ತೋಟಗಾರಿಕೆ ಇಲಾಖೆ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ. ಹೊಸಪೇಟೆ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಸಹಾಯಧನ ಪಡೆಯಲು ನೀರಾವರಿ ಸೌಲಭ್ಯವುಳ್ಳ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಇತರೆ ಸಣ್ಣ, ಅತೀ ಸಣ್ಣ ರೈತರಿಗೆ ಹಾಗೂ ಬಿ.ಪಿ.ಎಲ್ ಸೌಲಭ್ಯ ಕಾರ್ಡ್ ಹೊಂದಿರುವ ರೈತರಿಗೆ ವಿವಿಧ ಬಗೆಯ ಹಣ್ಣಿನ ಬೆಳೆಗಳಾದ ದಾಳಿಂಬೆ, ಬಾಳೆ, ಡ್ರಾಗನ್ ಪೂಟ್ ಹಾಗೂ ಇನ್ನಿತರ ತೋಟಗಾರಿಕೆ ಬೆಳೆಯನ್ನು ಬೆಳೆಯಲು ಅವಕಾಶವಿರುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ (ಪಿ.ಎಂ.ಕೆ.ಎಸ್.ವೈ) ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ, ತೋಟಗಾರಿಕೆ ಯಂತ್ರೋಪಕರಣಗಳ ಖರೀದಿ, ಆಳವಡಿಕೆಗೆ, ತೋಟಗಾರಿಕೆ ಬೆಳೆಗಳ ಸಂಸ್ಕರಣಾ ಘಟಕ ಸ್ಥಾಪನೆಗಾಗಿ ಸಹಾಯಧನ ಪಡೆಯಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ
ಹೊಸಪೇಟೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರಮೇಶ ಕೆ.ಎಮ್ ಮೊ.ಸಂ: 8310291867, ಹೋಬಳಿ ಮಟ್ಟದ ಅಧಿಕಾರಿಗಳಾದ ರೈ.ಸಂ. ಕೇಂದ್ರ ಹೊಸಪೇಟೆ ಸಹಾಯಕ ತೋಟಗಾರಿಕೆ ಅಧಿಕಾರಿ ಸುಧಾಕರ ಮೊ.ಸಂ: 9739027284, ಕಮಲಾಪುರ ರೈ.ಸಂ. ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿ ವೀರೇಶ ಎಸ್. ಎಮ್ ಮೊ.ಸಂ: 8123465548, ಮರಿಯಮ್ಮನಹಳ್ಳಿ ರೈ.ಸಂ.ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿ ರಾಹೀಲ್ ಕೆ. ಮೊ.ಸಂ: 8073719905, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರಮೇಶ ಕೆ.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಪ್ರವಾಸಿ ಟ್ಯಾಕ್ಸಿ ಯೋಜನೆ ಆಯ್ಕೆಪಟ್ಟಿ ಪ್ರಕಟ
ವಿಜಯಪುರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸ್ವಾವಲಂಬಿ ಸಾರಥಿ ವಾಹನ ಖರೀದಿ ಸಹಾಯಧನ ಯೋಜನೆಯಡಿ ಪ್ರವಾಸಿ ಟ್ಯಾಕ್ಸಿ-ಸರಕು ವಾಹನ ಖರೀದಿಗೆ ಫಲಾನುಭವಿಗಳನ್ನು ನವೆಂಬರ್ 21ರಂದು ಆಯ್ಕೆ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಪಟ್ಟಿಯನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯ ನೋಟಿಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, 08352-278344 0 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿ ಡಿ.26ರವರೆಗೆ ವಿಸ್ತರಣೆ
ವಿಜಯಪುರ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನಹೊಂದಿದ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ 12 ತಿಂಗಳ ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 26ರವರೆಗೆ ವಿಸ್ತರಿಸಲಾಗಿದೆ.
