ಮೊದಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. https://pmkisan.gov.in/Rpt_BeneficiaryStatus_pub.aspx
ಆಮೇಲೆ ಎಲ್ಲಿ ನೀವು BENIFICIARY LIST ನಲ್ಲಿ State, District, Sub-District, Block, Village select ಮಾಡಿ Get Report ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ. ಆಗ ನಿಮ್ಮ ಮುಂದೆ ಒಂದು ಲಿಸ್ಟ್ ಬರುತ್ತದೆ ಅದರಲ್ಲಿ ನಿಮ್ ಹೆಸರು ಇದೆಯಾ ಎಂದು ಚೆಕ್ ಮಾಡಿ.
ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮಾರಾಟ, ಹೆಚ್ಚುವರಿ ಬೀಜ ಮಾರಾಟ ಕೇಂದ್ರಗಳು
ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಜಂಟಿ ಕೃಷಿ ನಿರ್ದೇಶಕ ಮನವಿ
*🌱 Crop insurance, ಬೆಳೆ ವಿಮೆ ಅರ್ಜಿ ಸಲ್ಲಿಕೆ*
ಪ್ರವಾಹ ಬಗ್ಗೆ ನಿರಂತರ ನಿಗಾ, ಮುನ್ನಚ್ಚರಿಕೆ ಕ್ರಮಕ್ಕೆ ಡಿಸಿ ಸೂಚನೆ
ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭಗೊಂಡಿದ್ದು, ಪ್ರವಾಹ ಉಂಟಾಗುವ ಸಾದ್ಯತೆ ಕಂಡುಬದಲ್ಲಿ ಪ್ರವಾಹದ ಬಗ್ಗೆ ನಿರಂತರ ನಿಗಾವಹಿಸುವದರ ಜೊತೆಗೆ ಎಲ್ಲ ರೀತಿಯ ಮುನ್ನಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿಯೊಂದು ಇಲಾಖೆಗಳು ಪ್ರವಾಹ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ತಾಲೂಕಾವಾರು ನೋಡಲ್ ಅಧಿಕಾರಿಗಳನ್ನು ನೇಮಿಸಿ, ಪ್ರವಾಹ ಬಾದಿತ ಗ್ರಾಮಗಳಲ್ಲಿ ಹವಾಮಾನದ ಮುನ್ನಚ್ಚರಿಕೆ ಕ್ರಮ, ಚರಂಡಿ ಸ್ವಚ್ಛತೆ ಕೈಗೊಂಡು ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು.
ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ. ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ತಾಲೂಕಾವಾರು ಶಿಥಿಲಾವಸ್ಥೆಯಲ್ಲಿರುವ ಶಾಲಾ-ಕಾಲೇಜು ಹಾಗೂ ವಸತಿ ನಿಲಯಗಳಲ್ಲಿ ಗುರುತಿಸದ ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು ಇರುವ ಬಗ್ಗೆ ಮಾಹಿತಿ ನೀಡಬೇಕು. ಅದೇ ರೀತಿಯ ಒಟ್ಟು ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಇರುವ ಸ್ವಂತ ಕಟ್ಟ ಹಾಗೂ ಬಾಡಿಗೆ ಕಟ್ಟಡಗಳ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೆ ಶೆಡ್‌ಗಳಲ್ಲಿ ಅಂಗನವಾಡಿ ನಡೆಸಬಾರದೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮುಂಗಾರು ಮಳೆ ಮತ್ತು ವಿಪತ್ತು ನಿರ್ವಹಣೆಯ ತುರ್ತು ಸಂದರ್ಭದಲ್ಲಿ ವಿವಿಧ ಸಮಸ್ಯೆಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಕರೆ ಮಾಡಬಹುದಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ (1077), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಹಾಯವಾಣಿ (112), ಹೆಸ್ಕಾಂ ಸಹಾಯವಾಣಿ (1912), ಅಗ್ನಿಶಾಮಕ ದಳ ಸಹಾಯವಾಣಿ (101), ಅರಣ್ಯ ಇಲಾಖೆ ಸಹಾಯವಾಣಿ (1926) ಗೆ ಕರೆ ಮಾಡಬಹುದಾಗಿದೆ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಕಳ್ಳೇನ್ನವರ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟೆ, ಲೋಕೋಪಯೋಗಿ ಇಲಾಖೆಯ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರ ರಾಜಶೇಖರ ಕಡಿವಾಲರ, ನಗರಸಭೆ ಪೌರಾಯುಕ್ತ ವಾಸಣ್ಣ ಆರ್. ತಹಶೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಆಯಾ ತಾಲೂಕಿನ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು.
ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ, ಕಂದಾಯ, ಪಂಚಾಯತ ರಾಜ್ ಇಲಾಖೆ ಅಧಿಕಾರಿಗಳು ಮುಂಜಾಗ್ರತೆವಹಿಸಬೇಕು
ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಅಂತಹ ಕೀಟಜನ್ಯ ರೋಗಗಳು ಹೆಚ್ಚಳವಾಗದಂತೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸಾರ್ವಜನಿಕ ತಿಳುವಳಿಕೆ ಹಾಗೂ ಸಮೀಕ್ಷಾ ಕಾರ್ಯಗಳನ್ನು ಅಭಿಯಾನ ಮಾದರಿಯಲ್ಲಿ ಹಮ್ಮಿಕೊಳ್ಳಬೇಕು. ಮುಂದಿನ 15 ದಿನಗಳಲ್ಲಿ ಡೆಂಗ್ಯೂ ಶಂಕಿತ ಪ್ರಕರಣಗಳು ಕಡಿಮೆ ಆಗಿ, ಜ್ವರಪೀಡಿತರ ಸಂಖ್ಯೆ ಇಳಿಮುಖವಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಪಬ್ಲಿಕ್ ನೆಗ್ಲಿಜೆನಸ್ಸಿ ಕೆಳಗೆ ಕ್ರಿಮಿನಲ್ ಕೆಸ್ ದಾಖಲಿಸುವದಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾ ಆರೋಗ್ಯ ಅಧಿಕಾರಿ ಪ್ರತಿ ದಿನ ಡೆಂಗ್ಯೂ ಪ್ರಕರಣಗಳ ಕುರಿತು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಂದ ಮಾಹಿತಿ ಸಂಗ್ರಹಿಸಿ, ಜಿಲ್ಲಾಡಳಿತಕ್ಕೆ ಕಳುಹಿಸಬೇಕು. ಜಿಲ್ಲೆಯ ಗ್ರಾಮ ಪಂಚಾಯತವಾರು ಹಮ್ಮಿಕೊಳ್ಳುವ ಐಇಸಿ ಕಾರ್ಯಕ್ರಮಗಳ ಕುರಿತು ಪಟ್ಟಿ ತಯಾರಿಸಿ, ಸಲ್ಲಿಸಬೇಕು. ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಮತ್ತು ಕೀಟಜನ್ಯ ರೋಗಗಳ ನಿಯಂತ್ರಣದಲ್ಲಿ ಆರೋಗ್ಯ, ಕಂದಾಯ, ಪಂಚಾಯತ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಜಂಟಿಯಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು. ವಾರದಲ್ಲಿ ಎರಡು ದಿನ ಡೈ ಡೆ ಮಾಡಿ: ಕೀಟಜನ್ಯ ರೋಗಗಳಾದ ಡೆಂಗ್ಯೂ, ಚಿಕಗುನ್ಯಾ ಪ್ರಕರಣಗಳ ನಿಯಂತ್ರಣದಲ್ಲಿ ಡೈ ಡೆ ಮಾಡುವುದು ಮುಖ್ಯವಾಗಿದೆ.
ಗ್ರಾಮದ ನೀರು ಸರಬರಾಜು ವೇಳೆಯನ್ನು ತಿಳಿದುಕೊಂಡು, ನೀರು ಸರಬರಾಜು ಆಗುವ 12 ಗಂಟೆ ಮೊದಲು ನೀರು ಸಂಗ್ರಹಿಸುವ ಪರಿಕರಗಳನ್ನು ಚನ್ನಾಗಿ ತೊಳೆದು, ಒಣ ಅರಿವೆಯಿಂದ ಒರಸಿ ಇಡಬೇಕು. 12 ತಾಸುಗಳ ನಂತರ ನೀರು ಬಂದ ಮೇಲೆ ಮತ್ತೇ ಅವುಗಳಲ್ಲಿ ನೀರು ತುಂಬಬೇಕು. ಅರ್ಧ ಬಳಸಿ, ಉಳಿದ ನೀರಿನಲ್ಲಿ ಮತ್ತೇ ನೀರು ತುಂಬಬಾರದು. ಮನೆ ಸುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಮನೆಯ ಸುತ್ತ ಯಾವುದೇ ರೀತಿಯ ತ್ಯಾಜ್ಯ ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ವಿಶೇಷವಾಗಿ ಪ್ಲಾಸ್ಟಿಕ ಬಾಟಲ್, ಟೈಯರ್ ಮುಂತಾದವುಗಳ ಬಗ್ಗೆ ಜಾಗೃತಿ ವಹಿಸಬೇಕು. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಅವರು ತಿಳಿಸಿದರು.
