ಗೃಹಲಕ್ಷ್ಮಿ ಹಣ ಬರುವ ಆಗಸ್ಟ್ ತಿಂಗಳ ಕೆಲವು ರೇಷನ್ ಕಾರ್ಡ್ ರದ್ದು ಆಗಿವೆ ಅದನ್ನು ಚೆಕ್ ಮಾಡುವುದು ಹೇಗೆ ಎಂದು ತಿಳಿಯಿರಿ.
ಮೊದಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.https://ahara.kar.nic.in/Home/EServices
ಆಮೇಲೆ ಮೂರು ಟಿಕ್ಕೆ ಕಾಣುವ ಚಿತ್ರದ ಮೇಲೆ ಕ್ಲಿಕ್ ಮಾಡಿ. e-Ration Card ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಆಮೇಲೆ Show Cancelled / Suspended list ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಆಮೇಲೆ ನಿಮ್ಮ ಜಿಲ್ಲೆ, ತಾಲೂಕು, ತಿಂಗಳ, ಮತ್ತು ವರ್ಷವನ್ನು ಆಯ್ಕೆ ಮಾಡಿ. Go ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ವಿವಿಧ ಯೋಜನೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಹೊಸಪೇಟೆ (ವಿಜಯನಗರ) : 2024-25ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಡಿ ವಿವಿಧ ಯೋಜನೆಗಳಡಿ ಅರ್ಹ ಮಹಿಳಾ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಉದ್ಯೋಗಿನಿ ಯೋಜನೆ
ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. ವಯೋಮಿತಿ 18 ರಿಂದ 55 ವರ್ಷಗಳು ಇರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಆದಾಯದ ಮಿತಿ 2 ಲಕ್ಷ ರೂಗಳು ಇರುತ್ತವೆ. ಘಟಕವೆಚ್ಚ ಕನಿಷ್ಠ 1 ಲಕ್ಷದಿಂದ ಗರಿಷ್ಠ 3 ಲಕ್ಷ ರೂಗಳು ಇದರಲ್ಲಿ 50 ರಷ್ಟು ಬಡ್ಡಿದರದಲ್ಲಿ 1.50 ಲಕ್ಷ ರೂಗಳಿಗೆ ಸಹಾಯಧನ ನೆರವು ನೀಡಲಾಗುವುದು. ಇತರೆ ವರ್ಗದ ಫಲಾನುಭವಿಗಳಿಗೆ ಆದಾಯದ ಮಿತಿ 1.50 ಲಕ್ಷ ರೂಗಳು ಇರುತ್ತವೆ. ಘಟಕವೆಚ್ಚ ಕನಿಷ್ಠ 1 ಲಕ್ಷದಿಂದ ಗರಿಷ್ಠ 3 ಲಕ್ಷ ರೂಗಳು ಇದರಲ್ಲಿ 30 ರಷ್ಟು ಬಡ್ಡಿದರದಲ್ಲಿ 90,000 ಸಹಾಯಧನ ನೆರವು ನೀಡಲಾಗುವುದು. ಚೇತನ ಯೋಜನೆ: ದಮನಿತ ಮಹಿಳೆಯರಿಗೆ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು 30,000 ರೂಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ವಯೋಮಿತಿ 18 ವರ್ಷ ಮೇಲ್ಪಟ್ಟು ಇರಬೇಕು.
ಧನಶ್ರೀ ಯೋಜನೆ
ಹೆಚ್.ಐ.ವಿ ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 30,000 ರೂಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ವಯೋಮಿತಿ 18 ದಿಂದ 60 ವರ್ಷಗಳು ಇರಬೇಕು.
ಲಿಂಗತ್ವ ಅಲ್ಪಸಂಖ್ಯಾತ ಪುರ್ನವಸತಿ ಯೋಜನೆ
ಲಿಂಗತ್ವ ಅಲ್ಪಸಂಖ್ಯಾತ ಫಲಾನುಭವಿಗೆ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು 30,000 ರೂಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ: 1993-94 ಮತ್ತು 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು 30,000 ರೂಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು, ಉದ್ಯೋಗಿನಿ ಯೋಜನೆಯ ಎಸ್.ಸಿ/ಟಿಎಸ್.ಪಿ ಬಳಕೆಯಾಗದ (ಅನ್‌ಸ್ಟೆಂಟ್) ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷೆಗಳು, ಅರ್ಜಿದಾರರು ಬಾಪೂಜಿ ಸೇವಾಕೇಂದ್ರ, ಗ್ರಾಮಒನ್ ಸೇವಾಕೇಂದ್ರ, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಸೇವಾಸಿಂಧೂ ಪೋರ್ಟಲ್ https://sevasindhu.karnataka.gov.in ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 21 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಈ ಹಿಂದೆ ಸದರಿ ಯೋಜನೆಗಳಡಿ ಸೌಲಭ್ಯ ಪಡೆದ ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. 2023-24 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿಸಲ್ಲಿಸುವ ಅಗತ್ಯವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಸವೇಶ್ವರ ಬಡಾವಣೆ, ಮಾತಾ ಆಸ್ಪತ್ರೆ ಹತ್ತಿರ ಮೆಟ್ರೋ ಪ್ಯಾಷನ್ ಅಂಗಡಿ, 1 ನೇ ಮಹಡಿ ಸಪ್ತಗಿರಿ ಶಾಲೆ ಹತ್ತಿರ, ಹೊಸಪೇಟೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೃತ್ತಿನಿರತ ಕುಶಲಕರ್ಮಿಗಳಿಗೆ ಉಪಕರಣಗಳ ವಿತರಣೆ :
ಅರ್ಜಿ ಆಹ್ವಾನ
ಕೊಪ್ಪಳ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 2024- 25ನೇ ಸಾಲಿನ ಗ್ರಾಮೀಣ ಭಾಗದ ವೃತ್ತಿನಿರತ ಕುಶಲಕರ್ಮಿಗಳಿಗೆ ಉಪಕರಣ ಸರಬರಾಜು ಯೋಜನೆಯಡಿ ವಿವಿಧ ವೃತ್ತಿಗಳಾದ ದೋಬಿ, ಕ್ಷೌರಿಕ, ಬಡಗಿತನ ಹಾಗೂ ಟೈಲರಿಂಗ್ ವೃತ್ತಿಯ ಗರಿಷ್ಟ ರೂ.8000 ಮೊತ್ತದ ಉಪಕರಣಗಳನ್ನು ಉಚಿತವಾಗಿ ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳು ಆನ್‌ಲೈನ್ ಮೂಲಕ ವೆಬ್‌ಸೈಟ್ koppal.nic.in ನಲ್ಲಿ ನಮೂದಿಸಿದ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಗ್ರಾಮ ಪಂಚಾಯತ್ ದೃಢೀಕರಣದೊಂದಿಗೆ ಪ್ರತಿಯನ್ನು ಸೆಪ್ಟೆಂಬರ್ 19ರೊಳಗಾಗಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಿಲ್ಲಾ ಪಂಚಾಯತ ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂ: 08539-230980 ಗೆ ಸಂಪರ್ಕಿಸಬಹುದಾಗಿದೆ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗಾಗಿ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳ(ಸಾಮಾನ್ಯ ಪದವಿ ಮಟ್ಟದ ಕೊರ್ಸುಗಳ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಎಸ್.ಎಚ್.ಪಿ (ಸ್ಟೇಟ್ ಹಾಸ್ಟೆಲ್ ಪೋರ್ಟಲ್)ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯೊಂದಿಗೆ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ್, ಅಂಕಪಟ್ಟಿ ಹಾಗೂ ವಿದ್ಯಾರ್ಥಿ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ನಿಗದಿ ಪಡಿಸಿದ ದಿನಾಂಕದೊಳಗಾಗಿ https://shp.karnataka.gov.in ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಪ್ರತಿ ಹಾಗೂ ಎಲ್ಲಾ ದಾಖಲೆಗಳನ್ನು ಸಂಬಂಧಿಸಿದ ವಸತಿ ನಿಲಯಗಳಿಗೆ ನೀಡಲು ಈ ಮೂಲಕ ತಿಳಿಸಿದೆ. ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಯಾವುದೇ ಅರ್ಜಿ, ಕೋರಿಕೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ 08539-225070, ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಾಗೂ ಹತ್ತಿರ ವಸತಿ ನಿಲಯಗಳಿಗೆ ಭೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಿಷನ್ ಶಕ್ತಿ ಯೋಜನೆ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ “ಮಿಷನ್ ಶಕ್ತಿ” ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಹೊಸದಾಗಿ ಸೃಜಿಸಲಾದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ “ಮಿಷನ್ ಶಕ್ತಿ” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸ್ಥಾಪಿಸಲಾದ ಉಪ ಯೋಜನೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಕಾರ್ಯನಿರ್ವಹಿಸಲು ಜಿಲ್ಲಾ ಮಷಿನ್ ಸಂಯೋಜಕರು, ಪಿ.ಎಮ್.ಎಮ್.ವಿ.ವೈ ಜಿಲ್ಲಾ ಸಂಯೋಜಕರು ಹಾಗೂ ಸ್ಪೇಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟ್ರಸಿ ಮತ್ತು ಅಕೌಂಟೆಂಟ್, ಈ ಮೂರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲಾಗುತ್ತಿದೆ.
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಈ ಹಿಂದೆ ಉತ್ತಮ ಕಾರ್ಯ ನಿರ್ವಹಿಸಿರುವ ಬಗ್ಗೆ ದಾಖಲೆ ಹೊಂದಿರುವ ಹಾಗೂ ಕನಿಷ್ಠ ಉಸ್ತುವಾರಿಯಲ್ಲಿ ಉತ್ತಮ ಕೆಲಸ ನಿರ್ವಹಿಸಬಲ್ಲ, ತರಬೇತಿಗಳನ್ನು ಹಮ್ಮಿಕೊಳ್ಳಲು ಸಾಮರ್ಥ್ಯ, ಕೌಶಲ್ಯ ಹೊಂದಿರುವ, ಗಣಕಯಂತ್ರ ನಿರ್ವಹಣೆಯಲ್ಲಿ ಪರಿಣಿತಿ, ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪರಿಪೂರ್ಣ ಹಿಡಿತವುಳ್ಳ ಅಭ್ಯರ್ಥಿಗಳು ನಿಗದಿ ಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳು, ಅನುಭವ, ಕಂಪ್ಯೂಟರ್ ತರಬೇತಿ ಪಡೆದ ಪ್ರಮಾಣ ಪತ್ರಗಳ ಮೂಲಕ ನೇಮಕಾತಿಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಕಛೇರಿಗೆ ಮೊ.ಸಂ: 9110481302 & 9945554128 ಸಂಪರ್ಕಿಸಬಹುದು ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿದೇರ್ಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ನಗರ ಜಿಲ್ಲೆ, ಆಗಸ್ಟ್ 20 (ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ವತಿಯಿಂದ 2024-25 ನೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ໑໑໖/ຈຈ/-/- ಅಇಖಿ ಪದವಿ ಮತ್ತು ಸ್ನಾತಕೋತ್ತರ ಕೋರ್ಡ್ಗಳಲ್ಲಿ ಅಂದರೆ ವೈದ್ಯಕೀಯ, (ಎಂಬಿಬಿಎಸ್) ದಂತ ವೈದ್ಯಕೀಯ (ಬಿಡಿಎಸ್, ಎಮಡಿಎಸ್), ಆಯುಷ್ (ಬಿ. ಆಯುಷ್, ಎಂಆಯುಷ್) ಇಂಜಿನಿಯ- ರಿಂಗ್ ಮತ್ತು ಟೆಕ್ನಾಲಜಿ(ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್) ಬ್ಯಾಚುಲರ್ ಆಪ್ ಆರ್ಕಿಟೆಕ್ಚರ್(ಬಿ.ಆರ್ಕ್, ಎಂ.ಆರ್ಕ್) ಪದವಿ ಕೋರ್ಡ್ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ರಿನ್ಯೂವಲ್ (೦ಡಿುತಣ ಖಜಿಟಿಜಿತಿಚಿಟ) ಸಾಲದ ಯೋಜನೆಯಡಿಯಲ್ಲಿ (ವಿದ್ಯಾಭ್ಯಾಸ ಸಾಲ) ಸಾಲ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ವೆಬ್ www.kmdconline.karnataka.gov.in ಮೂಲಕ ಆಕ್ಟೋಬರ್ 31 ರೊಳಗೆ ಸಲ್ಲಿಸಬೇಕು ಹಾಗೂ ಸಲ್ಲಿಸಿದ ಅರ್ಜಿಯ ಹಾರ್ಡ್ ಕಾಪಿಗಳನ್ನು ಮೂಲ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ನವೆಂಬರ್ 02 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ನಗರ ಜಿಲ್ಲೆ, ಉತ್ತರ ವಿಭಾಗ, ನಂ.40, 2ನೇ ಅಡ್ಡರಸ್ತೆ, ಇಯರಿಂಗ್ ಕ್ಲಿನಿಕ್ ಎದುರು, ನೂರ್ ಮಸೀದಿ ಹತ್ತಿರ, 4ನೇ ಮುಖ್ಯರಸ್ತೆ, ವಸಂತಪ್ಪ ಬ್ಲಾಕ್, ಗಂಗಾ ನಗರ, ಬೆಂಗಳೂರು ಅಥವಾ 080-23539786 ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಉತ್ತರ ವಿಭಾಗದ ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿ.ಎಮ್.ಶ್ರೀ. ಸ್ಕೂಲ್ ಜವಾಹರ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಕ್ಕಾಗಿ : ಅರ್ಜಿ ಆಹ್ವಾನ
2025-26ನೇ ಶೈಕ್ಷಣಿಕ ವರ್ಷಕ್ಕಾಗಿ ಕೋಥಳಿಯ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆ
ವಿದ್ಯಾರ್ಥಿ ಮತ್ತು ಪಾಲಕ, ಪೋಷಕರು ಬೆಳಗಾವಿ ಜಿಲ್ಲೆಯ ನಿವಾಸಿಯಾಗಿದ್ದು, ಜಿಲ್ಲೆಯ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಸನ್ 2024-25 ನೇ ಶೈಕ್ಷಣಿಕ ವರ್ಷದಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. 01-05-2013 00 31-07-2015 ( ಮತ್ತು ಅಂತ್ಯದ ಎರಡೂ ದಿನಾಂಕಗಳ ಮಧ್ಯದಲ್ಲಿ ಜನಿಸಿರಬೇಕು), ಸೆಂಟ್ರಲ್ ಓಬಿಸಿ ಲಿಸ್ಟ್ (ಕೇಂದ್ರ ಸರ್ಕಾರದ ಓಬಿಸಿ ಲಿಸ್ಟ್) ನಲ್ಲಿ ಬರುವ ವಿದ್ಯಾರ್ಥಿಗಳು ಮಾತ್ರ ಓಬಿಸಿ ಕೆಟಗೆರಿ (ವರ್ಗ) ಯನ್ನು ಆಯ್ಕೆ ಮಾಡಿಕೊಳ್ಳಬೇಕು. ರಾಜ್ಯ ಸರ್ಕಾರದ ಓಬಿಸಿ ಲಿಸ್ಟ್ ನಲ್ಲಿ ಬರುವ ವರ್ಗಗಳ ಪ್ರಮಾಣ ಪತ್ರವನ್ನು ಮಾನ್ಯ ಮಾಡಲಾಗುವುದಿಲ್ಲ.
ಸೌಲಭ್ಯಗಳು
6 ರಿಂದ 12ನೇ ತರಗತಿಯ ವರಗೆ ಉಚಿತ ಶಿಕ್ಷಣ ಊಟ ಮತ್ತು ವಸತಿ, ಸಹ ಶಿಕ್ಷಣ ವಸತಿ ವಿದ್ಯಾಲಯ, ವಲಸೆ ಶಿಕ್ಷಣದ ಮೂಲಕ ವ್ಯಾಪಕ ಸಾಂಸ್ಕೃತಿಕ ವಿನಿಮಯ, ಉಚಿತ ಅರ್ಜಿ ಸಲ್ಲಿಕೆ ಸೌಲಭ್ಯಗಳು ಇರುತ್ತವೆ. ಆಸಕ್ತ ವಿದ್ಯಾರ್ಥಿ ಅಥವಾ ಪಾಲಕರು ಸೆಪ್ಟೆಂಬರ್ 16 ರೊಳಗಾಗಿ www.navodaya.gov.in ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಕೋಥಳಿ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು (ರಿನಿವಲ್) ಸಾಲ ಯೋಜನೆ ಅರ್ಜಿ ಆಹ್ವಾನ
ಬೆಳಗಾವಿ : ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಜೈನ, ಕ್ರಿಶ್ಚಿಯನ್, ಬೌದ್ಧ, ಸಿಬ್ಬರು, ಪಾರ್ಸಿ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ CET/DCET/ PGCET/NEET ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ,ದಂತ ವೈದ್ಯಕೀಯ, ಆಯುಷ, ಇಂಜಿನಿಯರಿಂಗ್ & ಟೆಕ್ನಾಲಜಿ, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಎಂ.ಬಿ.ಎ., ಎಂ.ಸಿ.ಎ., ಎಲ್.ಎಲ್.ಬಿ, ಅಗ್ರಿಕಲ್ವುರಲ್ ಎಂಜಿನೀಯರಿಂಗ್, ಡೈರಿ ಟೆಕ್ನಾಲಾಜಿ, ಬಿ.ಫಾರ್ಮಾ, ಡಿ.ಫಾರ್ಮಾ ಗಳಲ್ಲಿ ಆಯ್ಕೆಯಾಗಿರುವಂತಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು (ರಿನಿವಲ್) ಸಾಲ ಯೋಜನೆಯಡಿ ಆನ್‌ಲೈನ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಸಹ ಆನ್‌ಲೈನ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ kmdconline.karnataka.gov.in 31-10-2024ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಮೌಲಾನಾ ಆಝಾದ ಅಲ್ಪಸಂಖ್ಯಾತರ ಭವನ, ಕೆ.ಎಸ್.ಸಿ.ಎ. ಕ್ರಿಕೇಟ್ ಕ್ರೀಡಾಂಗಣ ಎದುರುಗಡೆ, ರಾಮತೀರ್ಥ ನಗರ ಕಚೇರಿ ದೂರವಾಣಿ 0831-2950794 ಸಂಖ್ಯೆಗೆ ಸಂಪರ್ಕಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಲ ಹಾಗೂ ಸಹಾಯಧನ ಅರ್ಜಿ ಅಹ್ವಾನ
ಪ್ರಸ್ತಕ ಸಾಲಿನ ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮವು ರಾಜ್ಯದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ, ಕ್ರಿಶ್ಚಿಯನ, ಭೌದ್ಧ, ಸಿಖರು, ಪಾರ್ಸಿ ಜನಾಂಗದವರಿಗೆ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ. ಸಿಬ್ಬಲಿಗಾರ ಸಮುದಾಯದ ಅಭಿವೃದ್ಧಿ ಯೋಜನೆ. ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಉತ್ತೇಜನ ಸಹಾಯಧನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. http://kmdconline.Karantaka.gov.in/ ಮೂಲಕ ಅರ್ಜಿ ಸಲಸಬಹುದು. ಹೆಚ್ಚಿನ ಮಾಹಿತಿಗಾಗಿ ಬೆಳಗಾವಿ ರಾಮತೀರ್ಥ ನಗರ. ಮೌಲಾನಾ ಆಝಾದ ಅಲ್ಪಸಂಖ್ಯಾತರ ಭವನ, ಕೆ.ಎಸ್.ಸಿ.ಎ. ಕ್ರಿಕೇಟ್ ಕ್ರೀಡಾಂಗ ಎದುರುಗಡೆ, ದೂರವಾಣಿ 08312950794 ಸಂಪರ್ಕಿಸಬಬಹುದು ಎಂದು ಬೆಳಗಾವಿ ಕರ್ನಾಟಕ ಅಲ್ಪಸಂಖ್ಯತರ ಅಭಿವೃದ್ಧಿ ನಿಗಮ (ನಿ) ಜಿಲ್ಲಾ ವ್ಯವಸ್ಥಾಪಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.