ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/Rpt_BeneficiaryStatus_pub.aspx
ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಗ್ರಾಮ ಸೆಲೆಕ್ಟ್ ಮಾಡಿ get report ಮೇಲೆ ಕ್ಲಿಕ್ ಮಾಡಿ.
ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬೆಳಗಾವಿ : ಪ್ರಸ್ತಕ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತರಕಾರಿ ಪ್ರದೇಶ ವಿಸ್ತರಣೆ, ವಿವಿಧ ಹಣ್ಣಿನ ಬೆಳೆಗಳ ಪ್ರದೇಶ ವಿಸ್ತರಣೆ, ಪ್ಲಾಸ್ಟಿಕ್ ಹೊದಿಕೆ, ನೀರು ಸಂಗ್ರಹಣಾ ಘಟಕಗಳು, ಸಮಗ್ರ ರೋಗ, ಕೀಟ ನಿಯಂತ್ರಣ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರು ಸಂಗ್ರಹಣಾ ಘಟಕ, ಫಾರ್ಮ್ ಗೇಟ್, ಹಣ್ಣಿನ ಗಿಡಗಳ ಮೇಲಾವರಣ, ಮೋಹಕ ಕೀಟ ಬಲೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಯಂತ್ರೋಪಕರಣಗಳ ಉಪ ಅಭಿಯಾನದಡಿ ಯಂತ್ರೋಪಕಣಗಳಿಗೆ ಸಹಾಯಧನವನ್ನು ಪಡೆಯಲು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಹೊಸ ಹಣ್ಣಿನ ತೋಟಗಳ ವಿಸ್ತರಣೆ ಮತ್ತು ಇತರೆ ಘಟಕಗಳಡಿ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಥಣಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಆಥಣಿ ಪ್ರಕಟಣೆಯಲ್ಲಿ ತಿಳಿಸಿದೆ.
ಮೀನುಗಾರಿಕೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕುಷ್ಟಗಿ ಮೀನುಗಾರಿಕೆ ಇಲಾಖೆಯಿಂದ 2024-25ನೇ ಸಾಲಿನ ವಿವಿಧ ಕಾರ್ಯಕ್ರಮದಡಿ ಮೀನುಗಾರಿಕೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೀನುಗಾರಿಕೆ ಇಲಾಖೆಯ ಜಿಲ್ಲಾ ವಲಯ ಯೋಜನೆ, ರಾಜ್ಯ ವಲಯ ಹಾಗೂ ಕೇಂದ್ರ ವಲಯ ಯೋಜನೆಗಳಾದ ಮೀನುಗಾರರಿಗೆ ಸಲಕರಣೆ ಕಿಟ್ಟುಗಳ ಖರೀದಿಗೆ ಸಹಾಯಧನ, ಮೀನುಮರಿ ಖರೀದಿಗೆ ಸಹಾಯಧನ, ಕೆರೆಯ ಹಂಚಿನಲ್ಲಿ ಮೀನುಮರಿ ಪಾಲನಾ ಕೊಳ ನಿರ್ಮಾಣಕ್ಕೆ ಸಹಾಯಧನ ಪ್ರಧಾನ ಮಂತ್ರಿ ಮತ್ರ್ಯಸಂಪದ ಯೋಜನೆ (ಪ.ಜಾತಿ, ಪ.ಪಂಗಡ ಮತ್ತು ಸಾಮನ್ಯ ವರ್ಗ) ಮೀನುಕೊಳ ನಿರ್ಮಾಣಕ್ಕೆ ಸಹಾಯಧನ (ಪ. ಜಾತಿ, ಪ.ಪಂಗಡ ಮತ್ತು ಸಾಮನ್ಯ ವರ್ಗ) ಮತ್ತು ಮತ್ಯವಾಹಿನಿ ಯೋಜನೆಗಳಡಿ ಕುಷ್ಟಗಿ ನೋಂದಾಯಿತ ಮೀನುಗಾರಿಕೆ ಸಹಕಾರ ಸಂಘಗಳಲ್ಲಿನ ಮೀನುಗಾರರ ಫಲಾನುಭವಿಗಳಿಗೆ ಮೊದಲ ಆದ್ಯತೆ ಷರತ್ತಿಗೊಳಪಟ್ಟು ಒಳನಾಡು ಮೀನುಗಾರರು, ಮೀನುಕೃಷಿಕರಿಗೆ ಸಹಾಯಧನ ಸೌಲಭ್ಯ ದೊರೆಯಲಿದೆ.