ಮುಮ್ಮಿಗಟ್ಟಿ ಮನೆಮನೆ ಸಮೀಕ್ಷೆ: ಧಾರವಾಡ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತ್ತು ಅವಳಿ ನಗರದ ಕೆಲವು ಶಹರ ಪ್ರದೇಶಗಳಲ್ಲಿ ಜ್ವರ ಪೀಡಿತರಿಂದಾಗಿ ಡೆಂಗ್ಯೂ ಶಂಕಿತರ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಅಧಿಕಾರಿಗಳು ಹೆಚ್ಚು ಮುಂಜಾಗ್ರತೆವಹಿಸಿ, ನಿಯಂತ್ರಣಕ್ಕೆ ಕ್ರಮವಹಿಸಬೇಕು. ಕಳೆದ ಜನವರಿಯಿಂದ ಜಿಲ್ಲೆಯಲ್ಲಿ 150 ಪಾಜಿಟಿವ್ ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಎಲ್ಲರಿಗೂ ಸಕಾಲದಲ್ಲಿ ಚಿಕಿತ್ಸೆ ನೀಡಿ, ಗುಣಮುಖರಾಗಿರುತ್ತಾರೆ. ಮುಮ್ಮಿಗಟ್ಟಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸುಮಾರು 8 ಡೆಂಗ್ಯೂ ಶಂಕಿತ ಪ್ರಕರಣಗಳು ಕಂಡುಬಂದಿದ್ದು, ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿವೆ. ಒಂದು ಪ್ರಕರಣದಲ್ಲಿ ನಾಲ್ಕು ವರ್ಷದ ಹೆಣ್ಣುಮಗು ಡೆಂಗ್ಯೂ ಶಂಕಿತ ಕಾಯಿಲೆಯಿಂದ ಜೂ. 11 ರಂದು ಮರಣ ಹೊಂದಿದ್ದು, ಈ ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ ಅವರು ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್. ಮುಗನೂರಮಠ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಆರ್.ಸಿ.ಎಚ್.ಓ ಅಧಿಕಾರಿ ಡಾ.ಸುಜಾತಾ ಹಸವಿಮಠ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಪರುಶರಾಮ ಎಫ್.ಕೆ.. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಬಿ., ತಹಸಿಲ್ದಾರಗಳಾದ ಬಸವರಾಜ ಬೆಣ್ಣಿಶಿರೂರ, ಪ್ರಕಾಶ ನಾಶಿ, ಸುಧೀರ ಸಾಹುಕಾರ, ಯಲ್ಲಪ್ಪ ಗೊಣೆನ್ನವರ, ಡಾ.ಡಿ.ಎಚ್.ಹೂಗಾರ, ಮಲೇರಿಯಾ ಕಾರ್ಯಕ್ರಮ ಅಧಿಕಾರಿ ಡಾ.ಮಂಜುನಾಥ ಸೊಪ್ಪಿಮಠ, ದಾರವಾಡ ತಾಲೂಕು ಪಂಚಾಯತ ಇಓ ಗಂಗಾಧರ ಕಂದಕೂರ ಸೇರಿದಂತೆ ಎಲ್ಲ ತಾಲೂಕು ಪಂಚಾಯತ ಇಓಗಳು, ಡಾ.ತನುಜಾ ಕೆ.ಎನ್.. ಸೇರಿದಂತೆ ಎಲ್ಲ ತಾಲೂಕು ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ವಿವಿಧ ಕಾರ್ಯಕ್ರಮ ಅಧಿಕಾರಿಗಳು, ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿಗಳು, ಪುರಸಭೆ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.