ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ
2024ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ದರ ಶೇ. 38.75ರಿಂದ ಶೇ. 42.50 ಕ್ಕೆ ಏರಿಕೆ.
ಏಷ್ಟು ಏರಿಕೆ ಆಗಿದೆ ನಿಮ್ಮ ಸಂಬಳದ ಜೊತೆ ಹೋಲಿಕೆ ಮಾಡಿ?
ಸಿದ್ದರಾಮಯ್ಯ ಅವರ twitter ಹೇಳಿಕೆ
ಲೋಕಸಭಾ ಚುನಾವಣೆ-2024 ಅಬಕಾರಿ ಅಕ್ರಮಗಳ ನಿಯಂತ್ರಣಕ್ಕೆ ಸಹಾಯವಾಣಿ 18004250461 ಗೆ ಕರೆ ಮಾಡಿ ಮಾಹಿತಿ
ಚುನಾವಣೆ ಸಮಯದಲ್ಲಿ ಅಕ್ರಮ ಮಧ್ಯ ಹಾಗೂ ಕಳ್ಳಭಟ್ಟಿ, ಸಾರಾಯಿ ತಯಾರಿಸಿ, ಸಂಗ್ರಹಿಸಿ, ಮಾರಾಟ ಮಾಡುವಂತಹ ಅಕ್ರಮಗಳು ಮಾಡುವ ಹಾಗೂ ಇಂತಹ ಕಳ್ಳ ಭಟ್ಟಿಯನ್ನು ಮತದಾರರಿಗೆ ಸರಬರಾಜು ಮಾಡುವ ಸಾಧ್ಯತೆ ಇದ್ದು, ಇವುಗಳನ್ನು ತಡೆಗಟ್ಟಲು ಅಬಕಾರಿ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಮಾಹಿತಿ ನೀಡಲು 18004250461 ಸಹಾಯವಾಣಿ ಆರಂಭಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನಕಲಿ ಮದ್ಯ ತಯಾರಿಕೆ, ಮಾರಾಟ ಮಾಡುವಂತಹ ಚಟುವಟಿಕೆಗಳು ತಮ್ಮ ವ್ಯಾಪ್ತಿ ಪ್ರದೇಶದ ಸುತ್ತ ಮುತ್ತ ಕಂಡುಬಂದಲ್ಲಿ ಸಂಬಂಧಪಟ್ಟ ಕಂಟ್ರೋಲ್ ರೂಮ್ ಟೋಲ್ ಫ್ರೀ ದೂರವಾಣಿ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದು ಮತ್ತು ಕಂಟ್ರೋಲ್ ರೂಮ್ ಹಾಗೂ ಸಹಾಯವಾಣಿಗೆ ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು. ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಂಚಲು ಅಥವಾ ಅಕ್ರಮ ಚಟುವಟಿಕೆಗಳನ್ನು ನಡೆಸಲು ಮಾಡುವ ಕಳಭಟ್ಟಿ ಸರಾಯಿ, ನಕಲಿ ಮದ್ಯ ತಯಾರಿಕೆ, ಸಂಗ್ರಹಣೆ ಮತ್ತು ಮಾರಾಟ ಮಾಡುವ ಕಾನೂನು ಬಾಹಿರ ಕೃತ್ಯಗಳ ಬಗ್ಗೆ ಸಾರ್ವಜನಿಕರು ಅಬಕಾರಿ ಇಲಾಖೆಗೆ ಮಾಹಿತಿ ನೀಡಬಹುದಾಗಿದಾಗಿದೆ.
