ರಾಜ್ಯದಲ್ಲಿ 2023-24ನೇಸಾಲಿನಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಹಾಗೂ ಬರದಿಂದ ಉಂಟಾದ ಬೆಳೆಹಾನಿಗೆ ಘೋಷಿಸಲಾಗಿದ್ದ ವರೆಗಿನ ತಾತ್ಕಾಲಿಕ ಬೆಳೆ ಪರಿಹಾರವನ್ನು ಅರ್ಹ ರೈತರಿಗೆ ನೀಡಲು ಸರ್ಕಾರ ಶುಕ್ರವಾರ ಘೋಷಣೆ ಮಾಡಿದ್ದಾರೆ. ಸಿದ್ದು ಸರ್ಕಾರ ₹105 ಕೋಟಿ ಬೆಳೆ ವಿಮೆ ಮಂಜೂರು ರೈತರ ಖಾತೆಗೆ ನೇರ ಜಮೆ. ಮಳೆಯಾಶ್ರಿತ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್ ಗೆ 8,500 ರೂ., ನೀರಾವರಿ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್ ಗೆ 17,500ರೂ., ಬಹುವಾರ್ಷಿಕ ಬೆಳೆ ಹಾನಿಗೆ ಹೆಕ್ಟೇರ್ ಗೆ 22,500ರೂ. ಪರಿಹಾರ.
ಮಾತೃವಂದನಾ ಯೋಜನೆಗೆ ಅರ್ಜಿ ಆಹ್ವಾನ
ಕೇಂದ್ರ ಪುರಸ್ಕೃತ ಮಿಷನ್ ಶಕ್ತಿ ಉಪಯೋಜನೆ ಸಾಮರ್ಥ್ಯಯಡಿ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ತಾಯಿ ಮತ್ತು ಮಗುವಿನ ಆರೋಗ್ಯ ಮತ್ತು ಪೌಷ್ಟಿಕಾಂಶವನ್ನು ಸುಧಾರಿಸುವ ಉದ್ದೇಶದಿಂದ ಮೊದಲನೇ ಹೆರಿಗೆಯ ಗರ್ಭಿಣಿ/ಬಾಣಂತಿ ಮಹಿಳೆಯರಿಗೆ 5 ಸಾವಿರ ರೂ. ಗಳ ಸಹಾಯಧನ 2 ಕಂತುಗಳಲ್ಲಿ ನೀಡಲಾಗುತ್ತದೆ. ಗರ್ಭಿಣಿ ಎಂದು ಅಂಗನವಾಡಿ ಕೇಂದ್ರದಲ್ಲಿ ನೋಂದಣಿ (150 ದಿನಗಳ ಒಳಗಾಗಿ).
ಮೊದಲ ಕಂತು 3 ಸಾವಿರ ರೂ. ಹಾಗೂ ಎರಡನೇ ಕಂತು ಮಗು ಜನನ ನಂತರ ಮೊದಲ ಹಂತದ ಚುಚ್ಚುಮದ್ದು ಪೂರ್ಣಗೊಂಡ ಮೇಲೆ 2 ಸಾವಿರ ರೂ. ಸಹಾಯಧನ ಒದಗಿಸಲಾಗುವುದು. ಎರಡನೇ ಹೆರಿಗೆಯಲ್ಲಿ ಹೆಣ್ಣು ಮಗು ಜನಿದಲ್ಲಿ ಮಾತ್ರ 6 ಸಾವಿರ ರೂ.ಗಳ ಪ್ರಯೋಜನವನ್ನು ಒಂದೇ ಕಂತಿನಲ್ಲಿ ನೀಡಲಾಗುವುದು. ಎರಡನೇ ಮಗುವಿಗೆ ಪ್ರಯೋಜನಗಳನ್ನು ಪಡೆಯುವುದಕ್ಕಾಗಿ ಗರ್ಭಿಣಿ ಅವಧಿಯಲ್ಲಿ ಅಂಗನವಾಡಿ ಕೇಂದ್ರದಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿರುತ್ತದೆ.
