Breaking
Tue. Dec 17th, 2024

2024 ರಲ್ಲಿ ಯಾವ ಮಳೆ ಯಾವ ದಿನಾಂಕ ಬರುತ್ತದೆ ಇಲ್ಲಿ ನೋಡಿ, ಮಳೆ ಮಾಹಿತಿ

Spread the love

• ಅಶ್ವಿನಿ ನಕ್ಷತ್ರ 13/4/2024 ರಿಂದ ಆನೆಯನ್ನು ವಾಹನವಾಗಿ ಮಾಡಿಕೊಂಡು ಬರಲಿದ್ದು, ಸಾಧಾರಣೆ ಮಳೆ.  • ಭರಣಿ ನಕ್ಷತ್ರ 27/4/2024 ಕತ್ತೆ ವಾಹನವಾಗಿದ್ದು, ಸಾಧಾರಣೆ ಮಳೆ.
• ಕೃತಿಕ ನಕ್ಷತ್ರ 11/5/2024 ರಿಂದ ಕಪ್ಪೆಯನ್ನು ವಾಹನ ಮಾಡಿಕೊಂಡು ಬರಲಿದ್ದು, ಉತ್ತಮ ಮಳೆ ನಿರೀಕ್ಷೆ.
ನಂತರ ರೋಹಿಣಿ ನಕ್ಷತ್ರ ಬಂದು ಚೆನ್ನಾಗಿ ಮಳೆ ಆಗುತ್ತದೆ.

ರಾಜ್ಯದಲ್ಲಿ 600 ಇಂದಿರಾ ಕ್ಯಾಂಟೀನ್ ತೆರೆಯುವುದಾಗಿ ಸಿಎಂ ಘೋಷಣೆ

ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಾದ್ಯಂತ ಕನಿಷ್ಠ 600 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಿಸಿದ್ದಾರೆ. ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಇಂದಿರಾ ಕ್ಯಾಂಟೀನ್‌ನಲ್ಲಿ ಎಲ್ಲರಿಗೂ 5 ರೂ.ಗೆ ಬೆಳಗಿನ ಉಪಾಹಾರ ಮತ್ತು 10 ರೂ.ಗೆ ಊಟ ನೀಡಲಾಗುವುದು ಎಂದರು.

ನಾವು ಬೆಂಗಳೂರಿನಲ್ಲಿ ಒಟ್ಟು 188 ಹೊಸ ಕ್ಯಾಂಟೀನ್‌ಗಳನ್ನು ಪ್ರಾರಂಭಿಸುತ್ತಿದ್ದೇವೆ. ವಿಮಾನ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್‌ ಆರಂಭಿಸುವಂತೆ ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆ ಇತ್ತು. ಹೀಗಾಗಿ ಇಲ್ಲಿ ಎರಡು ಕ್ಯಾಂಟೀನ್ ಆರಂಭಿಸಲಾಗುತ್ತಿದೆ. ಬೆಂಗಳೂರಿನಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಗಳ ಪೈಕಿ ಈಗಾಗಲೇ 40 ಪೂರ್ಣಗೊಂಡಿದ್ದು, ಉಳಿದವು ಪ್ರಗತಿಯಲ್ಲಿವೆ ಎಂದು ಸಿಎಂ ತಿಳಿಸಿದರು.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಅಗತ್ಯವಿದೆ. ಈಗಾಗಲೇ ಒಂದು ಉದ್ಘಾಟನೆಗೊಂಡಿದ್ದು, ಇನ್ನೊಂದು ಇಂದಿರಾ ಕ್ಯಾಂಟೀನ್ ಶೀಘ್ರದಲ್ಲೇ ಬರಲಿದೆ. ಬಡವರಿಗೆ ಕಡಿಮೆ ದರದಲ್ಲಿ ಮತ್ತು ಉಪಹಾರ ನೀಡುವುದು ಇದರ ಉದ್ದೇಶವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಲಕ್ಷೇಶ್ವರ ಹಾಗೂ ಶಿರಹಟ್ಟಿ ತಾಲೂಕು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ

ಲಕ್ಷೇಶ್ವರ ಹಾಗೂ ಶಿರಹಟ್ಟಿ ತಾಲೂಕು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ಮಾರ್ಚ 12 ರಂದು ಮಧ್ಯಾಹ್ನ 3 ಗಂಟೆಗೆ ಲಕ್ಷೇಶ್ವರ ಉಮಾ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಿರಹಟ್ಟಿ ಶಾಸಕ ಡಾ.ಚಂದ್ರು ಕೆ ಲಮಾಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಕೆ.ಎಚ್‌. ಮುನಿಯಪ್ಪ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಇಂಧನ ಸಚಿವರಾದ ಕೆ.ಜೆ. ಜಾರ್ಜ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರೀಕರಣ ಸಬಲೀಕರಣ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕ‌ರ್, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ರಾಜ್ಯ ಖನಿಜ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ.ಗದ್ದಿಗೌಡರ, ವಿಧಾನಪರಿಷತ್ ಸದಸ್ಯರುಗಳಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಲಕ್ಷೇಶ್ವರ ತಾ.ಪಂ. ಯೋಜನಾ ನಿರ್ದೇಶಕರು ಹಾಗೂ ಆಡಳಿತಾಧಿಕಾರಿ ಜಗದೇವ ಬಿ, ಶಿರಹಟ್ಟಿ ತಾ.ಪಂ. ಆಡಳಿತಾಧಿಕಾರಿ ಹಾಗೂ ಜಿ.ಪಂ. ಮುಖ್ಯಯೋಜನಾಧಿಕಾರಿ ಎನ್.ಕೆ.ನಿರ್ಮಲಾ, ಲಕ್ಷೇಶ್ವರ ಪುರಸಭೆ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ ಆಗಮಿಸುವರು.

ಲಕ್ಷೇಶ್ವರ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಧರ್ಮರ ಕೃಷ್ಣಪ್ಪ , ಲಕ್ಷೇಶ್ವರ ತಹಶೀಲ್ದಾರರಾದ ವಾಸುದೇವ ಸ್ವಾಮಿ, ಶಿರಹಟ್ಟಿ, ಶಿರಹಟ್ಟಿ ತಹಶೀಲ್ದಾರರು ಹಾಗೂ ಪ.ಪಂ. ಆಡಳಿತಾಧಿಕಾರಿ ಅನಿಲ ಬಡಿಗೇರ, ಶಿರಹಟ್ಟಿ ಆರಕ್ಷಕ ವೃತ್ತ ನಿರೀಕ್ಷಕ ನಾಗರಾಜ ಮಾಡಳ್ಳಿ, ಲಕ್ಷೇಶ್ವರ ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ, ಶಿರಹಟ್ಟಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಿಮನಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

Related Post

Leave a Reply

Your email address will not be published. Required fields are marked *