ಮೊದಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. https://pmkisan.gov.in/aadharekyc.aspx
ಆಮೇಲೆ ನಿಮ್ಮ ಆಧಾರ್ ಸಂಖ್ಯೆಯನ್ನು ಹಾಕಿ. ಒಂದು ವೇಳೆ ನಿಮ್ಮ EKYC ಆಗಿದ್ದಾರೆ ಕೆಳಗಿನ ಚಿತ್ರದಲ್ಲಿ ಕಾಣುವ ಹಾಗೆ ekyc already done ಎಂದು ಬರುತ್ತದೆ.
ಒಂದು ವೇಳೆ ಆಗಿರದಿದ್ದರೆ ನಿಮ್ಮ ಆಧಾರ್ ಜೋಡಣೆಗೆ ಇರುವಂತಹ ಮೊಬೈಲ್ ಸಂಖ್ಯೆಗೆ ಒಂದು ಒಟಿಪಿ ಬರುತ್ತದೆ. ಅದನ್ನು ಅಲ್ಲಿ ಹಾಕಿ EKYC ಮಾಡಿ ಹಣ ಪಡೆಯಿರಿ.
ಖುಷಿಗಾಗಿ ಕೃಷಿ ಮಾಡಿ ಯಶ ಕಂಡ ನಿವೃತ್ತ ತಹಶೀಲ್ದಾರ ಬಸಪ್ಪ
ಕಂದಾಯ ಇಲಾಖೆಯಲ್ಲಿ 35 ವರ್ಷ ತಹಶೀಲ್ದಾರರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ಬಸಪ್ಪ ಲಕ್ಷಪ್ಪ ಗೋರೆ ಅವರು ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು ಎಂಬಂತೆ ಖುಷಿಗಾಗಿ ಕೃಷಿ ಮಾಡಿ ಕೃಷಿ ಕಾಯಕದಲ್ಲಿ ತೊಡಗಿಕೊಂಡು ಯಶಸ್ಸು ಕಂಡುಕೊಂಡಿದ್ದಾರೆ. ತಾಲ್ಲೂಕಿನ ಹುಲ್ಯಾಳ ಗ್ರಾಮದ ಬರಡು ಭೂಮಿಯನ್ನು ನಿವೃತ್ತಿಯ ನಂತರ ಕಳೆದ 10 ವರ್ಷದಲ್ಲಿ 20 ಎಕರೆ ಜಮೀನಿನಲ್ಲಿ ಬಂಗಾರದ ಬೆಳೆ ಬೆಳೆಯುತ್ತಿದ್ದಾರೆ.
ನೀರಿಲ್ಲದೆ ಪರದಾಡುತ್ತಿರುವ ಜಮೀನನ್ನು ಶೇ 100ರಷ್ಟು ನೀರಾವರಿಗೊಳಪಡಿಸಿ ಸುತ್ತಲಿನ ರೈತರಿಗೆ ಮಾದರಿಯಾಗಿದ್ದಾರೆ. ಜಮೀನಿನ ನಡುವೆ ಹಾದು ಹೋಗಿರುವ ಹಳ್ಳಕ್ಕೆ ಅಡ್ಡಲಾಗಿ ಸರ್ಕಾರದ ಸಹಾಯದಿಂದ ಚೆಕ್ ಡ್ಯಾಮ್ ನಿರ್ಮಾಣ ಮಾಡಿಕೊಂಡು ನೀರು ನಿಲ್ಲುವಂತೆ ಮಾಡಿದ್ದಾರೆ. ಇದರಿಂದ ಅಂತರ್ಜಲ ಹೆಚ್ಚಾಗಿ ತಮ್ಮ ಜಮೀನಿನಲ್ಲಿರುವ ಐದು ಕೊಳವೆ ಬಾವಿಗಳಿಗೆ ನೀರು ಹೆಚ್ಚಾಗಿದೆ. ಕೊಳವೆ ಬಾವಿಯ ನೀರನ್ನು ಸಂಗ್ರಹಿಸಲು ಎರಡು ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಿಕೊಂಡು ಸಂಗ್ರಹವಾದ ನೀರನ್ನು ಬೆಳೆಗಳಿಗೆ ಬಿಡುತ್ತಾರೆ.
20 ಎಕರೆ ಜಮೀನಿನಲ್ಲಿ ಆರು ಎಕರೆ ಕಬ್ಬು, ನಾಲ್ಕು ಎಕರೆ ಸೋಯಾಬಿನ್, ನಾಲ್ಕು ಎಕರೆ ಉದ್ದು, ಎರಡು ಎಕರೆ ಸೂರ್ಯಕಾಂತಿ, ಒಂದು ಎಕರೆ ಹೆಸರು, 2.5 ಎಕರೆ ತಾಳೆ ಗಿಡ, ಬದುವಿಗೆ 70 ಟೆಂಗಿನ ಮರ, 60 ಸಾಗವಾನಿ ಮರ, ಬಾಳೆಗಿಡ, ಲಿಂಬು, ಸೀತಾಫಲ, ಪಪ್ಪಾಯಿ, ಬಿದಿರು, ಚಿಕ್ಕು ಸೇರಿದಂತೆ ವಿವಿಧ ಮಿಶ್ರ ಬೆಳೆಗಳನ್ನು ಬೆಳೆದು ವಾರ್ಷಿಕ 20 ಲಕ್ಷಕ್ಕೂ ಅಧಿಕ ಲಾಭ ಪಡೆಯುತ್ತಿದ್ದಾರೆ. ಕೃಷಿ ಜೊತೆಗೆ 10 ಎಮ್ಮೆ, ಎರಡು ಆಕಳು, ಎರಡು ಹೋರಿ, 16 ಆಡುಗಳನ್ನು ಸಣ್ಣ ವಿಎಸ್ ಟಿ ಟ್ಯಾಕ್ಟರ್ ನೆರವಿನಿಂದ ಕೃಷಿ ಕೆಲಸವನ್ನು ಮಾಡುತ್ತಿದ್ದಾರೆ. ಬೆಳೆಗಳಿಗೆ ಜೀವಾಮೃತ, ಎರೆಹುಳು ಗೊಬ್ಬರ ಬಳಸುತ್ತಾರೆ. ಅದಕ್ಕಾಗಿ ಜಿವಾಮೃತ ಘಟಕ, ಎರೆಹುಳು ಗೊಬ್ಬರ ಘಟಕ ಸ್ಥಾಪಿಸಿಕೊಂಡಿದ್ದಾರೆ. ಬಯೋಗ್ಯಾಸ ಮೂಲಕ ಮನೆಯ ಅಡುಗೆ ಮಾಡಿಕೊಳ್ಳುತ್ತಿದ್ದಾರೆ.
ಸಾವಿರ ಅಡಿ ದೂರದಲ್ಲಿ ಹಾದು ಹೋಗಿರುವ ಕಾಲುವೆಯಿಂದ ವಿದ್ಯುತ್, ಮೋಟರ್ ಇಲ್ಲದೆ ಕೃಷಿ ಹೊಂಡಗಳಿಗೆ ನೀರು ಬರುತ್ತದೆ. ನೀರು ಹೆಚ್ಚಾದಾಗ ಹಾಗೂ ಮಳೆಗಾಲದಲ್ಲಿ ಕೃಷಿ ಹೊಂಡದಿಂದ ನೇರವಾಗಿ ಕೊಳವೆ ಬಾವಿಯಲ್ಲಿ ನೀರು ಬಿಟ್ಟು ಕೊಳವೆ ಬಾವಿಗಳನ್ನು ರಿಚಾರ್ಜ್ ಮಾಡುತ್ತಿದ್ದಾರೆ. ಜಮೀನಿನ ಪ್ರತಿಯೊಂದು ಕಡೆಗೂ ಪೈಪ್‌ಲೈನ್ ಮಾಡಿ ಮಾನವ ಕೆಲಸ ಕಡಿಮೆಯಾಗುವಂತೆ ವ್ಯವಸ್ಥೆ ಮಾಡಿಕೊಂಡಿದ್ದಾರೆ.
ಕೃಷಿ ಇಲಾಖೆ : ಎಲೆಗಳು ಹಳದಿಗೆ ಸಲಹೆ
ಜಿಲ್ಲೆಯ ಸಾಲಿನ ಸತತವಾಗಿ ಆಗುತ್ತಿರುವ ಮಳೆಯಿಂದ ಭೂಮಿಯಲ್ಲಿ ಅತಿಯಾದ ತೇವಾಂಶದಿಂದಾಗಿ ಬೇರುಗಳ ಉಸಿರಾಟದಲ್ಲಿ ವ್ಯತ್ಯಯವಾಗಿ ಹಾಗೂ ಪೋಷಕಾಂಶಗಳ ಅತಿಯಾದ ಸೋರಿಕೆಯಿಂದಾಗಿ ಎಲೆಗಳು ಹಳದಿಯಾಗುವ ಲಕ್ಷಣಗಳು ಕಂಡುಬರುತ್ತವೆ. ಈ ಸಮಸ್ಯೆಯ ನಿರ್ವಹಣಾ ಕ್ರಮಗಳನ್ನು ಅಗತ್ಯ ಕೈಗೊಳ್ಳುವಂತೆ ಕೃಷಿ ಇಲಾಖೆಯ ಪ್ರಭಾರಿ ಜಂಟಿ ನಿರ್ದೇಶಕರಾದ ಜಯಪ್ರಕಾಶ್ ಅವರು ಕೋರಿದ್ದಾರೆ. ಅತಿಯಾದ ತೇವಾಂಶ
ನಿರ್ವಹಣಾ ಕ್ರಮಗಳು
ಹೊಲದ ಸುತ್ತಲು 1 ಅಡಿ ಆಳದ ತಗ್ಗು ತಗೆದು ನೀರನ್ನು ಹೊರಹಾಕಿ ಜೊತೆಗೆ ಹೊಲದಲ್ಲಿ ಪ್ರತಿ 10 ಮೀಟರ್ ಅಂತರದಲ್ಲಿ ಒಂದರಂತೆ 1 ಅಡಿ ಆಳದ ನೇಗಿಲ ಸಾಲು ತಗೆದು ನೀರು ಹೊರಹಾಕಿ. ನೀರಿನಲ್ಲಿ ಕರಗುವ 19:19:19 ಓಕಏ @ 10ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪರಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಆಯಾ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಸಹಾಯಕ ಕೃಷಿ ನಿರ್ದೇಶಕ ಕಚೇರಿಯನ್ನು ಸಂಪರ್ಕಿಸುವಂತೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರ ಸಾಲ ಮನ್ನಾ ಮಾಡಲು ಮನವಿ
ರೈತರ ಸಂಘ ಜೈ ಜವಾನ ಜೈ ಕಿಸಾನ ಜೈ ಭಾರತ ಮಾತೆ ರೈತರ ಸಾಲ ಮನ್ನಾ ಹಾಗೂ ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ರೈತರ ಸಂಘ ಜೈ ಜವಾನ ಜೈ ಕಿಸಾನ ಜೈ ಭಾರತ ಮಾತೆ ರಾಜ್ಯಾಧ್ಯಕ್ಷರಾದ ಮೋತಿರಾಮ ಚವ್ಹಾಣ ಮಾತನಾಡಿ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಯಾವ ರೈತರಿಗೆ ಬೆಳೆವಿಮೆ ಬಂದಿರುವುದಿಲ್ಲ ಅಂತ ರೈತರಿಗೆ ಜಿಲ್ಲೆಯ ರೈತರು ತುಂಬಿದ ಬೆಳೆವಿಮೆ ಹಣವನ್ನು ರೈತರ ಖಾತೆಗೆ ಜಮಾವಣೆ ಮಾಡಬೇಕು. ಈಗ ರೈತರು ಮಳೆ ಇಲ್ಲದೆ ಕಂಗಾಲಾಗಿದ್ದಾರೆ ನೇರವಾಗಿ ರೈತರಿಗೆ ಬ್ಯಾಂಕಿಂಗ್ ಮಾಡಬೇಕು. ಜಿಲ್ಲೆಯ ರೈತರಿಗೆ ಮಳೆ ಇಲ್ಲದೆ ಬಡ ರೈತರಿಗೆ ಕೆಲಸ ಇರುವುದಿಲ್ಲ. ಸರಕಾಯ ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಧರೆಪ್ಪ ಗು ಗೃರಿ, ಜಿಲ್ಲಾಧ್ಯಕ್ಷರಾದ ವಿಜಯಕುಮಾರ ರಾಠೋಡ, ಪೂಜಾರಿ, ಬಿರಾದಾರ ಸಂಘದ ಸದಸ್ಯರು ಭಾಗವಹಿಸಿದ್ದರು.
25.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಕರಾವಳಿ ತೀರ ಭಾಗಗಳಲ್ಲಿ ಜಾಸ್ತಿಯೇ ಇರಬಹುದು. ಕೊಡಗು, ಹಾಸನ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ದಾವಣಗೆರೆ ಉತ್ತರ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಭಾರತದ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ ಗಡಿ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇದರಿಂದ ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸಗಡ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈ ತಿರುಗುವಿಕೆಯು ಪೂರ್ವಕ್ಕೆ ಚಲಿಸಿ ಆಗಸ್ಟ್ 26ರಂದು ಗುಜರಾತ್ ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ. ಮುಂಗಾರು ಸ್ವಲ್ಪ ಚುರುಕಾಗಿದ್ದು ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ಕೊನೇಯ ವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
24.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆ ಕಡಿಮೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬೆಳಿಗ್ಗೆ ಬಿಸಿಲು ಇದ್ದರೆ, ನಂತರ ಮೋಡದ ವಾತಾವರಣ ಇರಲಿದ್ದು ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಬೆಂಗಳೂರು ಉತ್ತರ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಗದಗ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಅರಬ್ಬಿ ಸಮುದ್ರದ ಗಾಳಿಯ ತಿರುಗುವಿಕೆಯ ಪ್ರಭಾವದಿಂದ ಮುಂಗಾರು ಚುರುಕಾಗಲಿದ್ದು ಆಗಸ್ಟ್ 24ರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮತ್ತೆ ಆರಂಭವಾಗುವ ಮುನ್ಸೂಚನೆ ಇದೆ. ಈ ವಾತಾವರಣವು ಆಗಸ್ಟ್ ಕೊನೆಯ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ. ಉತ್ತರ ಒಳನಾಡು ಭಾಗಗಳ ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ.