ಪಾವತಿ ವಿಧಾನ ಸಹಾಯಧನವನ್ನು ನೇರ ನಗದು ವರ್ಗಾವಣೆ, ಮೂಲಕ ಫಲಾನುಭವಿಯ ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು ಫಲಾನುಭವಿಗಳಿಗೆ ನೋಂದಣಿಗೆ ಬೇಕಾಗುವ ದಾಖಲಾತಿಗಳು ಫಲಾನುಭವಿಯ ಆಧಾರ ಕಾರ್ಡ ಪ್ರತಿ, ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ ಕಡ್ಡಾಯವಾಗಿದ್ದು, ಫಲಾನುಭವಿಯ ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನರೇಗಾ ಕಾರ್ಡ, ಇ-ಶ್ರಮ ಕಾರ್ಡ, ಆಯುಷನ್ ಕಾರ್ಡ ಇದರಲ್ಲಿ ಯಾವುದಾದರೂ ಒಂದು ನಕಲು ಪ್ರತಿ ಲಗತ್ತಿಸಿ ಅರ್ಜಿಯೊಂದಿಗೆ ಹತ್ತಿರದ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ತಾಲೂಕ ಮಟ್ಟದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಬ್ಬು ಬೆಳೆಗೆ ವಿದ್ಯುತ್ ನಿಂದ ಬೆಂಕಿಗೆ ಕಂಗಾಲಾದ ರೈತ
ವಿದ್ಯುತ್ ಶಾರ್ಟ್ ಸರ್ಕಿಪ್‌ನಿಂದಾಗಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು, ಸುಮಾರು 2 ಲಕ್ಷ ರೂ. ಮೊತ್ತದ ಕಬ್ಬು ಸುಟ್ಟು ಕರಕಲಾದ ಘಟನೆ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಬಣವಿಕಲ್ಲು ಗ್ರಾಮದ ರೈತ ಕೆ ನಾಗಭೂಷಣ ತಂದೆ ಸದಾನಂದಪ್ಪ ಇವರಿಗೆ ಸೇರಿದ 4:30 ಎಕರೆ ಕಬ್ಬು ಬೆಳೆದ ಜಮೀನಿನಲ್ಲಿ ಸುಮಾರು 2:30 ಎಕರೆ ಕಬ್ಬಿನ ಬೆಳೆ ಸುಟ್ಟು ಬಸಮವಾಗಿದೆ.
5 ಲಕ್ಷ ರೂ.ಮೊತ್ತದ ಕಬ್ಬು ಬೆಳೆದಿದ್ದರು. ಮಂಗಳವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕಿಪ್‌ನಿಂದಾಗಿ ಕಬ್ಬಿನ ಗದ್ದೆಗೆ ಬೆಂಕಿ ಹೊತ್ತಿಕೊಂಡು 2 ಲಕ್ಷ ರೂ.ಬೆಲೆ ಬಾಳುವ ಕಬ್ಬು ಸುಟ್ಟು ಹೋಗಿದೆ. ಸ್ಥಳೀಯ ಸಾರ್ವಜನಿಕರು ಹಾಗೂ ನೀರಿನ ಟ್ಯಾಂಕರ್, ಜೆಸಿಬಿ ಯಂತ್ರದಿಂದ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಸುದ್ದಿ ತಿಳಿದು ಕೂಡ್ಲಗಿ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವುದರ ಮೂಲಕ ಹೆಚ್ಚಿನ ಹಾನಿಯನ್ನು ತಡೆದಿದ್ದಾರೆ. ಈ ಸಂಬಂಧ ಅಗ್ನಿಶಾಮಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು. ಬೆಳೆ ನಷ್ಟಕ್ಕೆ ತಕ್ಷಣ ಪರಿಹಾರ ಒದಗಿಸಬೇಕು ಎಂದು ರೈತರ ಸಂಘದ ತಾಲ್ಲೂಕು ಅಧ್ಯಕ್ಷರು ಹಾಗೂ ಉಪಾಧ್ಯಕ್ಷ, ಮತ್ತು ಬೆಳೆ ನಷ್ಟಾದ ರೈತ ಒತ್ತಾಯಿಸಿದ್ದಾರೆ.
ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪನ
ಟೋಕಿಯೋ: ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ ಸಂಭವಿಸಿದ್ದು, ಜಪಾನ್ ನ ಈಶಾನ್ಯ ಭಾಗದ ನನಾವೋ ನಲ್ಲಿ ಭೂ ಕಂಪನದ ಕೇಂದ್ರ ಬಿಂದು ವರದಿಯಾಗಿದೆ.
