ಆತ್ಮೀಯ ನಾಗರಿಕರೇ, ನಿಮ್ಮ ಮನೆಯಲ್ಲಿ ಒಂದನೇ ತರಗತಿಯಿಂದ 10ನೇ ತರಗತಿವರೆಗೆ ಮಕ್ಕಳು ಶಾಲೆಯಲ್ಲಿ ಓದುತ್ತಿದ್ದರೆ ಅವರಿಗೆ ಇಲ್ಲಿ ಒಂದು ಸಿಹಿ ಸುದ್ದಿ ಇದೆ. ರಾಜ್ಯ ಸರ್ಕಾರದಿಂದ ಅವರಿಗೆ ಓದಲು ಸಹಾಯವಾಗಲೆಂದು ಅವರಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದಾರೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಲ್ಲಿ ಸಲ್ಲಿಸಬೇಕು ಹೇಗೆ ಸಲ್ಲಿಸಬೇಕು ಎಂದು ತಿಳಿಯಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.
ಯಾವ ಇಲಾಖೆಯು ಯಾವ ಜಾತಿಯ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುತ್ತದೆ
2023 ಮತ್ತು 2024ನೇ ಸಾಲಿನ ಪ್ರತಿಷ್ಠಿತ ವರ್ಗಗಳ ಕಲ್ಯಾಣ ಇಲಾಖೆ ಅಥವಾ ಸಮಾಜ ಕಲ್ಯಾಣ ಇಲಾಖೆಯು ಒಂದನೇ ತರಗತಿಯಿಂದ 10ನೇ ತರಗತಿವರೆಗೆ ಓದುತ್ತಿರುವ ಪ್ರತಿಷ್ಠಿತ ಜಾತಿ ಮತ್ತು ಪ್ರತಿಷ್ಠಿತ ಪಂಗಡದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಇದಕ್ಕೆ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಯೋಜನೆಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. https://ssp.karnataka.gov.in ನಂತರ ಮೇಲಿನ ಚಿತ್ರದಲ್ಲಿ ಕಾಣುವ ಹಾಗೆ ಒಂದು ವೆಬ್ಸೈಟ್ ಗೆ ನೀವು ಭೇಟಿ ನೀಡುತ್ತೀರಿ. ಅಲ್ಲಿ ನಿಮ್ಮ ಖಾತೆಯನ್ನು ರಚಿಸಿ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ. ಬೇಗನೆ ನೀವು ಎಲ್ಲ ದಾಖಲಾತಿಗಳನ್ನು ತೆಗೆದುಕೊಂಡು ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕಾಗಿ ವಿನಂತಿ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
1. ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ಮತ್ತು ಆಧಾರ್ ನಲ್ಲಿ ಇರುವ ಹಾಗೆ ಹೆಸರು
2. ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
3. ವಿದ್ಯಾರ್ಥಿಗಳ ಇ-ಮೇಲ್ ಐ.ಡಿ.
4. ವಿದ್ಯಾರ್ಥಿಗಳ ಎಸ್ ಎಸ್ ಎಲ್ ಸಿ ನೋಂದಣಿ ಸಂಖ್ಯೆ
5. ವಿದ್ಯಾರ್ಥಿಯ ಹೆಸರಿನಲ್ಲಿ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ
6. ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು ಡಿ ಐ ಡಿ ಗುರುತಿನ ಸಂಖ್ಯೆ
7. ವಿದ್ಯಾರ್ಥಿಯು ವಾಸವಿರುವ ಜಿಲ್ಲೆ, ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ.
8. ವಿದ್ಯಾರ್ಥಿಯ ಆಧಾರ್ ಕಾರ್ಡ್ ಸಿಡಿಂಗ್ ಹಾಗು NPCI mapping ಆಗಿರುವಂತಹ ರಾಷ್ಟ್ರೀಕೃತ ಬ್ಯಾಂಕ್ ಖಾತೆಯ ಸಂಖ್ಯೆ ಹೊಂದಿರಬೇಕಾಗುತ್ತದೆ.
ಮೇಲೆ ತಿಳಿಸಿರುವ ಎಲ್ಲ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ಹತ್ತಿರದ ಸೇವಾಸಿಂದು ಅಥವಾ ಕಂಪ್ಯೂಟರ್ ಅಂಗಡಿಗೆ ಹೋಗಿ ಬೇಗನೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ. ಏಕೆಂದರೆ ಅಕ್ಟೋಬರ್ 20 ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ 08282 263761 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ.
ಬೆಳೆವಿಮೆ ಹಣ ಪರಿಹಾರ, ಈ ಜಿಲ್ಲೆಯ ರೈತರಿಗೆ ಬರೋಬ್ಬರಿ 34.99 ಕೋಟಿ ರೂಪಾಯಿ ಬಿಡುಗಡೆಯಾಗಿದೆ*
ಭೋಜನಾಲಯ ಕೇಂದ್ರ ಮತ್ತು ವಿಭೂತಿ ನಿರ್ಮಾಣ ಘಟಕ ನಿರ್ಮಾಣ ಮಾಡಲು ಸಾಲ ಮತ್ತು ಸಹಾಯಧನ, ಕೂಡಲೇ ಅರ್ಜಿ ಸಲ್ಲಿಸಿ*
ನಿಮ್ಮ ಮೊಬೈಲ್ ಕಳೆದುಹೋದರೆ ಮೊದಲು ಏನು ಮಾಡಬೇಕು, ಹೇಗೆ ದೂರು ಕೊಡಬೇಕು ಇಲ್ಲಿದೆ ಸಂಪೂರ್ಣ ಮಾಹಿತಿ*