ವಿಜಯಪುರ ಜಿಲ್ಲಾ ಕಚೇರಿಯಲ್ಲಿ ತಲಾ ಒಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ತರಬೇತಿಗೆ ಮೆರಿಟ್ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಧ್ಯಮ ಅಕಾಡೆಮಿ ಮೂಲಕ ತರಬೇತಿ ಭತ್ಯೆ ನೀಡಲಾಗುವುದು. ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ :26-12-2023ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಆವರಣ, ಸ್ಟೇಶನ್ ರಸ್ತೆ, ವಿಜಯಪುರ ಕಚೇರಿಗೆ ಸಲ್ಲಿಸಬೇಕು.ನಿಗದಿತ ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯನ್ನು ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಧಾರ್ ಕಾರ್ಡ್ ಉಚಿತ ಅಷ್ಟೇಟ್ ಗಡುವು ವಿಸ್ತರಣೆ
ನವದೆಹಲಿ : ಉಚಿತವಾಗಿ ಆಧಾರ್ ಕಾರ್ಡ್ ಅಪೇಟ್ ಮಾಡಲು ನೀಡಿದ್ದ ಗಡುವನ್ನು ಭಾರತದ ವಿಶಿಷ್ಟ ಗುರುತು ಪ್ರಾಧಿಕಾರ ಮತ್ತೊಮ್ಮೆ ವಿಸ್ತರಿಸಿದೆ. 2024ರ ಮಾರ್ಚ್ 14ರ ತನಕ ಕಾಲಾವಕಾಶ ನೀಡಲಾಗಿದೆ. ಈ ಹಿಂದೆ ಆಧಾರ್ ಕಾರ್ಡ್ ಉಚಿತ ಅಷ್ಟೇಟ್ ಮಾಡಲು ನಾಳೆ (ಡಿ. 15) ಅಂತಿಮ ಗಡುವಾಗಿತ್ತು. ಈ ಅಂತಿಮ ಗಡುವಿನೊಳಗೆ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಹೆಸರು, ವಿಳಾಸ ಮತ್ತು ಇತರ ಮಾಹಿತಿಗಳನ್ನು ಅಸ್ಟೇಟ್ ಮಾಡೋದು ಕಡ್ಡಾಯ.
ಈ ಸೌಲಭ್ಯ ಮೈ ಆಧಾರ್ ಪೋರ್ಟಲ್’ನಲ್ಲಿ ಮಾತ್ರ ಲಭ್ಯವಿದೆ. ಈ ಹಿಂದೆ ಆಧಾರ್ ಪೋರ್ಟಲ್’ನಲ್ಲಿ ಈ ಮಾಹಿತಿಗಳನ್ನು ಅಷ್ಟೇಟ್ ಮಾಡಲು 25ರೂ. ಶುಲ್ಕ ಪಾವತಿಸಬೇಕಿತ್ತು. ಆಧಾರ್ ಕೇಂದ್ರಗಳಲ್ಲಿ ಈಗಲೂ ಈ ಕೆಲಸಕ್ಕೆ 50ರೂ. ಶುಲ್ಕ ಪಾವತಿಸಬೇಕು. ಕಳೆದ 10 ವರ್ಷಗಳಲ್ಲಿ ಆಧಾರ್ ಕಾರ್ಡ್ ಅಷ್ಟೇಟ್ ಮಾಡದವರು ಆದಷ್ಟು ಬೇಗ ಈ ಕೆಲಸ ಮಾಡುವಂತೆ ಯುಐಡಿಎಐ ಕಳೆದ ಕೆಲವು ತಿಂಗಳಿಂದ ಜನರನ್ನು ಒತ್ತಾಯಿಸುತ್ತಿದೆ.
ಯುವತಿಯರಿಗಾಗಿ ಉಚಿತ ಕಂಪ್ಯೂಟರ್ ಡಿ.ಟಿ.ಪಿ ತರಬೇತಿ ಬೆಂಗಳೂರು :
ಕೋಲಾರ ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ಕಂಪ್ಯೂಟರ್ ಡಿ.ಟಿ.ಪಿ. ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ಜಿಲ್ಲೆಯ 18 ರಿಂದ 45 ವರ್ಷ ವಯೋಮಿತಿಯುಳ್ಳವರು ಡಿಸೆಂಬರ್ 13. ಬುಧವಾರದಂದು ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ರೇಷನ್ ಕಾರ್ಡ್, ಆಧಾರ್ ಕಾರ್ಡ್ 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ತರಬೇತಿಯು 45 ದಿನಗಳ ಕಾಲಾವಧಿಯದಾಗಿದ್ದು, ತರಬೇತಿ ಅವಧಿಯಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ತರಬೇತಿ ವೇಳೆ ಉಚಿತವಾಗಿ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ತರಬೇತಿ ನಂತರ ಕೇಂದ್ರ ಸರ್ಕಾರದ ಪ್ರಮಾಣ ಪತ್ರ ವಿತರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ತರಬೇತುದಾರರ ಮೊ.8971308776, 7760313833, 9483652240 ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.