Breaking
Tue. Dec 17th, 2024
Spread the love

ಆತ್ಮೀಯ ರೈತ ಬಾಂಧವರೇ,
ರಾಜ್ಯ ಸರ್ಕಾರವು ಇಲ್ಲಿಯವರೆಗೆ ಯಾವ ಯಾವ ರೈತರ ಖಾತೆಗೆ ನೇರವಾಗಿ ಬೆಳೆಹಾನಿ ಪರಿಹಾರದ ಹಣ ಜಮಾ ಮಾಡಿದೆ ಎಂಬ ಪಟ್ಟಿಯನ್ನು ಇದೀಗ ಬಿಡುಗಡೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂದು ಒಂದೇ ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲಿಯೇ ತಿಳಿಯಿರಿ. ಹಾಗೆಯೇ ಒಂದು ವೇಳೆ ನಿಮಗೆ ಹಣ ಜಮಾ ಆಗದೇ ಇದ್ದರೆ ನೀವೇನು ಮಾಡಬೇಕು ಮಾಡಬೇಕು ಎಂದು ಈ ಕೆಳಗೆ ತಿಳಿದುಕೊಳ್ಳಿ.

ಹಂತ 1:- ಮೊದಲಿಗೆ ಸರ್ಕಾರದ ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ತೆರಿಯಿರಿ. ಸರ್ಕಾರ ನೀಡಿರುವ ಈ ಕೆಳಗಿನ ಲಿಂಕ್ ಅನ್ನು ಪ್ರೆಸ್ ಮಾಡಿ
https://parihara.karnataka.gov.in/service87/

ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ download ಮಾಡುವುದು ಹೇಗೆ? ಬೆಳೆ ಪರಿಹಾರ, ಬೆಳೆ ವಿಮೆ, ಸಾಲ ಪಡೆಯಲು, ಬೆಂಬಲ ಬೆಲೆ ಕೊಡಲು ಸರ್ವೇ ಅವಶ್ಯಕ

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಕೆಳಗೆ ತೋರಿಸಿದಂತೆ ವರ್ಷ, ಋತು,ವಿಪತ್ತಿನ ವಿಧವನ್ನು ಆಯ್ಕೆ ಮಾಡಿ, ನಂತರ ಕೆಳಗೆ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ, Get Report ಮೇಲೆ ಕ್ಲಿಕ್ ಮಾಡಿ.

ಹಂತ 3- ನಂತರ ನಿಮಗೆ ಕೆಳಗೆ ತೋರಿಸಿದಂತೆ ಪಟ್ಟಿ ಡೌನ್ಫೋಡ್ ಆಗಿದ್ದು ಕಾಣುತ್ತದೆ. ಅಲ್ಲಿ ನಿಮ್ಮ ಗ್ರಾಮದಲ್ಲಿ ಇಲ್ಲಿಯವರೆಗೆ ಯಾವ ಯಾವ ರೈತರಿಗೆ ಬರ ಪರಿಹಾರ ಹಣ ಜಮಾ ಆಗಿದೆ ಅವರ ಹೆಸರು ಅರ್ಹ ಮತ್ತು ಅನರ್ಹ ಪಟ್ಟಿಯಲ್ಲಿ ತೋರಿಸಲು ಶುರು ಮಾಡುತ್ತಿದ್ದು ನೀವು ನಿಮ್ಮ ಹೆಸರನ್ನು ಪಟ್ಟಿಯಲ್ಲಿ ಪರಿಶೀಲಿಸಬಹುದು. ಒಂದು ವೇಳೆ ನಿಮಗೆ ಹಣ ಬಂದಿಲ್ಲ ವಾದರೆ ನಿಮ್ಮ ಹತ್ತಿರದ ತಹಶೀಲ್ದಾರ್ ಕಚೇರಿಯಲ್ಲಿ ಅಥವಾ ಗ್ರಾಮ ಲೆಕ್ಕಾಧಿಕಾರಿ ಕಡೆ ಹೋಗಿ ಬೇಟಿ ನೀಡಿ

12.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೇರಳದಲ್ಲಿ ಮಳೆ ಕ್ಷೀಣಿಸಿರುವುದರಿಂದ ಕೊಡಗು, ಮೈಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಕೇರಳದಲ್ಲಿ ಉತ್ತಮ ಮಳೆಯಾದರೆ ಮಾತ್ರ ಈ ಮೂರು ಜಿಲ್ಲೆಗಳಲ್ಲಿ ಪರಿಸ್ಥಿತಿ ಸರಿ ಹೋಗಬಹುದು.

ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ದಕ್ಷಿಣ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಈಗಿನಂತೆ ಜುಲೈ 12ರಿಂದ ಮುಂಗಾರು ಚುರುಕಾಗುವ ಲಕ್ಷಣಗಳಿದ್ದು ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಜುಲೈ 14ರಿಂದ ಮತ್ತು ಅದರ ಮುಂದಿನ 3 ಅಥವಾ 4 ದಿನಗಳ ಕಾಲ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 12ರಿಂದ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.

13 07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು. ಕೊಡಗು ಅಲ್ಲಲ್ಲಿ, ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ, ಧಾರವಾಡ, ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲಿ ಸಾಮಾನ್ಯ ಚಿಕ್ಕೋಡಿ ಸುತ್ತಮುತ್ತ ಉತ್ತಮ ಇರಬಹುದು. ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಈಗಾಗಲೇ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗಿದ್ದು, ಈಗಿನಂತೆ ಜುಲೈ 15ರ ತನಕ ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜುಲೈ 19ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಕ್ರಮವಹಿಸಿ

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿ.ಪಂ.ಸಿಇಒ ಎಸ್ ಭರತ್ ಇವರ ಅಧ್ಯಕ್ಷತೆಯಲ್ಲಿ ಗುರುವಾರ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಜಿ.ಪಂ.ಸಿಇಓ ಭರತ್ ಎಸ್ ಅವರು ಮಾತನಾಡಿ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಡೆಂಗ್ಯೂ ರೋಗವನ್ನು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಗಮನಹರಿಸಿ ಗ್ರಾಮಮಟ್ಟದಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

ವೈಯಕ್ತಿಕ ಶೌಚಾಲಯ ನಿರ್ಮಾಣದ ವಿಷಯವಾಗಿ ಅವಶ್ಯಕತೆಯನುಸಾರ ವೈಯಕ್ತಿಕ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣ ಮಾಡಲು ಕಾರ್ಯಾದೇಶ ವಿತರಿಸಿ ತುರ್ತಾಗಿ ಪ್ರಗತಿ ಸಾಧಿಸುವಂತೆ ಸೂಚಿಸಿದರು. ಈಗಾಗಲೇ ತಿಳಿದಿರುವಂತೆ ಗ್ರಾಮದಲ್ಲಿ ಮೂಲ ಸಮಸ್ಯೆಗಳಲ್ಲಿ ಒಂದಾದ ಕೊಳಚೆ ನೀರು ನಿರ್ವಹಣೆಯ ವಿಷಯವಾಗಿ ಹಲವಾರು ಸವಾಲುಗಳು ತಲೆದೂರುತ್ತಿದ್ದು ತುರ್ತಾಗಿ ಬೂದು ನೀರು ನಿರ್ವಹಣೆಯ ಕಾಮಗಾರಿಗಳನ್ನು ಪ್ರಾರಂಭಿಸಿ ಮುಕ್ತಾಯಗೊಳಿಸಲು ಕ್ರಮ ವಹಿಸಬೇಕೆಂದರು. ಸ್ವಚ್ಛ ಭಾರತ್ ಮಿಷನ್ : ವೈಯಕ್ತಿಕ


ಶೌಚಾಲಯ:- ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಿ ಗುತಿಸಿರುವ ವೈಯಕ್ತಿಕ ಫಲಾನುಭವಿಗಳಿಗೆ ಕಾಮಗಾರಿ ಆದೇಶವನ್ನು ನೀಡಿ ಕೂಡಲೇ ಶೌಚಾಲ(ರುವನ್ನು ನಿರ್ಮಾಣ ಮಾಡಿಕೋಲಳುವಂತೆ ಪ್ರೇರೇಪಿಸುವುದು.

ಘನತ್ಯಾಜ್ಯ ವಿಲೇವಾರಿ ಘಟಗಳ ಸ್ಥಾಪನೆ:

ಗ್ರಾಮಗಳಲ್ಲಿ ಮನೆ-ಮನೆಗಳಿಂದ ಸಂಗ್ರಹಿಸಬೇಕಿರು ಹಸಿ ಮತ್ತು ವಣ ಕಸಗಳನ್ನು ವಿಂಗಡಣೆ ಮಾಡಿ ಸಮಗ್ರವಾಗಿ ನಿರ್ವಹಣೆ ಮಾಡುವ ಬಗ್ಗೆ ಎಲ್ಲಾ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಗಮನಹರಿಸುವುದು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ

ಮಹಿಳಾ ಭಾಗವಹಿಸುವಿಕೆ ಪ್ರಮಾಣ ಹೆಚ್ಚಳ:-

ಆಯುಕ್ತಾಲಯ ನಿರ್ದೇಶನದಂತೆ ಕಡ್ಡಾಯವಾಗಿ ಕನಿಷ್ಠ 60% ರಷ್ಟು ಪ್ರಗತಿ ಸಾಧಿಸಬೇಕಿದ್ದು ಪ್ರಸ್ತುತ ಜಿಲ್ಲೆಯ ಪ್ರಗತಿಯು ಶೇಕಡಾ 49.24 ರಷ್ಟಿದ್ದು ಈಬಗ್ಗೆ ಹೆಚ್ಚಿನ ಮುತುವರ್ಜಿವಹಿಸಿ ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಪ್ರಗತಿ ಸಾಧಿಸಲು ಸೂಚಿಸಿದರು.

ಕಾಮಗಾರಿಗಳ ಮುಕ್ತಾಯ ವರದಿ ಸಲ್ಲಿಸುವ ಬಗ್ಗೆ:-

ಜಿಲ್ಲೆಯಲ್ಲಿ ಕಳೆದೆರಡು ವರ್ಷಗಳಿಂದ ಮುಕ್ತಾಯಗೊಳಿಸದೇ ಬಾಕಿ ಉಳಿದಿರುವ ಸುಮಾರು ಕಾಮಗಾರಿಗಳನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಮುಕ್ತಾಯಗೋಳಿಸದೇ ಇರುವುದು ಕಂಡುಬಂದಿದ್ದು ಸಂಭಂಧಿಸಿದ ಅಧಿಕಾರಿ/ಸಿಬ್ಬಂದಿಗಳು ಈಬಗ್ಗೆ ತುರ್ತಾಗಿ ಕಾಮಗಾರಿನಾರು ಮತ್ತೊಮ್ಮೆ ಪರಿಶೀಲಿಸಿ ಮುಕ್ತಾಯಗೊಳಿಸುವುದು.


ಸಾಮಾಜಿಕ ಲೆಕ್ಕ ಪರಿಶೋಧನೆ ಆಡಾಕ್ ಸಭೆ ಆಯೋಜನೆ & ವಸೂಲಾತಿ ಬಗ್ಗೆ ರಾಜ್ಯಮಟ್ಟದಲ್ಲಿಈ ವಿಷಯವಾಗಿ ಆಗಿಂದ್ದಾಗ್ಗೆ ಪ್ರಗತಿ ಪರಿಶೀಲನೆ ಕೈಗೊಳ್ಳುತ್ತಿದ್ದು ತಾಲ್ಲೂಕು ಮಟ್ಟದಲ್ಲಿ ನಿಯಮಾನುಸಾರ ವೇಳಾಪಟ್ಟಿಯಂತೆ ಆಡಾಕ್ ಸಭೆಗಳನ್ನು ಆಯೋಜಿಸುವುದು ಹಾಗೂ ಜಿಲ್ಲೆಯಲ್ಲಿ ದಾಖಲಾಗಿರುವ ಸಾಮಾಜೀಕ ಲೆಕ್ಕ ಪರಿಶೋಧನಾ ದೂರುಗಳನ್ನು ವಸೂಲಾತಿ ಮಾಡಿ ಇತ್ಯರ್ಥಪಡಿಸುವುದು. ಹೌಸಿಂಗ್ ಯೋಜನೆ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯತಿಗಳಲ್ಲಿ ಸದರಿ ಯೋಜನೆಯಡಿ ಮನೆ ನಿರ್ಮಾಣ ಸೌಲಭ್ಯ ಪಡೆದಿರುವ ಫಲಾನುಭವಿಗಳು ಮನೆ ನಿರ್ಮಾಣ ಮಾಡಿಕೊಳ್ಳಲು ಕಾರ್ಯಾದೇಶ ವಿತರಿಸಿದ್ದರು ಕೆಲವರು ಪ್ರಾರಂಭ ಮಾಡದೇ ಹಾಗೆ ಇರುವುದು ಕಂಡುಬಂದಿರುತ್ತದೆ ಅಂತಹ ಫಲಾನುಭವಿಗಳಿಗೆ ಖುದ್ದಾಗಿ ಮನೆ ಮನೆ ಭೇಟಿ ಮಾಡುವ ಮೂಲಕ ಶೀಘ್ರವೆ ಪ್ರಾರಂಭಿಸಿ ಪ್ರಗತಿ ಸಾಧಿಸಲು ತಿಳಿಸಲು ಕ್ರಮವಹಿಸುವಂತೆ ಸೂಚಿಸಿದರು.

ಆಸ್ತಿ ತೆರಿಗೆ ವಸೂಲಾತಿ:

ಗ್ರಾಮ ಪಂಚಾಯತಿಯಲ್ಲಿ ನಿರಿಕ್ಷಿತ ಮಟ್ಟದಲ್ಲಿ ತರಿಗೆ ಸಂಗ್ರಹಣೆ ಆಗುತ್ತಿಲ್ಲದ ಕಾರಣ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಖುದ್ದಾಗಿ ಗಮನಹರಿಸಿ ಅಂತಹ ಗ್ರಾಮ ಪಂಚಾಯತಿಗಳಿಗೆ ಭೇಟಿಮಾಡುವುದು. ಸಿಬ್ಬಂದಿಗಳ ಸಮಸ್ಯೆ ಇರುವಲ್ಲಿ ಸರ್ಕಾರದ ನಿರ್ದೇಶನದಂತೆ ಸ್ವ-ಸಹಾಯ ಸಂಘದ ಸದಸ್ಯರಿಂದ ವಸೂಲು ಮಾಡಿಸಲು ಕ್ರಮವಹಿಸುವಂತೆ ಸೂಚಿಸಿದರು.

ಆಸ್ತಿ ಸಮೀಕ್ಷೆ:

ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಸರ್ವೆ ಮಾಡಿಸಲು ಸೂಚಿಸಲಾಗಿತ್ತು ಅದರಂತೆ ಆಸ್ತಿ ಸರ್ವೆ ಮಾಡಲು ಬಾಕಿ ಇರುವವರು ಕೂಡಲೇ ಪ್ರಗತಿ
ಸಾಧಿಸುವುದು.


ಬಯೋಮೆಟ್ರಿಕ್ ಹಾಜರಾತಿ ಬಗ್ಗೆ:-

ಎಲ್ಲಾ ವರ್ಗದ ಅಧಿಕಾರಿಗಳ ಪ್ರತಿ ದಿವಸ ಹಾಜರಾತಿಯನ್ನು ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸುತ್ತಿದ್ದು ಕಡ್ಡಾಯವಾಗಿ ಕಛೇರಿಗಳಿಗೆ ತೆರಳಿ ಸಾರ್ವಜನಿಕರಿಗೆ ಗ್ರಾಮ ಪಂಚಾಯತಿಲ್ಲಿ ಲಭ್ಯವಿರುವಂತೆ ಕಾರ್ಯನಿರ್ವಹಿಸಲು ತಿಳಿಸಿದರು.

ಗ್ರಾಮ ಆರೋಗ್ಯ ಅಭಿಯಾನ ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಮುಖ್ಯ ಲೆಕ್ಕಾಧಿಕಾರಿಗಳು ಹಾಗೂ ಮುಖ್ಯ ಯೋಜನಾಧಿಕಾರಿ, ಜಿಲ್ಲಾ ಪಂಚಾಯತಿ ರವರು ಮತ್ತು ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಿಬ್ಬಂದಿಗಳು,ಎಲ್ಲಾ ಗ್ರಾಮ ಪಂಚಾಯಿತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ, ತಾಲ್ಲೂಕು ಮಟ್ಟದ ಎಲ್ಲಾ ಯೋಜನೆಗಳ ಸಿಬ್ಬಂದಿಗಳು ಹಾಜರಿದ್ದರು.

ಪಂಚಾಯತ್ ರಾಜ್ ವಿಷಯಗಳು

C-TARA ಅಪ್ಲಿಕೇಶನ್ ಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ

ಸುವರ್ಣ ಸೌಧದಲ್ಲಿ ಶುಕ್ರವಾರ (ಜು.12) ಜರುಗಿದ 2024- 25ನೇ ಸಾಲಿನ ಪ್ರಥಮ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ “ಅ-ಖಿಂಖಂ”ಟಾಸ್ಕ ಅಸೈನಮೆಂಟ್ ಮತ್ತು ರಿವ್ಯೂವ್ ಅಪ್ಲಿಕೇಶನ್” ಗೆ ಲೋಕಪಯೋಗಿ ಸಚಿವರು ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಜಿಲ್ಲೆಯ ಪಂಚಾಯತ್ ರಾಜ್ ಇಲಾಖೆಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳು ಕಾರ್ಯಕ್ಷೇತ್ರಕ್ಕೆ ತೆರಳಿ ಉದಾಹರಣೆಗೆ ಶಾಲೆ, ಅಂಗನವಾಡಿ, ಪಿ.ಎಚ್.ಸಿ. ಹಾಸ್ಟೆಲ್ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಬಗೆ ಹರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ವಿಶೇಷವಾಗಿ ಮಾನಿಟರಿಂಗ್ ಆಪ್ ಸಿದ್ಧಪಡಿಸಿರುತ್ತಾರೆ. ಇದು ಎಲ್ಲ ಮಟ್ಟದ ಅಧಿಕಾರಿಗಳು ಸಾರ್ವಜನಿಕರಿಗೆ ಸುಲಭವಾಗಿ ಕೈಗೆಟಕಿ ಅವರ ಸಮಸ್ಯೆಗಳನ್ನು ಬಗೆಹರಿಸಲು ಸಹಕಾರಿಯಾಗಿದೆ.

ಈ ಆಪ್ ನಲ್ಲಿ ವೆಬ್ ಪೊರ್ಟ ಮತ್ತು ಅಳತ ಮೊಬೈಲ್ ಅಪ್ಲಿಕೇಶನ್ ಎರಡು ವಿಧವಿದ್ದು, ವೆಬ್ ಪೊರ್ಟನಲ್ಲಿ ಎಲ್ಲ ಅಧಿಕಾರಿಗಳ ಕಾರ್ಯ ವೈಖರಿಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಕ್ಷೀಸಲು ಅವಕಾಶವಿದೆ ಹಾಗೂ ಮೊಬೈಲ್ ಆಪ್ ನಲ್ಲಿ ಸಾರ್ವಜನಿಕರ ದೂರುಗಳನ್ನು ಸಿ.ಇ.ಒ ರವರು ತಾಲ್ಲೂಕಾವಾರು ಹಾಗೂ ಇಲಾಖಾವಾರು ದೂರುಗಳನ್ನು ಹಂಚಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಕೊಂಡು ಬಗೆಹರಿಸಲು ಈ ಒಂದು ಮಾನಿಟರಿಂಗ್ ಆಪ್ ನಲ್ಲಿ ಅವಕಾಶವಿರುತ್ತದೆ.

ಸಮಸ್ಯೆಯ ಗಂಭಿರತೆಯನ್ನು ಅರಿತು ಆದ್ಯತೆ ಮೇಲೆ ಕೆಲಸವನ್ನು ನಿರ್ವಹಿಸಲು ಈ ಒಂದು ಆಪ್ ನಲ್ಲಿ ಅವಕಾಶವಿದ್ದು, ಕೆಲಸದ ಹಂಚಿಕೆ ಮಾಡಿದ ಅಧಿಕಾರಿಯೇ ಸ್ಥಳಕ್ಕೆ ಭೇಟಿ ನೀಡಿ ಸಭೆಯಲ್ಲಿ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ರಾಜ್ಯ ಸಭಾ ಸದಸ್ಯರಾದ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ನಗರ ಪೊಲಿಸ್ ಆಯುಕ್ತ ಯಡಾ ಮಾರ್ಟಿನ ಮಾರ್ನಬ್ಯಾಂಗ್‌, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ವಿಧಾನ ಸಭಾ, ವಿಧಾನ ಪರಿಷತ ಸದಸ್ಯರುಗಳು, ನಾಮ ನಿರ್ದೆಶನ ಸದಸ್ಯರುಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸರಕಾರಿ ನೌಕರಿ ಮೇಲೆ ಅವಲಂಬಿತರಾಗದೆ ಸ್ವಾವಲಂಬಿಗಳಾಗಿ

ಪದವಿ ಪಡೆದ ಎಲ್ಲರಿಗೂ ಸರಕಾರದ ನೌಕರಿಯೇ ಬೇಕೆಂದರೆ ಸಾಧ್ಯವಾಗುವುದಿಲ್ಲ. ಅದರ ಬದಲಾಗಿ ನೀವುಗಳು ಸ್ವಾವಲಂಬಿ ಬದುಕನ್ನು ಸಾಗಿಸಲು ಬೇಕಾಗುವ ಕೌಶಲ್ಯಗಳನ್ನು ಬಳಸಿಕೊಂಡು ಸ್ವಾವಲಂಬಿಗಳಾಗಿರಿ ಎಂದು ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿವಿಧ ಸಾಂಘಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಈಗಿನ ದಿನಗಳಲ್ಲಿ ಸ್ವಾವಲಂಬಿ ಜೀವನ ನಡೆಸಲು ಸಾವಿರಾರು ದಾರಿಗಳಿವೆ. ಆದರೆ ಈ ದಾರಿಯಲ್ಲಿ ಹೋಗಲು ಕೌಶಲ್ಯದ ಅವಶ್ಯಕತೆ ಇದೆ. ಅದನ್ನು ನೀವು ಬೆಳೆಸಿಕೊಳ್ಳಬೇಕು. ಕೆ. ಎ.ಎಸ್. ಐ. ಎ. ಎಸ್. ಪರೀಕ್ಷೆಗಳ ಕಡೆಗೆ ನಿಮ್ಮ ಗಮನ ಹರಿದರೆ ಅದರಿಂದ ಉತ್ತಮ ಅಧಿಕಾರಿಗಳಾಗಬಹುದು. ಇಂಟರ್‌ನೆಟ್ ಸೌಲಭ್ಯ ಈಗ ಇಡೀ ಜಗತ್ತನ್ನೆ ನಿಮ್ಮ ಮುಂದೆ ತೆರೆದಿಡುತ್ತದೆ. ಇದನ್ನು ಸಮರ್ಪಕವಾಗಿ ಬಳಸಿಕೊಂಡು ನೀವುಗಳು ಜೀವನದಲ್ಲಿ ಉನ್ನತ ಸ್ಥಾನವನ್ನು ಗಳಿಸಬಹುದು ಎಂದು ಶಾಸಕ ಪಾಟೀಲ ಹೇಳಿದರು. ಈ ಸಾರೆ ನ್ಯಾಕ್ ಕಮಿಟಿಯಿಂದ ಈ ಕಾಲೇಜಿಗೆ ಬ ಪ್ಲಸ್ ಶ್ರೇಣಿ ದೊರಕಿದೆ ಎಂದು ತಿಳಿದು ಬಹಳಷ್ಟು ಸಂತೋಷವಾಯಿತು.