ಕುಷ್ಟಗಿ ತಾಲ್ಲೂಕಿನ ಆಸಕ್ತ ಮೀನುಗಾರರು ಮತ್ತು ಸಾರ್ವಜನಿಕರು ಆಗಸ್ಟ್ 30ರೊಳಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಕುಷ್ಟಗಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಗೆ ಸಂಪರ್ಕಿಸಬಹುದು ಎಂದು ಕುಷ್ಟಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಂಗಾವತಿ, ಕಾರಟಗಿ, ಕನಕಗಿರಿ ಮೀನುಗಾರಿಕೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ : ಗಂಗಾವತಿ ಮೀನುಗಾರಿಕೆ ಇಲಾಖೆಯಿಂದ 2024- 25ನೇ ಸಾಲಿನ ವಿವಿಧ ಕಾರ್ಯಕ್ರಮದಡಿ ಮೀನುಗಾರಿಕೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೀನುಗಾರಿಕೆ ಇಲಾಖೆಯ ಜಿಲ್ಲಾ ವಲಯ ಯೋಜನೆ, ರಾಜ್ಯ ವಲಯ ಹಾಗೂ ಕೇಂದ್ರ ವಲಯ ಯೋಜನೆಗಳಾದ ಮೀನುಗಾರರಿಗೆ ಸಲಕರಣೆ ಕಿಟ್ಟುಗಳ ಖರೀದಿಗೆ ಸಹಾಯಧನ, ಮೀನುಮರಿ ಖರೀದಿಗೆ ಸಹಾಯಧನ, ಕೆರೆಯ ಹಂಚಿನಲ್ಲಿ ಮೀನುಮರಿ ಪಾಲನಾ ಕೊಳ ನಿರ್ಮಾಣಕ್ಕೆ ಸಹಾಯಧನ ಪ್ರಧಾನ ಮಂತ್ರಿ ಮತ್ಯಸಂಪದ ಯೋಜನೆ (ಪ.ಜಾತಿ, ಪ.ಪಂಗಡ ಮತ್ತು ಸಾಮನ್ಯ ವರ್ಗ) ಮೀನುಕೊಳ ನಿರ್ಮಾಣಕ್ಕೆ ಸಹಾಯಧನ (ಪ. ಜಾತಿ, ಪ.ಪಂಗಡ ಮತ್ತು ಸಾಮನ್ಯ ವರ್ಗ) ಮತ್ತು ಮತ್ಯವಾಹಿನಿ ಯೋಜನೆಗಳಡಿ ಗಂಗಾವತಿ ನೋಂದಾಯಿತ ಮೀನುಗಾರಿಕೆ ಸಹಕಾರ ಸಂಘಗಳಲ್ಲಿನ ಮೀನುಗಾರರ ಫಲಾನುಭವಿಗಳಿಗೆ ಮೊದಲ ಆದ್ಯತೆ ಷರತ್ತಿಗೊಳಪಟ್ಟು ಒಳನಾಡು ಮೀನುಗಾರರು, ಮೀನುಕೃಷಿಕರಿಗೆ ಸಹಾಯಧನ ಸೌಲಭ್ಯ ದೊರೆಯಲಿದೆ.
ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲ್ಲೂಕಿನ ಆಸಕ್ತ ಮೀನುಗಾರರು ಮತ್ತು ಸಾರ್ವಜನಿಕರು ಆಗಸ್ಟ್ 30ರೊಳಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಗಂಗಾವತಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಗೆ ಸಂಪರ್ಕಿಸಬಹುದು ಎಂದು ಕುಷ್ಟಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ, ಅರ್ಜಿ ಆಹ್ವಾನ
ಗದಗ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಬ್ಬ ಜನಾಂಗದವರಿಗೆ ನಿಗಮದಿಂದ ಎನ್‌ಎಂಡಿಎಫ್‌ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದೇಶಿ ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿಗೆ ಎನ್‌ಎಡಿಎಫ್‌ಸಿ ಮಾದರಿಯಲ್ಲಿ ಭಾರತ ದೇಶದ ಪ್ರತಿಷ್ಠಿತ ಐಐಟಿ, ಐಐಎಂಎಸ್, ಐಎಸ್‌ಸಿ, ಸಂಸ್ಥೆಗಳಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ( ಓವರ್ ಸೀಸ್ ಎಜ್ಯುಕೇಷನ್) ಸಾಲ ಯೋಜನೆಯಡಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ವೆಬ್‌ಸೈಟ್ https://kmdconline.karnataka.gov.in ಅರ್ಜಿ ಸಲ್ಲಿಸಲು ಅಗಸ್ಟ 31 ಕೊನೆಯ ದಿನವಾಗಿರುತ್ತದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿನಿಗಮ, ನಿಯಮಿತ ಮೌಲಾನಾ ಆಜಾದ ಅಲ್ಪಸಂಖ್ಯಾತರ ಭವನ 1 ನೇ ಮಹಡಿ ಜಿಲ್ಲಾ ನ್ಯಾಯಾಲಯದ ಎದುರುಗಡೆ, ಹುಬ್ಬಳ್ಳಿ ರಸ್ತೆ, ಗದಗ ಈ ಕಚೇರಿಗೆ ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08372-295147 ಸಂಪರ್ಕಿಸಬಹುದಾಗಿದೆ.
ನಿರುದ್ಯೋಗಿ ಪುರುಷ ಮತ್ತು ಮಹಿಳೆಯರಿಗೆ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಅರ್ಜಿ ಆಹ್ವಾನ
ಕಂಕಣವಾಡಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿರುವ ವಾಸಿಸುವ ಬಡತನ ರೇಖೆಗಿಂತ ಕೆಳಗಿರುವ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರಿಗೆ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ನಗರ ಸ್ವಯಂ ಉದ್ಯೋಗ, ನಗರ ಗುಂಪು ಉದ್ಯೋಗ, ಸ್ವ-ಸಹಾಯ ಗುಂಪುಗಳ ರಚನೆ, ಪ್ರದೇಶ ಮಟ್ಟದ ಒಕ್ಕೂಟ ರಚನೆ ಹಾಗೂ ಸ್ವ-ಸಹಾಯ ಗುಂಪುಗಳಿಗೆ ಕ್ರೆಡಿಟ್ ಲಿಂಕೇಜ್ ಸೌಲಭ್ಯಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 10 ರೊಳಗಾಗಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪಟ್ಟಣ ಪಂಚಾಯತ ಕಂಕಣವಾಡಿ ಕಾರ್ಯಾಲಯದ ಡೇ-ನಲ್ಡ್ ಶಾಖೆಗೆ ಸಂಪರ್ಕಿಸಬುದು ಎಂದು ಕಂಕಣವಾಡಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭತ್ತದ ನಾಟಿಗೆ ಜಿಲ್ಲಾಧಿಕಾರಿ ಚಾಲನೆ
ಮುಂಗಾರು ಹಂಗಾಮಿಗೆ ಭತ್ತದ ನಾಟಿಗೆ ಕೂಲಿಕಾರರ ಸಮಸ್ಯೆ ತಲೆದೋರಿದ್ದು. ಪರ್ಯಾಯ ಮಾರ್ಗದ ಅನಿವಾರ್ಯತೆ ಅವಶ್ಯಕವಾಗಿದೆ. ಕೃಷಿ ಚಟುವಟಿಕೆಗಳಲ್ಲಿ ಯಂತ್ರಗಳ ಮೊರೆ ಹೋಗಬೇಕಿರುವ ಅನಿವಾರ್ಯತೆ ಎದುರಾಗಿದ್ದು, ಯಾಂತ್ರೀಕರಣದ ಮೂಲಕ ಭತ್ತದ ಬಿತ್ತನೆಗೆ ರೈತರು ಮುಂದಾಗಬೇಕು’ ಎಂದು ಜಿಲ್ಲಾಧಿಕಾರಿ ನಲೀನ್ ಆತುಲ್ ಹೇಳಿದರು. ತಾಲ್ಲೂಕಿನ ಸಿದ್ದಾಪುರದಲ್ಲಿ ನಡೆದ ಜನ ಸ್ಪಂದನ ಕಾರ್ಯಕ್ರಮದ ಬಳಿಕ ಗ್ರಾಮದ ತಾಪಂ ಮಾಜಿ ಸದಸ್ಯ ನೀರಗಂಟಿ ಬಸವರಾಜರ ಜಮೀನಿನಲ್ಲಿ ಭತ್ತ ನಾಟಿ ಮಾಡುವ ಟ್ರ್ಯಾಕ್ಟರ್ ಚಲಾಯಿಸಿ ಚಾಲನೆ ನೀಡಿದರು.
