ಜಿಲ್ಲೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 4 ಹೆಚ್ಚುವರಿ ಬೀಜ ಮಾರಾಟ ಕೇಂದ್ರಗಳು ಸೇರಿ ಒಟ್ಟು 37ರೈತ ಸಂಪರ್ಕ ಕೇಂದ್ರಗಳಲ್ಲಿ ತೊಗರಿ- 3246.80, – 135.25, – 918.00ಕ್ವಿಂಟಾಲ್, ಹೆಸರು-35.05ಕ್ವಿಂಟಾಲ್, ಮೆಕ್ಕೆಜೋಳ-17.60 ಕ್ವಿಂಟಾಲ್ ಹಾಗೂ ಸೂರ್ಯಕಾಂತಿ-52.50ಕ್ವಿಂಟಾಲ್ ಸೇರಿ ಒಟ್ಟು 4405.20ಕ್ವಿಂಟಾಗಳಷ್ಟು ಬಿತ್ತನೆ ಬೀಜಗಳನ್ನು ಈಗಾಗಲೇ ದಾಸ್ತಾನು ಮಾಡಲಾಗಿದ್ದು, 3044.78 ಕ್ವಿಂಟಾಲ್ ನಷ್ಟು ವಿತರಣೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಸಿರವಾರ ತಾಲೂಕಿನಲ್ಲಿ ತೊಗರಿ-483.80ಕ್ವಿಂಟಾಲ್, ಭತ್ತ-110.0 ಕ್ವಿಂಟಾಲ್, ಸಜ್ಜೆ-4.05 ಕ್ವಿಂಟಾಲ್, ಸೂರ್ಯಕಾಂತಿ 4.30 ಕ್ವಿಂಟಾಲ್ ಹಾಗೂ ಹೆಸರು-3.00 ಕ್ವಿಂಟಾಲ್ ಸೇರಿ ಒಟ್ಟು 605.15ಕ್ವಿಂಟಾಗಳಷ್ಟು ಬಿತ್ತನೆ ಬೀಜಗಳನ್ನು ಈಗಾಗಲೇ ದಾಸ್ತಾನು ಮಾಡಲಾಗಿದ್ದು, ಭತ್ತ, ತೊಗರಿ ಮತ್ತು ಹೆಸರು ಸೇರಿ 439.50 ಕ್ವಿಂಟಾಲ್ ನಷ್ಟು ವಿತರಣೆ ಮಾಡಲಾಗಿದೆ.
ಸಿಂಧನೂರು ತಾಲೂಕಿನಲ್ಲಿ ತೊಗರಿ-386.60,ಕ್ವಿಂಟಾಲ್, ಭತ್ತ-275ಕ್ವಿಂಟಾಲ್, ಸಜ್ಜೆ39.91ಕ್ವಿಂಟಾಲ್, ಸೂರ್ಯಕಾಂತಿ- 22.90ಕ್ವಿಂಟಾಲ್, ಮೆಕ್ಕೆಜೋಳ 13.60 ಕ್ವಿಂಟಾಲ್ ಹಾಗೂ ಹೆಸರು-8.4 ಕ್ವಿಂಟಾಲ್ ಸೇರಿ ಒಟ್ಟು 746.41ಕ್ವಿಂಟಾಗಳಷ್ಟು ಬಿತ್ತನೆ ಬೀಜಗಳನ್ನು ಈಗಾಗಲೇ ದಾಸ್ತಾನು ಮಾಡಲಾಗಿದ್ದು, ಭತ್ತ, ತೊಗರಿ, ಸಜ್ಜೆ, ಸೂರ್ಯಕಾಂತಿ, ಮೆಕ್ಕೆಜೋಳ ಮತ್ತು ಹೆಸರು ಸೇರಿ ಒಟ್ಟು 355.39 ಕ್ವಿಂಟಾಲ್ ನಷ್ಟು ವಿತರಣೆ ಮಾಡಲಾಗಿದೆ.
