ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ “ಯುವನಿಧಿ” ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ನಿರ್ದೇಶನ ನೀಡಿದರು. ಯುವನಿಧಿ ಅನುಷ್ಠಾನ ಹಿನ್ನೆಲೆಯಲ್ಲಿ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರುಗಿದ ವಿಡಿಯೋ ಕಾನ್ಸರೆನ್ಸ್ ಸಭೆಯ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ 2023 ರ ವರ್ಷದಲ್ಲಿ ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರರು ಮತ್ತು ಡಿಪ್ಲೋಮಾ ಪಡೆದ ನಿರುದ್ಯೋಗಿ ವಿದ್ಯಾವಂತರಿಗೆ ಕರ್ನಾಟಕ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು ಪಾವತಿಸಲಾಗುವುದು ಎಂದು ತಿಳಿಸಿದರು.
ಡಿಸೆಂಬರ್ 26 ರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಈ
ಯೋಜನೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಜನವರಿ 2024 ರಿಂದ ಯೋಜನೆ ಜಾರಿಗೊಳ್ಳಲಿದ್ದು, ಅರ್ಹ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿವರಿಸಿದರು.
ಸದರಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಸರಕಾರದ ಮಾರ್ಗಸೂಚಿ ಪ್ರಕಾರ ಆರಂಭಿಸಬೇಕು. ಎಲ್ಲ ಅರ್ಹ ನಿರುದ್ಯೋಗಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಲು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಾಟೀಲ ಹೇಳಿದರು.
ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕರಾದ ರವಿ ಬಂಗಾರೆಪ್ಪನವರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಚಿದಾನಂದ ಬಾಕೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ರವಿಶಂಕರ ಚನಾಳ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನೋಂದಣಿ ಪ್ರಕ್ರಿಯೆ: ಅರ್ಹ ನಿರುದ್ಯೋಗಿಗಳು ಸೇವಾಸಿಂಧು https://sevasindhugs.karnataka.gov.in
ಭೇಟಿ ನೀಡಿ ನೋಂದಣಿ ಮಾಡಬಹುದು. ಇದಲ್ಲದೇ ಕರ್ನಾಟಕ ಒನ್, ಗ್ರಾಮಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಕೂಡ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಯುವ ನಿಧಿ ಅರ್ಜಿಗಳು ಡಿಸೆಂಬರ್ 26 ರಿಂದ ಪ್ರಾರಂಭವಾಗುತ್ತವೆ.
ಅರ್ಹತೆಗಳು
1) ಡಿಪ್ಲೊಮಾ/ಡಿಗ್ರಿ 2023 ನೇ ವರ್ಷದಲ್ಲಿ ಪಾಸ್ ಆಗಿರಬೇಕು.
2) ಡಿಪ್ಲೊಮಾ/ಡಿಗ್ರಿ ಮುಗಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಅಡ್ಮಿಷನ್ ಆಗಿರಬಾರದು.
3) ಕನಿಷ್ಠ ಹತ್ತು ವರ್ಷಗಳಕಾಲ ಕರ್ನಾಟಕದಲ್ಲಿ ವ್ಯಾಸಂಗ ಮಾಡಿರಬೇಕು.
4) ಸರ್ಕಾರಿ/ಅರೆ ಸರ್ಕಾರಿ/ಕಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರಬಾರದು.
5) ಆಧಾರ ಕಾರ್ಡಿಗೆ ಮೊಬೈಲ್ ನಂಬರ ಲಿಂಕ ಆಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
1) ಆಧಾರ ಕಾರ್ಡ
2) ಮೊಬೈಲ್ ನಂಬರ, ಇಮೇಲ್ ಐಡಿ
3) SSLC, PUC
4) ಡಿಪ್ಲೊಮಾ/ಡಿಗ್ರಿ ಕೊನೆಯ ಮಾರ್ಕ್ಸ್ ಕಾರ್ಡ
5) ಆರು ವರ್ಷಗಳ ಕಾಲ ಕರ್ನಾಟಕದಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ದಾಖಲೆಗಳನ್ನು ಕೊಡಬೇಕು
* ಡಿಗ್ರಿ ಮಾರ್ಕ್ಸ್ ಕಾರ್ಡ
* ಡಿಪ್ಲೊಮಾ ಮಾರ್ಕ್ಸ್ ಕಾರ್ಡ
* ರೇಷನ ಕಾರ್ಡ
6) ಅಂಗವಿಕಲ ಪ್ರಮಾಣ ಪತ್ರ. ( ಇದ್ದರೆ ಮಾತ್ರ)
ಪ್ರಥಮ ವರ್ಷದ ಪಿಹೆಚ್.ಡಿ ಪ್ರಾಂಭಿಸಿದ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ ಅರ್ಜಿ ಆಹ್ವಾನ
ಆರಂಭದ ಕೆಲವು ದಿನಗಳು ಸರ್ವರ್ ಸಮಸ್ಯೆ ಉಂಟಾಗಬಹುದು ಅಥವಾ ತಾಂತ್ರಿಕ ದೋಷಗಳು ಕಂಡು ಬರಬಹುದು. ಯುವ ನಿಧಿ ಯೋಜನೆಗೆ ಯ್ಯಾವುದೆ ಕೊನೆಯ ದಿನಾಂಕ ಇರುವುದಿಲ್ಲ ಹಾಗಾಗಿ ಎಲ್ಲ ವಿದ್ಯಾರ್ಥಿಗಳು ಸಹಕರಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಗ್ರಾಮ ಒನ್ ಕೇಂದ್ರ.
2023-24ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ ಡಿ.30 ರಂದು ಆದರ ನಂತರ ಪ್ರಥಮ ವರ್ಷದ ಪಿಹೆಚ್.ಡಿ ಪ್ರಾರಂಭಿಸಿರಬೇಕು.) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
2023-24ನೇ ಸಾಲಿನಲ್ಲಿ ಕರ್ನಾಟಕ ಶಾಸಬದ್ದ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್-ಲೈನ್ ಮೂಲಕ ಅರ್ಜಿಯನ್ನು ಜಿಲ್ಲಾ ಕಚೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜ.10 ರ ರೊಳಗೆ ಸಂಜೆ 5:00 ಗಂಟೆಯವರೆಗೆ ಸಮಯ ಇರುತ್ತದೆ.
ಹೆಚ್ಚಿನ ವಿವರಗಳಿಗಾಗಿ ಇಲಾಖಾ 53 3 https://bcwd.karnataka.gov.in g ಲಭ್ಯವಿದ್ದು ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ, ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಬಹುದು, ದೂ.ಸಂ: 8050770004, 08532295996 ಗೆ (ಕಛೇರಿ ಕಾರ್ಯನಿರ್ವಹಿಸುವ ಸಮಯ ಬೆಳಗ್ಗೆ 10.00 ರಿಂದ ಸಂಜೆ 5.30ರ ವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ) ಸಂಪರ್ಕಿಸಹುದೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.