27.03.2024ರ ಕರ್ನಾಟಕದ ಹವಾಮಾನ ಮುನ್ಸೂಚನೆ
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ನಿರೀಕ್ಷೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
26.03.2024ರ ಕರ್ನಾಟಕದ ಹವಾಮಾನ ಮುನ್ಸೂಚನೆ
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಾರ್ಚ್ಸ 26ರಿಂದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಸೀಮಿತ ಪ್ರದೇಶಗಳಲ್ಲಿ ಇರಬಹುದು. ದೊಡ್ಡ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಬೇಸಿಗೆ ಮಳೆಯ ಮುನ್ಸೂಚನೆ ತೀವ್ರ ವೇಗದಲ್ಲಿ ಬದಲಾಗುತ್ತಿರುತ್ತದೆ.
25.03.2024ರ ಕರ್ನಾಟಕದ ಹವಾಮಾನ ಮುನ್ಸೂಚನೆ
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ.
ಈಗಿನಂತೆ ಕರಾವಳಿಯಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣ ಮುಂದುವರಿಯಲಿದ್ದು,
ಮಾರ್ಚ್ 27ರಿಂದ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. ಜೊತೆಗೆ ಕರಾವಳಿ ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. ಎಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆ ಇದೆ.
24.03.2024ರ ಕರ್ನಾಟಕದ ಹವಾಮಾನ ಮುನ್ಸೂಚನೆ
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಜೊತೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದಲ್ಲಿ ಮಳೆ ಕಡಿಯಾಗಲಿದ್ದು, ಮಾರ್ಚ್ 28ರಿಂದ ಮತ್ತೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಾರ್ಚ್ 31 ಅಥವಾ ಎಪ್ರಿಲ್ 1ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.
23.03.2024ರ ಕರ್ನಾಟಕದ ಹವಾಮಾನ ಮುನ್ಸೂಚನೆ
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದು ವಾತಾವರಣದೊಂದಿಗೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 23ರಿಂದ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಮಾರ್ಚ್ 28ರಿಂದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ.
ಆದರೆ ಒಳನಾಡು ಭಾಗಗಳಲ್ಲಿ ಸಧ್ಯಕ್ಕೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
22.03.2024ರ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಕೊಡಗು ಮೋಡ ಹಾಗೂ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಹೊರನಾಡು, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಕರಾವಳಿ (ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು) ಹಾಗೂ ಮಲೆನಾಡು ಭಾಗಗಳಲ್ಲಿ ಇನ್ನೂ ಒಂದು ವಾರದ ಕಾಲ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ.