2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಮತ್ತು ಬಿಳಿಜೋಳ ಖರೀದಿ ಮಾಡಲಾಗುತ್ತಿದ್ದು, ಜಿಲ್ಲೆಯ ರೈತರು ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರಿಂದ ರಾಗಿ, ಬಿಳಿಜೋಳ ಖರೀದಿಸಲು ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ, ಈಗಾಗಲೇ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು, ಸರಕಾರವು ಆಯಾ ಬೆಳೆಗಳಿಗೆ ಪ್ರತಿ ಕ್ವಿಂಟಲ್ ರಂತೆ ಬೆಲೆ ನಿಗದಿಪಡಿಸಿದೆ. ಜಿಲ್ಲೆಯ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ನೋಂದಣೆ ಕುರಿತು ರೈತರಿಗೆ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ಮಾತನಾಡಿ, ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆಯಡಿ ಪ್ರತಿ ಕ್ವಿಂಟಾಲ್ ರಾಗಿಗೆ 3846, ಹೈಬ್ರಿಡ್ ಬಿಳಿಜೋಳಕ್ಕೆ 3180 ಹಾಗೂ ಮಾಲ್ದಂಡಿ ಬಿಳಿಜೋಳಕ್ಕೆ 3225 ರೂ.ಗಳ ದರ ನಿಗದಿಪಡಿಸಿದ್ದು. ವಿಜಯನಗರ ಜಿಲ್ಲೆಗೆ ಖರೀದಿ ಏಜೆನ್ಸಿಯಾಗಿ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಸರ್ಕಾರವು ನೇಮಿಸಿದೆ. ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಜ.3ರವರೆಗೆ ಜಿಲ್ಲೆಯ 117 ರೈತರಿಂದ 2840 ಕ್ವಿಂಟಾಲ್ ಪ್ರಮಾಣದಷ್ಟು ನೋಂದಣಿಯಾಗಿದೆ.
ನೋಂದಣಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ರಾಗಿ ಮತ್ತು ಬಿಳಿಜೋಳ ಬೆಳೆಗಾರರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಾಹಿತಿ ನೀಡಿದರು.
ವಿವರ:
ಖರೀದಿ ಕೇಂದ್ರಗಳನ್ನು ಆಯಾ ತಾಲ್ಲೂಕಿನ ಎ.ಪಿ.ಎಂ.ಸಿ ಯಾರ್ಡ್ ಗಳಲ್ಲಿ ಪ್ರಾರಂಭಿಸಲಾಗಿದ್ದು, ರೈತರು ನೋಂದಣಿಗಾಗಿ ಖರೀದಿ ಕೇಂದ್ರಗಳ ಅಧಿಕಾರಿಗಳಾದ ಹೊಸಪೇಟೆಯ ಆನಂದ್ ಎರಗುಲ್ .: 7019544230. ಹರಪ್ಪನಹಳ್ಳಿಯ ಪರಶುರಾಮ. ಯು.ಎ ಅಥಣಿಮಠ ಮೊ.ಸಂ: 9740827093, ಹಡಗಲಿಯ ಮಂಜುನಾಥ್ ಒಡ್ಡರ್ ಮೊ.ಸಂ: 9845274145, g ರಾಜು ತಿಪ್ಪಶೇಟ್ಟಿ ಮೊ.ಸಂ: 8073814583 ಚಿದಾನಂದ ನವಲಗುಂದ ಮೊ.ಸಂ: 9480752045 ಎಂದು ಹೇಳಿದರು. ಈ ಸಂದರ್ಭದಲ್ಲಿ ಕೃಷಿ ಮಾರಾಟ ಮಂಡಳಿಯ ಜಿಲ್ಲಾ ವ್ಯವಸ್ಥಾಕ ಸಂಗಮೇಶ ಸೇರಿದಂತೆ ಖರೀದಿ ಕೇಂದ್ರಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ತೊಗರಿ ಖರೀದಿಗೆ ನೊಂದಣಿ
ಕೇಂದ್ರ ಸರಕಾರದ ಬೆಲೆ ಸ್ಥಿರೀಕರಣ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ತೊಗರಿಗೆ ಪ್ರತಿ ಕ್ವಿಂಟಲ್‌ಗೆ ಜಿಲ್ಲೆಯ ಕನಿಷ್ಟ ಮಾರುಕಟ್ಟೆ ಸಂಗ್ರಹಣಾ ದರ ಅಥವಾ ಕ್ರೀಯಾತ್ಮಕ ಖಚಿತ ಸಂಗ್ರಹಣ ದರ, ಯಾವುದು ಹೆಚ್ಚು ಅದನ್ನು ಪರಿಗಣಿಸಿ ಖರೀದಿಸಲು ಘೋಷಿದೆ ಎಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಟಾಸ್ಕಪೋಸ್ ಸಮಿತಿ ಅಧ್ಯಕ್ಷೆ ಜಾನಕಿ ಕೆ.ಎಂ ತಿಳಿಸಿದ್ದಾರೆ. ಪ್ರತಿ ರೈತರಿಂದ ಪ್ರತಿ ಎಕರೆಗೆ 5 ಕ್ವಿಂಟಾಲ್‌ನಂತೆ ಗರಿಷ್ಟ ಪ್ರಮಾಣ ನಿಗದಿಪಡಿಸಿದ್ದು, ರೈತರ ನೊಂದಣಿ ಕಾರ್ಯ ಹಾಗೂ ಖರೀದಿ ಕಾರ್ಯವನ್ನು 4 ಲಕ್ಷ ಲಕ್ಷ ಮೆಟ್ರಿಕ್ ಟನ್‌ವರೆಗೆ ಸಂಗ್ರಹವಾಗುವರೆಗೆ ಕಾಲಾವಧಿಯನ್ನು ನಿಗಪಡಿಸಿದೆ. ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಎಜನ್ಸಿಯಾಗಿ, ಕರ್ನಾಟಕ ರಜ್ಯದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಸಂಸ್ಥೆಯನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯನ್ನಾಗಿ ನೇಮಿಸಿದೆ.
