2024-25 ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಕೇಂದ್ರ ಪುರಸ್ಕೃತ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ಬಾಳೆ, ಪೇರಲ, ಡ್ರಾಗನ್ ಹಣ್ಣು, ನೇರಳೆ, ಹುಣಸೆ ಹಣ್ಣುಗಳ ಪ್ರದೇಶ ವಿಸ್ತರಣೆ,ಹೈಬ್ರಿಡ್ ತರಕಾರಿ ಹೂವು ಪ್ರದೇಶ ವಿಸ್ತರಣೆ, ಸಮುದಯ ಕೆರೆ ಘಟಕಗಳ ನಿರ್ಮಾಣ, ವೈಯಕ್ತಿಕ ನೀರು ನೆರಳು ಪರದೆ ಘಟಕಗಳ ನಿರ್ಮಾಣ, ಪ್ಯಾಕ್‌ಹೌಸ್ ಘಟಕ ಹಾಗೂ ಈರುಳ್ಳಿ ಶೇಖರಣಾ ಘಟಕಗಳಿಗೆ ಸಹಾಯಧನದ ಸೌಲಭ್ಯವಿದ್ದು ಆಸಕ್ತ ರೈತರು ಸಂಬಂಧಿಸಿದ ತಾಲೂಕು ತೋಟಗಾರಿಕೆ ಕಚೇರಿಗಳಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ ವಸತಿನಿಲಯ ಪ್ರವೇಶಕ್ಕೆ ಅರ್ಜಿ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ 1, 22,20,30,32, ಪಜಾ/ಪವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಆಹ್ವಾನಿಸಲಾಗಿದೆ.
ಅರ್ಜಿ ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ. ವಿದ್ಯಾರ್ಥಿ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ1, ಎಸ್‌ಸಿ ಮತ್ತು ಎಸ್‌ಟಿ 1 ಲಕ್ಷ, 2ಎ, 2ಬಿ, 3ಎ, 3ಬಿ, ಮತ್ತು ಇತರೆ ಹಿಂದುಳಿದ ವರ್ಗಕ್ಕೆ ಸೇರಿದವರಿಗೆ 44,500 ರೂ. ಗಳೊಳಗೆ ಇರಬೇಕು. ಅರ್ಜಿಯನ್ನು https://shp.karnataka.gov.in ಸಂಪರ್ಕಿಸಿ ಆನ್ ಲೈನ್ ಮೂಲಕ ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡುವ ಸಂಬಂಧ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಲು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮನವಿಸಲ್ಲಿಸುವುದು.
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆ ಇತ್ಯಾದಿ ವಿವರಗಳಿಗೆ ಇಲಾಖೆಯ ವೆಬ್ ಸೈಟ್ https://bcwd.karnataka.gov.in ನೋಡಬಹುದಾಗಿದೆ. ಅರ್ಜಿ ಸಲ್ಲಿಸಲು ತಾಂತ್ರಿಕತೊಂದರೆಗಳಾದಲ್ಲಿ bcwdhelpline@gmail.com – ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ/ ತಾಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 8050770004, 8050770005 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯು ತಿಳಿಸಿದೆ.
ಕರ್ನಾಟಕ ರಕ್ಷಣಾ ವೇದಿಕೆ ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಸಂಬಂಧ ಕಾಯ್ದೆಯನ್ನು ರೂಪಿಸಿ
ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ಶ್ರೀಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪ್ರತಿಭಟನಾ ಮೆರವಣಿಗೆ ನೇತೃತ್ವ ವಹಿಸಿದ್ದ ಜಿಲ್ಲಾಧ್ಯಕ್ಷರಾದ ಶ್ರೀಶೈಲ ಮುಳಜಿಯವರು ಮಾತನಾಡಿ, ರಾಜ್ಯದ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಮತ್ತು ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಮುಂಭಾಗಕರ್ನಾಟಕರಕ್ಷಣಾ ವೇದಿಕೆ ಕರ್ನಾಟಕದನೆಲದಲ್ಲಿಕನ್ನಡಿಗರಿಗೇ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ನಮ್ಮ ತಾಯಿ ನಾಡು ಕರ್ನಾಟಕ ದೇಶದಲ್ಲೇ ಅತಿಹೆಚ್ಚು ಭೌಗೋಳಿಕ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯ.