23.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ, ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. (ಮುಂಗಾರು ರೀತಿಯ ಮಳೆ, ಗುಡುಗು ಸಾಧ್ಯತೆ ಕಡಿಮೆ ಇರಬಹುದು) ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಚಾಮರಾಜನಗರದ ಕೊಳ್ಳೇಗಾಲ ಸುತ್ತಮುತ್ತ, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಅರಬ್ಬಿ ಸಮುದ್ರದ ಗಾಳಿಯ ತಿರುಗುವಿಕೆಯು ಉತ್ತರಕ್ಕೆ ಚಲಿಸುತ್ತಿದ್ದು, ಲಯ ತಪ್ಪಿದ ಮುಂಗಾರು ಮಾರುತಗಳನ್ನು ಸರಿಯಾದ ದಿಕ್ಕಿಗೆ ಚಲಿಸುವಂತೆ ಮಾಡುತ್ತಿದೆ. ಇದರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಆಗಸ್ಟ್ 24ರಿಂದ ಕರಾವಳಿಯಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಒಳನಾಡು ಭಾಗಗಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ.
22.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು ಹಾಗೂ ಹಾಸನ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಮೋಡ ಅಥವಾ ಅಲ್ಲಲ್ಲಿ ತುಂತುರು, ಚಾಮರಾಜನಗರ( ಕೊಳ್ಳೇಗಾಲ ಸುತ್ತಮುತ್ತ ) ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆಯೂ ಇದೆ. ರಾಯಚೂರು ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಆಗಸ್ಟ್ 22ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಅರಬ್ಬಿ ಸಮುದ್ರದ ರಾಜ್ಯದ ಕರಾವಳಿ ಭಾಗದಲ್ಲಿ ಉಂಟಾಗಿರುವ ತಿರುವಿಕೆಯ ಪ್ರಭಾವದಿಂದ ಮುಂಗಾರು ಮಾರುತಗಳು ಚುರುಕಾಗುವ ಲಕ್ಷಣಗಳಿವೆ. ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದ್ದು. ಆಗಸ್ಟ್ 24ರಿಂದ ಮಲೆನಾಡು ಭಾಗಗಳಲ್ಲಿಯೂ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.
21.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಾಪುರ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ತುಮಕೂರು( ಪಾವಗಢ ಉತ್ತಮ ಇರಬಹುದು), ಹಾವೇರಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಹಾರಾಷ್ಟ್ರ – ಕರ್ನಾಟಕ ಗಡಿ ಭಾಗಗಳ ಸುತ್ತಮುತ್ತ ಮಳೆ ಕಡಿಮೆ ಇರಬಹುದು. ಈಗಿನಂತೆ ಆಗಸ್ಟ್ 23ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ತಿರುಗುವಿಕೆಯು ಒಮ್ಮೆಗೆ ಶಿಥಿಲಗೊಂಡರೂ ಆಗಸ್ಟ್ 25ರ ಸುಮಾರಿಗೆ ಮಹಾರಾಷ್ಟ್ರ ಕರಾವಳಿಯಲ್ಲಿ ಮತ್ತೆ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಇದರಿಂದ ಮುಂಗಾರು ಚುರುಕಾಗುವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸಿ ಕರಾವಳಿ ಭಾಗಗಳಲ್ಲಿ ಆಗಸ್ಟ್ 30ರ ತನಕವೂ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. (ಆಗಸ್ಟ್ 24ರಿಂದ ಕರಾವಳಿಯಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಕಡಿಮೆಯಾಗಬಹುದು).
20.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕಾಸರಗೋಡು ಹಾಗೂ ಕೇರಳ – ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ಸಂಜೆ, ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಸ್ವಲ್ಪ ಕಡಿಮೆ ಇರಬಹುದು.
