ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗಳಿಗೆ ಏರಿಸಿದ ಬಜೆಟ್ ಇದಾಗಿದ್ದು, ನಿಜವಾದ ಅರ್ಥದಲ್ಲಿ ಇದು ವಿಕಸಿತ ಅಲ್ಲ. ಭಾರತದ ವಿನಾಶಕಾರಿ ಬಜೆಟ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ಲೇಷಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಮಾಧ್ಯಮದವರ ಜತೆ ಮಾತನಾಡಿ ಕೇಂದ್ರ ಬಜೆಟ್ ಅನ್ನು ವಿಶ್ಲೇಷಿಸಿದರು. ಪತ್ರಿಕಾಗೋಷ್ಠಿಯ ಹೈಲೈಟ್ಸ್ ಕಳೆದ ವರ್ಷಕ್ಕಿಂತ 5.8% ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದೆ ನಿರಾಶಾದಾಯಕ ಬಜೆಟ್ ನಿರುದ್ಯೋಗ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಮಾತೇ ಆಡಿಲ್ಲ ಸಾಲ ಹೆಚ್ಚಾಗಿರುವುದು, ಒಟ್ಟು ಸಾಲದ ಪ್ರಮಾಣ ವಿಪರೀತ ಏರಿಕೆ ಆಗಿರುವುದನ್ನು ಹೇಳಿಲ್ಲ ನಿರ್ಮಲಾ ಸೀತಾರಾಮನ್ ಅವರು 2024-25 ನೇ ವರ್ಷಕ್ಕೆ ಮಧ್ಯಂತರ ಆಯವ್ಯಯ ಮಂಡಿಸಿದ್ದಾರೆ.
47,65758 ಕೋಟಿ ರೂ.ಗಾತ್ರದ ಬಜೆಟ್, ಕಳೆದ ವರ್ಷದ ಬಜೆಟ್ ಗಾತ್ರ 45 3097 ಕೋಟಿ ಆಗಿತ್ತು. 2,62671 ಕೋಟಿ ಹೆಚ್ಚುವರಿ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್ ಗಾತ್ರ ಈ ವರ್ಷ 5.8% ಹೆಚ್ಚಾಗಿದೆ ಬಜೆಟ್ ನ 47 ಲಕ್ಷ ಕೋಟಿ ರೂ.ಗಳಲ್ಲಿ 16,85494 ಕೋಟಿ ರೂ ಸಾಲ ಮಾಡಿದ್ದಾರೆ ಜನರ ಮುಂದೆ ಮುಚ್ಚಿಟ್ಟಿರುವುದೇ ಹೆಚ್ಚು. ದೇಶದ ಆರ್ಥಿಕ ಪರಿಸ್ಥಿತಿಯನ್ನು ಬಿಚ್ಚಿಟ್ಟಿಲ್ಲ. ನಿರುದ್ಯೋಗ, ಬೆಲೆಯೇರಿಕೆ. ಬರಗಾಲ ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪವೇ ಇಲ್ಲ ವಿಕಸಿತ ಭಾರತ ಎಂದು ನರೇಂದ್ರಮೋದಿ ಪ್ರಚಾರದಲ್ಲಿ ಹೇಳುತ್ತಾರೆ. ಈ ಬಜೆಟ್ ವಿಕಸಿತ ಬಜೆಟ್ ಎನ್ನುತ್ತಾರೆ. ಇದು ನಿಜವಾದ ಅರ್ಥದಲ್ಲಿ ವಿನಾಶಕಾರಿ ಭಾರತ ಮಾಡುವ ಬಜೆಟ್ ಬಡವರು, ಯುವಕರು, ರೈತರು, ಮಹಿಳೆಯರಿಗಾಗಿ ವಿಕಸಿತ ಭಾರತ ಎನ್ನುತ್ತಾರೆ. ಆದರೆ ಈ ಸಮುದಾಯಗಳ ಪ್ರಗತಿಗೆ ಕಾರ್ಯಕ್ರಮಗಳೇ ಇಲ್ಲ ನಾವು ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಅನ್ನಭಾಗ್ಯ, ಕೃಷಿಭಾಗ್ಯ ಕಾರ್ಯಕ್ರಮ ಈ ವರ್ಗದ ಜನರಿಗೆ ಕೊಟ್ಟೆವು.