ಪ್ರಕೃತಿ ಸೌಂದರ್ಯಕ್ಕೆ. ಅತ್ಯುತ್ತಮ ಹವಾಗುಣಕ್ಕೆ ಹೆಸರಾದರಾಜ್ಯ. ಕನ್ನಡಿಗರು ಶಾಂತಿಪ್ರಿಯರು, ಹೃದಯ ಶ್ರೀಮಂತರು. ಕನ್ನಡಿಗರು ದೇಶದಲ್ಲೇ ಮೊದಲು ಜನಸಂಖ್ಯಾ ನಿಯಂತ್ರಣಕ್ಕೆ ಕಡಿವಾಣ ಹಾಕಿದವರು. ಕನ್ನಡ ನಾಡು ಸಾಂಸ್ಕೃತಿಕವಾಗಿ, ಸಾಹಿತ್ಯಕವಾಗಿ, ಚಾರಿತ್ರಿಕವಾಗಿ ವೈಭವದ ಇತಿಹಾಸವನ್ನು ಹೊಂದಿದ ನಾಡು. ಸ್ವಾತಂತ್ರೋತ್ತರ ಭಾರತದಲ್ಲಿ ಇಂತಹ ಸಕಲ ಸಮೃದ್ಧಿಯ ನಾಡಿಗೆ ಇತರ ರಾಜ್ಯಗಳಿಂದ ದೊಡ್ಡ ಪ್ರಮಾಣದ ವಲಸೆ ಅವ್ಯಾಹತವಾಗಿ ನಡೆದುಕೊಂಡು ಬಂದಿದೆ. ಇತ್ತೀಚಿನ ಎರಡು ಮೂರು ದಶಕಗಳಲ್ಲಿ ಇದುತಾರಕಕ್ಕೆ ಏರಿದೆ. ಮೊದಲು ದಕ್ಷಿಣ ಭಾರತದ ಇತರ ರಾಜ್ಯಗಳಿಂದ ಜನರು ವಲಸೆ ಬಂದುಇಲ್ಲಿ ನೆಲೆ ನಿಂತರು. ಈಗ ಉತ್ತರದ ರಾಜ್ಯಗಳು, ಈಶಾನ್ಯ ರಾಜ್ಯಗಳಿಂದ ಜನರ ಪ್ರವಾಹವೇ ಹರಿದುಬರುತ್ತಿದೆ. ವಿಶೇಷವಾಗಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮಂಗಳೂರಿ ನಂತಹ ಮಹಾನಗರಗಳಲ್ಲಿ ವಲಸೆ ಪ್ರಮಾಣ ಮಿತಿ ಮೀರಿದೆ ಎಂದು ಉಗ್ರವಾಗಿ ಮಾತನಾಡಿದರು. ರಾಜ್ಯ ಉಪಾಧ್ಯಕ್ಷರಾದ ಎಂ.ಸಿ. ಮುಲ್ಲಾ ಮಾತನಾಡಿ, ವಲಸೆಯ ದುಷ್ಪರಿಣಾಮದಿಂದಾಗಿ ಕನ್ನಡ ನಾಡಿನ ಭೌಗೋಳಿಕ, ಸಾಮಾಜಿಕ, ರಾಜಕೀಯ ಚಹರೆಯೇ ಬದಲಾಗುತ್ತಿದೆ.
