Breaking
Tue. Dec 17th, 2024
Spread the love

ಬರ ಪರಿಹಾರ ವಿತರಣೆ ಮತ್ತು ಆರ್ಥಿಕ ನೆರವು. ಇಂದಿನವರೆಗೆ 33.25 ಲಕ್ಷ ರೈತರಿಗೆ 631 ಕೋಟಿ ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡಲಾಗಿದೆ. ಸರ್ಕಾರ 600 ಕೋಟಿ ರೂ.ಗಳ ಬೆಳೆ ವಿಮೆ ಪರಿಹಾರ ಒದಗಿಸಲಾಗಿದೆ. ಇನ್ನೂ 800 ಕೋಟಿ ರೂ. ಪಾವತಿಯಾಗುವ ನಿರೀಕ್ಷೆ ಇದೆ. ಬರ ನಿರ್ವಹಣೆಗಾಗಿ ಎಲ್ಲಾ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 854 ಕೋಟಿ ರೂ. ಲಭ್ಯವಿದೆ. ಮೇವಿಗೆ ಈವರೆಗೆ ತೊಂದರೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಪಶುಸಂಗೋಪನೆ ಇಲಾಖೆಗೆ 40 ಕೋಟಿ ರೂ.ಗಳನ್ನು ಮೇವು ಬೆಳೆಯಲು ಒದಗಿಸಲಾಗಿದೆ.

ನಿಮ್ಮ ಮೊಬೈಲ್ ನಂಬರ್ ಹಾಕಿ ಬೆಳೆ ಪರಿಹಾರ ಪೇಮೆಂಟ್ ಸ್ಟೇಟಸ್ ಚೆಕ್ ಮಾಡಿ

https://bhoomisuddi.com/check-crop-compensation-payment-status-by-entering-your-mobile-number/

ಮಾರ್ಚ್ 15 ರಿಂದ 4 ದಿನ ಕರ್ನಾಟದಲ್ಲಿ ಪ್ರಧಾನಿ ಮೋದಿ ಪ್ರಚಾರ

ಲೋಕಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದರೆ, ಈ ನಡುವಲ್ಲೇ ಪ್ರಬಲ ಪಕ್ಷಗಳು ಚುನಾವಣೆಗೆ ಸಿದ್ಧತೆಗಳ ನಡೆಸುತ್ತಿದ್ದು, ಕೇಂದ್ರ ನಾಯಕರ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿವೆ. ಈ ನಿಟ್ಟಿನಲ್ಲಿ ಚುನಾವಣೆ ಸಂದರ್ಭದಲ್ಲಿ ಹೆಚ್ಚು ಮತದಾರರ ಗಮನ ಸೆಳೆಯಲು ರಾಜ್ಯದಲ್ಲಿ ಪ್ರಧಾನಿ ಮೋದಿ ಅವರು ಪ್ರಚಾರ ಮಾಡುತ್ತಿದ್ದಾರೆ. ಮಾರ್ಚ್ 15 ರಿಂದ 19 ರವರೆಗೆ ದಕ್ಷಿಣದ 5 ರಾಜ್ಯಗಳಲ್ಲಿ ಮೋದಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಕರ್ನಾಟಕದ 12 ಲೋಕ ಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಪ್ರವಾಸ ನಡೆಸಲಿದ್ದಾರೆ. ಈ ಮೂಲಕ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರವನ್ನು ಆಡಳಿತಕ್ಕೆ ತರಲು ತಂತ್ರ ಹೆಣೆಯಲಾಗುತ್ತಿದೆ.

ಮಾ.15 ರಂದು ಕೋಲಾರಕ್ಕೆ ಭೇಟಿ ನೀಡಲಿದ್ದು, ಇದೇ ವೇಳೆ ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳ ಮೇಲೂ ಚಿಕ್ಕಮಗಳೂರು ಕ್ಷೇತ್ರಗಳ ಬಗ್ಗೆ ವಿಶೇಷ ಗಮನ ನೀಡಲಿದ್ದಾರೆ. ಮಾ.18 ರಂದು ಬೀದರ್ ಹಾಗೂ ಕಲಬುರಗಿ ಮತ್ತು ಮಾ.19 ರಂದು ಧಾರವಾಡಕ್ಕೆ ಭೇಟಿ ನೀಡಲಿದ್ದು, ಚಾಲನೆ ನೀಡಲಿದ್ದು, ಕೆಲವು ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆಂದು ತಿಳಿದುಬಂದಿದೆ.



ಒಂದು ನಿಲ್ದಾಣ ಒಂದು ಉತ್ಪನ್ನ ಸ್ಟಾಲ್‌ಗಳಿಗೆ ಚಾಲನೆ

ಒಂದು ನಿಲ್ದಾಣ ಒಂದು ಉತ್ಪನ್ನ ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಜಿಲ್ಲೆಯ ದ್ರಾಕ್ಷಿ ಬೆಳೆಯನ್ನು ಪ್ರಮಖ ಬೆಳೆಯನ್ನಾಗಿ ಗುರುತಿಸಿ ಮಾರಾಟದಿಂದ ಜಿಲ್ಲೆಯ ಅಭಿವೃದ್ಧಿ ಮತ್ತು ಔದ್ಯೋಗಿಕರಣಕ್ಕೆ ಸಹಕಾರಿಯಾಗಲಿದೆ ಎಂದು ಸಂಸದರಾದ ರಮೇಶ ಚ. ಜಿಗಜಿಣಗಿ ಹೇಳಿದರು.

