಸಾಧ್ಯತೆ ಇದ್ದರೂ ಜುಲೈ 22ರ ತನಕ ರಾಜ್ಯದಾದ್ಯಂತ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರಬಹುದು.
15.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ವಲ್ಪ ಜಾಸ್ತಿಯೇ ಇರಬಹುದು. ಕೊಡಗು, ಹಾಸನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ( ಚಿಕ್ಕೋಡಿ ಸಹಿತ), ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 14 ಹಾಗೂ 15ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಜುಲೈ 16ರಿಂದ ಮುಂದಿನ 10 ದಿನಗಳವರೆಗೂ ಮಳೆಯ ಪ್ರಮಾಣ ಕಡಿಮೆಯಾದರೂ ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.