Breaking
Tue. Dec 17th, 2024
Spread the love

1. ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ [ಉನ್ನತಾಧಿಕಾರ ಸಮಿತಿ] ಕಮಿಟಿಯನ್ನು ರಚಿಸಲಾಗುವುದು ನಂಜುಂಡಪ್ಪ ವರದಿ ಸಲ್ಲಿಕೆಯಾಗಿ 21 ವರ್ಷಗಳಾದವು.

ನಂಜುಂಡಪ್ಪನವರ ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ 61330 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ. 42000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ನಂಜುಂಡಪ್ಪನವರ ವರದಿಯನ್ನಾಧರಿಸಿ ನೀಡಲಾಗುವ ವಿಶೆಷ ಅಭಿವೃದ್ಧಿ 32433.43 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ.

ಇದರ ಜೊತೆಯಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ವತಿಯಿಂದಲೂ ಅನುದಾನಗಳನ್ನು ಒದಗಿಸಲಾಗಿದೆ. ಇಷ್ಟೆಲ್ಲ ಮಾಡಿದರೂ ಮಾನವ ಅಭಿವೃದ್ಧಿ ಸೂಚ್ಯಂಕವು ನಿರೀಕ್ಷಿತ ಮಟ್ಟದಲ್ಲಿ ಸುಧಾರಿಸುತ್ತಿಲ್ಲ. ಶಿಕ್ಷಣ, ಆರೋಗ್ಯ, ಆದಾಯಗಳಿಕೆ ಮುಂತಾದವುಗಳಲ್ಲಿ ಹಿನ್ನಡೆಯನ್ನು ಈ ಜಿಲ್ಲೆಗಳು ಅನುಭವಿಸುತ್ತಿವೆ. ಹಾಗಾಗಿ ವಿಶೇಷವಾಗಿ ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ [ಉನ್ನತಾಧಿಕಾರ ಸಮಿತಿ] ಕಮಿಟಿಯನ್ನು ರಚಿಸಲಾಗುವುದು.

2. ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು.

3. ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು.

4. ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟ‌ರ್ ಅನ್ನು ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 19 ಘಟಕಗಳು 1255 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಅಲ್ಲದೇ, ಧಾರವಾಡದ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲಾಗುತ್ತದೆ.

5. ರಾಯಚೂರಿನಲ್ಲಿ ಹತ್ತಿ ಉತ್ಪಾದನೆಯು ಹೆಚ್ಚಿರುವುದರಿಂದ ಈ ಜಿಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಟಿಯಿಂದ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಲಾಗುವುದು.

6. ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟ‌ರ್ ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು.

7. ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ. ಐತಿಹಾಸಿಕ ಮಹತ್ವವಿರುವ ಈ ತಾಣಗಳು ಅಂತರರಾಷ್ಟ್ರೀಯವಾಗಿಯೂ ಮಹತ್ವ ಪಡೆದಿವೆ. ಆದರೆ ಇದಕ್ಕೆ ಸಾಕಷ್ಟು ಮಹತ್ವ ನೀಡದೆ ಹಿನ್ನಡೆಯನ್ನು ಅನುಭವಿಸುತ್ತಿದೆ. ನಾವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮವಹಿಸುತ್ತೇವೆ.

8. ಧಾರವಾಡದಲ್ಲಿರುವ ವಾಲ್ಕಿ [ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ) ಯನ್ನು ಉನ್ನತೀಕರಿಸಲಾಗುವುದು. a ‘Centre of excellence for water management’ಯನ್ನಾಗಿ ಬದಲಾಯಿಸಿ ಇದರ ಮೂಲಕ ಜಲ ಶಿಕ್ಷಣ ನೀಡುವುದಷ್ಟೆ ಅಲ್ಲ, ಉತ್ತರ ಕರ್ನಾಟಕದ ಮಣ್ಣಿನ ಸವುಳು ಜವುಳು ಸಮಸ್ಯೆಯನ್ನು ನಿರ್ವಹಿಸಲಾಗುವುದು. ಹಾಗೂ ರೈತರ ಆದಾಯ ಹೆಚ್ಚಳದ ಕಡೆಗೆ ಒತ್ತು ನೀಡಲಾಗುವುದು.