ಆಧುನಿಕ ತಂತ್ರಜ್ಞಾನವನ್ನು ಕೃಷಿಯಲ್ಲಿ ಅಳವಡಿಸಿಕೊಳ್ಳಲು ಕೃಷಿ ಇಲಾಖೆ, ಕೃಷಿ ಸಂಶೋಧನಾ ಕೇಂದ್ರಗಳಿಗೆ ಭೇಟಿ ನೀಡಿ ಸದುಪಯೋಗ ಪಡೆದುಕೊಳ್ಳುವಂತೆ ರೈತರಿಗೆ ಸಲಹೆ ನೀಡಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಮಾತನಾಡಿ, ‘ಯಾಂತ್ರಿಕೃತ ನಾಟ ಪದ್ಧತಿಯಲ್ಲಿ ಚಾಪೆ ಮಡಿ ಪದ್ಧತಿಯಲ್ಲಿ ಬೆಳೆದ ಸಸಿಗಳನ್ನು ಈ ಯಂತ್ರದಿಂದ 8 ತಾಸಿನಲ್ಲಿ 8 ಎಕರೆ ಪ್ರದೇಶವನ್ನು ಏಕಕಾಲಕ್ಕೆ ನಾಟಿ ಮಾಡಬಹುದು. ಕೃಷಿ ಮತ್ತು ಕೃಷಿ ವಿಜ್ಞಾನ ಕೇಂದ್ರದ ಸಲಹೆ ಪಡೆದು ಹೆಚ್ಚಿನ ರೈತರು ಈ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಕೂಲಿಕಾರರ ಸಮಸ್ಯೆ ನೀಗಿಸಿಕೊಳ್ಳಬಹುದು. ಮಣ್ಣಿನ ಗುಣಕ್ಕೆ ತಕ್ಕಂತೆ ಸಸಿಗಳ ನಡುವಿನ ಅಂತರ ಮತ್ತು ನಾಟಿ ಮಾಡುವ ಆಳವನ್ನು ಹೊಂದಾಣಿಕೆ ಮಾಡಲು ಅವಕಾಶವಿದೆ. 16ರಿಂದ 18 ದಿನದ ಸಸಿಗಳು ನಾಟಿಗೆ ಸೂಕ್ತ ಮತ್ತು ಶೇ 15ರಿಂದ 20ರಷ್ಟು ಇಳುವರಿ ಹೆಚ್ಚಾಗುವ ಸಾಧ್ಯತೆ ಇದೆ.