ಸಾರ್ವಜನಿಕರ ಮಾಹಿತಿಗಾಗಿ ಅಧಿಕಾರಿಗಳ ಮತ್ತು ದೂರವಾಣಿ ಸಂಖ್ಯೆಗಳ ವಿವರ:
ಅಬಕಾರಿ ಉಪ ಆಯುಕ್ತರ ಕಚೇರಿ 2:08352-244062, 9449597164, 9449597165, 9449597166. ಅಧೀಕ್ಷಕರು ವಿಜಯಪುರ ಉಪ ವಿಭಾಗ: 08352-252451, 9449597167, 9449597168, 8095736654, ನಿರೀಕ್ಷಕರು ವಿಜಯಪುರ ವಲಯ: 08352-254478, 9538608641, 9036645944,8970981551. ನಿರೀಕ್ಷಕರು ಬಸವನ ಬಾಗೇವಾಡಿ ವಲಯ: 08358- 295029, 9164856313, 9611199314, 9964230398,
ಅಬಕಾರಿ ನಿರೀಕ್ಷಕರು ಮುದ್ದೇಬಿಹಾಳ ವಲಯ: 08356- 222331, 9845638920, 08359-222093, 9686824969, 9036645944, ಅಬಕಾರಿ ನಿರೀಕ್ಷಕರು ಸಿಂದಗಿ 8892163575, 9980182779, 8970981551, 9964230398 ಸಂಪರ್ಕಿಸಬಹುದು ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಸಿಗೆಯಲ್ಲಿ ಆರೋಗ್ಯ ರಕ್ಷಣೆಗೆ ಡಿಎಚ್‌ಒ ಅವರಿಂದ ಸಲಹೆಗಳು
ಜಿಲ್ಲೆಯಾದ್ಯಂತ ಪ್ರಸ್ತುತ ತಿಂಗಳಿಂದ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಕಂಡುಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಲಿಂಗರಾಜು ಟಿ. ಅವರು ಸಲಹೆ ನೀಡಿದ್ದಾರೆ. ಬೇಸಿಗೆ ಸಮಯದಲ್ಲಿ ಹೆಚ್ಚು ನೀರನ್ನು ಕುಡಿಯಬೇಕು. ಮಜ್ಜಿಗೆ/ಎಳನೀರು, ಹಣ್ಣಿನ ರಸವನ್ನು ಹೆಚ್ಚಾಗಿ ಸೇವಿಸಬೇಕು. ನೀರಿನ ಅಂಶ ಹೆಚ್ಚಾಗಿರುವ ತರಕಾರಿಗಳು/ಹಣ್ಣುಗಳನ್ನು ಸೇವಿಸುವುದು ಉತ್ತಮ.
ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸಿರಿ. ಗಾಳಿಯಾಡುವ ಪಾದರಕ್ಷೆ ಧರಿಸಿರಿ. ಹೊರಗಡೆ ತೆರಳುವ ವೇಳೆ ತಂಪು ಕನ್ನಡಕ, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ಕಾಪಾಡಿಕೊಳ್ಳುವ ಸಾಮಾನ್ಯ ಕ್ರಮಗಳನ್ನು ಪಾಲಿಸಿ. ರೇಡಿಯೊ, ದೂರದರ್ಶನ ಹಾಗೂ ದಿನಪತ್ರಿಕೆಗಳಲ್ಲಿ ಬಿಸಿಯಾದ ಗಾಳಿ/ಶಾಖ ತರಂಗ (ಹೀಟ್ ವೇವ್) ದ ಬಗ್ಗೆ ನೀಡುವ ಮಾಹಿತಿ ಅನುಸಾರ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳಿ. ಬಿಸಿಲಿನಲ್ಲಿ ಹೊರಗಡೆ ಕಾರ್ಯನಿರ್ವಹಿಸುವವರು (ಜಮೀನು ಕೆಲಸ, ರಸ್ತೆ ಕಾಮಗಾರಿ ಮುಂತಾದವು) ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಮತ್ತು ಸಂಜೆ 4 ಗಂಟೆ ನಂತರ ಕೈಗೊಳ್ಳುವುದು ಉತ್ತಮ. ಬಿಸಿಲಿನ ಅವಧಿಯಲ್ಲಿ ಶ್ರಮದಾಯಕ ಕೆಲಸಗಳಿಂದ ವಿಶ್ರಾಂತಿ ಪಡೆಯಿರಿ.
ಬಿಸಿಲಿನಲ್ಲಿ ನಡೆಯುವಾಗ ಕಡ್ಡಾಯವಾಗಿ ಚಪ್ಪಲಿ ಧರಿಸಿ. ಟೀ/ಕಾಫಿ, ಹೆಚ್ಚು ಸಕ್ಕರೆ ಅಂಶವನ್ನು ಹೊಂದಿರುವ ಕಾರ್ಬೋನೇಟೆಡ್ ಪಾನೀಯ ಹಾಗೂ ಮದ್ಯಪಾನದಿಂದ ದೂರವಿರಿ. ವ್ಯಕ್ತಿ ತೊದಲು ಮಾತು ಅಥವಾ ಅರ್ಥ ರಹಿತವಾಗಿ ಬಡಬಡಿಸಿದಲ್ಲಿ ಕೂಡಲೇ ನೆರಳಿನ ಸ್ಥಳಕ್ಕೆ ಸ್ಥಳಾಂತರಿಸಿ. ಕೆಳಗೆ ಮಲಗಿಸಿ ಕಾಲುಗಳನ್ನು ಮೇಲಕ್ಕೆ ಎತ್ತಿ ವಿಶ್ರಾಂತಿ ಪಡೆಯಲು ಸಹಾಯ ಮಾಡಿ. ಬಿಸಿಗಾಳಿ ಮತ್ತು ಅತಿಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು ಉಂಟಾದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಅಥವಾ 108/102 ಕ್ಕೆ ಕರೆ ಮಾಡಿ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.