ಜಪಾನ್ ನ ಇಶಿಕಾವಾ, ನಿಗಾಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. 5 ಮೀಟರ್ (16 ಅಡಿ) ಎತ್ತರದವರೆಗೆ ಅಲೆಗಳು ಬರುವ ಸಾಧ್ಯತೆಯಿದ್ದು, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಟೋಕಿಯೊ ಮತ್ತು ಇಡೀ ಕಾಂಟೊ ಪ್ರದೇಶದಲ್ಲಿ ಕಂಪನಗಳು ಸಂಭವಿಸಿವೆ. 2011 ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿದೆ. ಆಗ ಎದ್ದ ಸುನಾಮಿ ಅಲೆಗಳು ಫುಕುಶಿಮಾ ಪರಮಾಣು ಸ್ಥಾವರವನ್ನು ನಾಶಪಡಿಸಿದ್ದವು.
ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ
ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲಿಕ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿದಿನ ಪತ್ರಿಕೆಗಳನ್ನು ವಿತರಿಸುತ್ತಾರೆ. ಈ ಕಾರ್ಮಿಕರು ಅಸಂಘಟಿತ ವಲಯಕ್ಕೆ ಸೇರಿದ್ದು ಕಾರ್ಮಿಕ ಕಾನೂನುಗಳಡಿ ನಿಗಧಿಪಡಿಸಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗಿರುತ್ತಾರೆ. ಇಂತಹ ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು 2008ರಲ್ಲಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯನ್ನು ರೂಪಿಸಿದ್ದು, ಈ ಕಾಯ್ದೆಗೆ 2006ರಲ್ಲಿ ಕರ್ನಾಟಕ ನಿಯಮ ರೂಪಿತವಾಗಿದ್ದು, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಕಾರ್ಯರೂಪಗೊಂಡಿರುತ್ತದೆ.
ದಿನಪತ್ರಿಕೆ ವಿತರಿಸುವ ಬಹುತೇಕರು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಂತಹ ಸಂದರ್ಭಗಳಲ್ಲಿ ಅಪಘಾತಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಪಘಾತದಿಂದ ಮರಣ/ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ಅವರು ಹಾಗೂ ಅವರ ಅವಲಂಬಿತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ.
ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಪಡೆಯಲು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು 16 ರಿಂದ 59 ವರ್ಷದ ವಯೋಮಾನದವರಾಗಿರಬೇಕು. ಕೇಂದ್ರ ಸರ್ಕಾರದ ಇ- ಶ್ರಮ್ ಪೋರ್ಟಲ್‌ನಲ್ಲಿ ನ್ಯೂಸ್ ಪೇಪರ್ ಬಾಯ್ ಎಂಬ ವರ್ಗದಡಿ ನೋಂದಣಿಯಾಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು.
ಇ.ಎಸ್.ಐ. ಮತ್ತು ಪಿ.ಎಫ್ ಸೌಲಭ್ಯ ಹೊಂದಿರಬಾರದು. ಎಲ್ಲ ಪತ್ರಿಕಾ ವಿತರಕರು ಇ- ಶ್ರಮ್ ಪೋರ್ಟಲ್‌ನಲ್ಲಿ ಸ್ವಯಂ ಆಗಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 (247) ಕಾರ್ಮಿಕ ಅಧಿಕಾರಿಗಳು, ಗದಗ ಜಿಲ್ಲೆ ಹಾಗೂ ಕಾರ್ಮಿಕ ನಿರೀಕ್ಷಕರು ಗದಗ 1 ಮತ್ತು 2 ನೇ ವೃತ್ತ ರೋಣ ವೃತ್ತ, ಮುಂಡರಗಿ ವೃತ್ತ, ನರಗುಂದ ವೃತ್ತ ಮತ್ತು ಶಿರಹಟ್ಟಿ ವೃತ್ತರವರ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ.
Crop codes ಬೆಳೆ ಸಮೀಕ್ಷೆ ಮಾಡುವಾಗ ಈ ಕ್ರಾಪ್ ಕೋಡ್ ಬಳಸಿಕೊಳ್ಳಿ.