ಜುಲೈ 01 ರಂದು ಉಳಿದ ಎಲ್ಲಾ ರೈತರ ಖಾತೆಗೆ ಬೆಳೆ ಪರಿಹಾರ ಹಣ ಜಮಾ ಮಾಡಲಾಗುತ್ತದೆ. ಗೃಹ ಸಚಿವರಿಂದ ಸ್ಪಷ್ಟನೆ. ಆತ್ಮೀಯ ರೈತ ಬಾಂಧವರೇ,
ಈಗಾಗಲೇ ರಾಜ್ಯಕ್ಕೆ ಬೆಳೆಹಾನಿ ಪರಿಹಾರ ಎಂದು ಬಂದಿದ್ದ 3,454 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕಳೆದ ತಿಂಗಳು ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿತ್ತು.
ಅಂತೆಯೇ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದಿಂದ ಬಂದ ಅನುದಾನದಲ್ಲಿ ಬಾಕಿ ಉಳಿದಿರುವ 1000 ಕೋಟಿ ಜೊತೆಗೆ ರಾಜ್ಯ ಸರ್ಕಾರವು ತನ್ನ ಬೊಕ್ಕಸದಿಂದ 272 ಕೋಟಿ ರೂಪಾಯಿಯನ್ನು ಸೇರಿಸಿ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ 17.09 ಲಕ್ಷ ರೈತರ ಖಾತೆಗೆ ನೇರವಾಗಿ ತಲಾ 3,000 ಹಣ ಜಮಾ ಮಾಡಲಾಗುವುದು ಎಂದು ತಿಳಿಸಿತ್ತು.ಅದರ ಪ್ರಕಾರ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ 3,000 ರೂಪಾಯಿ ಹಣ ನೇರವಾಗಿ ಅರ್ಹ ರೈತರ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು ಹಲವು ರೈತರ ಖಾತೆಗೆ ಈಗಾಗಲೇ ಹಣ ಜಮಾ ಆಗಿದೆ.
ಇನ್ನು ಹೆಚ್ಚುವರಿ ಪರಿಹಾರ ಹಣ ಜಮಾ ಆಗದೇ ಇರುವ ರೈತರ ಖಾತೆಗೆ ಮುಂದಿನ ಒಂದು ವಾರದಲ್ಲಿ ಎಲ್ಲಾ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.
https://parihara.karnataka.gov.in/service92/
ಹಂತ -2) ನಂತರ ನೀವು ಕೆಳಗೆ ತೋರಿಸಿದಂತೆ ಅದರಲ್ಲಿ ವರ್ಷ, ಋತು ಮತ್ತು ವಿಪತ್ತು ವಿಧ ಆಯ್ಕೆ ಮಾಡಿ Get Details ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ಅದರಲ್ಲಿ ನೀವು ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಹಾಕಿ Fetch ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಮೇಲೆ ತೋರಿಸಿದಂತೆ ನಿಮ್ಮ ಖಾತೆಗೆ ಜಮಾ ಆಗಿರುವ ಬೆಳೆ ಪರಿಹಾರ ಹಣದ ವಿವರಗಳು ದೊರೆಯುತ್ತವೆ.
ಪಿಎಂ ಕಿಸಾನ್ ಸಮ್ಮಾನ್ ಅನ್ನದಾತರ ಕಾಳಜಿಗೆ ಸಾಕ್ಷಿ : ಕುಮಾರಸ್ವಾಮಿ
3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿದ ಮೊದಲ ಕ್ಯಾಬಿನೆಟ್ ನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆ ಮಾಡಿದ್ದು ಅನ್ನದಾತರ ಬಗ್ಗೆ ಅವರಿಗಿದ್ದ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಇಲ್ಲಿಯ ಕೃಷಿ ವಿಶ್ವವಿದ್ಯಾಲಯದಲ್ಲಿ 17ನೇ ಕಂತಿನ ಪಿಎಂ-ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ ಕಾರ್ಯಕ್ರಮದ ನೇರ ವೀಕ್ಷಣೆ ಮತ್ತು ಪಶು ಸಖಿ, ಕೃಷಿ ಸಖಿ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ದೇಶದ 50 ಕೃಷಿ ವಿಜ್ಞಾನ ಕೇಂದ್ರದಲ್ಲಿ ಏಕ ಕಾಲಕ್ಕೆ ರೈತರ ಖಾತೆಗೆ 17ನೇ ಕಂತಿನ 20 ಸಾವಿರ ಕೋಟಿ ರೂ. ಹಣ ಬಿಡುಗಡೆ ಮಾಡಲಾಗುತ್ತಿದೆ.