ಇಂದು ನಗರದ ರೈಲು ನಿಲ್ದಾಣದ ಆವರಣದಲ್ಲಿ ಆಯೋಜಿಸಿದ ಪ್ರಧಾನ ಮಂತ್ರಿಗಳು 85000 ಕೋಟಿ ರೂಗಳ ವಿವಿಧ ರೈಲ್ವೆ ಯೋಜನೆಗಳ ಶಂಕುಸ್ಥಾಪನೆ, ಲೋಕಾರ್ಪಣೆ ಹಾಗೂ 10 ವಂದೇ ಭಾರತ್ ಎಕ್ಸಪ್ರೆಸ್‌ಗಳ ರೈಲುಗಳಿಗೆ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿಸುವುದರೊಂದಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದ ಸುಮಾರು 21 ರಾಜ್ಯಗಳಲ್ಲಿ ಒಂದು ನಿಲ್ದಾಣ ಒಂದು ಉತ್ಪನ್ನದಿಂದ ಸ್ಥಳೀಯ ರೈತರು ಬೆಳೆದ ಉತ್ಪನ್ನಗಳನ್ನು ಸ್ಥಳೀಯ ರೈಲು ನಿಲ್ದಾಣಗಳಲ್ಲಿ ಮಾರಾಟ ಮಾಡುವುದರೊಂದಿಗೆ ರೈತರಿಗೆ ಉತ್ತೇಜನ ದೊರೆತು, ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಔದ್ಯೋಗಿಕರಣಕ್ಕೆ ಹೆಚ್ಚು ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ದ್ರಾಕ್ಷಿ ಬೆಳೆಯುತ್ತಿದ್ದು, ಜಿಲ್ಲೆಯ ರೈತರ ಆದಾಯ ಕೂಡ ವೃದ್ಧಿಯಾಗಲಿದೆ ಎಂದು ಹೇಳಿದರು.

ನೈರುತ್ಯ ರೈಲ್ವೇ ಹುಬ್ಬಳ್ಳಿ ವಿಭಾಗದಲ್ಲಿ ಎಸ್.ಎಸ್.ಎಸ್ ಹುಬ್ಬಳ್ಳಿ, ಧಾರವಾಡ, ಗುಡಗೇರಿ, ಖಾನಾಪುರ, ಬೆಳಗಾವಿ, ಘಟಪ್ರಭಾ, ಕುಡಚಿ, ರಾಯಬಾಗ, ಮುನಿರಾಬಾದ, ಹೊಸಪೇಟೆ, ತೋರಣಗಲ್ಲು, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ವಾಸ್ಕೋ ಡ ಗಾಮಾ ಹಾಗೂ ಸಾಂವರ್ಡೆ ನಿಲ್ದಾಣಗಳಲ್ಲಿ ಒಂದು ಉತ್ಪನ್ನ ಮಳಿಗೆಗಳು/ ಟ್ರಾಲಿಗಳು ಇಂದು ಸಮರ್ಪಿಸಲಾಗುತ್ತಿದೆ ವಿಜಯಪುರದಿಂದ ಸುಮಾರು ಒಂದು ದಿನದಲ್ಲಿ 24 ರೈಲ್ವೇಗಳು ಚಲಿಸುತ್ತಿವೆ ದ್ವೀಪತ ರೈಲ್ವೇ ಹಳಿಗಳು ಜೋಡನೆ ಕಾಮಗಾರಿ ಪ್ರಗತಿಯಲ್ಲಿದೆ 7 ರಾಷ್ಟ್ರೀಯ ಹೆದ್ದಾರಿಗಳು ಕೂಡ ವಿಜಯಪುರದಿಂದ ಹಾದು ಹೋಗುತ್ತವೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ವೇಗವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ ಶಹಾಪುರ, ಉಮೇಶ ಕೊಳಕೂರ ರೈಲ್ವೇ ಅಧಿಕಾರಿಗಳಾದ ಸಿನಿಯನ್ ಡಿವಿಜನಲ್ ಫೈನಾನ್ಸಿಯಲ್ ಮ್ಯಾನೇಜರ್, ಜಿಬು ಜೇಕಬ್, ಡಿವಿಜನಲ್ ಇಲೆಕ್ಟಿಕಲ್ ಇಂಜಿನೀಯರ್, ಚಾಣಕ್ಯ ಜೈನ್, ಡೆಪ್ಯೂಟಿ ಚೀಪ್‌ ಇಂಜಿನಿಯರ್ ಕನ್ಸಟ್ರಕ್ಷನ್, ವಿನಾಯಕ ಪಡಲ್ಕರ್ ಉಪಸಿತರಿದರು.

Agri jobs

Related Post

Leave a Reply

Your email address will not be published. Required fields are marked *