Breaking
Tue. Dec 17th, 2024

ಫೆ.26 ರಿಂದ 27ರವರೆಗೆ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ, job alert

Spread the love

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.26 ಹಾಗೂ ಫೆ.27ರವರಗೆ ಎರಡು ದಿನಗಳ ಕಾಲ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಲಾಗಿದೆ. ಉದ್ಯೋಗ ಮೇಳಕ್ಕೆ ಮತ್ತು 500ಕ್ಕೂ ಹೆಚ್ಚು ವಿವಿಧ ಬೃಹತ್, ಮಧ್ಯಮ, ಸಣ್ಣ ಮತ್ತು ಇತರೆ ವಲಯದ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸಲಿವೆ.

ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನಸಿರ್ಂಗ್, ಸ್ನಾತಕ್ಕೋತ್ತರ ಪದವಿ, ಇಂಜನೀಯರಿಂಗ್ ಮತ್ತು ವಿವಿಧ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸಿ ತಮಗೆ ಆಸಕ್ತಿಯಿರುವ ಕ್ಷೇತ್ರದಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಮೇಳಕ್ಕೆ ಆಗಮಿಸುವ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ಭಾಗವಹಿಸಿಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬ್ರಹತ್ ಉದ್ಯೋಗ ಮೇಳ ಜಿಲ್ಲೆಯ ಯುವಕ ಯುವತಿಯರಿಗೆ ಅವಕಾಶ

ಮಾನ್ಯ ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ಧಿ, ಉದ್ಯಮಶೀಲ ಮತ್ತು ಜೀವನೋಪಾಯ ಇಲಾಖೆಯಿಂದ ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬ್ರಹತ್ ಉದ್ಯೋಗಮೇಳವನ್ನು ಫೆ.26 ರಿಂದ 27 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.

ಮೇಳದಲ್ಲಿ ಭಾಗವಹಿಸುವಂತಹ ಅಭ್ಯರ್ಥಿಗಳು ಐಐಟಿಐ, ದಿಪ್ಲೋಮಾ, ಬಿ.ಕಾಂ. ಬಿಎ.ಬಿಎಸಿ, ಬಿ.ಇ, ಎಂಬಿಎ, ಎಂಸಿಎ, ಎಎಡಬ್ಲ್ಯೂ ಸೇರಿದಂತೆ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾದ ಆಸಕ್ತ ಎಲ್ಲ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ಭಾಗಹಿಸಬಹುದು. ಜಾಲತಾಣಕ್ಕೆ ಭೇಟಿ ನೀಡಿ ಮಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.23ರಂದು ಕಾರಟಗಿಯಲ್ಲಿ ಮಿನಿ ಉದ್ಯೋಗ ಮೇಳ

ಕೊಪ್ಪಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮಿನಿ ಉದ್ಯೋಗ ಮೇಳವನ್ನು ಫೆಬ್ರವರಿ 23ರಂದು ಬೆಳಿಗ್ಗೆ 10.30 ರಿಂದ 1.30 ರವರೆಗೆ ಕಾರಟಗಿಯ ನವಲಿ ರಸ್ತೆಯಲ್ಲಿನ ಜೆ.ಪಿ.ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಈ ಮಿನಿ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ಎಸ್.ಎಸ್. ಎಲ್.ಸಿ. ಪಿಯುಸಿ, ಐ.ಟಿ.ಐ ಹಾಗೂ ಡಿಪ್ಲೋಮಾ, ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ, ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. ಈ ಮಿನಿ ಉದ್ಯೋಗ ಮೇಳದಲ್ಲಿ ಆಸಕ್ತಿಯುಳ್ಳ 18 ರಿಂದ 30 ವರ್ಷದ ವರೆಗಿನ ಯುವಕ ಮತ್ತು ಯುವತಿಯರು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ(ರೆಜೂಮ್) ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಅಥವಾ ದೂ.ಸಂ: 8105693234 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾವು ಹಣ ಕೊಡ್ತೀವಿ ಎಂದರೂ ಕೇಂದ್ರ ಅಕ್ಕಿ ಏಕೆ ಕೊಡಲಿಲ್ಲ : ಸಿಎಂ

ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ವಿಧಾನಸಭೆಯಲ್ಲಿ ಉತ್ತರ ನೀಡುವ ವೇಳೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಜನರ ಪರವಾಗಿ, ರಾಜ್ಯದ ಪಾಲಿನ ಹಕ್ಕನ್ನು ಪಡೆದುಕೊಳ್ಳಲು ನಡೆಸಿದ ಪ್ರಯತ್ನಗಳನ್ನೆಲ್ಲಾ ಸದನಕ್ಕೆ ವಿವರಿಸಿದರು. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿಯವರು ಕೇಂದ್ರದ ಜತೆ ಸಂಘರ್ಷಕ್ಕೆ ಇಳಿಯಬಾರದು ಎಂದಿದ್ದಾರೆ. ಆದರೆ ನಾವು ಸಂಘರ್ಷಕ್ಕೆ ಇಳಿದಿಲ್ಲ. ರಾಜ್ಯದ ಪಾಲಿನ ಸಂವಿಧಾನಬದ್ದ ಹಕ್ಕನ್ನು, ಅನುದಾನವನ್ನು ಕೇಳುವುದು ಸಂಘರ್ಷ ಆಗುವುದಿಲ್ಲ.

ನಾವು ಕೇಂದ್ರ ಸರ್ಕಾರವು ನೀಡುವ ಅಕ್ಕಿಗೆ, ನಿಗದಿತ ಹಣವನ್ನು ಪಾವತಿ ಮಾಡುತ್ತೇವೆ ಎಂದು ತಿಳಿಸಿದರೂ ಸಹ ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ ಎಂದು ತಿಳಿಸಿದರು. ರಾಜ್ಯಕ್ಕೆ ತೀವ್ರ ಬರಗಾಲ ಬಂದಿದೆ. ಕೇಂದ್ರದಿಂದ ಬರ ಪರಿಹಾರ ಕೇಳಿ 17 ಬಾರಿ ಕೇಂದ್ರಕ್ಕೆ ಬರೆದೆವು. ಇದರಲ್ಲಿ ಒಂದು ಪತ್ರಕ್ಕೆ ಮಾತ್ರ. “ನಿಮ್ಮ ಪತ್ರ ತಲುಪಿದೆ” ಎನ್ನುವ ಉತ್ತರ ಕೇಂದ್ರದಿಂದ ಬಂತು. ಆದರೆ ಉಳಿದ 16 ಪತ್ರಗಳಿಗೆ ಉತ್ತರವೂ ಬರಲಿಲ. ಕೇಂದ್ರದ ಅನುದಾನ ರಾಜ್ಯಕ್ಕೆ ಇವತ್ತಿನವರೆಗೂ ಒಂದು ಪೈಸೆಯೂ ಬಂದಿಲ್ಲ. ಇದು ನಿಯಮಬದ್ಧವಾಗಿ ರಾಜ್ಯದ ಹಕ್ಕು. ರಾಜ್ಯಕ್ಕೆ ಬರಗಾಲ ಬಂದಾಗ ನರೇಗ ಮಾನವ ದಿನಗಳನ್ನು ನಿಯಮ ಬದ್ಧವಾಗಿ 100 ರಿಂದ 150 ದಿನಗಳಿಗೆ ಏರಿಕೆ ಮಾಡಬೇಕಿತ್ತು. ಇದಕ್ಕಾಗಿ ನಾವು ಪದೇ ಪದೇ ಮನವಿ ಮಾಡಿದರೂ ಮಾನವ ದಿನಗಳನ್ನು ಏರಿಕೆ ಮಾಡಲೇ ಇಲ್ಲ.

Related Post

Leave a Reply

Your email address will not be published. Required fields are marked *