ಆತ್ಮೀಯ ರೈತ ಬಾಂಧವರೇ, ನಮ್ಮ ರಾಜ್ಯದಲ್ಲಿ ಬಹಳ ಜನರು ಕೃಷಿ ಮೇಲೆ ತಮ್ಮ ಜೀವನವನ್ನು ನಡೆಸುತ್ತಿದ್ದು ಸರಕಾರವು ಅವರ ಹಿತಕ್ಕಾಗಿ ತುಂಬಾ ಯೋಚನೆಗಳನ್ನು ತಂದಿದೆ. ಅದೇ ರೀತಿ ಈಗ ತೋಟಗಾರಿಕೆ ಇಲಾಖೆಯಿಂದ ಕೃಷಿ ಮಾಡುವ ರೈತರ ನೆರವಿಗಾಗಿ ಸರ್ಕಾರವು ಕೃಷಿ ಹೊಂಡದ ನಿರ್ಮಾಣಕ್ಕಾಗಿ ಗ್ರಾಮ ಪಂಚಾಯಿತಿ ಕಡೆಯಿಂದ ಒಂದು ಹೊಸ ಯೋಜನೆಯನ್ನು ತಂದಿದೆ. ಈ ಯೋಜನೆಯು ನರೇಗಾ ಯೋಜನೆ ಅಡಿಯಲ್ಲಿ ಬರುತ್ತಿದ್ದು ರೈತರಿಗೆ ಸರಕಾರವು ಕೃಷಿ ಹೊಂಡವನ್ನು ನಿರ್ಮಿಸಿಕೊಳ್ಳಲು ಸಹಾಯಧನವನ್ನು ನೀಡಲು ನಿರ್ಧರಿಸಿದೆ. ಅಷ್ಟೇ ಅಲ್ಲದೆ ನಮ್ಮ ತೋಟಗಾರಿಕೆ ಇಲಾಖೆಯೂ ಕೃಷಿಹೊಂಡಕ್ಕೆ ಸಹಾಯಧನವನ್ನು ನೀಡಿ ಮತ್ತು ಯಾವುದಾದರು ತೋಟಗಾರಿಕೆ ಕೃಷಿ ಮಾಡುತ್ತಿದ್ದಾರೆ ಆ ರೈತರನ್ನು ಆಯ್ಕೆ ಮಾಡಿ ಸಹಾಯಧನವನ್ನು ನೀಡಲು ನಿರ್ಧರಿಸಿದೆ. ರಾಷ್ಟ್ರೀಯ ತೋಟಗಾರಿಕೆ ಇಲಾಖೆ 2022-23ನೇ ಸಾಲಿನ ಈ ಯೋಜನೆಯಡಿಯಲ್ಲಿ ಅರ್ಹತೆ ಹೊಂದಿರುವ ರೈತರು ಈ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು.
ಈ ಯೋಜನೆಯ ಉದ್ದೇಶಗಳು?
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ತೋಟಗಾರಿಕೆ ಇಲಾಖೆಯು ಈ ಕೃಷಿ ಹೊಂಡಕ್ಕೆ ಸಹಾಯದನವನ್ನು ನೀಡಲು ಅರ್ಜಿ ಆಹ್ವಾನ ಮಾಡಿದೆ. ಈ ಯೋಜನೆ ಮುಖ್ಯ ಉದ್ದೇಶವೆಂದರೆ ಸರಿಯಾಗಿ ನೀರು ನಿರ್ವಹಣೆ ಮಾಡುವುದು. ಆದಕಾರಣ ಬೀದರ್ ಜಿಲ್ಲೆಯ ಆಸಕ್ತ ರೈತರು ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿ. ಬೀದರ್ ಜಿಲ್ಲೆಯ ರೈತರು ನಿಮ್ಮ ಹತ್ತಿರ ಇರುವ ತೋಟಗಾರಿಕಾ ಇಲಾಖೆಯನ್ನು ಸಂಪರ್ಕಿಸಿ ಈ ಸಹಾಯಧನವನ್ನು ಪಡೆಯಬೇಕಾಗಿ ವಿನಂತಿ.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು?
ರೈತನ ಜಮೀನ ಪಹಣಿ ಪತ್ರ, ಆಧಾರ್ ಕಾರ್ಡ್, ಒಂದು ಫೋಟೋ, ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಇನ್ನು ಕೆಲವೊಂದಿಷ್ಟು ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಈ ಯೋಜನೆಯ ಎಲ್ಲ ಮಾಹಿತಿಗಳನ್ನು ತೆಗೆದುಕೊಂಡು ಸರಿಯಾಗಿ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಾವು ಕೆಳಗೆ ನೀಡಿರುವ ಸಂಖ್ಯೆಗೆ ಕರೆ ಮಾಡಿ ನಿಮ್ಮ ಪ್ರಶ್ನೆಗಳಿಗೆ ಉತ್ತರವನ್ನು ಪಡೆಯಿರಿ. ಕೆಳಗೆ ನೀಡಿರುವ ಸಂಖ್ಯೆ ಹಿರಿಯ ಸಹಾಯಕ ತೋಟಗಾರಿಕಾ ಇಲಾಖೆ ಹುಮನಾಬಾದ್ 9845099625 . ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆ ಬಸವಕಲ್ಯಾಣ 9916874287 . ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆ ಔರಾದ್ ದೂ . 7259477783 . ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆ ಭಾಲ್ಕಿ 7259270938.
ಇದನ್ನೂ ಓದಿ :- ಇ ಶ್ರಮ್ ಕಾರ್ಡ್ ಇದ್ದವರಿಗೆ ಸಿಗಲಿದೆ 1000 ರೂಪಾಯಿಗಳು ಅರ್ಜಿ ನೋಂದಣಿ ಮಾಡುವುದು ಹೇಗೆ ?