ಈ ಪೈಕಿ ಇಂದು ಸಾಂಕೇತಿಕವಾಗಿ 1458 ಕೋಟಿ ರೈತರ ಖಾತೆಗೆ ಹಂಚಿಕೆಯಾಗಿದೆ. ಧಾರವಾಡ ಜಿಲ್ಲೆಯ 1 ಲಕ್ಷ ರೈತರಿಗೆ 20 ಕೋಟಿ, ರಾಜ್ಯದ 45 ಲಕ್ಷ ರೈತರಿಗೆ 365 ಕೋಟಿ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದರು. ಕಿಸಾನ್ ಸಮ್ಮಾನ್ ಯೋಜನೆ ರೈತರಿಗೆ ಅತ್ಯಂತ ಅನುಕೂಲವಾಗಿದ್ದು, ವರ್ಷದಲ್ಲಿ ಮೂರು ಕಂತಿನಲ್ಲಿ ರೈತರ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಜಮೆ ಮಾಡುತ್ತ ಬರಲಾಗುತ್ತಿದೆ. ಸದ್ಯ 17ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ. ರೈತರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಕಷ್ಟು ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದರು. ರೈತರ ಅಭ್ಯುದಯ ಕೇಂದ್ರ ಸರಕಾರದ ಮುಖ್ಯ ಧೈಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬ ರೈತರಿಗೆ ಯೋಜನೆಯ ಫಲ ದೊರೆಯಲಿದೆ.
ಈಗಾಗಲೇ 16 ಕಂತಿನಲ್ಲಿ 3.02 ಸಾವಿರ ಕೋಟಿ ಬಿಡಗುಡೆ ಮಾಡಲಾಗಿದೆ. ಇದರಿಂದ ಸಾಕಷ್ಟು ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಕೆ ಮಾಡಿಕೊಂಡು ತಮ್ಮ ಆದಾಯವನ್ನು ದ್ವಿಗುಣ. ಮಾಡಿಕೊಂಡಿದ್ದಾರೆ. ಅಲ್ಲದೇ ಇಂದು ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಸಖಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ರಾಜ್ಯದ ಇಬ್ಬರು ಕೃಷಿ ಮಹಿಳೆಯರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರಿಗೆ ಅಭಿನಂದನೆಗಳು ಎಂದರು. ನಂತರ ಆನ್‌ಲೈನ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ ಕಾರ್ಯಕ್ರಮವನ್ನು ವೀಕ್ಷಿಸಿದರು.
ಡಾ. ಎಸ್.ಎಸ್. ಅಂಗಡಿ ಉಪಸ್ಥಿತರಿದ್ದರು. ಕಳೆದ ವರ್ಷದ ಬೆಳೆ ಹಾನಿ ಪರಿಹಾರ ಇನ್ನು ಅರ್ಧ ಜನ ರೈತರಿಗೆ ತಲುಪಿಯೇ ಇಲ್ಲ.ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವರಾಗಿ ಮಾಡಿಕೊಡಬೇಕು ಎಂದು ರೈತ ಮುಖಂಡ ಮಲ್ಲಿಕಾರ್ಜುನಗೌಡ ಬಾಳನಗೌಡರ ಸಭೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಸಚಿವ ಕುಮಾರಸ್ವಾಮಿ ಖಂಡಿತವಾಗಿಯೂ ರಾಜ್ಯದ ರೈತರ ಹಿತ ಕಾಯುವ ಕೆಲಸ ಮಾಡುತ್ತೇನೆ ಎಂದರು.
ಮಹಿಳಾ ಸಬಲೀಕರಣಕ್ಕೆ ಉದ್ಯೋಗ ಖಾತ್ರಿ ಬಲ, ಸ್ತ್ರೀಯರ ಸ್ವಾವಲಂಬಿ ಜೀವನಕ್ಕೆ ನೆರವನೇರವಾಗಿ ಬ್ಯಾಂಕ್ ಖಾತೆಗೆ ಜಮೆ