ಪ್ರತಿ ಎಕರೆಗೆ 5 ಕ್ವಿಂಟಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ ಕ್ವಿಂಟಲ್ ತೊಗರಿಯನ್ನು ಮಾತ್ರ ಖರೀದಿಸತಕ್ಕದ್ದು. ಖರೀದಿ ಕೇಂದ್ರಗಳಲ್ಲಿ ತೊಗರಿಯನ್ನು ಖರೀದಿಸುವ ಪೂರ್ವದಲ್ಲಿ ರೈತರಿಂದ ಆಧಾರ ಕಾರ್ಡ ಪ್ರತಿ ಕಡ್ಡಾಯವಾಗಿ ಪಡೆದು ಪರಿಶೀಲಿಸಿ ನೊಂದಣಿಸಿಕೊಳ್ಳಲಾಗುತ್ತಿದೆ. ರೈತರ ಹೆಸರಿನಲ್ಲಿ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಅಥವ ರೈತರು ನೀಡಿರುವ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು ಡಿಬಿಟಿ, ಎನ್ ಇಎಫ್‌ಟಿ ಮೂಲಕ ಜಮಾ ಆಗುವಂತೆ ಪಾವತಿ ಮಾಡತಕ್ಕದ್ದು. ತೊಗರಿ ಖರೀದಿ ಕೇಂದ್ರದಲ್ಲಿ ರೈತರ ಹೆಸರಿನ ವರ್ತಕರು ತರುವ ತೊಗರಿಯನ್ನು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸಲಾಗುತ್ತಿದೆ.
ತೊಗರಿಯನ್ನು ಖರೀದಿ ಪೂರ್ವದಲ್ಲಿ ಖರೀದಿ ಕೇಂದ್ರಗಳಾದ ಪಿಎಸಿಎಸ್, ಟಿಎಪಿಸಿಎಂಎಸ್, ಎಫ್‌ಪಿಓ ಸಂಘಗಳು ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಬಾಗಲಕೋಟೆ ಅವರೊಂದಿಗೆ ಒಪ್ಪಿಗೆ ಪತ್ರ ಮಾಡಿಕೊಂಡು ನಂತರ ಖರೀದಿಸಲು ಸೂಚಿಸಿದೆ. ರೈತರು ಖರೀದಿ ಕೇಂದ್ರಗಳಾದ ರೇಣುಕಾ ರೈತ ಉತ್ಪಾದಕರ ಕಂಪನಿ, ಬಾಗಲಕೋಟೆ, ಪಿಕೆಪಿಎಸ್ ಹೀರೆ ಆದಾಪೂರ, ಗವಿಶ್ರೀ ರೈತ ಉತ್ಪಾದಕರ ಕಂಪನಿ, ಇಲಕಲ್ಲ, ನಂದರಾಜ ರೈತ ಉತ್ಪಾದಕರ ಕಂಪನಿ, ನಂದವಾಡಗಿ, ಆಶಾ ಕಿರಣ ರೈತ ಉತ್ಪಾದಕರ ಕಂಪನಿ ಲಿಮಿಟೆಡ್, ಹೂಲಗೇರಿ, ಪಿಕೆಪಿಎಸ್ ಕೆರೂರ, ಮಾತೃ ಸುರಕ್ಷಾ ರೈತ ಉತ್ಪಾದಕರ ಕಂಪನಿ ಬರಗಿ, ಸರ್ವಬಂಧು ರೈತ ಉತ್ಪಾದಕರ ಕಂಪನಿ, ಮುಧೋಳ ಹಾಗೂ ಕೃಷಿ ದಾಸೋಯಿ ರೈತ ಉತ್ಪಾದಕರ ಕಂಪನಿ ಕುಲಹಳ್ಳಿಗಳಲ್ಲಿ ರೈತರು ನೊಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಬಾಗಲಕೋಟೆ (9449864458) ಇವರನ್ನು ಸಂಪರ್ಕಿಸಬಹುದಾಗಿದೆ.