ಮೊದಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. https://pmkisan.gov.in/RegistrationFormNew.aspx
ನಂತರ ಎಲ್ಲಿ ಕೇಳುವ ನಿಮ್ಮ ಆಧಾರ್ ಕಾರ್ಡ್ ನಂಬರ್, ಮೊಬೈಲ್ ಸಂಖ್ಯೆ, ಕ್ಯಾಪ್ಟ್ ಕೋಡ್, ನಿಮ್ಮ ರಾಜ್ಯ ಆಯ್ಕೆ ಮಾಡಿಕೊಳ್ಳಿ. ಕೊನೆಗೆ get opt ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ. ನಂತರ ಎಲ್ಲಿ ಕೇಳುವ ಎಲ್ಲ ಮಾಹಿತಿ ದಾಖಲಿಸಿ ಅರ್ಜಿ ಸಲ್ಲಿಸಿ.
ಜ.26 ರಿಂದ 28 ರವರೆಗೆ ಜಿಲ್ಲಾ ಮಟ್ಟದ ಫಲ-ಪುಷ್ಪ ಪ್ರದರ್ಶನ
ಧಾರವಾಡ : ಪ್ರಸ್ತುತ ಸಾಲಿನ ಜಿಲ್ಲಾ ಮಟ್ಟದ ಫಲ-ಪುಷ್ಪ ಪ್ರದರ್ಶನ ಹಾಗೂ ಸಿರಿಧಾನ್ಯ ಹಬ್ಬವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ, ಮತ್ತು ಫಲ-ಪುಷ್ಪ ಪ್ರದರ್ಶನ ಸಮಿತಿ, ಜಿಲ್ಲಾ ಹಾಪ್ ಕಾಮ್ಸ್, ಧಾರವಾಡ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ಸಹಯೋಗದೊಂದಿಗೆ ಜನವರಿ 26 ರಿಂದ 28, 2024 ರವರೆಗೆ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆ ಆವರಣದಲ್ಲಿ ಆಯೋಜಿಸಲಾಗಿದೆ.
ಫಲ-ಪುಷ್ಪ ಪ್ರದರ್ಶನ ಹಾಗೂ ಸಿರಿಧಾನ್ಯ
ಹಬ್ಬದಲ್ಲಿ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಸಂಘ ಸಂಸ್ಥೆಗಳು, ರೈತರು ಮತ್ತು ಸಾರ್ವಜನಿಕರಿಗೆ ತೋಟಗಾರಿಕೆ ಬೆಳೆಗಳು, ಹೂಗಳ ಮತ್ತು ಅಲಂಕಾರಿಕ ಗಿಡಗಳ ಪ್ರದರ್ಶನದ ಸ್ಪರ್ಧೆಗೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 0836- 2957801 ಗೆ ಸಂಪರ್ಕಿಸಬಹುದೆಂದು ಹುಬ್ಬಳ್ಳಿಯ ಸಹಾಯಕ ಕೃಷಿ ಅಧಿಕಾರಿ ಹಾಗೂ ಧಾರವಾಡದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024 ಅಂತಿಮ ಮತದಾರರ ಪಟ್ಟಿ ಪ್ರಕಟ
ಧಾರವಾಡ : ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಧಾರವಾಡ ಜಿಲ್ಲೆಯಲ್ಲಿನ 7 ವಿಧಾನಸಭಾ ಮತಕ್ಷೇತ್ರಗಳ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024 ನೇ ದ್ದಕ್ಕೆ ಸಂಬಂಧಿಸಿದಂತೆ ಅರ್ಹತಾ ಜನವರಿ 1, 2024 ಕ್ಕೆ ಇದ್ದಂತೆ ಅಂತಿಮ ಮತದಾರರ ಪಟ್ಟಿಯನ್ನು ಜನವರಿ 22, 2024 ರಂದು ಪ್ರಕಟಪಡಿಸಲಾಗಿದೆ.
ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 15,38,603 ಮತದಾರರಿದ್ದು, ಪ್ರಸ್ತುತ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 15,60,374 ಮತದಾರರಿದ್ದಾರೆ. 21,771 ಮತದಾರರನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ. ಸದರಿ ಮತದಾರರ ಅಂತಿಮ ಪಟ್ಟಿಯು ಜಿಲ್ಲೆಯ ಉಪವಿಭಾಗಾಧಿಕಾರಿಗಳ ಕಛೇರಿ, ಧಾರವಾಡ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಹುಬ್ಬಳ್ಳಿ ಹಾಗೂ ಆಯೋಗದ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಧಾರವಾಡ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ : ಹೊರಗುತ್ತಿಗೆ ಆದಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಧಾರವಾಡ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕಕ್ಕೆ ಮಿಷನ್ ಶಕ್ತಿ ಯೋಜನೆಯಡಿಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಮಂಜೂರಾಗಿರುವ ಜಿಲ್ಲಾ ಮಿಷನ್ ಸಂಯೋಜಕರು, ಪ್ರಧಾನ ಮಂತ್ರಿ ಮಾತೃವಂದನ ಜಿಲ್ಲಾ ಸಂಯೋಜಕರು ಮತ್ತು ಸ್ಪೆಷಲಿಸ್ಟ್ ಇನ್ ಪೈನಾನ್ಶಿಯಲ್ ಲಿಟರಸಿ ಮತ್ತು ಅಕೌಂಟಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಛೇರಿಯಲ್ಲಿ ಅರ್ಜಿ ಪಡೆದು, ಫೆಬ್ರವರಿ 5, 2024 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 0836-2447850 ಗೆ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತಿಮ ಮತದಾರರ ಯಾದಿ ಪ್ರಕಟ
ಗದಗ : ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ 1-1-2024 ರನ್ನು ಅರ್ಹತಾ ದಿನಾಂಕವೆಂದು ಪರಿಗಣಿಸಿ ವಿಧಾನಸಭಾ ಕ್ಷೇತ್ರಗಳ ಮತದಾರರ ಯಾದಿಗಳನ್ನು ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ವಯ ಪರಿಷ್ಕರಿಸುವ ಬಗ್ಗೆ ಆಯೋಗವು ವೇಳಾಪಟ್ಟಿಯನ್ನು ಹೊರಡಿಸಿರುತ್ತಾರೆ. ಈ ವೇಳಾಪಟ್ಟಿಯನ್ವಯ ಗದಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಾದ 65- ಶಿರಹಟ್ಟಿ(ಪ.ಜಾ), 66-ಗದಗ, 67 ರೋಣ ಮತ್ತು 68-ನರಗುಂದ ನೇದ್ದವುಗಳಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಯಾದಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರರ ಕಚೇರಿಗಳು ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್ ಸೈಟ್ ಪ್ರಕಟಿಸಲಾಗಿರುತ್ತದೆ ಹಾಗೂ ಸಂಬಂಧಪಟ್ಟ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳ ಬಳಿ ಇರುತ್ತದೆ.
ಅಂತಿಮ ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ನೊಂದಣಿಯಾಗಿರುವ ಬಗ್ಗೆ ಹಾಗೂ ನೋಂದಣಿಯಾಗಿದ್ದಲ್ಲಿ ಸರಿ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬಹುದಾಗಿದೆ. ಒಂದು ವೇಳೆ ನ್ಯೂನತೆಗಳಿದ್ದಲ್ಲಿ ಕೂಡಲೇ ಸಂಬಂಧಪಟ್ಟ ನಮೂನೆಗಳಲ್ಲಿ ಅರ್ಜಿಗಳನ್ನು ಸಲ್ಲಿಸಿ ಸರಿಪಡಿಸಿಕೊಳ್ಳಬಹುದಾಗಿದೆ.
ಪ್ರಸ್ತುತ ಅಂತಿಮ ಮತದಾರ ಪಟ್ಟಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 4,39,603 ಪುರುಷ ಮತದಾರರು, 4,40,749 ಮಹಿಳಾ ಮತದಾರರು ಹಾಗೂ 62 ಇತರೆ ಮತದಾರರು ಹೀಗೆ ಒಟ್ಟು 8,80,414 ಮತದಾರರು ಕರಡು ಮತದಾರರ ಪಟ್ಟಿಯಲ್ಲಿ ಇರುತ್ತಾರೆ. ಜಿಲ್ಲೆಯ ಒಟ್ಟು ಮತದಾರರ ಪೈಕಿ 23065 ಯುವ ಮತದಾರರು ಸೇರ್ಪಡೆಯಾಗಿರುತ್ತಾರೆ. ಈ ಪೈಕಿ 12089 ಪುರುಷ, 10975 ಮಹಿಳಾ ಮತ್ತು 01 ಇತರೆ ಮತದಾರರಿರುತ್ತಾರೆ.
ಪ್ರಸ್ತುತ ಅಂತಿಮ ಮತದಾರ ಪಟ್ಟಿಯಲ್ಲಿ 11098 ವಿಶೇಷ ಚೇತನ ಮತದಾರರಿದ್ದು, ಈ ಪೈಕಿ 6592 ಪುರುಷ 4505 ಮಹಿಳಾ ಹಾಗೂ 01 ಇತರೆ ವಿಶೇಷ ಚೇತನ ಮತದಾರರಿರುತ್ತಾರೆ. ಮತದಾರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅವಧಿಯಲ್ಲಿ ಒಟ್ಟು 20890 ಮತದಾರರ ಹೆಸರನ್ನು ಕೈಬಿಡಲಾಗಿದೆ ಹಾಗೂ 26349 ಮತದಾರರ ಹೆಸರನ್ನು ಮತದಾರ ಪಟ್ಟಿಗೆ ಸೇರ್ಪಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪಕಟಣೆ ತಿಳಿಸಿದೆ.