ಲಕ್ಷೇಶ್ವರ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುವ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಶೇಕಡಾ 50.15ಕ್ಕೆ ಹೆಚ್ಚಿಸುವಲ್ಲಿ ಲಕ್ಷೇಶ್ವರ ತಾಲೂಕು ಪಂಚಾಯತಿ ಯಶಸ್ವಿಯಾಗಿದೆ. ಮಹಿಳೆಯರಲ್ಲಿ ಸ್ವಾವಲಂಬಿ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ವತಿಯಿಂದ ಕೈಗೊಳ್ಳಲಾದ ವಿಶೇಷ ಮುತುವರ್ಜಿ ಮೆಚ್ಚುಗೆಗೆ ಪಾತ್ರವಾಗಿದೆ. ಖಾಸಗಿ ಕಾಮಗಾರಿ ಸೇರಿದಂತೆ ಇತರೆಡೆ ಮಹಿಳೆಯರು ದುಡಿದರೆ ನೀಡುವ ವೇತನದಲ್ಲಿ ತಾರತಮ್ಯವಿದೆ. ಪುರುಷರಿಗೆ ಕೊಡುವಷ್ಟು ಕೂಲಿ ಹಣವನ್ನು ಮಹಿಳಾ ಕಾರ್ಮಿಕರಿಗೆ ನೀಡುವುದಿಲ್ಲ.ಆದರೆ, ನರೇಗಾದಡಿ ಸಮಾನ ಕೂಲಿ ನಿಯಮವಿದೆ. ಹೀಗಿದ್ದರೂ ನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಕಡಿಮೆ. ಇದನ್ನು ಮನಗಂಡ ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಅವರು, ಮಹಿಳೆಯರಿಗೆ ಹೆಚ್ಚು ಹೆಚ್ಚು ಉದ್ಯೋಗ ಖಾತ್ರಿ ಕೆಲಸದಲ್ಲಿ ತೊಡಗಿಸಲು ಎಲ್ಲ ಪಿಡಿಒ ಮತ್ತು ಪಂಚಾಯತಿ ಸಿಬ್ಬಂದಿಗೆ ನಿರ್ದೇಶನ ನೀಡಿದ ಪರಿಣಾಮ ತಾಲೂಕಿನಲ್ಲಿ ಮಹಿಳಾ ಕೆಲಸಗಾರರ ಪ್ರಮಾಣ ಹೆಚ್ಚಿದೆ.ನರೇಗಾ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಗ್ರಾಮಾಭಿವೃದ್ಧಿ ಹಾಗೂ ಹಣವಾಗಿ 349 ರೂ.ಗಳನ್ನು ನೀಡಲಾಗುತ್ತಿದೆ. ಸಮಾನ ವೇತನ ನೀತಿ, ನೆರವಾಗಿ ಬ್ಯಾಂಕ್ ಖಾತೆಗೆ ಹಣ ಸಂದಾಯ ಇದ್ದರೂ ಯೋಜನೆಯ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಕಡಿಮೆ ಇತ್ತು. ಪುರುಷರ ಕಾರ್ಮಿಕರಿಗೆ ಹೋಲಿಕೆ ಮಾಡಿದರೆ ಮಹಿಳೆಯರ ಪಾಲ್ಗೊಳ್ಳುವಿಕೆ ಶೇ. 46-47ರಷ್ಟು ಮಾತ್ರ ಇತ್ತು. ಉದ್ಯೋಗ ಖಾತ್ರಿಯತ್ತ ಮಹಿಳೆಯರನ್ನು ಸೆಳೆಯುವ ತಾ.ಪಂ. ಉದ್ದೇಶ ಸಾಕಾರವಾಗಿದೆ.ಸ್ವಸಹಾಯ ಗುಂಪುಗಳ ನೆರವು: ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಗಣಕಯಂತ್ರ ನಿರ್ವಾಹಕರು, ಗ್ರಾಮ ಕಾಯಕ ಮಿತ್ರರು ಒಟ್ಟುಗೂಡಿ ಗ್ರಾಮಗಳಲ್ಲಿಯ ಮಹಿಳಾ ಸ್ವಸಹಾಯ ಗುಂಪುಗಳ ಸಹಯೋಗದಲ್ಲಿ ಸಭೆ ಜರುಗಿಸಿ, ಉದ್ಯೋಗ ಖಾತ್ರಿಯ ಖಾಸಗಿ ಕಾಮಗಾರಿಗಳಲ್ಲಿ ದುಡಿಯುವ ಮಹಿಳೆಯರಿಗೆ ಈ ಭಾಗದಲ್ಲಿ ಪುರುಷರಿಗೆ ನೀಡುವಷ್ಟು ಕೂಲಿ ನೀಡಲಾಗುವುದಿಲ್ಲ. ಆದರೆ, ನರೇಗಾದಡಿ ದುಡಿದರೆ ಸಮಾನ ವೇತನ ಸಿಗಲಿದೆ. ಆದರೂ ಹೆಚ್ಚು ಮಹಿಳೆಯರು ನರೇಗಾದಡಿ ದುಡಿಯಲು ಮುಂದೆ ಬರುತ್ತಿರಲಿಲ್ಲ. ಹಾಗಾಗಿ ಅವರಲ್ಲಿ ಯೋಜನೆ ಬಗ್ಗೆ ಅರಿವು ಮೂಡಿಸಿ. ಇತ್ತ ಸೆಳೆಯಲು ಯಶಸ್ವಿಯಾಗಿದ್ದೇವೆ. ವೈಯಕ್ತಿಕ ಕಾಮಗಾರಿಗಳಲ್ಲಿ ಹೆಚ್ಚು ಮಹಿಳೆಯರನ್ನು ತೊಡಗಿಸಲು ಕ್ರಮಕೈಗೊಳ್ಳಲಾಗುವುದು.