2024-25ನೇ ಸಾಲಿನಲ್ಲಿ ರಾಯಚೂರಿನ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಹಾಗೂ ಸಹಕಾರಿ ಸಂಘಗಳಲ್ಲಿ 10418.22 ಮೆಟ್ರಿಕ್ ಟನ್ ಹಾಗೂ ಖಾಸಗಿ ಮಾರಾಟಗಾರರಲ್ಲಿ 97956.87 ಮೆಟ್ರಿಕ್ ಟನ್ ಸೇರಿದಂತೆ ಒಟ್ಟು 108375.09 ಮೆಟ್ರಿಕ್ ಟನ್‌ನಷ್ಟು ಇಲ್ಲಿಯವರೆಗೆ ಜಿಲ್ಲೆಯಲ್ಲಿ ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಜಾಥಕ್ಕೆ ಚಾಲನೆ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ಬುಡ ಸಹಿತ ಕಿತ್ತೊಗೆಯಲು ಸಹಕಾರ ಅತಿ ಮುಖ್ಯ
ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಬುಡ ಸಹಿತ ಕಿತ್ತೊಗೆಯಲು ಜನತೆ ಹಾಗೂ ವಿವಿಧ ಇಲಾಖೆಗಳ ಸಹಕಾರ ಅತಿ ಮುಖ್ಯವಾಗಿದೆಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಅವರು ಹೇಳಿದರು. ಅವರು ಜೂ.12ರ ಬುಧವಾರ ದಂದು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲಿಸ್ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಘಟಕ, ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ 2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.
ಮಕ್ಕಳನ್ನು ಬಾಲ ಕಾರ್ಮಿಕ ಪದ್ದತಿಗೆ ದೂಡುತ್ತಿರುವ ಪ್ರಕರಣ ಗೊತ್ತಾದ ಕೂಡಲೇ ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಯವರ ಗಮನಕ್ಕೆ ತಂದು ಮಕ್ಕಳನ್ನು ಅನಿಷ್ಠ ಪದ್ಧತಿಯಿಂದ ಮುಕ್ತರನ್ನಾಗಿ ಮಾಡಿ ಮುಖ್ಯವಾಹಿನಿಗೆ ತರಲು ಸಹಕಾರ ನೀಡಬೇಕೆಂದರು. ಮಕ್ಕಳನ್ನು ಬಾಲ್ಯದಲ್ಲೇ ಕೆಲಸಕ್ಕೆ ಕಳುಹಿಸಿ ಇವರ ಭವಿಷ್ಯ ಹಾಳು ಮಾಡುವ ಬದಲು ಶಿಕ್ಷಣ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದಲ್ಲಿ ಮಕ್ಕಳು ನಿಜಕ್ಕೂ ಮುಂದಿನ ಸತ್ಪಜೆಗಳಾಗುವುದರಲ್ಲಿ ಅನುಮಾನವಿಲ್ಲವೆಂದು ಹೇಳಿದರು. 6ರಿಂದ 18ವರ್ಷದ ಮಕ್ಕಳು ಕಾರ್ಖಾನೆಗಳು, ಮಂಡಕ್ಕಿ ಭಟ್ಟಿ, ಇಟ್ಟಿಗೆ ಭಟ್ಟಿ, ಹೋಟೆಲ್, ಸಿನಿಮಾ ಥಿಯೇಟರ್ ಮುಂತಾದ ಕಡೆಗಳಲ್ಲಿ ಶಕ್ತಿ ಮೀರಿ ದುಡಿಯುತ್ತಿದ್ದು, ಇದಕ್ಕೆ ಕಾನೂನಿನಲ್ಲಿ ಆಸ್ಪದವಿಲ್ಲ. ಗ್ರಾಮೀಣ ಭಾಗದಲ್ಲಿ ಬಡತನ ನೆಪವೊಡ್ಡಿ ಮಕ್ಕಳಿಗೆ ಸರಿಯಾದ ಶಿಕ್ಷಣ ಕೊಡಸಲು ಪ್ರಯತ್ನ ಪಡುವುದಿಲ್ಲ.
ಹೀಗಾಗಿ ಗ್ರಾಮೀಣ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣ ದೊರೆಯುವಂತಾಗಬೇಕು ಎಂದರು. ಜಾಥವು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಿಂದ ಬಸವೇಶ್ವರ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಮಾರ್ಗವಾಗಿ ತಹಶೀಲ್ದಾರ್ ಕಚೇರಿವರೆಗೂ ವಿವಿಧ ಘೋಷಣೆಗಳ ಮೂಲಕ ಜಾಥವನ್ನು ನಡೆಸಲಾಯಿತು. ಇದೇ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷಾಧಿಕಾರಿ ಶಿವಕುಮಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಭಿರಕ್ಷಕರಾದ ಶರಣಪ್ಪ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಶ್ರೀಮತಿ ಮಂಗಳ ಹೆಗಡೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುದುಕಪ್ಪ, ಜಿಲ್ಲಾ ಬಾಲ ಕಾರ್ಮಿಕರ ಯೋಜನೆ ನಿರ್ದೇಶಕ ಮಂಜುನಾಥ ರೆಡ್ಡಿ, ಕಾರ್ಮಿಕ ನಿರೀಕ್ಷಕರಾದ ಪರುಶುರಾಮ ಎನ್.ಎಸ್. ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿ ಭಂಡರಿ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಹಿಸಿದರು.