ಆತ್ಮೀಯ ರೈತ ಬಾಂಧವರೇ, ನಮ್ಮ ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಾಡಿದ್ದಾರೆ. ಆದಕಾರಣ ಕೃಷಿಯಲ್ಲಿ ಅತಿ ಹೆಚ್ಚು ಪ್ರಗತಿ ಹೊಂದಿದ್ದ ರೈತರು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಒಂದು ಅವಕಾಶವನ್ನು ಮಾಡಿಕೊಟ್ಟಿದ್ದಾರೆ. ನಮ್ಮ ರಾಜ್ಯದ ಜನರು ಈ ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಬಹುದು.
ಕೃಷಿ ವಿವಿ ಧಾರವಾಡದಿಂದ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರತಿ ಜಿಲ್ಲೆಗೆ ಒಬ್ಬರಂತೆ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆಯನ್ನು ಗುರುತಿಸಿ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ 2023ರ ಧಾರವಾಡ ಕೃಷಿ ಮೇಳದಲ್ಲಿ ಶ್ರೇಷ್ಠ ಕೃಷಿಕ, ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಜಿಲ್ಲೆಯ ಆಸಕ್ತ ರೈತ, ರೈತ ಮಹಿಳೆಯರು ಅರ್ಜಿಯನ್ನು ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು, ಐಸಿಎಆರ್ -ಕೃಷಿ ವಿಜ್ಞಾನ ಕೇಂದ್ರ, ಹಳೆ ಬದಾಮಿ ರಸ್ತೆ, ಬಾಗಲಕೋಟೆ ಅಥವಾ ಆಯಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ ಕಚೇರಿಯಿಂದ ಪಡೆಯಬಹುದು. ಅರ್ಜಿಯನ್ನು ಜು.31ರೊಳಗೆ ಕೃಷಿ ವಿಜ್ಞಾನ ಕೇಂದ್ರಕ್ಕೆ ಸಲ್ಲಿಸಬಹುದು. ಮಾಹಿತಿಗೆ ದೂ.08354-295543ಗೆ ಸಂಪರ್ಕಿಸಬಹುದು ಎಂದು ಕೆವಿಕೆ ಮುಖ್ಯಸ್ಥರು ತಿಳಿಸಿದ್ದಾರೆ.
ಆಸಕ್ತಿಯನ್ನು ಹೊಂದಿರುವಂತಹ ರೈತರು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ ಇದರಿಂದ ಬರುವ ಬಹುಮಾನವನ್ನು ಮತ್ತು ಕೀರ್ತಿಯನ್ನು ಪಡೆಯಬೇಕೆಂದು ವಿನಂತಿಸಿಕೊಳ್ಳುತ್ತೇವೆ.
*ಕರ್ನಾಟಕ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿದ್ದು ಕೊಡುಗೆ, ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿದ್ದು*
*ಅಡಿಕೆ, ಮಾವು, ದಾಳಿಂಬೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೆ ಬೆಳೆ ವಿಮೆಗೆ ಅರ್ಜಿ ಸಲ್ಲಿಕೆ*
*ಕೃಷಿಯಲ್ಲಿ ಸ್ವಯಂ ಉದ್ಯೋಗ ಪ್ರಾರಂಭ ಮಾಡಲು ಕೇಂದ್ರ ಸರ್ಕಾರದಿಂದ ಸಾಲ ಸೌಲಭ್ಯ*