2024-25 ಹಂಗಾಮಿನಲ್ಲಿ ಸಿದ್ದಾಪುರ ಹೋಬಳಿಯಲ್ಲಿ 15 ಸಾವಿರ ಹೆಕ್ಟೇರ್ ಪ್ರದೇಶಲ್ಲಿ ಭತ್ತದ ನಾಟಿ ಕಾರ್ಯ ಪ್ರಾರಂಭವಾಗಿದೆ. ಯಾಂತ್ರಿಕೃತ ನಾಟಿ ಪದ್ಧತಿ ಉತ್ತೇಜಿಸಲು ಕೃಷಿ ಇಲಾಖೆ ವಿವಿಧ ರೈತರ ಗದ್ದೆಗಳಲ್ಲಿ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳುತ್ತಿದ್ದು, 5 ಸಾವಿರ ಎಕರೆ ಪ್ರದೇಶದಲ್ಲಿ ಯಾಂತ್ರಿಕೃತ ಭತ್ತದ ನಾಟಿ ಗುರಿ ಹೊಂದಲಾಗಿದೆ’ ಎಂದರು. ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ರಾಘವೇಂದ್ರ ಎಲಿಗಾರ, ತಹಶೀಲ್ದಾರ್ ಎಂ.ಕುಮಾರಸ್ವಾಮಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಪಟ್ಟದಕಲ್, ಸಿಬ್ಬಂದಿ ನಿಂಗಪ್ಪ, ಮಾರುತಿ, ನಾಗರಾಜ, ಮೇಘಶ್ರೀ ಹಾಜರಿದ್ದರು.
ಬೆಳಗಾವಿ ಜಿಲ್ಲೆಯ ಅಪರ ಸರ್ಕಾರಿ ವಕೀಲರ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಬೆಳಗಾವಿ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ ಭರ್ತಿಗಾಗಿ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ವಕೀಲರು, ತಮ್ಮ ಹೆಸರು, ವಿದ್ಯಾರ್ಹತೆ, ಜಾತಿ, ವಯಸ್ಸು ಅನುಭವ ಮುಂತಾದ ವೈಯಕ್ತಿಕ ಪೂರ್ಣ ವಿವರಗಳೊಂದಿಗೆ ಅವಶ್ಯಕ ದೃಢೀಕರಣ ನಕಲುಗಳನ್ನು ಲಗತ್ತಿಸಿ ಆಗಸ್ಟ್ 14, 2024 ರೊಳಗಾಗಿ ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆಡಳಿತ ಶಾಖೆಗೆ ಸಲ್ಲಿಸಲು ಕೋರಲಾಗಿದೆ. ನಿಗದಿತ ಅವಧಿಯ ನಂತರ ಸ್ವೀಕೃತವಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-3ಬಿ) ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ಶೈಕ್ಷಣಿಕ ಸಾಲ ಯೋಜನೆ, ಜವಜಲ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರ ?ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಗಸ್ಟ 31 ಕೊನೆಯ ದಿನವಾಗಿದೆ. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂಸಹ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ, 2023-24 ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಆದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ 08022865522/ 9900012351 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ.
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ
ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ ಗದಗ (ಕರ್ನಾಟಕ ವಾರ್ತೆ) ಅಗಸ್ಟ 8: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2024- 25ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಗಸ್ಟ 30 ಕೊನೆಯ ದಿನವಾಗಿದ್ದು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಫಲಾನುಭವಿಯು ಒಂದು ಬಾರಿ ಸಾಲ ಪಡೆದು, ಪಡೆದ ಸಾಲವನ್ನು ನಿಗದಿತ ಅವಧಿಯೊಳಗೆ ಸಂಪೂರ್ಣವಾಗಿ ಮರು ಪಾವತಿಸಿದಲ್ಲಿ ಅಂತಹ ಫಲಾನುಭವಿಗಳಿಗೆ ಒಂದು ಬಾರಿಗೆ ಮಾತ್ರ ದುಪ್ಪಟ್ಟು ಸಾಲವನ್ನು ಗರಿಷ್ಠ ರೂ.2.00 ಲಕ್ಷಗಳವರೆಗೆ ಯಾವುದೇ ಸಹಾಯಧನವಿಲ್ಲದೇ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ನೀಡಲಾಗುವುದು.
ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಗ್ರಾಮ ಸೆಲೆಕ್ಟ್ ಮಾಡಿ get report ಮೇಲೆ ಕ್ಲಿಕ್ ಮಾಡಿ