ಚಿತ್ರದುರ್ಗ ಉತ್ತರ, ಬಳ್ಳಾರಿ ದಕ್ಷಿಣ ಹಾಗೂ ದಾವಣಗೆರೆ ಪೂರ್ವ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯಾಗಲಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳ ಹೆಚ್ಚಿನ ಪ್ರದೇಶಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಆಗಸ್ಟ್ 20ರಂದು ಉತ್ತರ ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿದ್ದು, ಇದರ ಪ್ರಭಾವದಿಂದ ಆಗಸ್ಟ್ 23ರ ತನಕ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿವೆ. ಈ ತಿರುಗುವಿಕೆಯು ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿದ್ದು, ಆಗಸ್ಟ್ 24ರಿಂದ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಈ ಸಂದರ್ಭದಲ್ಲಿ ಅರಬ್ಬಿ ಸಮುದ್ರದ ಮುಂಗಾರು ಮಾರುತಗಳು ಶ್ರೀಲಂಕಾ ಮೂಲಕ ಬಂಗಾಳಕೊಲ್ಲಿಗೆ ಸೇರುತ್ತಿರುವುದು ಕಡಿಮೆಯಾಗಲಿರುವುದರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
18.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ದಿನವಿಡೀ ಮೋಡದ ವಾತಾವರಣ ಇರಲಿದ್ದು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ವೇಳೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು ಭಾಗಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿಯ ವೇಳೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇವತ್ತು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದ ಗಾಳಿಯು ದಕ್ಷಿಣಾಭಿಮುಖವಾಗಿ ಚಲಿಸಿ ಶ್ರೀಲಂಕಾ ಮೂಲಕ ಬಂಗಾಳಕೊಲ್ಲಿಗೆ ಸಾಗಿ ಭೂಮಿಗೆ ಪ್ರವೇಶಿಸುವುದರಿಂದ ರಾಜ್ಯದಲ್ಲಿ ಅಧಿಕ ವ್ಯಾಪ್ತಿಯ ತಿರುವಿಕೆ ಉಂಟಾಗಿದೆ. ಇದರ ಪರಿಣಾಮದಿಂದ ಗಾಳಿಯ ಚಲನೆಯ ದಿಕ್ಕು ಆಗಾಗ ಬದಲಾಗುತ್ತಿರುವುದರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕೆಲವು ಭಾಗಗಳಲ್ಲಿ ಹೆಚ್ಚು ಹಾಗೂ ಕೆಲವು ಭಾಗಗಳಲ್ಲಿ ಕಡಿಮೆಯಾಗುವ ಸಾಧ್ಯತೆಗಳಿವೆ. ಆಗಸ್ಟ್ 20ರ ನಂತರ ಕೇರಳ ಕರಾವಳಿ ತೀರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಉಂಟಾಗುವ ಲಕ್ಷಣಗಳಿದ್ದು, ಇದರ ಪ್ರಭಾವದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ.
17.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಬೆಂಗಳೂರು ದಕ್ಷಿಣ, ಬಾಗಲಕೋಟೆ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ (ಚಿಕ್ಕೋಡಿ ಸಹಿತ), ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಆಗಸ್ಟ್ 17ರಿಂದ ರಾಜ್ಯದಾದ್ಯಂತ ಮಳೆಯ ತೀವ್ರತೆ ಕಡಿಮೆ ಆಗುವ ಮುನ್ಸೂಚೆನೆ ಇದೆ.
ಬಂಗಾಳಕೂಲ್ಲಿಯ ಬಂಗ್ಲಾದೇಶ ಕರಾವಳಿಯಲ್ಲಿ ಹಾಗೂ ತಮಿಳುನಾಡಿನ ತುತುಕುಡಿ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಆಗಸ್ಟ್ 17,18ರಂದು ಸ್ಪಷ್ಟತೆ ಸಿಗಬಹುದು.
ಪಶ್ಚಿಮದ ಗಾಳಿ ಹಾಗೂ ಪೂರ್ವದ ಗಾಳಿಯು ಕರ್ನಾಟಕದ – ವಿಭಜಿತ ಆಂದ್ರಾ ಗಡಿ ಭಾಗಗಳಲ್ಲಿ ಸಂಧಿಸುತ್ತಿರುವುದರಿಂದ ಆ ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.
16.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಮೈಸೂರು, ಚಾಮರಾಜನಗರ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ(ಚಿಕ್ಕೋಡಿ ಸಾಧ್ಯತೆ ಕಡಿಮೆ), ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ವಿಜಯಪುರ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲಾ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಈಗಿನಂತೆ ಆಗಸ್ಟ್ 16ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 17ರಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.