ಆದರೆ ಇಲ್ಲಿನ ಶಿಕ್ಷಕರ ಶ್ರಮ ಇಲ್ಲಿಗೇ ನಿಲ್ಲದೆ ಎ ಗ್ರೇಡ್ ನ್ನು ಪಡೆಯಲು ಶ್ರಮಿಸಬೇಕೆಂದರು.ಗುಡಗೇರಿ ಕಾಲೇಜಿನ ಪ್ರಾಚಾರ್ಯ ಜಿ. ಸಿ. ಗುಮ್ಮಗೋಳಮಠ ಮಾತನಾಡಿ2007ರಲ್ಲಿ ನರೇಗಲ್ಲ ಪಟ್ಟಣದಲ್ಲಿ ಪ್ರಥಮ ದರ್ಜೆ ಕಾಲೇಜು ಪ್ರಾರಂಭವಾದಾಗ ನಾನು ಪ್ರಾಚಾರ್ಯನಿದ್ದೆ. ಈಗ ಈ ಮಹಾವಿದ್ಯಾಲಯ ಬೆಳೆದು ನಿಂತಿರುವ ಪರಿಯನ್ನು ಕಂಡು ನನಗೆ ಅತೀವ ಸಂತಸ ಮತ್ತು ಹೆಮ್ಮೆಯಾಗಿದೆ. ಈ ಕಾಲೇಜು ಹೀಗೇ ಉತ್ತರೋತ್ರ ಅಭಿವೃದ್ಧಿಯನ್ನು ಕಾಣಲಿ ಮತ್ತು ವಿದ್ಯಾರ್ಥಿಗಳೆಲ್ಲರ ಜೀವನ ಸುಖಮಯವಾಗಲಿ ಎಂದು ಹಾರೈಸಿದರು. ಕಾಲೇಜು ಪ್ರಾಚಾರ್ಯ ಈ. ಆರ್. ಲಗಳೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶರಣಪ್ಪ ಕಮಗೂಳಿ ಪ್ರಾರ್ಥಿಸಿದರು. ಪ್ರಾಧ್ಯಾಪಕಿ ಜಯಶ್ರೀ ಮುತಗಾರ ಸ್ವಾಗತಿಸಿದರು. ಪ್ರಾಧ್ಯಾಪಕ ಎಸ್. ಎಲ್. ಗುಳೇದ ಗುಡ್ಡ ಮತ್ತು ಎಮ್. ಎಫ್. ತಹಶಿಲ್ದಾರ ಪರಿಚಯಿಸಿದರು. ಪ್ರಾಧ್ಯಾಪಕಿ ಸುನಂದಾ ಮುಂಜಿ ವರದಿ ವಾಚನ ನೀಡಿದರು. ಮೀನಾಕ್ಷಿ ಕೆ.ಎಚ್‌. ವಂದಿಸಿದರು.

Related Post

Leave a Reply

Your email address will not be published. Required fields are marked *