ಹೆಸ್ಕಾಂ ಆನ್‌ಲೈನ್ ಬಿಲ್ ಪಾವತಿ ಸೌಲಭ್ಯ

ಧಾರವಾಡ : ಹೆಸ್ಕಾಂ ನಗರ ಪ್ರದೇಶದ ವಿದ್ಯುತ್ ಬಿಲ್ ಪಾವತಿಗಳ ಸಂಗ್ರಹಕ್ಕಾಗಿ ಭಾರತ್ ಬಿಲ್ ಪಾವತಿ ಆಪರೇಟಿಂಗ್ ಯುನಿಟ್ ಸೇವಾ ಪೂರೈಕೆದಾರರಾದ ಏರ್‌ಟೆಲ್ ಪೆಮೆಂಟ್ ಬ್ಯಾಂಕ್ ಲಿಮಿಟೆಡ್ ಡಿಸೆಂಬರ್ 13 ರಿಂದ ಲೈವ್ ಆಗಿರುತ್ತದೆ. ಇನ್ನು ಮುಂದೆ ಹೆಸ್ಕಾಂ ನಗರ ಪ್ರದೇಶದ ಗ್ರಾಹಕರು ಬಿಬಿಪಿಎಸ್ ಪ್ಲಾಟ್‌ಫಾಮ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಯಂ ಇತ್ಯಾದಿಗಳ ಮೂಲಕ ವಿದ್ಯುತ್ ಬಿಲ್ ಪಾವತಿಸುವ ಸೌಲಭ್ಯದ ಸದುಪಯೋಗಪಡೆದುಕೊಳ್ಳಬೇಕೆಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ಕೆನರಾ ಬ್ಯಾಂಕ್ : 95 ಸ್ವ-ಸಹಾಯ ಗುಂಪುಗಳಿಗೆ ಸಾಲ ವಿತರಣೆ

ಬಾಗಲಕೋಟೆ : ಕೆನರಾ ಬ್ಯಾಂಕ್ ಶಾಖೆಗಳ ಮೂಲಕ ಜಿಲ್ಲೆಯ 95 ಸ್ವ-ಸಹಾಯ ಗುಂಪುಗಳಿಗೆ ಒಟ್ಟು 195 ಲಕ್ಷ ರೂ.ಗಳ ಸಾಲವನ್ನು ವಿತರಿಸಲಾಗಿದೆ ಎಂದು ಕೆನರಾ ಬ್ಯಾಂಕ್‌ನ ಕ್ಷೇತ್ರೀಯ ವ್ಯವಸ್ಥಾಪಕಿ ಕೆ.ಆರ್.ಶೈಲಜಾ ಹೇಳಿದರು. ಇಲಕಲ್ಲ ನಗರದ ಡಾ.ಬಿ.ಆ‌ರ್. ಅಂಬೇಡ್ಕರ ಭವನದಲ್ಲಿ ಜಿಲ್ಲಾ ಪಂಚಾಯತ, ಇಲಕಲ್ಲ ತಾಲೂಕಾ ಪಂಚಾಯತ ಸಹಯೋಗದಲ್ಲಿ ಹಮ್ಮಿಕೊಂಡ ಸ್ವ-ಸಹಾಯ ಗುಂಪುಗಳಿಗೆ ಹಮ್ಮಿಕೊಂಡ ಸಾಲ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈಗಾಗಲೇ 95 ಸ್ವ-ಸಹಾಯ ಗುಂಪುಗಳಿಗೆ ಸಾಲ ವಿತರಿಸಾಗಿದ್ದು, ಇನ್ನುಳಿದ ಎನ್.ಆ‌ರ್. ಎಲ್.ಎಂ ಸ್ವ-ಸಹಾಯ ಸಂಘಗಳಿಗೆ ಸಾಲ ವಿತರಿಸಲು ಕೆನರಾ ಬ್ಯಾಂಕ್ ಬದ್ದವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹುನಗುಂದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ, ಮುಧೋಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಹಿಪ್ಪರಗಿ, ಎನ್.ಆರ್. ಎಲ್.ಎಂ ಜಿಲ್ಲಾ ವ್ಯವಸ್ಥಾಪಕಿ ಅನ್ನಪೂರ್ಣ ಸೇರಿದಂತೆ ಕೆನರಾ ಶಾಖೆಯ ವ್ಯವಸ್ಥಾಪಕರು, ಸ್ವ- ಸಹಾಯ ಗುಂಪುಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Related Post

Leave a Reply

Your email address will not be published. Required fields are marked *