ಬೆಳೆ ಪರಿಹಾರವನ್ನು ಬಜೆಟ್ ನಲ್ಲಿ ಹೇಳಿಲ್ಲ. ಎಂ.ಎಸ್.ಪಿ ಗೆ ಕೆಲವು ಬೆಳೆಗಳನ್ನು ಮಾತ್ರ ಸೇರಿಸಿದ್ದಾರೆ. ರೈತರ ಎಲ್ಲಾ ಬೆಳೆಗಳು ಎಂ.ಎಸ್.ಪಿ ಅಡಿ ಬರಬೇಕು. ಇದರ ಬಗ್ಗೆ ಏನನ್ನೂ ಬಜೆಟ್ ನಲ್ಲಿ ಹೇಳಿಲ್ಲ ನಿರ್ಮಲಾ ಸೀತಾರಾಮನ್ ಅವರ 6 ನೇ ಬಜೆಟ್ ಇದು. ತೆರಿಗೆಯನ್ನು ಕಾರ್ಪೊರೇಟ್ ಗಳ ಮೇಲಿನ ಪ್ರಮಾಣ ಶೇ 30 ಕ್ಕೆ ಇಳಿಸಿ ಉಳಿದ ಭಾರವನ್ನು ಬಡವರು, ಮಧ್ಯಮ ವರ್ಗದವರ ಮೇಲೆ ಹೇರಿದ್ದಾರೆ ಮತ್ತು ಹೆಚ್ಚಿಸಿದ್ದಾರೆ ಬಡವರ,ಮಹಿಳೆಯರ, ಅಲ್ಪಸಂಖ್ಯಾತರ, ದಲಿತರ ವಿರೋಧಿ ಬಜೆಟ್ ಆಗಿದ್ದು, ಕೇಂದ್ರದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ 2004 -14 ರವರೆಗೆ ಮನ್ ಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಆಗ ಬೆಳವಣಿಗೆ ದರ 13.79 % ಇತ್ತು. ಈಗ ಬಜೆಟ್ ಬೆಳವಣಿಗೆ 9.6 % ಕ್ಕೆ ಕುಸಿತ ಕಂಡಿದೆ. ವಿಕಸಿತ ಎಂದು ಹೇಳಿಕೊಂಡು 9.6% ಗೆ ತಂದಿದ್ದಾರೆ. 4.19 % ಕಡಿಮೆಯಾಗಿದೆ. ಜಿ.ಡಿ.ಪಿ ಬೆಳವಣಿಗೆ ಯುಪಿಎ ಸರ್ಕಾರದಲ್ಲಿ 11.14 % – 9.9.9 ಕಾಲದಲ್ಲಿ 6.4% ಕ್ಕೆ ಕುಸಿತವಾಗಿದೆ. ಆದ್ದರಿಂದ ಇದು ವಿಕಸಿತವಲ್ಲ.