ವಿಶೇಷವಾಗಿ ರಾಜ್ಯದ ರಾಜಧಾನಿ ಬೆಂಗಳೂರು ಈ ದೊಡ್ಡ ಪ್ರಮಾಣದ ವಲಸೆಯಿಂದ ಬಸವಳಿದು ಹೋಗುತ್ತಿದೆ. ಈ ಮಹಾವಲಸೆಯ ಬಹುಮುಖ್ಯ ದುಷ್ಪರಿಣಾಮ ಕನ್ನಡದಯುವ ಸಮುದಾಯದ ಮೇಲೆ ಅನ್ಯಾಯ ಆಗುತ್ತಿದೆ. ಕನ್ನಡಿಗರಿಗೆ ಈಗ ಉದ್ಯೋಗವಿಲ್ಲದಂತಾಗಿದೆ. ಕನ್ನಡದ ನೆಲದಲ್ಲಿ ಸ್ಥಾಪಿತವಾಗಿರುವ ಖಾಸಗಿ ಸಂಸ್ಥೆಗಳು ಹೊರರಾಜ್ಯಗಳ ಮಾನವ ಸಂಪನ್ಮೂಲ ಅಧಿಕಾರಿಗಳನ್ನೇ ನೇಮಿಸಿಕೊಳ್ಳುತ್ತಿದ್ದು, ಅವರು ತಮ್ಮತಮ್ಮ ರಾಜ್ಯದ ಯುವಕಯುವತಿಯರನ್ನು ಕರೆತಂದು ಕೆಲಸ ಕೊಡುತ್ತಿದ್ದಾರೆ. ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರ ಪ್ರಮಾಣ ದಿನೇದಿನೇ ಕುಸಿಯುತ್ತಲೇ ಬರುತ್ತಿದೆ. ಹೀಗೇ ಮುಂದುವರೆದರೆ ಕನ್ನಡಿಗರು ಮುಂಬರುವ ದಿನಗಳಲ್ಲಿ ತಮ್ಮ ನೆಲದಲ್ಲಿ ತಾವೇ ಆತಂತ್ರರಾಗಿ ನರಕಯಾತನೆ ಅನುಭವಿಸುವ ಸ್ಥಿತಿ ಬಂದೊದಗಲಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ರಾಜ್ಯ ಸಂಚಾಲಕ ಸಂತೋಷ ಪಾಟೀಲ ಹೋರಾಡುತ್ತ ಬಂದಿದ್ದೇವೆ. ನ್ಯಾಷನಲ್ ಕಾಲೇಜು ಮೈದಾನದಿಂದ ವಿಧಾನಸೌಧದವರೆಗೆ ಬಹುದೊಡ್ಡ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗಾಗಿ ಆಗ್ರಹಿಸಿತ್ತು. ಆದರೆ ನಮ್ಮ ಕೂಗಿಗೆ ಇದುವರೆಗೆ ರಾಜ್ಯ ಸರ್ಕಾರಗಳು ಸರಿಯಾದರೀತಿಯಲ್ಲಿ ಸ್ಪಂದಿಸಿರುವುದು ಖೇದಕರವೆಂದರು. ಜಿಲ್ಲಾ ಸಂಚಾಪಲಕ ಸಾಯಬಣ್ಣ ಎಂ. ಮಡಿವಾಳರ, ಜಿಲ್ಲಾಧ್ಯಕ್ಷೆ ಅನುರಾಧ ಕಲಾಲ ಮಾತನಾಡಿ, ರಾಜ್ಯ ಸರ್ಕಾರ 1983ರಲ್ಲಿ ಡಾ. ಸರೋಜಿನಿ ಮಹಿಷಿ ಅವರ ನೇತೃತ್ವದಲ್ಲಿಒಂದು ಸಮಿತಿಯೊಂದನ್ನು ರಚಿಸಿ ರಾಜ್ಯದಲ್ಲಿಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಮಾನದಂಡಗಳನ್ನು ಶಿಫಾರಸು ಮಾಡಲು ಸೂಚಿಸಿದ 2 050 13-6-1984 ರಂದು ಮಧ್ಯಂತರ ವರದಿಯನ್ನು ಮತ್ತು 30-12-1986 ರಂದು ಅಂತಿಮ ವರದಿಯನ್ನು ಸಲ್ಲಿಸಿತು. ಸಮಿತಿಯುಒಟ್ಟು 58 ಶಿಫಾರಸ್ಸುಗಳನ್ನು ಮಾಡಿತು. ಈ ಶಿಫಾರಸುಗಳಲ್ಲಿ, ಕರ್ನಾಟಕ ಸರ್ಕಾರವು 45 ಶಿಫಾರಸುಗಳನ್ನು ಅಂಗೀಕರಿಸಿದೆ.