ಬರಗಾಲದ ಪರಿಹಾರಕ್ಕೂ ಒಂದು ಪೈಸೆ ಬಂದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು ದೇಶದ ಸಾರ್ವ ಭೌಮತೆ ಇರಬೇಕು. ಆದರೆ ರಾಜ್ಯಗಳಿಗೆ ಅವರ ಪಾಲು ಕೊಡಬೇಕು. ಕೇಂದ್ರ ರಾಜ್ಯಗಳ ಪಾಲನ್ನು ಕೊಡುತ್ತಿಲ್ಲ ನಮ್ಮಿಂದ 4 ಲಕ್ಷ ಕೋಟಿ ತೆರಿಗೆ ವಸೂಲಿ ಮಾಡುವ ಕೇಂದ್ರ ಸರ್ಕಾರ ನಮಗೆ, ನಮ್ಮ ನಾಡಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ರಾಯಚೂರು ಜಿಲ್ಲೆಗೆ ಎಮ್ಸ್ ಸ್ಥಾಪನೆಗೆ ಒತ್ತಾಯಿಸಿದ್ದೆವು. ಪ್ರಯೋಜನ ಆಗಿಲ್ಲ ಅಖಂಡ ಭಾರತ, ಅಖಂಡ ಕರ್ನಾಟಕ ಉಳಿಯಬೇಕು. ಇದಕ್ಕಾಗಿ ರಾಜ್ಯಗಳ ಪಾಲನ್ನು ಚಾಚೂ ತಪ್ಪದೆ ಕೊಡಬೇಕು ಸಿದ್ದರಾಮಯ್ಯ ಅವರ ಅವಧಿಯಲ್ಲಿ 15 ನೇ ಹಣಕಾಸು ಆಯೋಗದ ಮುಂದೆ ಪರಿಣಾಮಕಾರಿಯಾಗಿ ಮಂಡಿಸಿಲ್ಲ ಎಂದು ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರಕ್ಕೆ ಅನ್ಯಾಯವಾಗಿದ್ದರೆ ಅದು ಬಿಜೆಪಿ ಸರ್ಕಾರದಿಂದ.
ಬರಗಾಲವಿದೆ ಎಂದು 26 ಸಂಸದರು ಕೇಂದ್ರದ ಮುಂದೆ ಹೇಳಿದ್ದಾರೆಯೇ? ಈ ಎಲ್ಲಾ ಸಂಸದರೂ ರಾಜ್ಯದ ಪರವಾಗಿ ಇವತ್ತಿನವರೆಗೂ ಬಾಯಿಯನ್ನೇ ಬಿಟ್ಟಿಲ್ಲ ನಾವು ಕೇಳುತ್ತಿರುವುದು ಕರ್ನಾಟಕದ ಜನರಿಗೆ ಅನ್ಯಾಯ ಮಾಡ ಬೇಡಿ ಎಂದು ಸಂಸದರು ಹೇಳುತ್ತಲೇ ಇಲ್ಲ ನಮ್ಮ ಸಂಸದರಿಗೆ ಮೋದಿ ಮತ್ತು ಅಮಿತ್ ಶಾ ಅವರನ್ನು ಕಂಡರೆ ಭಯ. ಅದಕ್ಕೆ ಅವರು ಕೇಳುವುದಿಲ್ಲ ಎಂದರು ನಾವು ಭೇಟಿ ಮಾಡಿದಾಗ ಸಭೆ ನಡೆಸಿ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ ಅಮಿತ್ ಶಾ ಅವರು ಸಭೆಯನ್ನೇ ಕರೆದಿಲ್ಲ. ಕರ್ನಾಟಕದ ಬಗ್ಗೆ ಇವರಿಗೆ ಮಲತಾಯಿ ಧೋರಣೆಯಿದೆ ಎಂದರು
ಕರ್ನಾಟಕದ ಆರ್ಥಿಕತೆ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಆಯವ್ಯಯವೇ ಶ್ವೇತ ಪತ್ರ ಎಂದರು 16 ನೇ ಹಣಕಾಸು ಆಯೋಗದ ಮುಂದೆ ನಮ್ಮ ಮಂಡನೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು ಕೇಂದ್ರ ಸರ್ಕಾರ ತೆರಿಗೆ ಪಾಲನ್ನು . ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಎಷ್ಟು ಅನುದಾನ ಮೀಸಲಿಟ್ಟಿದೆ ಎನ್ನುವುದನ್ನು ಪರಿಶೀಲಿಸಬೇಕಿದೆ. ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.